Daily Horoscope: ಅಂದಿನ ಕೆಲಸವನ್ನು ಅಂದೇ ಮಾಡಿ, ಬಳಿಕ ಕೊರಗಬೇಕಾದೀತು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಅಕ್ಟೋಬರ್​ 18: ಅಧಿಕಾರದಿಂದ ನಿಮ್ಮ ವರ್ತನೆಯು ಬದಲಾಗಬಹುದು. ನೌಕರರ ಬಗ್ಗೆ ನಿಮಗೆ ಅಸಮಾಧಾನ ಇರುವುದು. ಸಂತೋಷವನ್ನು ನೀವು ಹಂಚಿಕೊಳ್ಳುವಿರಿ. ನಿಮ್ಮ ಕಾರ್ಯಸಾಧನೆಗೆ ಯಾರನ್ನಾದರೂ ಬಳಸಿಕೊಳ್ಳುವಿರಿ. ಹಾಗಾದರೆ ಅಕ್ಟೋಬರ್​ 18ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಅಂದಿನ ಕೆಲಸವನ್ನು ಅಂದೇ ಮಾಡಿ, ಬಳಿಕ ಕೊರಗಬೇಕಾದೀತು
ಅಂದಿನ ಕೆಲಸವನ್ನು ಅಂದೇ ಮಾಡಿ, ಬಳಿಕ ಕೊರಗಬೇಕಾದೀತು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 18, 2024 | 12:10 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ವಜ್ರ​, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 09 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:50 ರಿಂದ ಮಧ್ಯಾಹ್ನ 12:18ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:14 ರಿಂದ ಸಂಜೆ 04:42ರವರೆಗೆ, ಗುಳಿಕ ಕಾಲ ಬೆಳಿಗ್ಗೆ 07:54 ರಿಂದ 09:22 ರವರೆಗೆ.

ಸಿಂಹ ರಾಶಿ: ಇಂದಿನ ದಿನವನ್ನು ಒಳ್ಳೆಯ ದಿನವನ್ನಾಗಿ ಮಾಡಿಕೊಳ್ಳಬಹುದು. ಇಂದು ಮಾಡಬೇಕಾದುದನ್ನು ಮಾಡಿ. ಅನಂತರ ಕೊರಗುತ್ತ ಇರುವುದು ಬೇಡ. ತಂದೆಯ ವಿಚಾರದಲ್ಲಿ ನಿಮಗೆ ಅಸಮಾಧನ ಇರಲಿದ್ದು ಅವರ ಮೇಲೆ ಕೋಪಗೊಳ್ಳುವಿರಿ. ನಿಮ್ಮ ತನವನ್ನು ಬಿಟ್ಟು ನೀವು ಹೊಂದಾಣಿಕೆಯನ್ನು ಮಾಡಿಕೊಳ್ಳಲಾರಿರಿ. ಯಾರ ಸಹಾಯವನ್ನೂ ಪಡೆಯದೆ ನೀವು ನಿಮ್ಮ ಕಾರ್ಯವನ್ನು ನಿಧಾನವಾಗಿಯೇ ಮಾಡುವಿರಿ. ಶುಭ ಸಮಾರಂಭಗಳಿಗೆ ಭೇಟಿ ಮಾಡುವ ಸಂದರ್ಭವು ಬರಬಹುದು. ಸಾಮಾಜಿಕ ಚಟುವಟಿಕೆಗಳನ್ನು ಮಾಡಲು ಆಸಕ್ತಿಯು ಇರದು. ನಿರುದ್ಯೋಗಿಗಳು ಉದ್ಯೋಗದ ಅನ್ವೇಷಣೆಯನ್ನು ಮಾಡುವರು. ನಿಮ್ಮದಾದ ಕೆಲವು ವಿಚಾರಗಳನ್ನು ಅನ್ಯರ ಮೇಲೆ ಹೇರುವಿರಿ. ಅಮೂಲ್ಯ ವಸ್ತುವೊಂದು ಕಣ್ಮರೆಯಾಗಬಹುದು. ಅನೌಪಚಾರಿಕವಾಗಿ ಅಧಿಕಾರಿಗಳ ಜೊತೆ ನಡೆದುಕೊಳ್ಳುವಿರಿ. ನಿಮ್ಮ ಮನಸ್ಸು ಇಂದು ನಿಮ್ಮನ್ನು ಒಂದೆಡೆ ಕುಳಿತುಕೊಳ್ಳಲು ಬಿಡದು.

