Horoscope: ಈ ರಾಶಿಯವರು ಕುಟುಂಬದ ಚಿಂತೆಯಿಂದ ಆರೋಗ್ಯವನ್ನು ಹಾಳುಮಾಡಿಕೊಳ್ಳುವಿರಿ
ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಡಿಸೆಂಬರ್ 22) ಭವಿಷ್ಯ ಹೇಗಿದೆ ಎಂಬುದು ಇಲ್ಲಿದೆ.
ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಡಿಸೆಂಬರ್ 22) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ದಶಮೀ, ನಿತ್ಯನಕ್ಷತ್ರ: ಭರಣೀ, ಯೋಗ: ಪರಿಘ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 54 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 07 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 11:07 ರಿಂದ 12:31 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:20 ರಿಂದ 04:44ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 08:18 ರಿಂದ 09:43ರ ವರೆಗೆ.
ಸಿಂಹ ರಾಶಿ : ಅದೃಷ್ಟವಿದೆ ಎಂದು ಏನನ್ನಾದರು ಮಾಡಲು ಸಿದ್ಧರಾಗುವುದು ಬೇಡ. ನಿಮ್ಮ ಗಮನಾಗಮನವನ್ನು ಯಾರಾದರೂ ತಿಳಿದುಕೊಳ್ಳುತ್ತಿರಬಹುದು. ಕುಟುಂಬದ ಚಿಂತೆಯಿಂದ ಆರೋಗ್ಯವನ್ನು ಹಾಳುಮಾಡಿಕೊಳ್ಳುವಿರಿ. ಅನವಶ್ಯಕವಾಗಿ ಹಣವನ್ನು ವ್ಯರ್ಥ ಮಾಡಿಕೊಳ್ಳುವಿರಿ. ಸಂಗಾತಿಯ ಬೆಂಬಲ ಸಿಗಲಿದೆ. ಎಲ್ಲ ಕಡೆಯಿಂದ ನಿಮಗೆ ಅನುಕೂಲವಾಗಬೇಕು ಎಂದುಕೊಳ್ಳುವುದು ಬೇಡ. ಅನಿಶ್ಚಿತತೆಯು ನಿಮ್ಮ ಮೇಲೆ ದಟ್ಟವಾದ ಪ್ರಭಾವವನ್ನು ಬೀರಬಹುದು. ಕುಟುಂಬದಲ್ಲಿ ಪರಸ್ಪರ ಪ್ರೀತಿಯು ತೋರುವುದು. ಪ್ರಯಾಣದಿಂದ ಪ್ರಯಾಸವಾಗಲಿದೆ. ಹೊಸ ವ್ಯವಹಾರದ ಬಗ್ಗೆ ನಿಮಗೆ ಆಪ್ತರ ಸಲಹೆಯು ಸಿಗಲಿದೆ. ಮಕ್ಕಳ ಸ್ವಭಾವವು ಇಷ್ಟವಾಗದೇ ಹೋಗುವುದು. ಖಾಸಗಿ ಸಂಸ್ಥೆಯೊಂದು ನಿಮ್ಮನ್ನು ಮುಖ್ಯಸ್ಥರನ್ನಾಗಿ ಮಾಡುವ ಯೋಚನೆಯನ್ನು ಇಟ್ಟುಕೊಂಡಿದೆ. ನಿಮ್ಮ ಪೂರ್ವ ನಿರ್ಧಾರವನ್ನು ಬದಲಿಸಿಕೊಳ್ಳಬೇಕಾದೀತು.
