Horoscope; ದಿನ ಭವಿಷ್ಯ | ಕನ್ಯಾ ರಾಶಿಯವರಿಗೆ ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ

ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಶುಕ್ಲಪಕ್ಷ, ಏಕಾದಶಿ ತಿಥಿ, ಮಂಗಳವಾರ, 23, ಫೆಬ್ರವರಿ 2021 ದಿನ ಭವಿಷ್ಯ.

  • TV9 Web Team
  • Published On - 6:17 AM, 23 Feb 2021
Horoscope; ದಿನ ಭವಿಷ್ಯ | ಕನ್ಯಾ ರಾಶಿಯವರಿಗೆ ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ
ರಾಶಿ ಭವಿಷ್ಯ

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಶುಕ್ಲಪಕ್ಷ, ಏಕಾದಶಿ ತಿಥಿ, ಮಂಗಳವಾರ, 23, ಫೆಬ್ರವರಿ 2021. ಆರ್ದ್ರೆ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 3:24 ರಿಂದ ಇಂದು ಸಂಜೆ 4: 51 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.38. ಸೂರ್ಯಾಸ್ತ: ಸಂಜೆ 6.20.

ತಾ.22-02-2021 ರ ಸೋಮವಾರದ ರಾಶಿಭವಿಷ್ಯ

ಮೇಷ: ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ.ದೂರಪ್ರಯಾಣ ಯೋಗವಿದೆ. ಶುಭ ಸಂಖ್ಯೆ: 4

ವೃಷಭ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 9

ಮಿಥುನ: ವಸ್ತು-ವಾಹನ-ಆಸ್ತಿ ಖರೀದಿ ಯೋಗವಿದೆ.ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಮನೆಯ ಹಿರಿಯರ ಆರೋಗ್ಯದ ಚಿಂತೆ ಇರುವದು. ಬುದ್ಧಿವಂತಿಕೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 1

ಕರ್ಕ: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವದು. ಶುಭ ಸಂಖ್ಯೆ: 2

ಸಿಂಹ: ಅನಿಸಿಕೆಗಿಂತ ವಾಸ್ತವ ಬೇರೆ ಇರುವದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 6

ಕನ್ಯಾ: ಮಾತಿನಂತೆ ನಡೆದುಕೊಳ್ಳುವ ಪ್ರಯತ್ನ ಮಾಡುವಿರಿ. ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲಸ ನಿರ್ವಹಿಲು ಆಗದಂತಹ ಸ್ಥಿತಿ ಬರಬಹುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 8

ತುಲಾ: ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವದರಿಂದ ಉತ್ತಮ ಫಲ ದೊರೆಯುವದು. ಸುಮ್ಮನೇ ಕೂಡದ ಜಾಯಮಾನ ಇರುವದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವದು. ಶುಭ ಸಂಖ್ಯೆ: 5

ವೃಶ್ಚಿಕ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂ ಅಧಿಕ ಖರ್ಚು ಇರುವದು. ಶುಭ ಸಂಖ್ಯೆ:7

ಧನು: ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವದು. ಶುಭ ಸಂಖ್ಯೆ: 3

ಮಕರ: ವ್ಯಥಾ ಚಿಂತೆ, ತಪ್ಪು ಕಲ್ಪನೆ, ನಿಷ್ಟುರ ಮಾತುಗಳನ್ನು ಕೇಳುವ ಸಂಭವ, ಜನ್ಮಸ್ಥ ಶುಕ್ರ ಇರುವದರಿಂದ ಆರ್ಥಿಕ ಸುಭದ್ರತೆ ಇರುವದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅವಶ್ಯಕ. ಮನೆಯಲ್ಲಿ ಸಂತೋಷವಿರುವದು. ಗೋಸೇವೆಯಿಂದ ಕಷ್ಟಪರಿಹಾರ.ಶುಭ ಸಂಖ್ಯೆ: 9

ಕುಂಭ: ವಾದ-ವಿವಾದ, ಹಠಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ. ಶುಭ ಸಂಖ್ಯೆ:5

ಮೀನ: ಹೊಸ ಯೋಜನೆಗಳು ಬೇಡ.ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವದು. ಕೊಟ್ಟ ಸಾಲ ಮರುಪಾವತಿ ಆಗಲಾರದು,ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಧ್ಯತೆ ಇದೆ. ಶುಭ ಸಂಖ್ಯೆ: 2

 

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937