Horoscope: ಈ ರಾಶಿಯವರಿಗೆ ಹಣಕಾಸಿನ ವೆಚ್ಚಗಳ ಬಗ್ಗೆ ವಿಶೇಷವಾಗಿ ಕಾಳಜಿ ಬೇಕು

| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 21, 2023 | 12:30 AM

ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಡಿಸೆಂಬರ್ 21) ಭವಿಷ್ಯ ಹೇಗಿದೆ ಎಂಬುದು ಇಲ್ಲಿದೆ.

Horoscope: ಈ ರಾಶಿಯವರಿಗೆ ಹಣಕಾಸಿನ ವೆಚ್ಚಗಳ ಬಗ್ಗೆ ವಿಶೇಷವಾಗಿ ಕಾಳಜಿ ಬೇಕು
ರಾಶಿ ಭವಿಷ್ಯ
Follow us on

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಡಿಸೆಂಬರ್ 21) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ನವಮೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ವರಿಯಾನ್, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 53 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 07 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:55 ರಿಂದ 03:19 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:04 ರಿಂದ 08:18ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:42 ರಿಂದ 11:06ರ ವರೆಗೆ.

ಸಿಂಹ ರಾಶಿ : ಇಂದು ಉದ್ಯೋಗಿಗಳಿಗೆ ಕಛೇರಿಯಲ್ಲಿ ಎಲ್ಲರ ಜೊತೆ ಉತ್ತಮ ಸಮಯ ಕಳೆಯುವ ಅವಕಾಶವು ಸಿಗುವುದು. ತಪ್ಪನ್ನು ಮಾಡಿ ಅನಂತರ ಅದನ್ನು ಸರಿ ಮಾಡಿಕೊಳ್ಳಲು ವಿವಿಧ ಪ್ರಯತ್ನವನ್ನು ಮಾಡುವಿರಿ. ನೀರಿನಿಂದ ಭಯವು ಉಂಟಾಗುವುದು. ಮನೆಯಲ್ಲಿ ಹಬ್ಬದ ವಾತಾವರಣ ಇರಲಿದ್ದು ನೀವೂ ಬಹಳ ದಿನಗಳ ಅನಂತರ ಇಂತಹ ಸಂತೋಷವನ್ನು ಪಡೆಯುವಿರಿ. ಕಛೇರಿಯ ಕಾರ್ಯವನ್ನು ಮನೆಯಲ್ಲಿ ಇದ್ದು ಮಾಡಬೇಕಾಗಬಹುದು. ಇಂದು ವ್ಯಾಪಾರವನ್ನು ಮಾಡುವ ಮನಸ್ಸು ಇಲ್ಲದಿದ್ದರೂ ಮನೆಯಲ್ಲಿ ಕುಳಿತು ಬೇಸರವಾಗಬಹುದು. ನಿಮಗೆ ಬೇಕಾದ ವ್ಯವಸ್ಥೆಯನ್ನು ನೀವು ಮಾಡಿಕೊಳ್ಳುವಿರಿ. ಸಾಮಾಜಿಕ ತಾಣದಲ್ಲಿ ಹೆಚ್ಚು ಸಮಯ ಕಳೆಯುವಿರಿ. ಸ್ನೇಹಿತರ ತಮಾಷೆಯು ನಿಮಗೆ ಇಷ್ಟವಾಗದು. ದ್ವಿಚಕ್ರ ವಾಹನವನ್ನು ಓಡಿಸುವಾಗ ಎಚ್ಚರ ಇರಲಿ. ಸಂಗಾತಿಯ ಮನಃಸ್ಥಿತಿಗೆ ಪೂರಕವಾಗಿ ನಿಮ್ಮ ಆಲೋಚನೆಯೂ ಇರಲಿದ್ದು ನಿಮಗೆ ಖುಷಿಯಾಗುವುದು.

