ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಡಿಸೆಂಬರ್ 19) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಪೂರ್ವಾಭಾದ್ರಾ, ಯೋಗ: ವಜ್ರ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 52 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 06 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:18 ರಿಂದ 04:42ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:41 ರಿಂದ 11:05ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:30 ರಿಂದ 01:54ರ ವರೆಗೆ.
ಸಿಂಹ ರಾಶಿ: ರಕ್ಷಣೆಯ ಕಾರ್ಯದಲ್ಲಿ ತೊಡಗಿದವರು ಆತಂಕದಿಂದ ಇರುವಿರಿ. ನಿಮ್ಮ ಆದಾಯವು ಬದಲಾಗುವ ಸಾಧ್ಯತೆ ಇದೆ. ಗೌರವವಿಲ್ಲದೆ ಕಡೆ ಹೋಗಲು ನೀವು ಬಯಸುವುದಿಲ್ಲ. ಇನ್ನೊಬ್ಬರಿಗೆ ಸಹಾಯ ಮಾಡಲು ಕೂಡಿಟ್ಟ ಹಣವನ್ನು ತೆಗೆಯಬೇಕಾದೀತು. ನಿಗದಿತ ಸಮಯಕ್ಕೆ ಕೆಲಸವಾಗದೇ ಇರುವ ಕಾರಣ ಕೆಲಸವನ್ನು ಕೊಟ್ಟವರು ನಿಮ್ಮ ಮೇಲೆ ಮುನಿಸಿಕೊಂಡಾರು. ಕಳೆದ ಸಮಯವನ್ನು ಮೆಲುಕು ಹಾಕುವಿರಿ. ಯಾರ ಜೊತೆಯೂ ಅಸಂಬದ್ಧ ಚರ್ಚೆಗೆ ಹೋಗುವುದು ಬೇಡ. ನೀವು ಕುಟುಂಬದಲ್ಲಿ ಸಾಮರಸ್ಯವನ್ನು ಕಾಪಾಡಿಕೊಳ್ಳಲು ಬಯಸುವಿರಿ. ನಿಮ್ಮ ಸಂಗಾತಿಯ ಮಾತುಗಳಿಗೆ ಪ್ರಾಮುಖ್ಯತೆ ನೀಡಿ. ನಿಮ್ಮ ಕಾರಣದಿಂದಲೇ ನೊಂದಿರಲೂ ಸಾಕು. ಆಲಸ್ಯದ ಕಾರಣ ಇಂದು ಕಛೇರಿಗೆ ವಿಳಂಬವಾಗಿ ಹೋಗುವಿರಿ. ಬೆಲೆಬಾಳುವ ವಸ್ತುಗಳನ್ನು ಖರೀದಿಸಲಿದ್ದು ಅದರ ರಕ್ಷಣೆಯನ್ನು ಮಾಡಬೇಕಾಗುವುದು. ಹೊಸ ವಿಚಾರಗಳ ಕಲಿಕೆಗೆ ಅವಕಾಶಗಳು ಸಿಗುವುದು. ವ್ಯಾಪಾರವನ್ನು ಹೆಚ್ಚಿನ ಆದಾಯ ಬರುವಂತೆ ಮಾಡಿಕೊಳ್ಳುವಿರಿ.
ಕನ್ಯಾ ರಾಶಿ: ಉದ್ಯೋಗದಲ್ಲಿ ನಿಮ್ಮನ್ನು ಕೆಲಸಕ್ಕೆಂದು ಕಳಿಸಬಹುದು. ಅಪರಿಚಿತ ಸ್ಥಳದಿಂದ ನೀವು ಉದ್ವೇಗಕ್ಕೆ ಒಳಗಾಗುವಿರಿ. ಅಶಿಸ್ತಿನಿಂದ ನಿಮಗೆ ಕೆಟ್ಟ ಹೆಸರು ಬರಬಹುದು. ಸಂಕುಚಿತ ಸ್ವಭಾವವನ್ನು ದೂರ ಮಾಡಿಕೊಳ್ಳುವುದು ಉತ್ತಮ. ನಿಮ್ಮದಾದ ಕಾರ್ಯದಲ್ಲಿ ನೀವು ತೊಡಗಿಗೊಳ್ಳಿ. ಖಾಲಿ ಇರುವುದು ಬೇಡ. ವಾಹನ ಸಂಚಾರದಲ್ಲಿ ಅಡಚಣೆ ಆಗಲಿದೆ. ನಿದ್ರೆಯು ಸರಿಯಾಗದೇ ಮನಸ್ಸು ಭಾರವಾಗಬಹುದು. ಇಷ್ಟವಿಲ್ಲದ ವೃತ್ತಿಯನ್ನು ಅವಲಂಬಿಸಿ ಕಷ್ಟಪಡುವಿರಿ. ಇನ್ನೊಬ್ಬರ ವಿಚಾರಕ್ಕೆ ತೊಂದರೆಯನ್ನು ತೆಗೆದುಕೊಳ್ಳುವಿರಿ. ಸಹೋದ್ಯೋಗಿಗಳ ಅಸಹಕಾರವು ಅವರ ಮೇಲೆ ದ್ವೇಷವನ್ನು ಮೂಡಿಸಬಹುದು. ಆಕಸ್ಮಿಕವಾಗಿ ನಿಮಗೆ ಧನನಷ್ಟವಾಗಲಿದ್ದು ಚಿಂತೆ ಕಾಡುವುದು. ನಿಮ್ಮ ಸಣ್ಣ ತಪ್ಪೂ ಅಪಹಾಸ್ಯಕ್ಕೀಡಾಗುವುದು. ನಿಮ್ಮ ಗುರಿಯನ್ನು ಸ್ಪಷ್ಟ ಮಾಡಿಕೊಂಡು ಮುಂದುವರಿಯಿರಿ.
