Horoscope: ಈ ರಾಶಿಯವರು ಇಂದು ವಾಹನ ಚಲಿಸುವಾಗ ಅಪಘಾತವಾಗಲಿದೆ- ಎಚ್ಚರ
ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಡಿಸೆಂಬರ್ 25) ಭವಿಷ್ಯ ಹೇಗಿದೆ ಎಂಬುದು ಇಲ್ಲಿದೆ.
ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಡಿಸೆಂಬರ್ 25) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಶುಭ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 55 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 09 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 08:20 ರಿಂದ 09:44 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 11:08 ರಿಂದ 12:33ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:57 ರಿಂದ 05:21ರ ವರೆಗೆ.
ಸಿಂಹ ರಾಶಿ : ವಿವಾಹ ಜೀವನವನ್ನು ಆನಂದಿಸುವಿರಿ. ಮಕ್ಕಳ ಜೊತೆ ಬಹಳ ಸಂತೋಷದಿಂದ ಪಾಲ್ಗೊಳ್ಳುವಿರಿ. ಆಹಾರವು ವ್ಯತ್ಯಾಸವಾಗಿ ಅರೋಗ್ಯವನ್ನು ಕೆಡಿಸಿಕೊಳ್ಳುವಿರಿ. ಹೊಸ ಗೃಹವನ್ನು ಖರೀದಿಸುವ ವಿಚಾರವನ್ನು ದಂಪತಿಗಳು ಚರ್ಚಿಸುವರು. ಮಾತಿನಿಂದ ನಿಮಗೆ ಆದಾಯ ಬರಬಹುದು. ಉದ್ಯೋಗಕ್ಕಾಗಿ ನೀವು ವಿದೇಶಕ್ಕೆ ತೆರಳುವ ಆಸೆ ಇರಲಿದೆ. ಸಂಗಾತಿಯ ವಿಷಯದಲ್ಲಿ ವಾಗ್ವಾದ ನಡೆಯಲಿದೆ. ಮಕ್ಕಳಿಂದ ನಿಮಗೆ ಅಸಮಾಧಾನ ಇರಲಿದೆ. ನಿಮ್ಮ ಹಳೆಯ ಸಮಸ್ಯೆಯನ್ನು ಸರಿಮಾಡಿಕೊಳ್ಳುವಿರಿ. ವಾಹನ ವಿಚಾರವಾಗಿ ಮನೆಯಲ್ಲಿ ಕಲಹವಾಗುವುದು. ಅವಿವಾಹಿತರು ವಿವಾಹದ ಬಯಕೆಯನ್ನು ತಾಯಿಯ ಜೊತೆ ಹಂಚಿಕೊಳ್ಳುವರು. ಸಂಗಾತಿಯ ಮಾತಿಗೆ ಏನಾದರೂ ಪ್ರತಿಕ್ರಿಯೆಯನ್ನು ನೀಡಿ. ಎಲ್ಲರೆದುರು ಸಭ್ಯರಂತೆ ತೋರುವಿರಿ. ಸಾಮಾಜಿಕ ಕಾರ್ಯದಿಂದ ನಿಮಗೆ ಹೆಸರು ಬರಲಿದೆ.
ಕನ್ಯಾ ರಾಶಿ : ಗೌರವವನ್ನು ನೀವು ನಿರೀಕ್ಷಿಸಿದಷ್ಟು ಪಡೆಯಲಾಗದು. ಅತಿಯಾದ ಕೋಪವನ್ನು ನೀವು ಯಾವ ಮಾರ್ಗದಿಂದಲಾದರೂ ಕಡಿಮೆ ಮಾಡಿಕೊಳ್ಳುವುದು ಉತ್ತಮ. ಹತಾಶೆಯಿಂದ ಅಧ್ಯಾತ್ಮದ ಕಡೆ ಒಲವು ಹೆಚ್ಚಬಹುದು. ಎಲ್ಲ ಕೆಲಸದಲ್ಲಿಯೂ ನಿಮ್ಮ ನಿರೀಕ್ಷೆಯ ಸುಳ್ಳಾಗಿ ಎಲ್ಲರಿಂದ ಹೇಳಿಸಿಕೊಳ್ಳಬೇಕಾಗುವುದು. ಆರೋಗ್ಯದ ಬಗ್ಗೆ ಅತಿಯಾದ ಚಿಂತೆಯಿಂದ ಮತ್ತಷ್ಟು ಹಾಳುಮಾಡಿಕೊಳ್ಳುವಿರಿ. ಮನೆಯಲ್ಲಿ ನಿಮ್ಮ ಬಗ್ಗೆ ಏನಾದರೂ ಮಾತುಗಳು ಬರಬಹುದು. ವಾಹನದ ಅಪಘಾತವನ್ನು ನಿಮ್ಮದೇ ತಪ್ಪಿನಿಂದ ಆಗಲಿದೆ. ಯಾರ ಮಾತನ್ನೂ ಕೇಳುವ ಸಹನೆ ಇಲ್ಲವಾದೀತು. ವಿದ್ಯಾರ್ಥಿಗಳು ಓದಿನ ಬಗ್ಗೆ ಗಮನವನ್ನು ಕೊಡುವುದು ಕಷ್ಟವಾಗಬಹುದು. ಹಿರಿಯರ ಉಪದೇಶದಲ್ಲಿ ಆಸಕ್ತಿ ಕಡಿಮೆ ಆಗುವುದು. ಸ್ಥಿರಾಸ್ತಿಯ ವಿಚಾರವಾಗಿ ನೆರೆಯವರ ಜೊತೆ ಕಲಹವಾಗಬಹುದು. ವಿದೇಶದ ವ್ಯಾಪಾರದಲ್ಲಿ ಏರಿಳಿತವಾಗಬಹುದು. ಜಾಗರೂಕತೆಯಿಂದ ನಿರ್ವಹಿಸಬೇಕಾಗುವುದು.
