Horoscope: ಈ ರಾಶಿಯವರು ವಾಗ್ವಾದದಿಂದ ನಿಮ್ಮ ಹೆಸರನ್ನು ಕೆಡಿಸಿಕೊಳ್ಳುವಿರಿ

ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಡಿಸೆಂಬರ್ 26) ಭವಿಷ್ಯ ಹೇಗಿದೆ ಎಂಬುದು ಇಲ್ಲಿದೆ.

Horoscope: ಈ ರಾಶಿಯವರು ವಾಗ್ವಾದದಿಂದ ನಿಮ್ಮ ಹೆಸರನ್ನು ಕೆಡಿಸಿಕೊಳ್ಳುವಿರಿ
ರಾಶಿ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 26, 2023 | 12:30 AM

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಡಿಸೆಂಬರ್ 26) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ಶುಕ್ಲ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 10 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 10 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:12 ರಿಂದ 04:46 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:45 ರಿಂದ 11:09ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:33 ರಿಂದ 01:57ರ ವರೆಗೆ.

ಸಿಂಹ ರಾಶಿ : ನೀವು ಸ್ನೇಹಿತರ ಜೊತೆ ಕ್ರೀಡೆಯಲ್ಲಿ ಸಮಯವನ್ನು ಕಳೆಯುವಿರಿ. ಹಳೆಯ ನೆನಪುಗಳಿಂದ ಹಿಂದಿರುಗುವುದು ನಿಮಗೆ ಕಷ್ಟವಾಗಬಹುದು. ಸಹೋದರರ ಜೊತೆ ಕಲಹವಾಗಬಹುದು. ವಿದ್ಯಾಭ್ಯಾಸವನ್ನು ಮುಗಿಸಿ ಹೊಸ ಉದ್ಯೋಗವನ್ನು ಹುಡುಕುವಿರಿ. ಆಹಾರದ ವ್ಯಾಪಾರದಿಂದ ಲಾಭವಾಗುವುದು. ಸರ್ಕಾರದಿಂದ ಆಗಬೇಕಾದ ಕೆಲಸಕ್ಕೆ ಹೆಚ್ಚು ಖರ್ಚನ್ನು ಮಾಡಬೇಕಾಗುದು. ತಂದೆಯ ಆರೋಗ್ಯದ ಬಗ್ಗೆ ಗಮನ ಅಧಿಕವಾಗಿರಲಿ. ಬಂಧುಗಳ ವಿಚಾರದಲ್ಲಿ ನಿಮಗೆ ಪೂರ್ಣ ವಿಶ್ವಾಸವಿರದು. ವಾಗ್ವಾದದಿಂದ ನಿಮ್ಮ ಹೆಸರನ್ನು ಕೆಡಿಸಿಕೊಳ್ಳುವಿರಿ. ಯಾವುದೋ ಆಲೋಚನೆಯಲ್ಲಿ ಮಗ್ನರಾಗಿ ಮಾಡಬೇಕಾದ ಕೆಲಸವನ್ನು ಮಾಡಲಾಗದು. ಕುರುಡಾಗಿ ಮುನ್ನುಗ್ಗುವುದು ಬೇಡ. ವಿವಾಹದ ಮಾತುಕತೆಗೆ ವಿಘ್ನಗಳು ಬರಬಹುದು. ಮೊದಲೇ ನಿಶ್ಚಯಿಸಿದ ಕಾರ್ಯಗಳನ್ನು ಸರಿಯಾಗಿ ಮುಂದುವರಿಸಿ. ಹದಗೆಟ್ಟ ಆರೋಗ್ಯವು ಸುಧಾರಿಸುತ್ತ ಬರುವುದು.

ಕನ್ಯಾ ರಾಶಿ : ಕುಟುಂಬದ ಸದ್ಯರ ಅಪರೂಪದ ಭೇಟಿಯಾಗಲಿದೆ. ನಿಮ್ಮಿಂದ ಆಗದ ಕಾರ್ಯವನ್ನು ನೀವು ಇತರರ ಜೊತೆ ಸೇರಿ ಮಾಡಿಕೊಳ್ಳುವಿರಿ. ನಿಮ್ಮ ಉದ್ಯಮದ ಪ್ರಗತಿಯು ನಿಮಗೆ ಖುಷಿಕೊಡುವುದು. ಹಳೆಯ ಹೂಡಿಕೆಗೆ ಪುನಃ ನವೀಕರಣ ಮಾಡಿಕೊಳ್ಳುವಿರಿ. ಯಾರನ್ನೋ ನಂಬಿ ಹಣವ್ಯವಹಾರವನ್ನು ಮಾಡಿ ಮೋಸ ಹೋಗುವಿರಿ. ವಿದ್ಯಾಭ್ಯಾಸದ ಹಿನ್ನಡೆಯ ಕಾರಣ ಎಲ್ಲರಿಂದ ಅವಮಾನವಾಗಬಹುದು. ಕೃಷಿಕರಿಗೆ ಲಾಭಾವಾಗಲಿದೆ. ನಿಮಗೆ ಪ್ರೋತ್ಸಾಹದ ಕೊರತೆ ಅಧಿಕವಾಗಿ ಕಾಣಿಸುವುದು. ಪ್ರೀತಿಯಲ್ಲಿ ನಿಮಗೆ ನೋವಾಗುವ ಸಾಧ್ಯತೆ ಇದೆ. ಏನೂ ಬೇಡ ಎನಿಸಬಹುದು. ಸಣ್ಣ ಸಣ್ಣ ವಿಚಾರಗಳೂ ದೊಡ್ಡದಾಗಿ ಕಾಣಿಸುವುದು. ಅಧಿಕಾರಿಗಳಿಂದ ನಿಮಗೆ ಮಾನಸಿಕ ಹಿಂಸೆ ಆಗಬಹುದು. ಎಷ್ಟೋ ವರ್ಷಗಳಿಂದ ಆಗದೇ ಇರುವ ಕೆಲಸವನ್ನು ಸಾಮಾಜಿಕ ಕೆಲಸದಿಂದ ಸಾಧಿಸುವಿರಿ. ಸುರಕ್ಷಿತ ವಾಹನ ಚಾಲನೆಯನ್ನು ಮಾಡಿ.

