AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ವಿವಾಹದ ಮಾತುಕತೆಗಳು ಈ ರಾಶಿಯವರಿಗೆ ಸಂತೋಷವನ್ನು ಕೊಡುವುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 28) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ, ವಿವಾಹದ ಮಾತುಕತೆಗಳು ಈ ರಾಶಿಯವರಿಗೆ ಸಂತೋಷವನ್ನು ಕೊಡುವುದು
ಇಂದಿನ ರಾಶಿಭವಿಷ್ಯImage Credit source: Getty Images
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: Rakesh Nayak Manchi|

Updated on: Jul 28, 2023 | 12:30 AM

Share

ಇಂದಿನ ನಿಮ್ಮ ರಾಶಿ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಜುಲೈ​ 28) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಭವಿಷ್ಯ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ದಶಮೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಶುಕ್ಲ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 15 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:03 ರಿಂದ 12:39ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:50 ರಿಂದ 5:26ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:52 ರಿಂದ 09:27ರ ವರೆಗೆ.

ಸಿಂಹ: ದಾಂಪತ್ಯದಲ್ಲಿ ಪ್ರೀತಿಯು ಅಧಿಕವಾಗಿದ್ದು ಬಹಳ ಸಂತೋಷವನ್ನು ಅನುಭವಿಸುವಿರಿ. ಅಪರಿಚಿತರು ನಿಮ್ಮ ಮನೆಗೆ ಭೇಟಿಯಾಗಲಿದ್ದೀರಿ. ವೃತ್ತಿಯಲ್ಲಿ ನಿಮ್ಮ ಸಹಕಾರವು ಅಧಿಕವಾಗಿದ್ದು ಪ್ರಶಂಸೆಯು ಸಿಗಲಿದೆ. ಭವಿಷ್ಯದ ಬಗ್ಗೆ ಭಯಗೊಂಡಿದ್ದು ಮಾರ್ಗದರ್ಶನವನ್ನು ಪಡೆಯುವಿರಿ. ನಿಮ್ಮ ಬಗ್ಗೆ ದೂರು ಸಲ್ಲಿಸುವರು. ಯಾರದೋ ಮಾತು ನಿಮಗೆ ಹಿಂಸೆಯನ್ನು ತರಬಹುದು. ಕಳೆದುಹೋದ ಸಂಬಂಧವನ್ನು ಮತ್ತೆ ಕೂಡಿಸಿಕೊಳ್ಳಲಿದ್ದೀರಿ. ವೈದ್ಯರ ಚಿಕಿತ್ಸೆಯಿಂದ ನಿಮ್ಮ ಖಾಯಿಲೆಯು ಸರಿಯಾಗುವುದು. ಪ್ರಯಾಣವು ಕಾರಣಾಂತರಗಳಿಂದ ಸ್ಥಗಿತವಾಗುವುದು.

ಕನ್ಯಾ: ವಾಹನ ಖರೀದಿಸಲು ನಿಮಗೆ ಹಣಕಾಸಿನ ಸಹಾಯವು ಸಿಗಲಿದೆ. ತಂದೆಯ ಮಾತು ನಿಮಗೆ ಕಿರಿಕಿರಿ ಎನಿಸಬಹುದು. ದಾಂಪತ್ಯದಲ್ಲಿ ಕಲಹವಿರಲಿದ್ದು ಮುಂದುವರಿಸುವುದು ಬೇಡ. ಹೆಚ್ಚು ಪ್ರಯತ್ನದಿಂದ ಅಲ್ಪ ಲಾಭವಾಗಲಿದೆ‌. ಕೃಷಿಯಲ್ಲಿ ಇಂದು ನೀವು ಹೆಚ್ಚು ತೊಡಗಿಸಿಕೊಳ್ಳುವಿರಿ. ನೇರವಾದ ಮಾತಿನಿಂದ ಇತರರಿಗೆ ನೋವನ್ನು ಉಂಟುಮಾಡುವಿರಿ. ಬಂಧುಗಳ ಭೇಟಿಯು ನಿಮಗೆ ಸಮಾಧಾನವನ್ನು ತರಲಿದೆ. ಪತ್ನಿಯ ಕಡೆಯಿಂದ ಹಣಕಾಸಿನ ಸಹಾಯವನ್ನು ಮಾಡಲಿದ್ದೀರಿ‌. ತಾಯಿಯ ಜೊತೆ ವಾಗ್ವಾದವನ್ನು ಮಾಡಲಿದ್ದೀರಿ.

