AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಈ ರಾಶಿಯವರಿಗೆ ಹಿತಶತ್ರುಗಳ ಪಿತೂರಿಯು ನಿಮ್ಮ ಏಳ್ಗೆಗೆ ಘಾಸಿ ನೀಡಬಹುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 30) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ, ಈ ರಾಶಿಯವರಿಗೆ ಹಿತಶತ್ರುಗಳ ಪಿತೂರಿಯು ನಿಮ್ಮ ಏಳ್ಗೆಗೆ ಘಾಸಿ ನೀಡಬಹುದು
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Aug 30, 2023 | 12:30 AM

Share

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 30) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಶೋಭನ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 45 ನಿಮಿಷಕ್ಕೆ, ರಾಹುಕಾಲ ಮಧ್ಯಾಹ್ನ 12:33 ರಿಂದ 2:06ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:55 ರಿಂದ 09:27ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 11:00 ರಿಂದ 12:33ರ ವರೆಗೆ.

ಸಿಂಹ ರಾಶಿ : ಸ್ನೇಹಿತರಿಗಾಗಿ ನಿಮ್ಮ ಕಡೆಯಿಂದ ಸಾಲವನ್ನು ಕೊಡಿಸಿದ್ದು ಈಗ ನಿಮ್ಮ ತಲೆಗೇ ಅದು ಸುತ್ತಿಕೊಳ್ಳಲಿದೆ. ವಿಜ್ಞಾನಿಗಳಿಗೆ ಉತ್ತಮ ಅವಕಾಶಗಳು ಸಿಗುವುದು. ಸರ್ಕಾರಿ ಉದ್ಯೋಗಿಗಳಿಗೆ ಸ್ಥಾನ ಮಾನಗಳು ಹೆಚ್ಚಾಗಬಹುದು. ಅನಪೇಕ್ಷಿತ ಸ್ಥಳದಲ್ಲಿ ನೀವು ಇರಲು ಇಷ್ಟಪಡುವುದಿಲ್ಲ. ಅಗ್ನಿಯ ಭೀತಿಯು ನಿಮ್ಮನ್ನು ಕಾಡಬಹುದು. ಎಲ್ಲ ವಿಚಾರಗಳಿಗೆ ಸಂಗಾತಿಯನ್ನು ಬೊಟ್ಟು ಮಾಡಿ ತೋರಿಸುವುದು ಯೋಗ್ಯವಾಗದು. ಮಕ್ಕಳ ಹಠದ ಸ್ವಭಾವಕ್ಕೆ ನೀವು ಮಣಿಯಲೇ ಬೇಕು. ಯೋಜಿತ ಕಾರ್ಯವನ್ನು ಪೂರೈಸಲು ನಡುವೆ ಮಗೆ ತೊಂದರೆಗಳು ಬರಬಹುದು. ಕೈಗೊಂಡ ಕಾರ್ಯದಲ್ಲಿ ಅಪಯಶಸ್ಸು ಬರಬಹುದು.

ಕನ್ಯಾ ರಾಶಿ : ನಿಮ್ಮ ನಿಜವಾದ ಗುಣವು ನಿಮಗೆ ಗೊತ್ತಾಗಲಿದೆ. ನಿದ್ರೆಯ ಕೊರತೆಯಿಂದ ನಿಮಗೆ ಆಲಸ್ಯವು ಇರಲಿದೆ. ನಿಮ್ಮ ಗೌರವಕ್ಕೆ ತೊಂದರೆಯಾಗಬಹುದು. ತುರ್ತು ಹಣಕಾಸಿನ ಹೊಂದಾಣಿಕೆಯು ನಿಮಗೆ ಕಷ್ಟವಾಗುವುದು. ನಿಮ್ಮ ಬಗ್ಗೆ ನಿಂದನೆಯ ಮಾತುಗಳು ಕೇಳಿಬರಬಹುದು. ದುರ್ವಿಚಾರಗಳನ್ನು ಯೋಚಿಸಿಬಾರದು ಎಂದುಕೊಂಡರೂ ಅದೇ ಬಂದು ನಿಮ್ಮನ್ನು ಹಿಂಸಿಸಬಹುದು.‌ ಬರಹಗಾರಿಗೆ ಹಿನ್ನಡೆಯಾಗಲಿದೆ. ಕಲಾವಿದರು ಉತ್ತಮ‌ ಅವಕಾಶಗಳನ್ನು ನಿಮ್ಮದಾಗಿಸಿಕೊಳ್ಳುವರು. ಇಂದು ಬಹಳ ದಿನಗಳಿಂದ ಉಳಿಸಿಕೊಂಡ ಸ್ವಂತ ಕಾರ್ಯವನ್ನು ನೀವು ಮಾಡಿ ಮುಗಿಸುವಿರಿ.

