Daily Horoscope: ನಿಮ್ಮ ನಿರ್ಧಾರವನ್ನು ಇನ್ನೊಬ್ಬರ ಮೇಲೆ‌ ಹೇರುವುದು ಬೇಡ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಸೆಪ್ಟೆಂಬರ್​ 30: ಭಾವೀ ವ್ಯಕ್ತಿಗಳ ಸಂಪರ್ಕವು ಯಾರದೋ ಮೂಲಕ ಸಿಗುವುದು. ಇಂದು ಎಲ್ಲರಿಗೂ ನೀವು ಇಷ್ಟವಾಗುವಿರಿ. ಕಲಾತ್ಮಕ ವಿಚಾರದಲ್ಲಿ ಇಂದು ಹೆಚ್ಚು ಆಸಕ್ತಿಯನ್ನು ಇಟ್ಟುಕೊಳ್ಳುವಿರಿ. ನಿಮ್ಮ ನಿರ್ಧಾರವನ್ನು ಇನ್ನೊಬ್ಬರ ಮೇಲೆ‌ ಹೇರುವುದು ಬೇಡ. ಹಾಗಾದರೆ ಸೆಪ್ಟೆಂಬರ್​ 30ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ನಿಮ್ಮ ನಿರ್ಧಾರವನ್ನು ಇನ್ನೊಬ್ಬರ ಮೇಲೆ‌ ಹೇರುವುದು ಬೇಡ
ನಿಮ್ಮ ನಿರ್ಧಾರವನ್ನು ಇನ್ನೊಬ್ಬರ ಮೇಲೆ‌ ಹೇರುವುದು ಬೇಡ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 30, 2024 | 12:10 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ಶುಭ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 21 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:53 ರಿಂದ 09:23, ಯಮಘಂಡ ಕಾಲ ಬೆಳಿಗ್ಗೆ 10:53ರಿಂದ 12:22ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:52 ರಿಂದ 03:22 ರವರೆಗೆ.

ಸಿಂಹ ರಾಶಿ: ಜವಾಬ್ದಾರಿಯ ಸ್ಥಾನದಲ್ಲಿ ಇದ್ದು ನೀವು ವರ್ತಿಸಬೇಕಾಗುವುದು. ವಿದ್ಯಾಭ್ಯಾಸದಲ್ಲಿ ಪ್ರಗತಿಯ ಜೊತೆ ಶತ್ರುಗಳೂ ಉಂಟಾಗುವರು. ಅಪರಿಚಿತರ ಜಾಲಕ್ಕೆ ಸಿಕ್ಕಿ ಮೋಸ ಹೋಗಬಹುದು. ಆರ್ಥಿಕ ಬಲವನ್ನು ನೋಡಿ ಇಂದು ಮುಂದುವರಿಯಿರಿ. ಸ್ನೇಹಿತರು ನಿಮ್ಮ ಬಳಿ ಹಣದ ಸಹಾಯವನ್ನು ಕೇಳಬಹುದು. ವೃತ್ತಿಯಲ್ಲಿ ನೀವು ಹೊಸತನ್ನು ತರಲು ಯೋಚಿಸಬಹುದು. ನೀವು ಕೊಡುವ ತೀರ್ಮಾನವು ನ್ಯಾಯಸಮ್ಮತವಾಗಿರಲಿ. ಸ್ತ್ರೀಯರಿಂದ ನಿಮಗೆ ಬೇಕಸದ ಸಹಾಯವು ಸಿಗಲಿದೆ. ಇನ್ನೊಬ್ಬರ ಆದಾಯಕ್ಕೆ ತೊಂದರೆಯನ್ನು ಕೊಡುವುದು ಒಳ್ಳೆಯದಲ್ಲ. ಎಂದೋ ಮಾಡಿದ ಉಪಕಾರವು ನಿಮಗೆ ವರವಾಗಿ ಬರಬಹುದು. ‌ಬಲವಂತವಾಗಿ ಇನ್ನೊಬ್ಬರಿಂದ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಪ್ರಾಮಾಣಿಕತೆಯು ಇಂದು ನಿಮಗೆ ವರದಾನವಾಗುವುದು. ಅಪರಿಚಿತ ಸ್ಥಳದಿಂದ ಭೀತಿಯಾಗಬಹುದು.

