Horoscope: ದಿನಭವಿಷ್ಯ, ವಾಹನ ಚಾಲನೆಗೆ ಅತ್ಯುತ್ಸಾಹವಿದ್ದರೂ ಎಚ್ಚರಿಕೆಯನ್ನು ಹೆಚ್ಚು ಇಟ್ಟುಕೊಳ್ಳುವುದು ಮುಖ್ಯ
ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್ 13) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.
ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್ 13) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಸೌಭಾಗ್ಯ, ಕರಣ: ಕಿಂಸ್ತುಘ್ನ, ಸೂರ್ಯೋದಯ ಬೆಳಗ್ಗೆ 06 ಗಂಟೆ 33 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ, ರಾಹು ಕಾಲ ಬೆಳಗ್ಗೆ 07:59 ರಿಂದ 09:25ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:51 ರಿಂದ ಮಧ್ಯಾಹ್ನ 12:17ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:43 ರಿಂದ 03:08ರ ವರೆಗೆ.
ಸಿಂಹ ರಾಶಿ : ಆಭರಣಗಳನ್ನು ಖರೀದಿಸಲು ಮುಂದಾಗುವಿರಿ. ಜಾಣ್ಮೆಯಿಂದ ನಿಮ್ಮವರನ್ನು ವಶ ಮಾಡಿಕೊಳ್ಳುವಿರಿ. ಯಾವುದೋ ಆಲೋಚನೆಯಲ್ಲಿ ಮುಖ್ಯ ಕೆಲಸವನ್ನು ಮರೆಯಬಹುದು. ನಿಮ್ಮ ಉತ್ಪಾದನೆಯು ಆದಾಯಕ್ಕಿಂತ ನೆಮ್ಮದಿಯನ್ನು ಹೆಚ್ಚು ಕೊಡುವುದು. ಪ್ರಭಾವಿ ಜನರ ಸಂಸರ್ಗದಿಂದ ಹೊಸ ಆಯಾಮವು ತೆರೆದುಕೊಳ್ಳುವುದು. ಎಲ್ಲರಿಂದ ಪ್ರತ್ಯೇಕವಾಗಿ ಗುರುತಿಸಿಕೊಳ್ಳಲು ಇಷ್ಟಪಡುವಿರಿ. ನಿಮ್ಮದು ಉದ್ದೇಶಪೂರ್ವಕ ಆಡಿದ ಮಾತಾಗಿದ್ದು ಸಮಸ್ಯೆಗಳನ್ನು ಎದುರಿಸಬೇಕಾದೀತು. ರಕ್ಷಣಾ ವ್ಯವಸ್ಥೆಯಲ್ಲಿ ಇರುವವರಿಗೆ ಕಾರ್ಯದ ಒತ್ತಡ ಹೆಚ್ಚಿರುವುದು. ಕಾರ್ಯವನ್ನೇ ಸರಿಯಾಗಿ ಮಾಡಿ ಆದಾಯವು ಹೆಚ್ಚಾಗುವಂತೆ ಮಾಡಿಕೊಳ್ಳಿ. ಇಂದು ಕೋಪವು ಬಂದರೂ ವ್ಯಕ್ತಪಡಿಸದೇ ಸುಮ್ಮನಿದ್ದು ನುಂಗಿಕೊಳ್ಳುವಿರಿ. ನಾಲಿಗೆಯ ಚಾಪಲ್ಯಕ್ಕೆ ಆಹಾರವನ್ನು ತಿಂದು ಆರೋಗ್ಯವನ್ನು ಹಾಳುಮಾಡಿಕೊಳ್ಳುವಿರಿ.
ಕನ್ಯಾ ರಾಶಿ : ಬುದ್ಧಿಯ ಸ್ತಿಮಿತದಿಂದ ನೀವು ಎಲ್ಲವನ್ನೂ ಎಲ್ಲವನ್ನೂ ನಾಜೂಕಾಗಿ ಮುಗಿಸುವಿರಿ. ಜವಾಬ್ದಾರಿಯ ಮಾತುಗಳಿಂದ ಅಚ್ಚರಿಯಾದೀತು. ಕೃಷಿಗೆ ಸಂಬಂಧಿಸಿದ ನೂತನ ಅನ್ವೇಷಣೆಯನ್ನು ಮಾಡುವ ಹೊಸ ಆಲೋಚನೆಯನ್ನು ಮಾಡುವಿರಿ. ಸಾಮಾಜಿಕ ಕಾರ್ಯದಿಂದ ಪ್ರೇರಣೆ ಪಡೆದು ಸಂಸ್ಥೆಯನ್ನು ಆರಂಭಿಸುವಿರಿ. ಗೊತ್ತಿದ್ದರೂ ಗೊತ್ತಿಲ್ಲದಂತೆ ಇರುವಿರಿ. ನಿಮ್ಮ ದುರಾಲೋಚನೆಗೆ ಸ್ನೇಹಿತರು ಅಡ್ಡಿ ಮಾಡುವರು. ಶತ್ರುವಿನ ಬಲವನ್ನು ನಿಯಂತ್ರಿಸಲು ಸಿದ್ಧತೆ ನಡೆಸುವಿರಿ. ನಿಮ್ಮ ದುಃಖಕ್ಕೆ ಬಂಧುಗಳಿಂದ ಸಾಂತ್ವನವು ಸಿಗುವುದು. ಸಿಕ್ಕಿದ್ದರಲ್ಲಿ ಸುಖ ಪಡುವುದನ್ನು ಬೆಳೆಸಿಕೊಳ್ಳುವಿರಿ. ಮಕ್ಕಳನ್ನು ಸ್ವತಂತ್ರವಾಗಿ ಬಿಡುವುದು ಬೇಡ. ಇಷ್ಟವಿಲ್ಲದಿದ್ದರೂ ಕೆಲವನ್ನು ಮಾಡಬೇಕಾಗುವುದು.
