Horoscope: ರಾಶಿಭವಿಷ್ಯ, ಈ ರಾಶಿಯವರ ಆರ್ಥಿಕತೆಯಲ್ಲಿ ಚೇತರಿಕೆ ಇದ್ದು, ನೆಮ್ಮದಿಯೂ ಸಿಗಲಿದೆ
ನಾಳೆ ಏನಾಗುತ್ತದೆ ಎಂಬುದು ಯಾರಿಗೂ ತಿಳಿದಿರುವುದರಿಲ್ಲ. ಹೀಗಿದ್ದಾಗ ನಮ್ಮ ಮುಂದಿನ ಭವಿಷ್ಯ ಹೇಗಿರಬಹುದು ಎಂದು ಕೆಲವರು ಚಿಂತೆ ಮಾಡುವುದು ಕೂಡ ಉಂಟು. ಇಂತಹವರು ರಾಶಿಭವಿಷ್ಯ ನೋಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಇಂದಿನ ನಿಮ್ಮ ಭವಿಷ್ಯ ಹೀಗಿದೆ ನೋಡಿ.
ಪ್ರತಿಯೊಬ್ಬರು ಭವಿಷ್ಯದ ಬಗ್ಗೆ ಚಿಂತನೆ ನಡೆಸುತ್ತಾ ಇರುತ್ತಾರೆ. ಇದೇ ಕಾರಣಕ್ಕೆ ಕೆಲವರು ಬೆಳಗ್ಗೆ ಎದ್ದ ತಕ್ಷಣ ಪತ್ರಿಕೆ ಅಥವಾ ಆನ್ಲೈನ್ನಲ್ಲಿ ರಾಶಿಭವಿಷ್ಯ (Horoscope) ನೋಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಇಂದಿನ (ಡಿಸೆಂಬರ್ 4) ನಿಮ್ಮ ಭವಿಷ್ಯ ಹೇಗಿದೆ? ಶುಭ-ಅಶುಭ ಇದೆಯಾ? ಏನು ಮಾಡಬೇಕು, ಏನು ಮಾಡಬಾರದು ಎಂಬಿತ್ಯಾದಿ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನೂರಾಧಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಮಘಾ, ಯೋಗ: ವೈಧೃತಿ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 43 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆಗೆ, ರಾಹು ಕಾಲ ಬೆಳಗ್ಗೆ 08:09 ರಿಂದ 09:34 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:58 ರಿಂದ ಮಧ್ಯಾಹ್ನ 12:23ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:47 ರಿಂದ 03:12ರ ವರೆಗೆ.
ಧನು ರಾಶಿ: ವಿವಾಹಕ್ಕಾಗಿ ದೇವರಲ್ಲಿ ಶರಣಾಗತಿಯನ್ನು ಬಯಸುವಿರಿ. ಸಂಪಾದನೆಗೆ ಕೆಲವು ಅವಕಾಶಗಳು ತೆರೆದುಕೊಳ್ಳುವುದು. ಚಂಚಲ ಮನಃಸ್ಥಿತಿಯು ನಿಮ್ಮ ಕಛೇರಿಯ ಕಾರ್ಯವನ್ನು ಮಾಡಲು ಬಿಡದು. ನೂತನ ವಸ್ತ್ರ, ವಸ್ತುಗಳ ಖರೀದಿಗೆ ಹೆಚ್ಚು ಸಮಯವನ್ನು ಕೊಡಬೇಕಾದೀತು. ನಿಮ್ಮ ಅಂದಾಜಿನ ಆದಾಯವನ್ನು ತಲುಪುವಿರಿ. ಸಂಗಾತಿಯ ಮನೋಭಾವವನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾದೀತು. ವಿಳಂಬವಾಗಿ ನಡೆಯುವ ವಿವಾಹಕ್ಕೂ ಸಂತೋಷವಿರಲಿದೆ. ಮಕ್ಕಳ ವಿವಾಹಕ್ಕಾಗಿ ಓಡಾಟ, ಮಾತುಕತೆಗಳನ್ನು ಮಾಡಬೇಕಾದೀತು. ಮಕ್ಕಳನ್ನು ಪಡೆಯಬೇಕು ಎಂಬ ಆಸೆ ಬರುವುದು. ನಿಮಗೆ ಸ್ವಾಭಿಮಾವನ್ನು ಬಿಟ್ಟು ವ್ಯವಹರಿಸುದು ಸಾಧ್ಯವಾಗದು. ಸಂಕೋಚದ ಸ್ವಭಾವದಿಂದ ನೀವು ಬಂದ ಅವಕಾಶವನ್ನು ಕೈ ಬಿಡುವಿರಿ. ಕೆಲವರು ನಿಮ್ಮ ಮಾತನ್ನು ವಿರೋಧಿಸುವರು.
