Horoscope: ಸದ್ದಿಲ್ಲದೇ ಇತರರಿಂದ ನಿಮಗೆ ಅಗತ್ಯವಿರುವ ಕೆಲಸಗಳನ್ನು ಮಾಡಿಸಿಕೊಳ್ಳುವಿರಿ

ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಡಿಸೆಂಬರ್ 27) ಭವಿಷ್ಯ ಹೇಗಿದೆ ಎಂಬುದು ಇಲ್ಲಿದೆ.

Horoscope: ಸದ್ದಿಲ್ಲದೇ ಇತರರಿಂದ ನಿಮಗೆ ಅಗತ್ಯವಿರುವ ಕೆಲಸಗಳನ್ನು ಮಾಡಿಸಿಕೊಳ್ಳುವಿರಿ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Dec 27, 2023 | 12:15 AM

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಡಿಸೆಂಬರ್ 27) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ಬ್ರಹ್ಮ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 56 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 10 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:34 ರಿಂದ 01:58 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 08:21 ರಿಂದ 09:45ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 11:09 ರಿಂದ 12:34ರ ವರೆಗೆ.

ಸಿಂಹ ರಾಶಿ: ನಿಮ್ಮ ಸಹಾಯದ ಮನೋಭಾವವನ್ನು ದುರುಪಯೋಗ ಮಾಡಿಕೊಳ್ಳಬಹುದು. ಧಾರ್ಮಿಕ ಕಾರ್ಯಗಳಿಗೆ ಹಣವನ್ನು ಕೊಡುವಿರಿ. ನಿಮ್ಮಿಂದಾಗದ ಕೆಲಸಕ್ಕೆ ಕೈಹಾಕಿ ತೊಂದರೆಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ಹೊಸ ವಾಹನದ ಖರೀದಿಯಿಂದ ಸಂತೋಷವಾಗುವುದು. ನಿಮ್ಮ ಸ್ವಭಾವವನ್ನು ದುರುಪಯೋಗ ಮಾಡಿಕೊಳ್ಳಬಹುದು. ನಿರಂತರ ಕಾರ್ಯದಿಂದ ದೇಹಕ್ಕೆ ಆಯಾಸವಾಗಬಹುದು. ಸುಖಜೀವನದ ನಿರೀಕ್ಷೆಯಲ್ಲಿ ಇರುವಿರಿ. ಸಮಾರಂಭಗಳಿಗೆ ಆಹ್ವಾನವಿದ್ದರೂ ಹೋಗುವ ಮನಸ್ಸಾಗದು. ಯಾರದೋ ಮಾತನ್ನು ಕೇಳಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವಿರಿ. ನೀವು ಅಧಿಕವಾಗಿ ಮಾತನಾಡದೇ ಮೌನವಾಗಿರುವುದು ಉತ್ತಮ. ಕಾಲಹರಣಕ್ಕೆ ಇನ್ನೊಬ್ಬರ ವಿಚಾರವನ್ನು ಚರ್ಚಿಸುವಿರಿ. ಮನೋಹರವಾದ ತಾಣಗಳಿಗೆ ಹೋಗುವ ಬಯಕೆಯಾಗುವುದು.

ಕನ್ಯಾ ರಾಶಿ: ನಿಮ್ಮ ಆರೋಗ್ಯವು ಉತ್ತಮವಾಗುವ ನಿರೀಕ್ಷೆಯಲ್ಲಿ ಇರುವಿರಿ. ಈ ದಿನ ಪೂರ್ತಿ ಹಣಕಾಸಿನ ಚಿಂತೆಯಲ್ಲಿ ಇರುವಿರಿ. ನಿಮ್ಮ ನೇರ ನುಡಿಯಿಂದ ಕೆಲವರಿಗೆ ಇಷ್ಟವಾಗದೇ ಹೋಗಬಹುದು. ಸತ್ಯವನ್ನು ಹೇಳಲು ಅಪಹಾಸ್ಯವಾಗಬಹುದು. ವ್ಯಾಪರದ ನಷ್ಟಕ್ಕೆ ಸಮಸ್ತ ತಂತ್ರವನ್ನು ಮಾಡುವಿರಿ. ಅತಿಯಾದ ಕೋಪದ ಕಾರಣ ನೀವು ಒಂಟಿಯಾಗಬೇಕಾದೀತು. ಕಹಿ ಘಟನೆಯನ್ನು ಮರೆಯಲು ಬಹಳ ಶ್ರಮ ಪಡುವಿರಿ. ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಾಣಲಿದ್ದು ಕುಟುಂಬದಲ್ಲಿ ಅಸಮಾಧನ ಇರಲಿದೆ. ಎಲ್ಲವನ್ನೂ ನೀವು ನಿಮ್ಮ ಊಹೆಯ ಆಧಾರದ ಮೇಲೆ ನಿರ್ಣಯಿಸುವಿರಿ. ನಿಮ್ಮ ಉನ್ನತ ಶಿಕ್ಷಣದ ಆಸೆಯು ಭಗ್ನವಾಗಬಹುದು. ಸ್ವಂತ ಉದ್ಯೋಗವು ಸಣ್ಣ ಪ್ರಮಾಣದ ಹಿನ್ನಡೆಯನ್ನು ಕಾಣಬಹುದು. ಔಷಧ ವ್ಯಾಪಾರಿಗಳು ಹೆಚ್ಚಿನ ಲಾಭ ಗಳಿಸುವರು. ನಿಮಗೆ ಭೂಮಿಯನ್ನು ಕೊಡುವುದು ಅನಿವಾರ್ಯವಾಗಿದ್ದು, ಅದಕ್ಕೆ ಹೆಚ್ಚಿನ ಮೌಲ್ಯವು ಸಿಗದೇಹೋಗಬಹುದು.

