Horoscope: ಮನೆಯಲ್ಲಿ ಜಗಳವಾಡಿ ನೀವು ಮನಸ್ಸನ್ನು ಹಾಳು ಮಾಡಿಕೊಳ್ಳುವಿರಿ
ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಡಿಸೆಂಬರ್ 29) ಭವಿಷ್ಯ ಹೇಗಿದೆ ಎಂಬುದು ಇಲ್ಲಿದೆ.

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಡಿಸೆಂಬರ್ 29) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶೀರ್ಷ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಪುಷ್ಯ, ಯೋಗ: ವೈಧೃತಿ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 57 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 11 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 11:10 ರಿಂದ 12:35 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:23 ರಿಂದ 04:47ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 08:22 ರಿಂದ 09:46ರ ವರೆಗೆ.
ಸಿಂಹ ರಾಶಿ : ಆದಾಯದಲ್ಲಿ ಇತರರಿಗೆ ಸಮಾನವಾಗಿದ್ದರೂ ಖರ್ಚು ಹಾಗಿರುವುದಿಲ್ಲ. ಏನಾದರೊಂದು ಹುಟ್ಟಿಕೊಳ್ಳುತ್ತದೆ. ಕುಟುಂಬಕ್ಕೆ ನಿಮ್ಮಿಂದ ಧನಸಹಾಯದ ಅಪೇಕ್ಷೆ ಇರುವುದು. ಬಂಧುವರ್ಗವು ನಿಮ್ಮನ್ನು ನಿರ್ಲಕ್ಷ್ಯ ಮಾಡೀತು. ಉನ್ನತ ವಿದ್ಯಾಭ್ಯಾಸದ ಕನಸು ಬಂಧುಗಳ ಸಹಕಾರದಿಂದ ಆಗಲಿದೆ. ನಿಮ್ಮ ಕೈ ಮೀರಿದ ಕೆಲಸದಲ್ಲಿ ನಿಮಗೆ ಆತಂಕ ಬೇಡ. ಪ್ರೇಮವು ನಿಮಗೆ ಬಂಧನದಂತೆ ಕಾಣಿಸುವುದು. ಸಹೋದರರ ನಡುವೆ ವಿನಾಕಾರಣ ಆರಂಭವಾದ ವಾಗ್ವಾದವು ಗಂಭೀರ ಸ್ವರೂಪವನ್ನು ಪಡೆದುಕೊಳ್ಳುವುದು. ನಿಮ್ಮ ಸೋಲನ್ನು ನೀವು ಒಪ್ಪಿಕೊಳ್ಳಲಾರಿರಿ. ಅವಸರವಸರವಾಗಿ ಇಂದಿನ ಕಾರ್ಯಗಳನ್ನು ಮಾಡುವಿರಿ. ಆದರೂ ನಿಮ್ಮ ಎಲ್ಲ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಮುಗಿಸಿಕೊಳ್ಳಲು ಆಗದು. ಯಾರದೋ ಒತ್ತಾಯಕ್ಕೆ ಹೂಡಿಕೆಯನ್ನು ಮಾಡು ಕೈಸುಟ್ಟುಕೊಳ್ಳುವುದು ಬೇಡ.
ಕನ್ಯಾ ರಾಶಿ : ಸಮಾಜಿಕವಾಗಿ ಹೆಚ್ಚು ಸಮಯವನ್ನು ಕೊಡುವಿರಿ. ಅನಾರೋಗ್ಯದ ಚಿಂತೆಯು ನಿಮ್ಮನ್ನು ಕಾಡಬಹುದು. ನಿಮ್ಮ ವ್ಯಕ್ತಿತ್ವವು ಸಕಾರಾತ್ಮಕವಾಗಿ ಬೆಳೆಯುತ್ತಿರುವುದು ನಿಮಗೂ ಇತರರಿಗೂ ಸಂತೋಷದ ಸಂಗತಿಯಾಗಿದೆ. ಇಂದು ಆರಂಭಿಸಿದ ಕೆಲಸಗಳನ್ನು ಇಂದೇ ಮುಗಿಸುವಂತೆ ನೋಡಿಕೊಳ್ಳಿ. ಸಾಮಾಜಿಕ ಕೆಲಸಗಳು ನಿಮಗೆ ಇನ್ನಷ್ಟೂ ಉತ್ಸಾಹವನ್ನು ಕೊಡುವುದು. ವೈದ್ಯರು ಇಂದು ಒತ್ತಡದಿಂದ ಇರುವರು. ನೌಕರರ ಅಪೇಕ್ಷೆಯನ್ನು ಪೂರೈಸುವುದು ನಿಮಗೆ ಅನಿವಾರ್ಯವಾದೀತು. ನೀವು ಕಷ್ಟವನ್ನು ಆನಂದದಿಂದ ಕಳೆಯುವಿರಿ. ಸಿಗಬೇಕಾದ ವಸ್ತುವನ್ನು ನೀವು ಬಹಳ ಪ್ರಯತ್ನದಿಂದ ಪಡೆದುಕೊಂಡರೂ ಉಳಿಸಿಕೊಳ್ಳುವುದು ಕಷ್ಟವಾದೀತು. ಸಂಸಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ಯಾರ ಜೊತೆಯೂ ನಿಮ್ಮ ಮಾತು ಸರಿಯಾಗಿ ಇರದು.