ತುಲಾ ರಾಶಿ : ಆಹಾರದ ಉದ್ಯಮದವರಿಗೆ ಅಧಿಕ ಒತ್ತಡವಿರುವುದು. ನಿಮ್ಮ ತಪ್ಪಿಗೆ ಯಾರನ್ನೋ ದೂರುವುದು ಬೇಡ. ಬಾಲಿಶವಾಗಿ ವರ್ತಿಸುವುದರಿಂದ ನಿಮ್ಮ ಬಗ್ಗೆ ತಪ್ಪು ಕಲ್ಪನೆ ಬರಬಹುದು. ಚರಾಸ್ತಿಯು ಅನ್ಯರ ಪಾಲಾಗಬಹುದು. ಅವಶ್ಯಕ ವಸ್ತುಗಳನ್ನು ನೀವು ಕಳೆದುಕೊಳ್ಳುವಿರಿ. ಸಾಲ ಪಡೆದರವರ ಹುಡುಕಾಟವನ್ನು ಮಾಡುವಿರಿ. ಶ್ರಮವಹಿಸಿದಷ್ಟು ಫಲವು ಸಿಗಲಿಲ್ಲ ಎಂಬ ಬೇಸರವಿದ್ದರೂ ತಕ್ಕಮಟ್ಟಿನ ಖುಷಿಯು ಇರಲಿದೆ. ಪುರುಷ ಪ್ರಯತ್ನವು ಹೆಚ್ಚಿರಬೇಕಾಗುವುದು. ಹೇಳಬೇಕಾದ್ದನ್ನು ಹೇಳದೇ ಮನಸ್ಸಿನಲ್ಲಿಯೇ ಮಂಡಿಗೆ ತಿನ್ನುವಿರಿ. ಪ್ರೇಮಿಯನ್ನು ನೀವು ಬಹಳ ಜೋಪಾನವಾಗಿ ನೋಡಿಕೊಳ್ಳಬೇಕಾಗುವುದು. ಆಪ್ತರಿಂದ ಸಣ್ಣ ನಿರ್ಲಕ್ಷ್ಯವನ್ನೂ ಸಹಿಸಲಾರಿರಿ.
ವೃಶ್ಚಿಕ ರಾಶಿ : ಬುದ್ಧಿವಂತಿಕೆಯಿಂದ ಬರುವ ಸಂಕಷ್ಟವನ್ನು ತಪ್ಪಿಸಿಕೊಳ್ಳುವಿರಿ. ಕಲಾವಿದರು ಉತ್ಸಾಹದಿಂದ ಇರುವರು. ಪ್ರತಿಫಲದ ನಿರೀಕ್ಷೆ ಇಲ್ಲದೇ ನೀವು ಸ್ನೇಹಿತನಿಗೆ ಸಹಾಯವನ್ನು ಮಾಡುವಿರಿ. ಆರೋಗ್ಯದ ಸಮಸ್ಯೆಯಿರುವ ಕಾರಣ ಸಹೋದ್ಯೋಗಿಗಳ ಸಹಕಾರವು ನಿಮಗೆ ಸಿಗಲಿದೆ. ಮಾತಿನಿಂದ ಇನ್ನೊಬ್ಬರು ನಿಮ್ಮನ್ನು ದ್ವೇಷಿಸುವರು. ಸಾಧಿಸುವ ವಿಧಾನವವನ್ನು ಹೇಳಿಕೊಳ್ಳುವುದು ಬೇಡ. ವಾಹನ ಚಾಲನೆಗೆ ಅತ್ಯುತ್ಸಾಹವಿದ್ದರೂ ಎಚ್ಚರಿಕೆಯನ್ನು ಹೆಚ್ಚು ಇಟ್ಟುಕೊಳ್ಳುವುದು ಮುಖ್ಯ. ಖಾಸಗಿ ಸಂಸ್ಥೆಯು ನಿಮ್ಮನ್ನು ಉನ್ನತಸ್ಥಾನಕ್ಕೆ ಏರಿಸಬಹುದು. ಬಹಳ ಪ್ರಯತ್ನದ ಫಲವಾಗಿ ಅವಿವಾಹಿತರಿಗೆ ಯೋಗ್ಯವಾದ ಸಂಬಂಧವು ಬರಲಿದೆ. ಅತಿಯಾದ ಉದ್ಯೋಗದ ಬದಲಾವಣೆಯನ್ನು ಮಾಡುವುದು ಬೇಡ. ಮಾತ್ಸರ್ಯದಿಂದ ಸುಖವನ್ನು ನಾಶಮಾಡಿಕೊಳ್ಳುವಿರಿ.