ಕನ್ಯಾ ರಾಶಿ : ದೂರದ ಸಂಬಂಧಿಕರ ಭೇಟಿಯಿಂದ ನೀವು ಬಹಳಷ್ಟು ಸಂತೋಷವನ್ನು ಪಡೆಯುವಿರಿ. ನೀವು ಉದ್ಯೋಗ ಬದಲಾವಣೆಯ ನಿರೀಕ್ಷೆಯಲ್ಲಿದ್ದರೆ, ನೀವು ಬಹಳ ದಿನಗಳ ಅನಂತರ ವಿವಿಧ ಅವಕಾಶಗಳನ್ನು ಪಡೆದುಕೊಳ್ಳುವಿರಿ. ಹೊಸ ಉದ್ಯೋಗವನ್ನು ಆರಂಭಿಸಲು ತೀವ್ರತೆಯು ಇರಲಿದೆ. ಮಕ್ಕಳನ್ನು ದೂರ ಮಾಡಿಕೊಂಡು ಬೇಸರಗೊಳ್ಳುವಿರಿ. ನಿಮ್ಮ ಮಕ್ಕಳ ಬಾಂಧವ್ಯದಿಂದೆ ನಿಮಗೆ ಅಗಲಿಕೆ ಕಷ್ಟವಾದೀತು. ಸಹೋದ್ಯೋಗಿಗಳನ್ನು ಅನೌಪಚಾರಿಕವಾಗಿ ಭೇಟಿಯಾಗುವಿರಿ. ಭೂಮಿಯ ವ್ಯವಹಾರವು ನಿಮಗೆ ಹಿನ್ನಡೆಯಾಗಬಹುದು. ಓಡಾಟದಿಂದ ಸಮಯ ವ್ಯರ್ಥ ಮಾಡುವಿರಿ. ಸ್ಥಾನಮಾನವನ್ನು ಕಳೆದುಕೊಳ್ಳುವ ಸನ್ನಿವೇಶವು ಬರಬಹುದು. ಹೊಸ ಮನೆಗೆ ಸ್ಥಳಾಂತರ ಮಾಡಿಕೊಳ್ಳುವಿರಿ. ತಾಯಿಯ ಪ್ರೀತಿಯನ್ನು ಅನುಭವಿಸುವಿರಿ. ಸಂಪತ್ತಿನ ಬಗ್ಗೆ ನಿಮಗೆ ಆಸಕ್ತಿಯು ಇರದು. ಸಂಗಾತಿಯು ನಿಮ್ಮಿಂದ ಏನನ್ನೋ ಮುಚ್ಚಿಡುತ್ತಾನೆ ಎಂದು ಅನ್ನಿಸಬಹುದು.
ತುಲಾ ರಾಶಿ : ನಿಮ್ಮಲ್ಲಿ ಧನಾತ್ಮಕ ಚಿಂತನೆಯು ಹೆಚ್ಚಾಗಿದ್ದು, ಅದರಂತೆ ಮುಂದುವರಿಯುವುದು ಒಳ್ಳೆಯದು. ಮಾರುಕಟ್ಟೆಯಿಂದ ಹೆಚ್ಚಿನ ಲಾಭವನ್ನು ಪಡೆಯಲು ಆಗುವುದು.ನಿಮ್ಮ ವ್ಯಾಪಾರ ವಿಸ್ತರಣೆಯನ್ನು ಮಾಡಲು ನಿರ್ಧಾರ ಮಾಡುವಿರಿ. ದ್ವಿಚಕ್ರ ವಾಹನವನ್ನು ಚಲಾಯಿಸುವಾಗ ಎಚ್ಚರಿಕೆ ಇರಲಿ. ಹಳೆಯ ಘಟನೆಯನ್ನು ನೆನಪಿಸಿಕೊಂಡು ಸಂಕಟಪಡುವುದು ಬೇಡ. ಕಳ್ಳರ ಭೀತಿಯು ಇರಲಿದೆ. ದೇಹವು ವಾತದಿಂದ ತೊಂದರೆಗೆ ಸಿಲುಕಬಹುದು. ಧಾರ್ಮಿಕ ಆಚರಣೆಗೆ ಇನ್ನೊಬ್ಬರಿಂದ ಪ್ರೇರಣೆ ಪಡೆಯುವಿರಿ. ಸ್ತ್ರೀಯರು ನಿಮ್ಮನ್ನು ಮೆಚ್ಚಿಕೊಳ್ಳುವರು. ನಿಮ್ಮ ಲಾಭದ ಉದ್ಯಮದ ಮೇಲೆ ಕೆಟ್ಟ ದೃಷ್ಟಿ ಬೀಳಬಹುದು. ಸಮಾಜಮುಖೀ ಕಾರ್ಯಗಳನ್ನು ನಿರಪೇಕ್ಷೆಯಿಂದ ಮಾಡುವಿರಿ. ಆರೋಗ್ಯವು ಚೆನ್ನಾಗಿ ಇರಲಿದ್ದು ಮಾನಸಿಕವಾದ ನೆಮ್ಮದಿಯು ಇರುವುದು. ತಾಳ್ಮೆ ಕಡಿಮೆ ಆದಂತೆ ತೋರುವುದು. ನಿಮ್ಮ ಉದಾರಗುಣವು ದುರುಪಯೋಗ ಆಗಬಹುದು.