ತುಲಾ ರಾಶಿ: ನೂತನ ಗೃಹ ಪ್ರವೇಶಕ್ಕೆ ನಿಮ್ಮ ಎಲ್ಲವೂ ಕೇಂದ್ರೀಕೃತವಾಗಿದೆ. ಸದ್ದಿಲ್ಲದೇ ನಿಮಗೆ ಅಗತ್ಯವಿರುವ ಕೆಲಸಗಳನ್ನು ಮಾಡಿಸಿಕೊಳ್ಳುವಿರಿ. ಯಾರ ಜೊತೆಗೂ ವೈರವನ್ನು ಕಟ್ಟಿಕೊಳ್ಳದೇ ಹೊಂದಾಣಿಕೆಯಿಂದ ವ್ಯವಹರಿಸಿ. ಸುಲಭದ ಕೆಲಸವನ್ನು ಆದಷ್ಟು ಇಂದು ಮಾಡಿಮುಗಿಸಿಕೊಳ್ಳಿ. ತಂದೆ ಕಡೆಯ ಬಂಧುಗಳು ನಿಮ್ಮನ್ನು ಅಪಹಾಸ್ಯ ಮಾಡಬಹುದು. ನಿಮ್ಮ ಹಿಂದೆ ಆಡುವ ಮಾತುಗಳಿಗೆ ಹೆಚ್ಚು ಬೆಲೆ ಕೊಡುವುದು ಬೇಡ. ಹಣದ ಹೂಡಿಕೆಯನ್ನು ಮಾಡುವ ಯೋಚನೆ ಇರಲಿದೆ. ಆಕಸ್ಮಿಕವಾಗಿ ಪ್ರೇಮದಲ್ಲಿ ಬೀಳುವಿರಿ. ವ್ಯಕ್ತಿಯ ಬಗ್ಗೆ ನಿಮಗೆ ಪೂರ್ಣ ವಿಶ್ವಾಸವಿರದು. ಹಳೆಯ ಖಾಯಿಲೆಗೆ ಔಷಧವು ಸಿಗದೇ ಹೋಗಬಹುದು. ನಿಮ್ಮ ಪ್ರಯತ್ನಕ್ಕೆ ಇಂದೇ ಫಲವು ಸಿಗಬೇಕೆಂಬ ಆತುರ ಬೇಡ. ನಿಮಗಿಂತ ಬಲವುಳ್ಳವರ ಮೇಲೆ ದ್ವೇಷವನ್ನು ಸಾಧಿಸುವಿರಿ. ಸಂಕಷ್ಟಕ್ಕೆ ಈಡಾಗುವಿರಿ. ಆರ್ಥಿಕ ವೆಚ್ಚಕ್ಕೆ ನೀವು ಕಡಿವಾಣ ಹಾಕಿಕೊಳ್ಳಬೇಕಾದೀತು. ಹೊಸ ಯೋಜನೆಗಳನ್ನು ಹುಡುಕುವಿರಿ.

ವೃಶ್ಚಿಕ ರಾಶಿ: ನಿಮ್ಮ ವೈಯಕ್ತಿಕ ಕಾರ್ಯಗಳನ್ನು ಮಾಡುವಷ್ಟು ಸಮಯವು ಇಂದು ನಿಮ್ಮ ಬಳಿ ಇಲ್ಲದೇ ಹೋಗಬಹುದು. ಕಾನೂನಾತ್ಮಕ ವಿಚಾರದಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳುವಿರಿ. ಆತ್ಮೀಯ ಬಂಧಗಳಿಗೆ ಸಮಯ ಕೊಡಲು ಆಗದೇ ವ್ಯಕ್ತಿಗಳನ್ನು ಕಳೆದುಕೊಳ್ಳುವಿರಿ. ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಪೂರಕವಾದ ಜನರ ಗೆಳೆತನನ್ನು ಮಾಡಿಕೊಳ್ಳುವುದು ಉತ್ತಮ. ಮನಶ್ಚಾಂಚಲ್ಯದಿಂದ ಕೆಲವು ಕಹಿಯಾದ ಅನುಭವಗಳು ಆಗಬಹುದು. ಸಹೋದ್ಯೋಗಿಗಳ ಮಾತನ್ನು ಸಹಿಸಿಕೊಳ್ಳಲು ಕಷ್ಟವಾಗದು. ಸ್ನೇಹಿತರ ಜೊತೆ ಪ್ರವಾಸ ಹೋಗುವಿರಿ. ಅಪರೂಪದ ಬಂಧುಗಳ ಭೇಟಿಯಿಂದ ಸಂತೋಷವಾಗಲಿದೆ. ಇಂದು ನೀವು ಗಟ್ಟಿ ಮನಸ್ಸಿನಿಂದ ಹೋದರೂ ಕಛೇರಿಯಿಂದ ನಿಮಗೆ ಕೆಲವು ಕಹಿ ಅನುಭವವನ್ನು ಕೊಟ್ಟೀತು. ವ್ಯಾವಹಾರಿಕ ಮನಃಸ್ಥಿತಿಯಿಂದ ಎಲ್ಲವನ್ನೂ ಅಳೆಯುವುದು ಬೇಡ. ನಿಮ್ಮ ಅಸಹಜ ನಡೆಯನ್ನು ನಿಮ್ಮವರು ಒಪ್ಪಿಕೊಳ್ಳಲಾರರು.

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್