Horoscope: ದಿನಭವಿಷ್ಯ, ಈ ರಾಶಿಯವರಿಗೆ ಇಂದು ಉಗುಳಲು ನುಂಗಲೂ ಆಗದ ತುಪ್ಪದಂತೆ ಆಗುವುದು

ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಡಿಸೆಂಬರ್ 15) ಭವಿಷ್ಯ ಹೇಗಿದೆ ಎಂಬುದು ಇಲ್ಲಿದೆ.

Horoscope: ದಿನಭವಿಷ್ಯ, ಈ ರಾಶಿಯವರಿಗೆ ಇಂದು ಉಗುಳಲು ನುಂಗಲೂ ಆಗದ ತುಪ್ಪದಂತೆ ಆಗುವುದು
ಇಂದಿನ ರಾಶಿಭವಿಷ್ಯImage Credit source: iStock Photo
Follow us
TV9 Web
| Updated By: Rakesh Nayak Manchi

Updated on: Dec 15, 2023 | 12:30 AM

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಡಿಸೆಂಬರ್ 15) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಶುಕ್ರವಾರ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಉತ್ತರಾಷಾಢಾ, ಯೋಗ: ವೃದ್ಧಿ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 50 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:03 ರಿಂದ ಮಧ್ಯಾಹ್ನ 12:28ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:16 ರಿಂದ 04:40ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:15 ರಿಂದ 09:39ರ ವರೆಗೆ.

ಸಿಂಹ ರಾಶಿ: ಅನೇಕ ಕೆಲಸಗಳನ್ನು ಮಾಡದೇ ಒಂದು ಕಡೆ ಗಮನವನ್ನು ಹರಿಸಿದರೆ ಆ ಕೆಲಸವು ಉತ್ತಮವಾಗಿ ಪೂರ್ಣಗೊಳ್ಳುವುದು. ದೈನಂದಿನ ಬಳಕೆಯ ಉತ್ಪನ್ನಗಳ ವ್ಯಾಪಾರಿಗಳು ಲಾಭ ಗಳಿಸುವರು. ಕೆಲ ದಿನಗಳಿಂದ ನಿಮ್ಮ ಆರೋಗ್ಯ ಹದಗೆಟ್ಟಿದ್ದು, ಮನಸ್ಸೂ ಸರಿಯಾಗಿರದು. ಇಂದು ಸಹೋದರರ ನಡುವೆ ವಾಗ್ವಾದವು ಅಗಲಿದ್ದು ಹಿರಿಯ ಮಧ್ಯಸ್ತಿಕೆಯಿಂದ ಶಾಂತವಾಗುವುದು. ಶಿಸ್ತಿನಿಂದ ಇಂದಿನ ಕಾರ್ಯವನ್ನು ಮಾಡುವಿರಿ. ನಿಮ್ಮ ಬಗ್ಗೆ ಸುಳ್ಳು ವಿಚಾರವನ್ನು ಹೇಳುವರು. ಬಹಳ ಕೆಲಸವಿದ್ದರೂ ಒತ್ತಡದಿಂದ ಇರುವಿರಿ. ನಿಮ್ಮ ಬಗ್ಗೆ ನಿಮಗೇ ಪೂರ್ಣ ಪ್ರಮಾಣದ ನಂಬಿಕೆ ಸಾಲದು. ನೌಕರರಿಂದ ಕೆಟ್ಟ ಹೆಸರು ಬರಬಹುದು. ಹಿರಿಯರಿಗೆ ಮಾನಸಿಕ ಹಿಂಸೆಯನ್ನು ಕೊಡುವಿರಿ. ಪ್ರೀತಿಯಿಂದ ಹೇಳಿ ಕೆಲಸವನ್ನು ಮಾಡಿಸಿಕೊಳ್ಳಿ.

ಕನ್ಯಾ ರಾಶಿ: ಮೇಲಧಿಕಾರಿಗಳು ವಹಿಸಿದ ಕಾರ್ಯವನ್ನು ಪೂರೈಸುವಲ್ಲಿ ಯಶಸ್ವಿಯಾಗುವಿರಿ. ವೈದ್ಯರು ಇಂದು ಒತ್ತಡದಲ್ಲಿ ಇರುವರ. ಕೆಲಸಕ್ಕೆ ಅನುಗುಣವಾಗಿ ಸಮಯವನ್ನು ಹೊಂದಿಸಿಕೊಳ್ಳಿ. ಪ್ರಯಾಣ ಮಾಡಲು ನೀವು ಬಹಳ ಉತ್ಸಾಹದಿಂದ ಇರುವಿರಿ. ಹತ್ತಿರದವರನ್ನು ನೀವು ಕಳೆದುಕೊಳ್ಳಬೇಕಾದೀತು. ನಿಮ್ಮ ಮನಸ್ಸಿಗೆ ತೋಚಿದ್ದನ್ನೆಲ್ಲವನ್ನೂ ಹೇಳುವಿರಿ. ತಪ್ಪುಗಳನ್ನು ಸರಿ ಮಾಡಿಯೇ ನಿಮಗೆ ಇಂದಿನ ಶ್ರಮವೆಲ್ಲ ವ್ಯರ್ಥವಾಗುವುದು. ಯಾವುದೇ ಊಹೆಗಳಿಗೆ ಬೆಲೆ ಕೊಡದೇ ಸ್ಪಷ್ಟವಾದುದನ್ನು ನಂಬಿ. ಸಂಗಾತಿಯ ಇಷ್ಟವನ್ನು ಕೇಳಿ ಅವರಿಗೆ ಸಂತೋಷವನ್ನು ನೀಡುವಿರಿ. ಇಂದು ಹೆಚ್ಚಿನ ಜನರ ಜೊತೆ ಒಡನಾಟ ಮಾಡುವಿರಿ. ಸಂಗಾತಿಯು ಕೆಲವು ವಿಚಾರಗಳನ್ನು ಗೌಪ್ಯವಾಗಿ ಇಡಬೇಕಾಗುವುದು. ಆಸ್ತಿಯ ಕಲಹವನ್ನು ಸರಿ ಮಾಡಿಕೊಳ್ಳಲು ಹಣವನ್ನು ಖರ್ಚು ಮಾಡುವುದು ಅನಿವಾರ್ಯವಾಗಬಹುದು.

