Horoscope: ಆಪ್ತರ ಭೇಟಿಯು ನಿಮಗೆ ಸಂತೋಷವನ್ನು ಕೊಡುವುದು

| Updated By: ಗಂಗಾಧರ​ ಬ. ಸಾಬೋಜಿ

Updated on: Oct 29, 2023 | 12:15 AM

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 29) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಆಪ್ತರ ಭೇಟಿಯು ನಿಮಗೆ ಸಂತೋಷವನ್ನು ಕೊಡುವುದು
ಪ್ರಾತಿನಿಧಿಕ ಚಿತ್ರ
Follow us on

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 29 ಭಾನುವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತೀ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ಸಿದ್ಧಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 27 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಸಂಜೆ 04:37 ರಿಂದ 06:05 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:16 ರಿಂದ 01:43 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:10 ರಿಂದ 04:37ರ ವರೆಗೆ.

ಸಿಂಹ ರಾಶಿ: ಉನ್ನತ ವಿದ್ಯಾಭ್ಯಾಸದ ಕನಸು‌‌ ಬಂಧುಗಳ ಸಹಕಾರದಿಂದ ಆಗಲಿದೆ. ಧಾರ್ಮಿಕ ಸ್ಥಳಗಳ ಭೇಟಿಯೂ ಆಗಲಿದೆ. ಸಾಲದ ಮೊತ್ತವನ್ನು ಕಡಿಮೆ‌ ಮಾಡಿಕೊಂಡು ಸಮಾಧಾನವಾಗುವುದು. ಪ್ರೇಮವು ನಿಮಗೆ ಬಂಧನದಂತೆ ಕಾಣಿಸುವುದು. ಸಹೋದರರ ನಡುವೆ ವಿನಾಕಾರಣ ಆರಂಭವಾದ ವಾಗ್ವಾದವು ಗಂಭೀರ ಸ್ವರೂಪವನ್ನು ಪಡೆದುಕೊಳ್ಳುವುದು. ನಿಮ್ಮ ಸೋಲನ್ನು ನೀವು ಒಪ್ಪಿಕೊಳ್ಳಲಾರಿರಿ. ನಿಮ್ಮ ಎಲ್ಲ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಮುಗಿಸಿಕೊಳ್ಳಲು ಆಗದು. ಯಾರದೋ ಒತ್ತಾಯಕ್ಕೆ ಹೂಡಿಕೆಯನ್ನು ಮಾಡುವಿರಿ. ಉತ್ತಮ‌ ಭೋಜನವನ್ನು ಇಂದು ಲಭ್ಯವಿದೆ. ಪಕ್ಷಪಾತ ಮಕ್ಕಳ‌ ವಿಚಾರದಲ್ಲಿ ಮಾಡುವುದು ಬೇಡ. ನಿಮ್ಮನ್ನು ನೋಡುವ ದೃಷ್ಟಿಯು ಬದಲಾದೀತು.

ಕನ್ಯಾ ರಾಶಿ: ಈ ದಿನ ಮಕ್ಕಳ ವಿಚಾರದಲ್ಲಿ ಕೆಲವನ್ನು ಬದಲಿಸಿಕೊಳ್ಳಬೇಕಾದೀತು. ಸಾಮಾಜಿಕ‌ ಕೆಲಸಗಳು ನಿಮಗೆ ಇನ್ನಷ್ಟೂ ಉತ್ಸಾಹವನ್ನು ಕೊಡುವುದು. ವೈದ್ಯರು ಇಂದು ಒತ್ತಡದಿಂದ ಇರುವರು.‌ ದೇಹ ಪೀಡೆಯು ಅಧಿಕವಾಗಿ ಕಾಣಿಸಿಕೊಳ್ಳುವುದು. ಅನಿವಾರ್ಯ ನೀವು ಪ್ರಯಾಣವನ್ನು ಮಾಡಬೇಕಾಗಬಹುದು. ನೀವು ಕಷ್ಟವನ್ನು ಆನಂದದಿಂದ ಕಳೆಯುವಿರಿ, ಅದಕ್ಕೆ ಕಾರಣ ಸುಖವಿದೆ ಎಂಬುಸ. ಸಿಗಬೇಕಾದ ವಸ್ತುವನ್ನು ನೀವು ಬಹಳ ಪ್ರಯತ್ನದಿಂದ ಪಡೆದುಕೊಂಡರೂ ಉಳಿಸಿಕೊಳ್ಳುವುದು ಕಷ್ಟವಾದೀತು. ಸಂಸಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ಯಾರ ಜೊತೆಯೂ ನಿಮ್ಮ ಮಾತು ಸರಿಯಾಗಿ ಇರದು. ಭೂಮಿಯ ವ್ಯವಹಾರದಿಂದ ಕೆಲವು ತೊಂದರೆಗಳನ್ನು ನೀವಾಗಿಯೇ ತಂದುಕೊಳ್ಳುವಿರಿ.