ತುಲಾ ರಾಶಿ : ನಿಮಗೆ ಇಂದು ಸಿಗುವ ಸೂಚನೆಗಳ ಮೇಲೆ ಇಂದಿನ ದಿನವನ್ನು ನಿರ್ಧರಿಸಿಕೊಂಡು ಕೆಲಸವನ್ನು ಮಾಡುವಿರಿ. ಮಾರಾಟದ ವಿಭಾಗದಲ್ಲಿ ಇರುವವರಿಗೆ ಲಾಭವನ್ನು ಹೆಚ್ಚಿಸಿದ ಕಾರಣಕ್ಕೆ ಪ್ರಶಂಸೆಯು ಸಿಗಲಿದೆ. ವಿದ್ಯಾರ್ಥಿಗಳು ಅಧ್ಯಯನವನ್ನು ಚುರುಕು ಮಾಡುವುದು ಒಳ್ಳೆಯದು. ಹಿತಶತ್ರುಗಳನ್ನೇ ನಿಮ್ಮ ಬೆಂಬಲಕ್ಕೆ ಇಟ್ಟುಕೊಳ್ಳುವಿರಿ. ರಾಜಕೀಯದವರಿಗೆ ಬೆಂಬಲಿಗರಿಂದ ಒತ್ತಡಗಳು ಬರಬಹುದು. ಸಂಗಾತಿಯ ಮನೋಭಾವವು ಬದಲಾದಂತೆ ಅನ್ನಿಸುವುದು. ಸಮಾಧಾನಚಿತ್ತದಿಂದ ನೀವು ಇಂದಿನ ಮಧುರ ಕ್ಷಣಗಳನ್ನು ಆನಂದಿಸುವಿರಿ. ಭೂಮಿಯ ವ್ಯವಹಾರದಿಂದ ಅಲ್ಪ ಹಣವು ನಷ್ಟವಾಗುವುದು. ಮನೆಯ ವಾತಾವರಣವು ನಿಮಗೆ ಹಿತವೆನಿಸಲಿದ್ದು ಮನೆಯಿಂದ ದೂರವಿರಲು ಕಷ್ಟವಾಗುವುದು. ಸ್ವಾಭಿಮಾನಕ್ಕೆ ಆಪ್ತರಿಂದ ತೊಂದರೆಯಾಗಬಹುದು. ಸಂಗಾತಿಯ ಮೌನವು ನಿಮಗೆ ಕಷ್ಟವಾಗಬಹುದು. ಅಧಿಕ ಪ್ರಯಾಣದಿಂದ ಆಯಾಸವಾಗಬಹುದು.

ವೃಶ್ಚಿಕ ರಾಶಿ : ಅನಾರೋಗ್ಯಕ್ಕೆ ವೈದ್ಯಕೀಯ ಚಿಕಿತ್ಸೆಯ ಜೊತೆಗೆ ನಿಮ್ಮ ಮನಸ್ಸಾನ್ನೂ ದೃಢವಾಗಿಸಿಕೊಳ್ಳುವುದು ಮುಖ್ಯ. ಕೇವಲ ಔಷಧವೊಂದೇ ಸಾಲದು. ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಉದ್ಯೋಗವು ಸಿಗಬಹುದು. ಸಾಲವನ್ನು ಪಡೆಯಲು ನಿಮಗೆ ಸರಿಯಾದ ಆದಾಯ ಮೂಲದ ಅವಶ್ಯಕತೆ ಇರುವುದು. ಪೋಷಕರ ಜೊತೆ ಮನೋರಂಜನೆಯಲ್ಲಿ ಪಾಲ್ಗೊಳ್ಳುವಿರಿ. ಕಾರ್ಯಕ್ಕೆ ಎಲ್ಲರಿಂದ ಪ್ರಶಂಸೆ ಸಿಕ್ಕರೂ ನಿಮ್ಮ ಕೆಲಸವು ಸಮಾಧಾನ ಕೊಡದು. ಪರೋಪಕಾರ ಗುಣವು ನಿಮ್ಮಲ್ಲಿ ಇಂದು ಜಾಗರೂಕವಾಗಿ ಇರುವುದು. ನಿಮ್ಮನ್ನು ಅವ್ಯವಹಾರಕ್ಕೆ ಸಹೋದ್ಯೋಗಿಗಳು ಪ್ರೇರಿಸಬಹುದು. ಅಪ್ರಯೋಜಕ ಎಂದುಕೊಂಡ ವಿದ್ಯೆಯಿಂದ ಪ್ರಯೋಜನವಾಗುವುದು. ಬಹಳ ದಿನಗಳಿಂದ ಮನೆಗೆ ಬಂಧುಗಳ ಆಗಮನವು ಆಗದೇ ಇರುವುದು ಬೇಸರತಂದೀತು.

-ಲೋಹಿತ ಹೆಬ್ಬಾರ್ – 8762924271 (what’s app only)

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