AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ವಾಹನ ಚಲಾಯಿಸುವಾಗ ಜಾಗರೂಕತೆ ಮುಖ್ಯ

ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಡಿಸೆಂಬರ್ 17) ಭವಿಷ್ಯ ಹೇಗಿದೆ ಎಂಬುದು ಇಲ್ಲಿದೆ.

Horoscope: ಈ ರಾಶಿಯವರು ವಾಹನ ಚಲಾಯಿಸುವಾಗ ಜಾಗರೂಕತೆ ಮುಖ್ಯ
ರಾಶಿ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on:Dec 17, 2023 | 9:31 PM

Share

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಡಿಸೆಂಬರ್ 17) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಪಂಚಮೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ವ್ಯಾಘಾತ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 51 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 05 ನಿಮಿಷಕ್ಕೆ, ರಾಹು ಕಾಲ ಸಂಜೆ 04:41 ರಿಂದ 06:06ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:29 ರಿಂದ 01:53ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:17 ರಿಂದ 04:41ರ ವರೆಗೆ.

ಸಿಂಹ ರಾಶಿ : ನಿಮ್ಮ ಮಾತುಗಳು ನೀವು ಗಳಿಸಿದ ವಿದ್ಯೆಯನ್ನು ತಿಳಿಸುವುದು. ಕೆಲವು ಘಟನೆಗಳು ನಿಮ್ಮನ್ನು ಕಾಡಬಹುದು. ಇಂದು ನಿಮಗೆ ದಾನದಲ್ಲಿ ಮನಸ್ಸಾಗುವುದು. ಉದ್ವೇಗದಲ್ಲಿ ಏನನ್ನಾದರೂ ಹೇಳುವಿರಿ. ಖುಷಿಗೆ ಅನೇಕ ಅವಕಾಶಗಳಿದ್ದರೂ ನೀವು ಅದೆಲ್ಲವನ್ನೂ ಬಿಟ್ಟು ನಕಾರಾತ್ಮಕವಾಗಿ ಯೋಚಿಸುವಿರಿ. ಹಳೆಯ ಮಿತ್ರನ ಭೇಟಿಯಾಗಿದ್ದು ಅವರ ಹೆಚ್ಚು ಸಮಯವನ್ನು ಕಳೆಯುವಿರಿ. ಅಪನಂಬಿಕೆಯಿದ್ದರೂ ಅವರನ್ನು ಜೊತೆಗೆ ಇಟ್ಟುಕೊಳ್ಳಬೇಕಾದ ಸ್ಥಿತಿ ಬರುವುದು. ಹೂಡಿಕೆಯ ವಿಚಾರದ ಬಗ್ಗೆ ಚರ್ಚೆ ನಡೆಸುವಿರಿ. ಕಛೇರಿಯಲ್ಲಿ ಒತ್ತಡದ ಕಾರ್ಯವನ್ನು ಮುಗಿಸಿದರೂ ನಿಮ್ಮಲ್ಲಿ ಉತ್ಸಾಹವು ಅಧಿಕವಾಗಿರುವುದು. ಆಭರಣದ ಮಾರಾಟವು ನಿಮಗೆ ಲಾಭವನ್ನು ಕೊಡಬಹುದು. ಚರಾಸ್ತಿಯು ನಿಮಗೆ ಗೊತ್ತಾಗದಂತೆ ನಿಮ್ಮ ಕೈತಪ್ಪಿ ಹೋಗಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆಯು ಕಷ್ಟವೆನಿಸುವಂತೆ ಆಗುವುದು.

ಕನ್ಯಾ ರಾಶಿ : ಕುಟುಂಬವು ನಿಮ್ಮ ಬೆಂಬಲಕ್ಕೆ ಇದ್ದರೂ ನಿಮಗೆ ಯಾವ ಧೈರ್ಯವೂ ಸಾಲದು.‌ ಸಹೋದರ ನಡುವೆ ವಾಗ್ವಾದವು ನಡೆದು ವೈಮನಸ್ಯ ಉಂಟಾಗಬಹುದು. ಬೆನ್ನಿನ‌ ನೋವಿನಿಂದ ಸಂಕಟಪಡುವಿರಿ. ಸಂಗಾತಿಯು ನಿಮ್ಮ ಜೊತೆ ಸರಿಯಾಗಿ ಮಾತನಾಡದೇ ಇರಬಹುದು. ಯಾವುದೋ ಆಲೋಚನೆಯಲ್ಲಿ ನೀವು ಮುಳುಗಿ ಕಾರ್ಯವನ್ನು ಅಸ್ತವ್ಯಸ್ತ ಮಾಡಿಕೊಳ್ಳುವಿರಿ. ಅನಪೇಕ್ಷಿಯ ಮಾತನ್ನು ಆಡುವುದು ಬೇಡ. ಸುಮ್ಮನಿರಲು ಕಷ್ಟವಾದರೆ ಏನಾದರೂ ಕೆಲಸವನ್ನು ಮಾಡಿ. ಸರ್ಕಾರದ ಕಾರ್ಯವು ಬಹಳ ದಿನಗಳಿಂದ ಹಾಗೆಯೇ ಉಳಿದಿದ್ದು ನಿಮಗೆ ಇದರಿಂದ ಬೇಸರವಾಗುವುದು. ನಿಮ್ಮ ಪ್ರತಿಭೆಯ ಪ್ರದರ್ಶನಕ್ಕೆ ಹಿಂಜರಿಯುವಿರಿ. ಧಾರ್ಮಿಕ ಕಾರ್ಯವನ್ನು ಕರ್ತವ್ಯದಿಂದ ಮಾಡುವಿರಿ, ಶ್ರದ್ಧೆ‌ ಮತ್ತು ಭಕ್ತಿಯಿಂದಲ್ಲ.‌ ಸ್ತ್ರೀಯರು ನೂತನ ವಸ್ತುಗಳನ್ನು ಖರೀದಿಸಿ ಸಂತೋಷಪಡುವರು. ನಿಮ್ಮ ಅಕ್ಕಪಕ್ಕದವರ ಮೇಲೆ‌ಅಲ ಸದಭಿಪ್ರಾಯವು ಇರದು.