ಕನ್ಯಾ ರಾಶಿ : ಒತ್ತಡದ ನಡುವೆಯೂ ತಾಳ್ಮೆಯನ್ನು ನೀವು ಕಂಡುಕೊಳ್ಳುವಿರಿ. ಕಾಣಾಂತರಗಳಿಂದ ನಿಲ್ಲಿಸಿದ್ದ ಕಾರ್ಯವನ್ನು ಪುನಃ ಪ್ರಾರಂಭಿಸುವಿರಿ. ಹಳೆಯ ವಾಹನವನ್ನು ಪಡೆದುಕೊಳ್ಳುವಿರಿ. ಹಿರಿಯರಿಗೆ ಎದುರು ಮಾತನಾಡಿ ಅನಂತರ ಪಶ್ಚಾತ್ತಾಪಪಡುವಿರಿ. ನೆನಪಿನ ಶಕ್ತಿಗೆ ಸೂಕ್ತವಾದ ಪರಿಹಾರವನ್ನು ಮೊದಲು ಮಾಡಿಕೊಳ್ಳಬೇಕಾಗುವುದು. ಕೆಲವು ಶುಭ ಸೂಚನೆಗಳು ನಿಮಗೆ ಗೊತ್ತಾಗಲಿದ್ದು ನಿರೀಕ್ಷೆಯೂ ಎಂದಿಗಿಂತ ಹೆಚ್ಚಿರಲಿದೆ. ಮಾತುಗಾರರು ಎಂದಿನ ವಾಚಾಳಿತನವನ್ನು ಕಡಿಮೆಮಾಡುವರು. ಸಿಕ್ಕ ಅವಕಾಶದಲ್ಲಿ ತೃಪ್ತಿ ಪಡೆಯುವುದು ಮುಖ್ಯವಾಗಿರಲಿ. ಮನೆಯ ಕಾರ್ಯದಲ್ಲಿ ಸಮಯವು ಕಳೆದುಹೋಗುವುದು. ನಿಮಗೆ ಗೊತ್ತೇ ಇರದ ಕೆಲಸವನ್ನು ನೀವು ಮಾಡಬೇಕಾದೀತು. ಎಲ್ಲದಕ್ಕೂ ವಿಧಿಯನ್ನು ಹೀಗಳೆಯುವುದಕ್ಕಿಂತ ನಿಮ್ಮ ಪ್ರಯತ್ನವನ್ನು ಮುಂದುವರೆಸಿರಿ. ಮನಶ್ಚಾಂಚಲ್ಯದಿಂದ ಕಛೇರಿಯಲ್ಲಿ ಸರಿಯಾದ ಕೆಲಸವನ್ನು ಮಾಡಲಾಗದು.

ತುಲಾ ರಾಶಿ : ಉನ್ನತ ಅಧಿಕಾರಿಗಳ ಜೊತೆ ಹೆಚ್ಚು ವ್ಯವಹಾರವನ್ನು ಮಾಡಬೇಕಾಗಿರುವ ಕಾರಣ ಅವರ ಜೊತೆ ಓಡಾಡುವಿರಿ. ಹಣಕಾಸಿನ ವೆಚ್ಚಗಳ ಬಗ್ಗೆ ವಿಶೇಷವಾಗಿ ಕಾಳಜಿ ಬೇಕು. ಸ್ನೇಹತರ ಜೊತೆ ಮೋಜಿನಲ್ಲಿ ದಿನವನ್ನು ಮುಗಿಸುವಿರಿ. ಜಾಹಿರಾತು ವಿಭಾಗದಲ್ಲಿ ಇರುವವರಿಗೆ ಅವಕಾಶವು ಹೆಚ್ಚು ಸಿಗಬಹುದು. ವಾಗ್ಮಿಗಳು ಸಿಕ್ಕ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವರು. ಸಂಪ್ರದಾಯದ ವಿಚಾರದಲ್ಲಿ ನಿಮಗೆ ಆಸಕ್ತಿಯು ಹೆಚ್ಚಾಗಬಹುದು. ನಿಮ್ಮ ಉಪಕಾರಕ್ಕೆ ಪ್ರತ್ಯುಪಕಾರವು ಸಿಗದೇ ಇರಬಹುದು. ಮನೆಗೆ ಅತಿಥಿಗಳ ಆಗಮನವಾಗಲಿದ್ದು ನಿಮ್ಮ ಇಂದಿನ ಕಾರ್ಯವು ಬದಲಾಗಬಹುದು. ನಿಮ್ಮ ಕರ್ತವ್ಯವನ್ನು ಮಾಡಲು ಹಿಂದೇಟು ಹಾಕುವಿರಿ. ಲೆಕ್ಕಪತ್ರದ ವಿಚಾರದಲ್ಲಿ ನಿಷ್ಠುರವಾದ ಮನೋಭಾವವನ್ನು ಇಟ್ಟುಕೊಳ್ಳುವಿರಿ. ನಿಮ್ಮ ಮನಸ್ಸಿಗೆ ಹಿಡಿಸದೇ ಇರುವವರಿಂದ ದೂರ ಉಳಿಯುವಿರಿ.