ವೃಶ್ಚಿಕ ರಾಶಿ : ನಿಮ್ಮ ಭವಿಷ್ಯದ ಬಗ್ಗೆ ನೀವು ಹೆಚ್ಚು ಕುತೂಹಲದಲ್ಲಿ ಇರುವಿರಿ. ಹೂಡಿಕೆಗೆ ಸರಿಯಾದ ಜನರೊಂದಿಗೆ ಸಮಾಲೋಚಿಸುವಿರಿ. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಆಸಕ್ತಿ ಕಳೆದುಕೊಳ್ಳಬಹುದು, ಪ್ರೀತಿ ಪಾತ್ರರನ್ನು ನೀವು ಚೆನ್ನಾಗಿ ನೋಡಿಕೊಳ್ಳುವಿರಿ. ಆರೋಗ್ಯದ ಬಗ್ಗೆ ಕಾಳಜಿ ಮುಖ್ಯವಾಗಿರಲಿ. ಸ್ನೇಹಿತರ ಮಾತಿನಿಂದ ನಿಮಗೆ ನೋವಾಗಬಹುದು. ಹಣಕಾಸಿನ ವಿಚಾರಕ್ಕೆ ತಂದೆಯ ನಡುವೆ ವಾಗ್ವಾದವು ಆಗಬಹುದು. ನೆರ ಮನೆಯವರ ವರ್ತನೆಯಿಂದ ನೀವು ಸಿಟ್ಟಾಗುವಿರಿ. ಪರೋಪಕಾರದಿಂದ ನಿಮಗೆ ಸಂತೋಷವಾಗಲಿದೆ. ವಾಹನವನ್ನು ಚಲಿಸುವಾಗ ಒತ್ತಡವನ್ನು ಇಟ್ಟುಕೊಳ್ಳುವುದು ಬೇಡ. ಹಿರಿಯರು ಬೇಡ ಎಂದು ಹೇಳಿದ ಕೆಲಸವನ್ನು ಹಠದಿಂದ ಅವರ ಮಾತನ್ನು ವಿರೋಧಿಸಿ ಮಾಡುವಿರಿ. ಚರಾಸ್ತಿಗಳನ್ನು ನಷ್ಟ ಮಾಡಿಕೊಳ್ಳಬೇಕಾಗುವುದು. ನಿಮಗೆ ಯಾರಾದರೂ ದಾನಕ್ಕೆ ಯೋಗ್ಯರಾದವರು ಅನ್ನಿಸಿದವರಿಗೆ ದಾನವನ್ನು ಮಾಡಿ. ಸಾಲವಾಗಿ ನೀಡಿದ ಹಣವನ್ನು ಮತ್ತೆ ಬರುವುದು ಕಷ್ಟವಾದೀತು. ಸಂಗಾತಿಯನ್ನು ನೀವು ನಿರ್ಲಕ್ಷಿಸುವಿರಿ.
-ಲೋಹಿತ ಹೆಬ್ಬಾರ್ – 8762924271 (what’s app only)