ತುಲಾ: ಆರ್ಥಿಕ ಸಹಾಯವನ್ನು ನಿಮ್ಮ ಸ್ನೇಹಿತರು ನಿಮ್ಮಿಂದ ಬಯಸುವರು. ಹೆಚ್ಚಿನ‌ ಒತ್ತಡವನ್ನು ಮಾಡಿಕೊಳ್ಳದೇ ಕೆಲಸವನ್ನು ಮುಗಿಸುವಿರಿ. ವಿದೇಶಪ್ರಯಾಣವನ್ನು ಹೆಚ್ಚು ಅನಂದದಿಂದ ಮಾಡುವಿರಿ. ಸೌಂದರ್ಯಪ್ರಜ್ಞೆಯು ಇಂದು ಅಧಿಕವಾಗಿ ಇರಲಿದೆ. ನಿಮ್ಮ ಭಾವನೆಗಳನ್ನು ಆಪ್ತರ ಜೊತೆ ಹಂಚಿಕೊಂಡು ಸಮಾಧಾನ ಪಡುವಿರಿ. ವಿವಾಹದ ಮಾತುಕತೆಗಳು ನಿಮಗೆ ಸಂತೋಷವನ್ನು ಕೊಡುವುದು. ಅನಪೇಕ್ಷಿತ ಸ್ಥಳದಲ್ಲಿ ನೀವು ಇರಲು ಬಯಸುವುದಿಲ್ಲ. ವಾತಸಂಬಂಧಿ ಖಾಯಿಲೆಯು ಹೆಚ್ಚಾಗಬಹುದು. ದಾನ ಮಾಡವ ಮನಸ್ಸಾಗಲಿದೆ.

ವೃಶ್ಚಿಕ: ಸಾಮಾಜಿಕ ಗೌರವವು ನಿಮಗೆ ಸಿಗಲಿದ್ದು ಇದರಿಂದ ಅಹಂಕಾರವೂ ಬರಬಹುದು. ಪರಿಚಿತರ ವಿಚಾರದಲ್ಲಿ ನೀವು ನಕಾರಾತ್ಮಕವಾಗಿ ಮಾತನಾಡುವುದು ಸರಿಯಾಗದು. ಮಕ್ಕಳಿಗೆ ನಿಮ್ಮ ಪ್ರೀತಿಯ ಅವಶ್ಯಕತೆ ಇರಲಿದೆ. ಸಂಪತ್ತಿನ ಕಡೆ ಅಧಿಕವಾದ ಗಮನ ಇರಲಿದ್ದು ಸಂಬಂಧಗಳು ಸಡಿಲಾಗುವುದು. ಭೂಮಿಯ ಮೇಲೆ ಹೂಡಿಕೆ ಮಾಡುವ ನಿಮ್ಮ ಯೋಜನೆಗೆ ಪ್ರೋತ್ಸಾಹವು ಸಿಗಬಹುದು. ಸಭೆಗೆ ನೀವು ಅತಿಥಿಗಳಾಗಿ ಹೋಗುವಿರಿ. ಉದ್ಯಮದಲ್ಲಿ ನಿಮಗೆ ಆದಾಯವು ಕಡಿಮೆ ಆಗಬಹುದು. ಒಪ್ಪಿಕೊಂಡ ಕೆಲಸವನ್ನು ಸಮಯಕ್ಕೆ ಸರಿಯಾಗಿ ಮುಗಿಸಿ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