Horoscope: ನಿಮ್ಮ ಸೋಮಾರಿತನವೇ ನಿಮ್ಮ ದೊಡ್ಡ ಶತ್ರುವಾಗಲಿದೆ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 28) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ನಿಮ್ಮ ಸೋಮಾರಿತನವೇ ನಿಮ್ಮ ದೊಡ್ಡ ಶತ್ರುವಾಗಲಿದೆ
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 28, 2023 | 12:30 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 28 ಶನಿವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತೀ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ರೇವತೀ, ಯೋಗ: ವಜ್ರ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 27 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:22 ರಿಂದ 10:49 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:43 ರಿಂದ 15:11 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:28 ರಿಂದ 07:55ರ ವರೆಗೆ.

ಸಿಂಹ ರಾಶಿ : ಸ್ವಯಂಕೃತ ಅಪರಾಧಗಳಿಂದ ಕಿಂಚಿತ್ತೂ ಬೇಸರವಾಗದು. ನಿಮ್ಮ ಸೋಮಾರಿತನವೇ ನಿಮ್ಮ ದೊಡ್ಡ ಶತ್ರುವಾಗಲಿದೆ. ದೈಹಿಕ ದೋಷಗಳನ್ನು ಸಕಾರಾತ್ಮಕವಾಗಿ ಎದುರಿಸುವಿರಿ. ಒಂಟಿತನದ ಆಲೋಚನೆಯು ಪೂರ್ಣವಾಗದು. ಅನಾರೋಗ್ಯದ ಕಾರಣದಿಂದ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಆಗುವುದು. ಆರ್ಥಿಕತೆಯು ನಿಮಗೆ ತೃಪ್ತಿ ಕೊಡುವುದು. ವ್ಯಕ್ತಿತ್ವದ ಬೆಳವಣಿಗೆಯ ಜೊತೆಗೆ ಸಾಮಾಜಿಕ ಚಿತ್ರಣವನ್ನು ಬದಲಿಸುವಿರಿ. ಹಣವು ಒಮ್ಮೆ ಕೈಗೆ ಬಂದರೆ, ಸಾಹಸ ಕಾರ್ಯಗಳಲ್ಲಿ ತೊಡಗುವಿರಿ. ಸ್ವಲ್ಪ ಕುಟುಂಬದ ಸಮಸ್ಯೆಗಳಿಂದಾಗಿ, ಮನಸ್ಸು ಚಂಚಲವಾಗಿರುತ್ತದೆ. ಮನೆಯಲ್ಲಿ ಸಣ್ಣ ವಿಚಾರವೂ ವಿವಾದವಾಗುವ ಸಾಧ್ಯತೆಯಿದೆ. ಪೂರ್ವಾಹ್ಣದಲ್ಲಿಯೇ ಮುಖ್ಯ ಕೆಲಸವನ್ನು ಮಾಡಿ ಮುಗಿಸಿ.

ಕನ್ಯಾ ರಾಶಿ : ತಾಯಿಯಿಂದ ಆರ್ಥಿಕ ಸಹಾಯವನ್ನೂ ಸಿಗಲಿದ್ದು ತೃಪ್ತಿದಾಯಕವಾಗಲಿದೆ‌. ವಾಹನವನ್ನು ಖರೀದಿಸುವ ಯೋಜನೆಯನ್ನು ಮುಂದೂಡುವುದು ಉತ್ತಮ. ವಿದ್ಯಾಭ್ಯಾಸದಲ್ಲಿ ಅಸ್ಥಿರತೆ ಕಾಡಬಹುದು. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ನಿಮ್ಮ ಕಾರಣದಿಂದ ಕುಟುಂಬವು ಸಂಕಷ್ಟದಲ್ಲಿ ಸಿಕ್ಕಿಕೊಳ್ಳಬಹುದು. ಎಲ್ಲಾ ಕೆಲಸಗಳನ್ನು ಮಾಡಿದರೂ ಯಶಸ್ಸಿನಲ್ಲಿ ವಿಳಂಬವಾಗಬಹುದು. ಮನಸ್ಸಿನ ನಕಾರಾತ್ಮಕ ಭಾವನೆಗಳು ನಿಮ್ಮನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ವಿಚಲಿತರನ್ನಾಗಿ ಮಾಡುತ್ತವೆ. ಮನಸ್ಸು ಅನೈತಿಕ ಚಟುವಟಿಕೆಗಳಿಂದ ವಿಮುಖವಾಗಬಹುದು. ಮನೆಯವರ ಸಮಸ್ಯೆ ಬಗೆಹರಿಯಲಿದ್ದು, ಮುಖಂಡರ ಸಹಾಯವನ್ನೂ ಪಡೆಯಬೇಕಾಗುವುದು. ಪ್ರತಿಕೂಲ ಪರಿಸ್ಥಿತಿ ಎದುರಾದಾಗ ಕೋಪವನ್ನು ನಿಯಂತ್ರಿಸಿ.