ತುಲಾ ರಾಶಿ: ನೀವು ನಿರ್ದೋಷಿತ್ವವನ್ನು ಸಾಬೀತುಪಡಿಸುವ ಅವಶ್ಯಕತೆಯಿಲ್ಲ. ಸಂಗಾತಿಯ ಹೂಡಿಕೆಯನ್ನು ನೀವು ಬಳಸಿಕೊಳ್ಳುವಿರಿ. ಹೊಸ ಉದ್ಯೋಗಿಗಳನ್ನು ನಿಯೋಜಿಸಿಕೊಂಡು ಕಾರ್ಯವನ್ನು ವಿಸ್ತರಿಸಿ ಲಾಭವನ್ನು ಪಡೆಯುವ ದೀರ್ಘಕಾಲದ ಯೋಜನೆಯ ಕನಸನ್ನು ಕಾಣುವಿರಿ. ಎಂತಹ ನೈಪುಣ್ಯವಿದ್ದರೂ ವ್ಯವಹಾರದಲ್ಲಿ ಒಮ್ಮೆ ಎಚ್ಚರ ತಪ್ಪುವ ಸಾಧ್ಯತೆ ಇದೆ. ನಿಮ್ಮ ಕರ್ಮವೇ ನಿಮಗೆ ಹಿಂದಿರುಗಿ ಬರುವಂತೆ ಕಾಣಿಸುವುದು. ನಿಮ್ಮ ಜವಾಬ್ದಾರಿಯ ಕಾರ್ಯಕ್ಕೆ ಕೆಲವು ಅಡೆತಡೆಗಳು ಬರಬಹುದು. ಹೇಳಬೇಕಾದುದನ್ನು ನೇರವಾಗಿ, ಸ್ಪಷ್ಟವಾಗಿ ಹೇಳುವುದು ಉಚಿತ. ನಿಮ್ಮ ಮಾತೇ ಬಂಡವಾಳವಾದೀತು. ವ್ಯಾಪರದಿಂದ ಆದ ಲಾಭವು ನಿಮಗೆ ಇನ್ನಷ್ಟು ಉತ್ಸಾಹವನ್ನು ವರ್ಧಿಸುವುದು. ಸಹೋದರಿಯ ವಿವಾಹದ ಜವಾಬ್ದಾರಿಯು ಇರಲಿದೆ. ಅಪರಿಚಿತರು ನಿಮ್ಮಿಂದ ಹಣವನ್ನು ಕೇಳಬಹುದು.

ವೃಶ್ಚಿಕ ರಾಶಿ: ಹಿರಿಯರ ಸೇವೆಯನ್ನು ಮಾಡುವ ಅವಕಾಶವು ಸಿಗಲಿದ್ದು, ಅದನ್ನು ಕಳೆದುಕೊಳ್ಳುವುದು ಬೇಡ. ಈ ದಿನಗಳಲ್ಲಿ ವ್ಯವಹಾರದಲ್ಲಿ ಪರಿಸ್ಥಿತಿ ಉತ್ತಮವಾಗಿಲ್ಲದಿದ್ದರೆ, ತಾಳ್ಮೆಯಿಂದ ಏನನ್ನಾದರೂ ಸಾಧಿಸಲು ಪ್ರಯತ್ನಿಸಿ. ಹಿತಶತ್ರುಗಳನ್ನು ನೀವು ದೂರ ಮಾಡಿಕೊಳ್ಳಲಾಗದು. ನಿಮ್ಮ ಜುಟ್ಟವನ್ನು ಅವರೇ ಹಿಡಿದುಕೊಂಡು ಆಡಿಸುವರು. ಉಗುಳಲೂ ನುಂಗಲೂ ಆಗದ ತುಪ್ಪದಂತೆ ಆಗುವುದು. ಅಪರಿಚಿತ ಕರೆಗಳು ಹೆಚ್ಚಾಗುವುದು. ನಿಮ್ಮನ್ನು ನೀವು ಕೆಲಸದ ಮೂಲಕ ಪರಿಚಯಿಸಿಕೊಳ್ಳುವಿರಿ. ನಿಮ್ಮ ಸ್ವಾಭಿಮಾನಕ್ಕೆ ತೊಂದರೆಯನ್ನು ತಂದುಕೊಳ್ಳಲಾರಿರಿ. ಹಳೆಯ ಸಂಬಂಧವು ಮತ್ತೆ ಚಿಗುರಬಹುದು. ಆಕಸ್ಮಿಕವಾಗಿ ಶುಭ ಸಮಾಚಾರವು ಬರಬಹುದು ಎಂಬ ನಿರೀಕ್ಷೆಯು ಸುಳ್ಳಾಗುವುದು. ಪ್ರಭಾವೀ ವ್ಯಕ್ತಿಗಳ ಕಡೆಯಿಂದ ನಿಮಗೆ ಉದ್ಯೋಗವು ಸಿಗುವುದು. ಸಮಯದ ಮೌಲ್ಯವನ್ನು ಅರಿತು ಕಾರ್ಯಪ್ರವೃತ್ತರಾಗಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