ತುಲಾ ರಾಶಿ : ರಾಜಕೀಯ ವ್ಯಕ್ತಿಗಳು ತಮ್ಮ ಲಾಭವನ್ನು ಪಡೆದುಕೊಳ್ಳುವರು. ಯಾರನ್ನೋ‌ ನಂಬಿ ನೀವು ಇರುವ ಸಣ್ಣ ಕೆಲಸವನ್ನೂ ಬಿಟ್ಟು ಪಶ್ಚಾತ್ತಾಪಪಡುವಿರಿ. ಹಿತಶತ್ರುಗಳ ಪಿತೂರಿಯು ನಿಮ್ಮ ಏಳ್ಗೆಗೆ ಘಾಸಿ ನೀಡಬಹುದು. ಹೊಗಳಿಕೆಯ ಮೂಲಕ ನೀವು ಕೆಲಸವನ್ನು ಮಾಡಿಸಿಕೊಳ್ಳುವಿರಿ. ವಿವಾಹದ ಬಗ್ಗೆ ಗೊಂದಲ ಇರಲಿದೆ. ನಿಮ್ಮ ಗೌಪ್ಯ ವಿಚಾರಗಳನ್ನು ತಿಳಿದುಕೊಳ್ಳಲು ಬಯಸುವರು. ಆದಾಯಕ್ಕೆ ತಕ್ಕಹಾಗೆ ಖರ್ಚಿಗೂ ಸಿದ್ಧವಾಗಿರಬೇಕಾಗುವುದು. ನಿಮ್ಮ ವಿವಾಹದ ಬಗ್ಗೆ ತಂದೆಯವರೇ ನಿಮ್ಮ ಬಳಿ ಮಾತನಾಡಬಹುದು. ಉತ್ತಮ ಭೂಮಿಯ ಲಾಭಕ್ಕಾಗಿ ಓಡಾಟ ಮಾಡುವಿರಿ. ಒತ್ತಡದಿಂದ ನಿಮ್ಮ ಎಲ್ಲ ಚಿಂತೆಗಳೂ ಕಾಣಿಸಿಕೊಳ್ಳದು.

ವೃಶ್ಚಿಕ ರಾಶಿ : ಪ್ರಾಮಾಣಿಕತೆಗೆ ಬೆಲೆ ಇಲ್ಲದಂತೆ ಆಗುವುದು. ಉದ್ಯಮದ ವಿಸ್ತಾರ ಮಾಡುವ ಬಗ್ಗೆ ಉನ್ನತ ಮಟ್ಟದಲ್ಲಿ ಚರ್ಚೆ ನಡೆಸುವಿರಿ. ಉದ್ಯೋಗಕ್ಕಾಗಿ ಓಡಾಡುವುದು ನಿಮಗೆ ಕಷ್ಟವಾಗಲಿದೆ. ಆರ್ಥಿಕ ನಷ್ಟದ ಆತಂಕವೂ ಇರಲಿದೆ. ಅಪರಿಚಿತರ ವಿದ್ಯಾಭ್ಯಾಸಕ್ಕೆ ನೀವು ಸಹಾಯ ಮಾಡುವಿರಿ. ವೃತ್ತಿಯನ್ನು ಶುದ್ಧವಾಗಿ ಇಟ್ಟುಕೊಳ್ಳಲು ಬಯಸುವಿರಿ. ಒತ್ತಾಯದಿಂದ ಯಾರ ಸ್ನೇಹವನ್ನೂ ಬಯಸುವುದು ಬೇಡ. ಒಳ್ಳೆಯ ಕುಲದ ಸಂಗಾತಿಯನ್ನು ಪಡೆಯುವಿರಿ. ದೇವರಲ್ಲಿ ಶ್ರದ್ಧೆ ಇರಲಿದೆ. ಕೋಪವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳುವುದು ಉತ್ತಮ. ಒಂದೇ ಸ್ನೇಹವನ್ನು ಬಹಳ ಕಾಲ ಇಟ್ಟುಕೊಳ್ಳಲಾರಿರಿ.

ಲೋಹಿತಶರ್ಮಾ 8762924271 (what’s app only)

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?