ಕನ್ಯಾ ರಾಶಿ: ಪ್ರಭಾವೀ ವ್ಯಕ್ತಿಗಳ ಸಂಪರ್ಕವು ಯಾರದೋ ಮೂಲಕ ಸಿಗುವುದು. ಇಂದು ಎಲ್ಲರಿಗೂ ನೀವು ಇಷ್ಟವಾಗುವಿರಿ. ಕಲಾತ್ಮಕ ವಿಚಾರದಲ್ಲಿ ಇಂದು ಹೆಚ್ಚು ಆಸಕ್ತಿಯನ್ನು ಇಟ್ಟುಕೊಳ್ಳುವಿರಿ. ನಿಮ್ಮ ನಿರ್ಧಾರವನ್ನು ಇನ್ನೊಬ್ಬರ ಮೇಲೆ‌ ಹೇರುವುದು ಬೇಡ. ಎಲ್ಲರ ಮೇಲೂ ಹಿಡಿತ ಸಾಧಿಸುವುದು ಅಶಕ್ಯ. ರಾಜಕೀಯ ವಲಯದಲ್ಲಿ ನಿಮ್ಮ ಮಾತು ನಡೆಯಲಿದ್ದು ಅದನ್ನು ಸದುಪಯೋಗವಾಗಿವಂತೆ ಮಾಡಿಕೊಳ್ಳಿ. ಮನೆಯ ಮೇಲೆ‌‌ ಚೋರರ ಭಯವು ಕಾಡಬಹುದು. ಕೃಷಿಯಲ್ಲಿ ಸ್ವಲ್ಪಮಟ್ಟಿಗೆ ನಷ್ಟವಾಗುವ ಸಾಧ್ಯತೆ ಇದೆ. ಅನುಭವಿಗಳ ಮಸರ್ಗದರ್ಶನವು ನಿಮಗೆ ಸಿಗಲಿದೆ. ಸಣ್ಣ ವ್ಯಾಪಾರಿಗಳಿಗೆ ಸ್ವಲ್ಪ ಲಾಭವಾಗುವುದು. ಬಂಧುಗಳ ಜೊತೆಗೆ ನಿಮ್ಮ ಒಡನಾಟವು ಚೆನ್ನಾಗಿರುವುದು. ಸಂಬಂಧವು ನಿಮಗೆ ಹೊಸ ಉತ್ಸಾಹವನ್ನು ಕೊಡಬಹುದು. ಮಾತಿನಲ್ಲಿ ಹಿಡಿತವಿದ್ದರೆ ನಿಮಗೆ ಇಂದು ಕ್ಷೇಮ. ಸಣ್ಣದಕ್ಕೂ ಸಂಗಾತಿಯ ಬೆಂಬಲವನ್ನು ಅಪೇಕ್ಷಿಸುವಿರಿ. ಹಿರಿಯರಿಗೆ ಕೊಡಬೇಕಾದ ಗೌರವವನ್ನು ಕೊಡಿ. ಹಳೆಯ ತಪ್ಪಿನಿಂದ ಪಾಠ ಕಲಿತರೆ ಒಳ್ಳೆಯದು.