ತುಲಾ ರಾಶಿ : ಉತ್ತಮ ಆರೋಗ್ಯಕ್ಕೆ ಚಿಕಿತ್ಸೆಯ ಅಗತ್ಯವಿದೆ. ವಿದೇಶ ಪ್ರವಾಸದ ವಾರ್ತೆಯಿಂದ ಖುಷಿಯಾಗಲಿದೆ. ಅನೇಕ ಕೆಲಸವನ್ನು ಒತ್ತಡವಿಲ್ಲದೇ ನಿರ್ವಹಿಸುವಿರಿ. ಹಣವನ್ನು ಅಲ್ಪ ಹೂಡಿಕೆ ಮಾಡಿ ಪರೀಕ್ಷಿಸಿಕೊಳ್ಳಿ. ಸಂತೋಷದ ಸುದ್ದಿಯನ್ನು ಆನಂದಿಸುವ ಮನಃಸ್ಥಿತಿ ಇಂದು ನಿಮ್ಮಲ್ಲಿ ಇರದು. ಸ್ನೇಹಿತರ ಮೇಲೆ ಕೂಗಾಡುವಷ್ಟು ಸಲುಗೆ ಬೇಡ. ಉದ್ಯೋಗದಲ್ಲಿ ಒತ್ತಡವನ್ನು ನಿವಾರಿಸಿಕೊಳ್ಳಲು ಯಾರದ್ದಾದರೂ ಸಹಾಯವನ್ನು ಪಡೆಯುವಿರಿ. ನಿಮಗೆ ಸಿಗಬೇಕಾದ ಗೌರವವು ಗೊಂದಲದಲ್ಲಿ ಇದ್ದು ಕೊನೆಗೂ ನಿಮಗೇ ಸಿಗಲಿದೆ. ತಾಳ್ಮೆಯನ್ನು ಕಳೆದುಕೊಳ್ಳದೇ ಎಲ್ಲರ ಜೊತೆ ವ್ಯವಹರಿಸಿ. ನಿಮ್ಮ ವಿರುದ್ಧ ನಡೆಸುವ ತಂತ್ರಗಾರಿಕೆಯು ಹೊಸ ವಿಧಾನದಲ್ಲಿ ಇರಲಿದೆ. ಹಿರಿಯರ ಜೊತೆ ಕಳೆದ ಸಮಯವು ನಿಮಗೆ ಉಪಯೋಗಕ್ಕೆ ಬರಲಿದೆ. ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಸರಿಮಾಡಿಕೊಳ್ಳಿ.
ವೃಶ್ಚಿಕ ರಾಶಿ : ನಿಮ್ಮ ಆಲೋಚನೆಗಳನ್ನು ಅನೇಕ ಜನರ ಜೊತೆ ಹಂಚಿಕೊಳ್ಳುವಿರಿ. ಸೋಲನ್ನು ಸವಾಲಾಗಿ ಸ್ವೀಕರಿಸುವ ಮನೋಭಾವವು ಬರಬಹುದು. ಕುಟುಂಬದ ಜೊತೆ ಸುಳ್ಳು ಹೇಳಿ, ನಿಮ್ಮ ನಿಜವಾದ ಕಾರ್ಯವನ್ನು ಮುಚ್ಚಿಡುವಿರಿ. ತಾಯಿಯನ್ನು ಬಹಳ ಚೆನ್ನಾಗಿ ನೋಡಿಕೊಳ್ಳುವಿರಿ. ಪಕ್ಷಪಾತ ಸ್ವಭಾವವನ್ನು ಸಾರ್ವಜನಿಕವಾಗಿ ಪ್ರದರ್ಶಿಸುವುದು ಬೇಡ. ನಿಮ್ಮನ್ನು ನೋಡು ದೃಷ್ಟಿಯು ಇದರಿಂದ ಬದಲಾದೀತು. ನೂತನ ಉದ್ಯಮಕ್ಕೆ ಹೆಚ್ಚು ಆದ್ಯತೆ ಇರಲಿದೆ. ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವಾಗ ನಿಮ್ಮ ಖರ್ಚಿನ ಅಂದಾಜು ತಪ್ಪಿಹೋಗಬಹುದು. ಅನಿರೀಕ್ಷಿತವಾಗಿ ಪ್ರಭಾವಿ ವ್ಯಕ್ತಿಗಳ ಸಂಪರ್ಕವು ಸಿಗುವುದು. ಕುಟುಂಬದಲ್ಲಿ ನಿಮ್ಮ ಪ್ರತಿ ಮಾತನ್ನು ಅನೇಕ ಅರ್ಥದಲ್ಲಿ ಗ್ರಹಿಸಬಹುದು. ಮೇಲಧಿಕಾರಿಗಳ ಜೊತೆ ನಿಮ್ಮ ಒಡನಾಟವನ್ನು ಚೆನ್ನಾಗಿಟ್ಟುಕೊಳ್ಳಿ. ನಿಮ್ಮದೇ ಕಾರ್ಯವಾದರೂ ನಿಮಗೆ ಅದರ ಸಂಪೂರ್ಣ ಯಶಸ್ಸು ಸಿಗದು.
-ಲೋಹಿತ ಹೆಬ್ಬಾರ್ – 8762924271 (what’s app only)