ತುಲಾ ರಾಶಿ : ಭಾವನಾತ್ಮಕ ಚಿಂತನೆಗಳು ನಿಮ್ಮ ಮೇಲೆ‌ ಸಕಾರಾತ್ಮಕ ಪರಿಣಾಮವನ್ನು ನೀಡಬಹುದು. ಮಕ್ಕಳ ಭವಿಷ್ಯದ ಬಗ್ಗೆ ಅಗತ್ಯ ಕ್ರಮವನ್ನು ಕೈಗೊಳ್ಳುವಿರಿ. ನ್ಯಾಯ ನೀತಿಯ ವಿರುದ್ಧ ನಡೆಯುವುದು ಬೇಡ. ಸ್ಥಿರಾಸ್ತಿಯ ನಷ್ಟದಿಂದ ಬೇಸರವಾಗುವುದು. ಸ್ನೇಹಿತರ ಜೊತೆ ಸಣ್ಣ ಕಾರಣಕ್ಕೆ ಕಲಹವಾಗುವುದು. ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸುವುದು. ಇಂದು ನಿಮಗೆ ಸಾಮಾಜಿಕವಾಗಿ ಗೌರವವನ್ನು ಪಡೆಯುವಿರಿ. ಆದರೆ ಕೆಲವು ತಪ್ಪುಗ್ರಹಿಕೆಯಿಂದಾಗಿ ಅಸಮಾಧಾನ ಇರಲಿದೆ. ಇಂದಿನ ಉದ್ಯಮವು ನಿಮ್ಮ ಹಿಡಿತದಲ್ಲಿ ಇರುತ್ತದೆ. ಲಾಭವೂ ಹೆಚ್ಚಾಗುವುದು. ದೈಹಿಕ ಆರೋಗ್ಯ ಉತ್ತಮವಾಗಿರುತ್ತದೆ. ಇಂದಿನ ಲಾಭ ಪಡೆಯಲು ಆಲಸ್ಯವನ್ನು ತಪ್ಪಿಸುವುದು ಅವಶ್ಯಕ. ಕಾರ್ಯಕ್ಷೇತ್ರದ ಗೆಳೆಯರು ನಿಮ್ಮ ನಡವಳಿಕೆಯಿಂದ ಸಂತೋಷವಾಗಿರುತ್ತಾರೆ. ಇದರಿಂದ ಅವರು ತಮ್ಮ ಕೆಲಸವನ್ನು ಒಂದು ನಿರ್ದಿಷ್ಟ ಅವಧಿಯಲ್ಲಿ ಪೂರ್ಣವಾಗುವುದು.

ವೃಶ್ಚಿಕ ರಾಶಿ : ದುಃಸ್ವಪ್ನಗಳಿಂದ ನಿಮ್ಮ ಮನಸ್ಸು ವಿಕಾರವಾಗುವುದು. ಉನ್ನತ ವಿದ್ಯಾಭ್ಯಾಸದ ಚಿಂತೆ ಕಾಡಬಹುದು. ಶತ್ರುಗಳು ನಿಮ್ಮ ನೆಮ್ಮದಿಯನ್ನು ಹಾಳುಮಾಡಬಹುದು. ಎಂದೋ ಮಾಡಿದ ಕಾರ್ಯಕ್ಕೆ ಇಂದು ಪಶ್ಚಾತ್ತಾಪಪಡಬೇಕಾದೀತು. ಈ ದಿನ ನೀವು ತಾಳ್ಮೆಯನ್ನು ಅಭ್ಯಾಸ ಮಾಡುವುದರ ಮೂಲಕ ನಿರೀಕ್ಷೆಗಿಂತ ಹೆಚ್ಚಿನದನ್ನು ಗಳಿಸಬಹುದು. ನಿಮ್ಮ ದಿನಚರಿ ನಿಧಾನವಾಗಿರುತ್ತದೆ. ಪ್ರತಿಯೊಂದು ಕ್ರಿಯೆಯನ್ನು ನಿಧಾನಗತಿಯಲ್ಲಿ ಸಾಗುವುದು. ಈ ಕಾರಣದಿಂದಾಗಿ ಜನರಿಂದ ಟೀಕೆ ಬರುವುದು. ಇಂದು, ನೀವು ವಾಸ್ತವಕ್ಕಿಂತ ಕಾಲ್ಪನಿಕತೆಯಲ್ಲಿ ಹೆಚ್ಚು ಇರುತ್ತೀರಿ. ಈ ಕಾರಣದಿಂದಾಗಿ ಜನರು ನಿಮ್ಮನ್ನು ಕಂಡು ನಗುವರು. ಖರ್ಚು ಆದಾಯಕ್ಕಿಂತ ಹೆಚ್ಚಾಗುತ್ತದೆ. ದೇಶೀಯ ಸಂತೋಷ ಮತ್ತು ಆನಂದದ ಸಾಧನಗಳನ್ನು ಪ್ರದರ್ಶನಕ್ಕಾಗಿ, ಹವ್ಯಾಸಗಳಿಗಾಗಿ ಖರ್ಚು ಮಾಡಲಾಗುವುದು.

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