ವೃಶ್ಚಿಕ ರಾಶಿ : ವಿದ್ಯಾರ್ಥಿಗಳು ಹಲವು ದಿನಗಳ ಅನಂತರ ತಮ್ಮ ಕೆಲಸದಲ್ಲಿ ನಿರತರಾಗಿರುತ್ತಾರೆ. ಏಕಾಗ್ರತೆಯಿಂದ ಕೆಲಸ ಮಾಡಿದರೆ ಅನಾಯಾಸವಾಗಿ ಗುರಿಯನ್ನು ತಲುಪಬಹುದು. ಲಾಭಾಕ್ಕಾಗಿ ವ್ಯಾಪಾರದಲ್ಲಿ ಹೊಸದಾದ ಆಕರ್ಷ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಮಕ್ಕಳ ಜೊತೆ ಚಿಂತೆಯನ್ನೆಲ್ಲ ಬಿಟ್ಟು ಸಂತೋಷದಿಂದ ಕಾಲವನ್ನು ಕಳೆಯುವಿರಿ. ಔದಾಸೀನ್ಯದಿಂದ ವ್ಯಾಪಾರದಲ್ಲಿ ನಷ್ಟವಾಗಲಿದೆ. ಇಂದಿನ ಪ್ರಯಾಣದಿಂದ ಹಿಂಸೆ ಆಗಬಹುದು. ಮಿತ್ರರಿಂದ ಸಿಗಬೇಕಾದ ಹಣಕ್ಕೆ ಕತ್ತರಿ ಬೀಳುವುದು. ನಿರೀಕ್ಷಿತ ಫಲವು ಲಭಿಸದು. ದೇವರ ಬಗ್ಗೆ ಶ್ರದ್ಧೆಯು ಕಡಿಮೆಯಾಗಲಿದೆ. ಆಸ್ತಿಯ ಖರೀದಿಯ ವಿಚಾರದಲ್ಲಿ ನೀವು ಸರಿಯಾದ ಮಾಹಿತಿಯನ್ನು ಪಡೆಯುವುದು ಸೂಕ್ತ. ಸಹೋದ್ಯೋಗಿಗಳ ಮೇಲೆ ನಿಮಗೆ ಅಸೂಯೆ ಉಂಟಾಗಬಹುದು. ನಿಮ್ಮ ಇಚ್ಛಾಶಕ್ತಿಯು ವಹಿಸಿದ ಕೆಲಸವನ್ನು ಪೂರ್ಣಗೊಳಿಸಲು ಸಹಕಾರಿ. ನಿಮ್ಮ ಯೋಜನೆ ಉತ್ತಮವಿದ್ದರೂ ಅದನ್ನು ಕಾರ್ಯರೂಪಕ್ಕೆ ತರಲು ಕಷ್ಟವಾದೀತು.

-ಲೋಹಿತ ಹೆಬ್ಬಾರ್ – 8762924271 (what’s app only)