ತುಲಾ ರಾಶಿ : ಕೋಪವನ್ನು ಕಡಿಮೆ ಮಾಡಿಕೊಂಡದರೂ ಕೆಲವು ಸಂದರ್ಭವನ್ನು ಎದರಿಸಲು ಸಿಟ್ಟು ಮಾಡಿಕೊಳ್ಳಬೇಕಾದೀತು ಅಥವಾ ಸಿಟ್ಟುಬಂದಂತೆ ನಟಿಸುವಿರಿ. ಸಾಲ ಕೊಟ್ಟವರು ನಿಮ್ಮನ್ನು ಪೀಡಿಸಬಹುದು. ಕೆಲಸದ ಸುಲಭ ಮಾರ್ಗವು ನಿಮಗೆ ಸೂಚಿಸದೇ ಇರಬಹುದು. ಮಕ್ಕಳ ವಿವಾಹವನ್ನು ನಿಶ್ಚಯಿಸಿ ನಿಶ್ಚಿಂತರಾಗುವಿರಿ. ಆದಾಯವನ್ನು ಹೆಚ್ಚು ಮಾಡಿಕೊಳ್ಳಲು ನಿಮಗೆ ಆಗದು. ಆಕಸ್ಮಿಕವಾಗಿ ಸಿಕ್ಕ ಉದ್ಯೋಗವನ್ನು ಸರಿಯಾಗಿ ಬಳಸಿಕೊಳ್ಳಿ. ಬಂಧುಗಳು ನಿಮ್ಮ‌ ಬಗ್ಗೆ ಸಲ್ಲದ ಅಭಿಪ್ರಾಯವನ್ನು ಹೇಳಿಯಾರು. ಯಾರ ಮೇಲೂ ಪಕ್ಷಪಾತ ಮಡುವುದು ಬೇಡ. ಗೊಂದಲದಲ್ಲಿ ಯಾವ‌ ಕಾರ್ಯಕ್ಕೂ ಹೋಗುವುದು ಬೇಡ. ವ್ಯಾಪಾರದಲ್ಲಿ ಹಿನ್ನಡೆಯಾಗಲಿದ್ದು ಮಾನಸಿಕವಾಗಿ ಕುಗ್ಗುವಿರಿ. ಪುಣ್ಯಸ್ಥಳಗಳಿಗೆ ನೀವು ಹೋಗಬೇಕಾಗುವುದು. ತಪ್ಪನ್ನು ಒಪ್ಪಿಕೊಳ್ಳಲು ನಿಮಗೆ ಸಮಯವು ಬೇಕಾಗಬಹುದು. ದೂರ ಪ್ರಯಾಣವು ನಿಮ್ಮ ಆರೋಗ್ಯದ ಮೇಲೆ‌ ಪರಿಣಾಮ ಬೀರಬಹುದು.

ವೃಶ್ಚಿಕ ರಾಶಿ : ಕೆಲವರ ಜೊತೆ ನಿಮ್ಮ ಮಾತು ಹಲವು ಅನುಮಾನಗಳಿಗೆ ಕಾರಣವಾಗಬಹುದು.‌ ಸಂಬಂಧದಲ್ಲಿ ಸಕಾರಾತ್ಮಕ ಮಾತುಗಳು ಅಗತ್ಯ. ನೌಕರರು ನಿಮ್ಮ‌ಆಪ್ತರಾಗಿ ನಿಮ್ಮ ಕೆಲಸದಲ್ಲಿ ಭಾಗಿಯಾಗುವರು. ರಾಜಕೀಯದ ಬಲದಿಂದ ಕಾನೂನಿನ ಸಮರವು ನಿಮ್ಮ ಪರವಾಗಬಹುದು. ವಾಹನ ಚಲಾಯಿಸುವಾಗ ಜಾಗರೂಕತೆ ಮುಖ್ಯ. ಮಕ್ಕಳ ತಪ್ಪನ್ನು ನಿರ್ಲಕ್ಷ್ಯ ಮಾಡದೇ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕಾಗುವುದು. ಕಾರ್ಯದಲ್ಲಿ ಗೊಂದಲವನ್ನು ಮಾಡಿಕೊಳ್ಳುವುದು ಬೇಡ. ನಿಮ್ಮ ಸಂಪತ್ತನ್ನು ಸದುಪಯೋಗ ಮಾಡಿಕೊಳ್ಳುವ ದಾರಿಯನ್ನು ಕಂಡುಕೊಳ್ಳಿ. ಮಕ್ಕಳ ಜೊತೆ ಸಂತೋಷದಿಂದ ಸಮಯವನ್ನು ಕಳೆಯುವಿರಿ. ನೀವು ಜೊತೆಗಿದ್ದರೆ ಮಿತ್ರರು ಎಂತಹ ಕೆಲಸವನ್ನು ಮಾಡಲೂ ಹಿಂಜರಿಯರು. ಸಂಗಾತಿಯ ಮೇಲೆ ದ್ವೇಷದ‌ ಬುದ್ಧಿಯು ಬರಬಹುದು. ಮುಂಗೋಪವನ್ನು ಕಡಿಮೆ ಮಾಡಿಕೊಂಡರೂ ನಿಯಂತ್ರಣವನ್ನು ತಪ್ಪಬಹುದು.

Published On - 12:30 am, Sun, 17 December 23