ತುಲಾ ರಾಶಿ: ಕೆಲವು ಘಟನೆಗಳು ನಿಮ್ಮ ವ್ಯಕ್ತಿತ್ವವನ್ನು ಬದಲಿಸಬಹುದು. ಬಂಧುಗಳ ಒಡನಾಟವು ಹೆಚ್ಚಿರಲಿದೆ. ಹಣಕಾಸಿನ ವಿಚಾರಕ್ಕೆ ಸಂಗಾತಿಯ ಜೊತೆ ಮಾತಾಗಬಹುದು. ನೇರ ನುಡಿಯಿಂದ ಆಪ್ತರು ದೂರ ಸರಿಯಬಹುದು. ಇಂದು ನೀವು ಅಂದುಕೊಂಡ ವಿಚಾರದಲ್ಲಿ ಜಯವು ಸಿಗುವುದು. ಕೆಟ್ಟವರ ಸಹವಾಸದಿಂದ ಅಪಕೀರ್ತಿ ಬರಬಹುದು. ಕೆಲವು ವಿಚಾರಗಳಿಗೆ ಸುಮ್ಮನೇ ಪ್ರತಿಕ್ರಿಯೆ ನೀಡಬೇಕಿಲ್ಲ. ಕೃಷಿಯ ಉತ್ಪನ್ನಗಳನ್ನು ಮಾರಾಟ ಮಾಡುವಿರಿ. ಅವಕಾಶಗಳನ್ನು ಕಳೆದುಕೊಂಡು ಮನಸ್ಸಿನಲ್ಲಿಯೇ ದುಃಖಿಸುವಿರಿ. ಕೋಪವನ್ನು ತಾನಾಗಿಯೇ ಕಡಿಮೆ ಆಗಿದ್ದು ನಿಮಗೆ ಆಶ್ಚರ್ಯವಾಗಬಹುದು. ನಿಮ್ಮ‌ ಮನಸ್ಸಿಗೆ ಬಾರದೇ ಯಾರಿಗೂ ಏನನ್ನೂ ಕೊಡುವುದು ಬೇಡ. ಬಂಧುಗಳ ವಿಚಾರದಲ್ಲಿ ನಿಮಗೆ ಅಸಮಾಧನವು ಇರಲಿದ್ದು ಅದನ್ನು ಬೇರೆಯವರ ಬಳಿ ಹೇಳಿಕೊಳ್ಳುವಿರಿ.

ವೃಶ್ಚಿಕ ರಾಶಿ: ಆಪ್ತರ ಭೇಟಿಯು ನಿಮಗೆ ಸಂತೋಷವನ್ನು ಕೊಡುವುದು. ವ್ಯವಹಾರವು ಅಧಿಕ ಲಾಭವನ್ನು ತಂದುಕೊಡದು. ಪ್ರವಾಸ ಹೋಗುವ ಮನಸ್ಸಾದೀತು. ಅಧಿಕಾರಿಗಳು ನಿಮ್ಮ ಉದ್ಯಮವನ್ನು ಪರಿಶೀಲಿಸಬಹುದು. ನಿಮಗೆ ಬೇಡ ಎನಿಸಿದ ವಿಚಾರವೇ ಮತ್ತೆ ಮತ್ತೆ ಕೇಳಿ ಬಂದು‌ ಮಾನಸಿಕ ಹಿಂಸೆಯಾದೀತು. ಮನೆಯಲ್ಲಿ ಜಗಳವಾಡಿ ನೀವು ಮನಸ್ಸನ್ನು ಹಾಳುಮಾಡಿಕೊಳ್ಳುವಿರಿ. ನೀವು ನಿರೀಕ್ಷಿಸಿದ ಸ್ಥಳದಲ್ಲಿ ಉದ್ಯೋಗವು ಸಿಗದು. ಮಕ್ಕಳ ತಪ್ಪನ್ನು ನೀವು ಸಮರ್ಥಿಸಿಕೊಳ್ಳಬೇಕಾದೀತು. ನಿಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಇಂದು ಸಾಧ್ಯವಾಗದು. ಕೊಟ್ಟ ಹಣವನ್ನು ವಾಪಾಸು ಪಡೆಯಲು ಓಡಾಟ ಮಾಡುವಿರಿ.