ತುಲಾ ರಾಶಿ: ಪರ ಊರು ನಿಮ್ಮ ಆರೋಗ್ಯವನ್ನು ಹಾಳುಮಾಡುವುದು. ಮೇಲಧಿಕಾರಿಗಳ ಕಿರುಕುಳವನ್ನು ಸಹಿಸುವುದು ಕಷ್ಟವಾಗುವುದು. ಹಳೆಯ ವಿಚಾರಕ್ಕೆ ಸಂಗಾತಿಯ ಜೊತೆ ಕಲಹವಾಗಲಿದೆ. ಆದಷ್ಟು ಒಬ್ಬರು ಸುಮ್ಮನಿದ್ದರೆ ಕಲಹವು ಶಾಂತವಾಗಲಿದೆ. ಶ್ರೇಷ್ಠ ವಸ್ತುಗಳ ಲಾಭವಿದ್ದರೂ ಅದನ್ನು ಉಳಿಸಿಕೊಳ್ಳುವುದು ಕಷ್ಟವಾದೀತು. ಮನೆಯ ಶುಭ ಕಾರ್ಯಗಳಿಗೆ ನೀವು ಕೈಲಾದ ಸಹಕಾರವನ್ನು ಕೊಡಬಹುದು. ಕಛೇರಿಯ ಕೆಲಸಗಳನ್ನು ಬೇರೆ ಸಮಯದಲ್ಲಿಯೂ ಮಾಡಬೇಕಾಗುವುದು. ಕೆಲವು ಘಟನೆಗಳನ್ನು ನೀವು ಮರೆತು ಮುಂದಡಿ ಇಡಬೇಕಾದೀತು.‌ ಸಂಗಾತಿಯ ಬೆಂಬಲವನ್ನು ನಿರಾಕರಿಸುವಿರಿ. ತಪ್ಪಿಗೆ ಕ್ಷಮೆ ಕೇಳಿ ದೊಡ್ಡವರಾಗಲಿದ್ದೀರಿ. ಅವರ ಎಲ್ಲ ಸಹಕಾರಗಳನ್ನು ತೆಗೆದುಕೊಳ್ಳಿ. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಬಹುದು. ನಿಮ್ಮ ಅಧ್ಯಯನವು ಕಡಿಮೆಯಾಗಲಿದೆ. ನಿಮ್ಮವರನ್ನು ದೂರ ಮಾಡಿಕೊಳ್ಳದೇ ಯಥಾಸ್ಥಿತಿಯಲ್ಲಿ ಇರಿಸಿ. ಯಾರಾದರೂ ಮಾನಸಿಕವಾದ ಒತ್ತಡವನ್ನು ತರಿಸಬಹುದು.

ವೃಶ್ಚಿಕ ರಾಶಿ: ಯಾರನ್ನೋ ಟೀಕಸುತ್ತ ನಿಮ್ಮ ಸಮಯವನ್ನು ಹಾಳುಮಾಡಿಕೊಳ್ಳುವಿರಿ. ಇಂದಿನ ಆದಾಯ ಕಡಿಮೆ ಇದ್ದರೂ ನೆಮ್ಮದಿ ಇರಲಿದೆ. ಪ್ರಾಮಾಣಿಕತೆ ನಿಮಗೆ ವರವಾಗಬಹುದು. ನಿಮ್ಮ ಸರಳತೆಯು ನಿಮಗೆ ಧನಾತ್ಮಕ ಅಂಕಗಳನ್ನು ನೀಡುವುದು. ಸ್ತ್ರೀಯರಿಂದ ನೀವು ಸಂತೋಷವನ್ನು ಅನುಭವಿಸುವಿರಿ. ನಿಮ್ಮ ಮನಸ್ಸಿಗೆ ಹೊಂದುವವರ ಒಡನಾಟ ಸಿಗುವುದು. ನಿಮ್ಮವರೇ ನಿಮಗೆ ತೊಂದರೆಯನ್ನು ಕೊಡುವರು. ವಿವಾಹ ವಿಚಾರವನ್ನು ನೀವು ಆತುರದಿಂದ ಮಾಡುವುದು ಬೇಡ. ಮಕ್ಕಳ‌ ಮೇಲೆ ಮೋಹವು ಅಧಿಕವಾಗುವುದು. ಸಿಕ್ಕ ಸಂಪತ್ತನ್ನು ಜೋಪಾನವಾಗಿ ಇರಿಸಿಕೊಳ್ಳಿ. ಅಗ್ನಿಯ ಬಗ್ಗೆ ಎಚ್ಚರಿಕೆ ಇರಲಿ. ಯಾವುದೇ ಕೆಲಸಕ್ಕೆ ಬೇರೆಯವರ ಮೇಲೆ ಅವಲಂಬಿತರಾಗಬೇಡಿ. ಉದ್ಯಮವು ದಿಕ್ಕು ತಪ್ಪದಂತೆ ನೋಡಿಕೊಳ್ಳಿ. ಹೊರದೇಶಕ್ಕೆ ನೀವು ಹೋಗಬೇಕಾದ ಸ್ಥಿತಿಯು ಬರಬಹುದು. ಸ್ವ ಉದ್ಯೋಗ ನಿಮಗೆ ಹಿತವೆನಿಸುವುದು.

ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್