ತುಲಾ ರಾಶಿ: ಉದ್ಯೋಗಕ್ಕಾಗಿ ಪರದಾಡುತ್ತಿರುವವರು ಉತ್ತಮ ಉದ್ಯೋಗವನ್ನು ಪಡೆದುಕೊಳ್ಳುವಿರಿ. ವ್ಯಾಪಾರಸ್ಥರು ಹೊಸತನ್ನು ಮಾಡಲು ಇಚ್ಛಿಸುವಿರಿ. ಈಗಿನ ಪರಿಸ್ಥಿತಿಯಲ್ಲಿ ಬದಲಾವಣೆ ಬೇಕೆನಿಸುವುದು. ನಿಮ್ಮ ಶ್ರಮದ ಬಗ್ಗೆ ಕಹಿಯಾದ ಮಾತುಗಳು ಕೇಳಿಬರಬಹುದು. ಇಂದು ಯಾರನ್ನೂ ನಂಬುವ ಸ್ಥಿತಿಯಲ್ಲಿ ನೀವು ಇರಲಾರಿರಿ. ಸಾಮಾಜಿಕ ಕಾರ್ಯದಲ್ಲಿ ಅವಮಾನದ ಕಾರಣದಿಂದ ಅದನ್ನು ಮಾಡಲು ಹಿಂದೇಟು ಹಾಕುವಿರಿ. ಅಪರಿಚಿತ ಕರೆಗಳು ನಿಮಗೆ ಹಿಂಸೆಯನ್ನು ಕೊಡಬಹುದು. ಪಾಲುದಾರಿಕೆಯಲ್ಲಿ ನಿಮಗೆ ಪೂರ್ಣ ಸಮಾಧಾನ ಇರದು. ವಿವಾಹವಾದರೂ ಭವಿಷ್ಯದ ಬಗ್ಗೆ ನಕಾರಾತ್ಮಕ ಆಲೋಚನೆಯು ಇರಲಿದೆ. ನಿಮಗೆ ಅಭದ್ರತೆಯು ಕಾಡಬಹುದು. ಮಕ್ಕಳ ಸಂತೋಷದಲ್ಲಿ ನೆಮ್ಮದಿ ಇರಲಿದೆ. ನಿಮ್ಮ ಗೌಪ್ಯ ಸಂಗತಿಗಳನ್ನು ಯಾರ ಜೊತೆಯೂ ಹಂಚಿಕೊಳ್ಳುವುದು ಬೇಡ. ಯಾರ ಬಗ್ಗೆಯೂ ನಿಮಗೆ ಸದ್ಭಾವವು ಇರದೇ ಇದ್ದೀತು.
ವೃಶ್ಚಿಕ ರಾಶಿ: ಇಂದು ಕಛೇರಿಯಲ್ಲಿ ಕೌಟುಂಬಿಕ ವಿಚಾರವು ಪರಿಣಾಮವನ್ನು ಉಂಟುಮಾಡಲಿದೆ. ಬಹಳ ದಿನಗಳಿಂದ ಸ್ಥಗಿತಗೊಂಡ ಕೆಲಸಗಳೂ ಪೂರ್ಣಗೊಳ್ಳುತ್ತವೆ. ಸಣ್ಣ ವ್ಯಾಪಾರಿಗಳು ವ್ಯವಹಾರ ಹೆಚ್ಚಳದ ಬಗ್ಗೆ ಗಮನಹರಿಸಬೇಕು. ಬಹಳ ದಿನಗಳಿಂದ ಕಾಣಿಸಿಕೊಳ್ಳದ ನೋವು ಕಾಣಿಸಿಕೊಳ್ಳಬಹುದು. ಕೃಷಿಯಲ್ಲಿ ಲಾಭವನ್ನು ಪಡೆಯಲು ಹೆಚ್ಚಿನ ಓಡಾಟ ಮಾಡಬೇಕಾಗುವುದು. ಚಿಂತಿತ ಕಾರ್ಯವನ್ನು ಪೂರೈಸಲು ನಿಮಗೆ ಬುದ್ಧಿಯು ಸೂಚಿಸದು. ಆಸ್ತಿಯನ್ನು ಪಡೆದುಕೊಳ್ಳಲು ನ್ಯಾಯಾಲಯಕ್ಕೆ ಹೋಗಬೇಕಾದೀತು. ಧಾರ್ಮಿಕ ಆಚರಣೆಯಲ್ಲಿ ವಿಶ್ವಾಸವು ಕಡಿಮೆಯಾಗಲಿದೆ. ಸಂಗಾತಿಯು ನಿಮ್ಮನಡೆಯನ್ನು ಅನುಮಾನಸಿಬಹುದು. ಅಲಭ್ಯವಾದ ವಸ್ತುವನ್ನು ಪಡೆದುಕೊಳ್ಳುವ ತವಕವು ಇರುವುದು. ಭೂಮಿಯನ್ನು ಕೊಳ್ಳುವುದು ಇಂದು ಸುಲಭವಾಗದು.