ತುಲಾ ರಾಶಿ : ಇಂದು ನಿಮ್ಮ ಭವಿಷ್ಯದ ಗುರಿಯನ್ನು ನಿರ್ಧಾರ ಮಾಡಿಕೊಳ್ಳುವುದು ಉತ್ತಮ. ಆಧ್ಯಾತ್ಮಿಕ ಚಿಂತನೆಯನ್ನು ಹೆಚ್ಚು ಮಾಡುವಿರಿ. ಪ್ರಾಯೋಗಿಕ ವಿಭಾಗದಲ್ಲಿ ಹೆಚ್ಚಿನ ಪ್ರಯೋಜನವನ್ನು ಪಡೆಯುವಿರಿ. ಹತ್ತಿರದ ಬಂಧುಗಳ ಒಡನಾಟವು ಹೆಚ್ಚಿರಲಿದೆ. ಹಣಕಾಸಿನ ವಿಚಾರಕ್ಕೆ ಸಂಗಾತಿಯ ಜೊತೆ ಮಾತಾಗಬಹುದು. ನೇರ ನುಡಿಯಿಂದ ಆಪ್ತರು ದೂರ ಸರಿಯಬಹುದು. ಕೆಟ್ಟವರ ಸಹವಾಸದಿಂದ ಅಪಕೀರ್ತಿ ಬರಬಹುದು. ಮನೋರಂಜನೆಯಿಂದ ನಿಮಗೆ ಸಮಾಧಾನ ಸಿಗಲಿದೆ. ಕೆಲವು ವಿಚಾರಗಳಿಗೆ ಸುಮ್ಮನೇ ಪ್ರತಿಕ್ರಿಯೆ ನೀಡಬೇಕಿಲ್ಲ. ಕೃಷಿಯ ಉತ್ಪನ್ನಗಳನ್ನು ಮಾರಾಟ ಮಾಡುವಿರಿ. ಅವಕಾಶಗಳನ್ನು ಕಳೆದುಕೊಂಡು ಮನಸ್ಸಿನಲ್ಲಿಯೇ ದುಃಖಿಸುವಿರಿ. ಕೋಪವನ್ನು ತಾನಾಗಿಯೇ ಕಡಿಮೆ ಆಗಿದ್ದು ನಿಮಗೆ ಆಶ್ಚರ್ಯವಾಗಬಹುದು. ನಿಮ್ಮ ಮನಸ್ಸಿಗೆ ಬಾರದೇ ಯಾರಿಗೂ ಏನನ್ನೂ ಕೊಡುವುದು ಬೇಡ.
ವೃಶ್ಚಿಕ ರಾಶಿ : ನಿಮ್ಮ ಆರ್ಥಿಕ ಯೋಜನೆಗಳು ದಾರಿ ತಪ್ಪಿ ಹೋಗಬಹುದು. ಕುಟುಂಬದ ಜೊತೆ ನಿಕಟ ಸಂಬಂಧವನ್ನು ಇಟ್ಟುಕೊಳ್ಳುವ ಮನಸ್ಸಾಗುವುದು. ಕಾರ್ಯಗಳಿಂದ ಹೆಚ್ಚಿನ ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಉದ್ಯಮದಲ್ಲಿ ಜನರ ವಿಶ್ವಾಸವನ್ನು ಗಳಿಸುವುದು ಮುಖ್ಯವಾಗಿರುವುದು. ಇಂದಿನ ವ್ಯವಹಾರವು ಅಧಿಕ ಲಾಭವನ್ನು ತಂದುಕೊಡದು. ಪ್ರವಾಸ ಹೋಗುವ ಮನಸ್ಸಾದೀತು. ಅಧಿಕಾರಿಗಳು ನಿಮ್ಮ ಉದ್ಯಮವನ್ನು ಪರಿಶೀಲಿಸಬಹುದು. ನಿಮಗೆ ಬೇಡ ಎನಿಸಿದ ವಿಚಾರವೇ ಮತ್ತೆ ಮತ್ತೆ ಕೇಳಿ ಬಂದು ಮಾನಸಿಕ ಹಿಂಸೆಯಾದೀತು. ಮನೆಯಲ್ಲಿ ಜಗಳವಾಡಿ ನೀವು ಮನಸ್ಸನ್ನು ಹಾಳುಮಾಡಿಕೊಳ್ಳುವಿರಿ. ನೀವು ನಿರೀಕ್ಷಿಸಿದ ಸ್ಥಳದಲ್ಲಿ ಉದ್ಯೋಗವು ಸಿಗದು. ಮಕ್ಕಳ ತಪ್ಪನ್ನು ನೀವು ಸಮರ್ಥಿಸಿಕೊಳ್ಳಬೇಕಾದೀತು. ನಿಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಇಂದು ಸಾಧ್ಯವಾಗದು.