ಮಕರ ರಾಶಿ: ಸರ್ಕಾರದಿಂದ ನಿಮಗೆ ಪತ್ರವು ಬರಬಹುದು. ನಿಮ್ಮ ಮಾರ್ಗವು ಋಜುವಾಗಿರಲಿ. ಭವಿಷ್ಯದ ಕನಸನ್ನು ಕಾಣುವಿರಿ. ನಿಮ್ಮ ಕುಲವೃತ್ತಿಯನ್ನು ಮುನ್ನಡೆಸುವುದು ಸೂಕ್ತ. ಓಡಾಟದಲ್ಲಿ ಕೆಲವು ಅಡೆತಡೆಗಳ ಬರಬಹುದು. ನಿಮ್ಮ ದೌರ್ಬಲ್ಯಗಳಿಂದ ನಿಮಗೆ ತೊಂದರೆ ಆಗುವ ಸಾಧ್ಯತೆ ಇದೆ. ವ್ಯಕ್ತಿತ್ವದಲ್ಲಿ ಬದಲಾದಂತೆ ಕಾಣುವಿರಿ. ಆರ್ಥಿಕತೆಯ ಬೆಳವಣಿಗೆಯು ನಿಮಗೆ ಸಂತೋಷವನ್ನು ಕೊಡುವುದು. ವೈದ್ಯರಿಗೆ ಉತ್ತಮ ಅವಕಾಶವು ಸಿಗಬಹುದು. ಲಾಭವನ್ನೂ ಪಡೆಯು ದಿನ ಇಂದು. ಕುಟುಂಬಕ್ಕೆ ನಿಮ್ಮಿಂದ ಶುಭ ವಾರ್ತೆಯು ಬರಬಹುದು. ಹಿತಶತ್ರುಗಳನ್ನು ಇಂದು ಅವರಾಡುವ ಮಾತುಗಳಿಂದ ಗುರುತಿಸುವಿರಿ. ನಿಮ್ಮ ಸಹೋದರನಿಂದ ಹೊಸ ಉದ್ಯೋಗಕ್ಕೆ ಸೇರಿಕೊಳ್ಳುವಿರಿ. ಗಂಭೀರವಾದ ಸ್ಥಿತಿಯನ್ನು ನೀವು ತಿಳಿಗೊಳಿಸುವಿರಿ.
ಕುಂಭ ರಾಶಿ: ಅಸಮಯದ ಭೋಜನವನ್ನು ಮಾಡಬೇಕಾಗುವುದು. ನಿಮ್ಮ ವೃತ್ತಿಯ ಸ್ಥಳದ ಬದಲಾವಣೆಯಾಗಬಹುದು. ವ್ಯವಹಾರದಲ್ಲಿ ಇಂದು ನಿಮ್ಮ ಚುರುಕುತನ ಸಾಕಾಗದು. ತಾಯಿಯ ಕಡೆಯಿಂದ ಧನದ ನಿರೀಕ್ಷೆಯಲ್ಲಿ ಇರುವಿರಿ. ಹಲವರ ಅಭಿಪ್ರಾಯದಿಂದ ನಿಮಗೆ ಗೊಂದಲವಾಗುವುದು. ಇಂದು ಹಳೆಯ ತಪ್ಪಿಗೆ ನೀವು ಪಶ್ಚಾತ್ತಾಪ ಪಡಪಡುವಿರಿ. ಇಂದಿನ ನಿಮ್ಮ ಖರ್ಚು ಹೆಚ್ಚಾದಂತೆ ಅನ್ನಿಸೀತು. ನಿಮ್ಮ ನಿರ್ಮಾಣದ ಕಾರ್ಯಗಳು ನಿಧಾನವಾಗುವುದು. ನಿಮ್ಮ ಮನೋಬಲವನ್ನು ಕುಗ್ಗಿಸುವ ಪ್ರಯತ್ನವನ್ನು ಮಾಡುವರು. ಪ್ರಯಾಣದಲ್ಲಿ ನೀವು ಬರುವ ತೊಂದರೆಯನ್ನು ದೂರಮಾಡಿಕೊಳ್ಳುವಿರಿ. ಆತುರದಲ್ಲಿ ಯಾವ ಕೆಲಸವನ್ನೂ ಮಾಡಲು ಹೋಗುವುದು ಬೇಡ. ನೀವು ಕೊಟ್ಟ ಸಾಲದ ಹಣವು ನಿಮಗೆ ಹಿಂದಿರುಗಬಹುದು.
ಮೀನ ರಾಶಿ: ಅಪರೂಪದ ಸಮಾರಂಭದಲ್ಲಿ ಭಾಗವಹಿಸುವಿರಿ. ನಿಮ್ಮ ನೆಚ್ಚಿನವರ ಭೇಟಿಯಾಗಲಿದೆ. ಸ್ತ್ರೀಯರಿಗೆ ಇಂದು ಬೇಡಿಕೆ ಹೆಚ್ಚಾಗಬಹುದು. ಇಂದು ನೀವು ನಿಮ್ಮ ಕುಟುಂಬದವರ ಜೊತೆ ಅಧಿಕ ಕಾಲವನ್ನು ಕಳೆಯುವಿರಿ. ಆರ್ಥಿಕತೆಯಲ್ಲಿ ಸ್ವಲ್ಪ ಚೇತರಿಕೆ ಇದ್ದು ನಿಮಗೆ ನೆಮ್ಮದಿಯೂ ಸಿಗಲಿದೆ. ತಾಯಿಯು ನಿಮ್ಮನ್ನು ಬೆಂಬಲಿಸುವಳು. ನಿಮ್ಮ ಸಹಾಯಕ್ಕೆ ಯಾರೂ ಬರದಿರುವುದು ಬೇಸರವಾಗುವುದು. ಸ್ಥಿರಾಸ್ತಿಯ ಉಳಿವಿಗೆ ಹೋರಾಟವನ್ನೇ ಮಾಡಬೇಕಾದೀತು. ಮನೆಯಲ್ಲಿ ಬಹಳ ಕಾರ್ಯಗಳಿದ್ದು ಅದರಲ್ಲಿ ತನ್ಮಯರಾಗುವಿರಿ. ನಿಮ್ಮ ವಸ್ತುಗಳನ್ನು ಜೋಪಾನವಾಗಿ ಇರಿಸಿಕೊಳ್ಳಿ. ಸಂಗಾತಿಯು ನಿಮ್ಮ ನಡವಳಿಕೆಯ ಬಗ್ಗೆ ಸಂದೇಹ ಬರಬಹುದು. ಹಳೆಯ ಸಾಲವನ್ನು ಉಳಿಸಿಕೊಂಡೇ ಮತ್ತೊಂದು ಸಾಲವನ್ನು ಮಾಡಬೇಕಾದೀತು. ಸ್ನೇಹಿತರು ನಿಮ್ಮ ಜೊತೆಗಿರುವುದು ನಿಮಗೆ ಧೈರ್ಯ ಬರಲಿದೆ. ಆತ್ಮವಿಶ್ವಾವೇ ನಿಮಗೆ ಬಲವನ್ನು ಕೊಡಬಹುದು.
ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