ಕನ್ಯಾ ರಾಶಿ: ಸಕಾರಾತ್ಮಕ ಯೋಚನೆಯೇ ಬಂಧನವನ್ನು ಗಟ್ಟಿಯಾಗಿಸುವುದು. ಪ್ರಶಂಸೆಯಿಂದ ನೀವು ಸಂತೋಷಗೊಳ್ಳುವಿರಿ. ಮಾನಸಿಕವಾಗಿ ಸಬಲರಾಗುವ ಅವಶ್ಯಕತೆ ಇರಲಿದೆ‌. ಸ್ವಂತ ಉದ್ಯಮವನ್ನು ಮಾಡುತ್ತಿದ್ದರಿಗೆ ನಿರೀಕ್ಷಿತ ಲಾಭದ ಮಟ್ಟವನ್ನು ತಲುಪುವುದು ಕಷ್ಟವಾಗುವುದು. ಸ್ತ್ರೀಯರ ಜೊತೆ ನಿಮ್ಮ ವ್ಯವಹಾರವು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸಿ. ಸಂಸಾರದ ಹೊಣೆಗಾರಿಕೆಯನ್ನು ಕಷ್ಟದಿಂದ ನಿರ್ವಹಿಸುವಿರಿ. ವೃತ್ತಿಯ ಸ್ಥಳದಲ್ಲಿ ನಿಮಗೆ ಬೇಸರ ತರಿಸುವ ಸಂಗತಿಗಳು ನಡೆಯಬಹುದು. ಪಿತ್ರಾರ್ಜಿತ ಆಸ್ತಿಯು ನಿಮ್ಮ ಕೈ ಸೇರುವ ಸಾಧ್ಯತೆ ಇದೆ. ತಾಳ್ಮೆಯನ್ನು ಇಟ್ಟುಕೊಳ್ಳುವುದು ಅಗತ್ಯವಾಗಬಹುದು. ಸಮಯ ಸರಿದಾಗ ಎಲ್ಲವೂ ಅರಿವಾಗುವುದು. ಮನೆಯಲ್ಲಿ ನಿಮ್ಮ ಮಾತಿಗೆ ಯಾವ ಉತ್ತರವೂ ಕೊಡದೇ ಇರುವುದು ನಿಮಗೆ ನೋವಾಗುವುದು. ವಾಹನ ಖರೀದಿಯಿಂದ ನಿಮಗೆ ಚಿಂತೆ ಆರಂಭವಾಗುವುದು.

ತುಲಾ ರಾಶಿ: ನಿಮ್ಮ ಸಹಾಯವು ಕೆಲವರ‌ ಸಂತೋಷಕ್ಕೆ ಕಾರಣವಾಗುವುದು. ನಿಮ್ಮ ಸಂತೋಷವನ್ನು ಕಹಿಯಾದ ಮಾತುಗಳು ಇಂದು ಕಸಿದುಕೊಳ್ಳಬಹುದು. ನಿಮ್ಮ ಕಡೆಗಣಿಸುತ್ತಿರುವುದು ನಿಮಗೆ ಗೊತ್ತಾಗಿ ಬೇಸರವಾಗುವುದು. ಸ್ನೇಹಿತರಿಂದ ನೀವು ಸಹಾಯವನ್ನು ಬಯಸುವಿರಿ. ಕಛೇರಿಯ ಕೆಲಸಕ್ಕಾಗಿ ಓಡಾಟವು ಇರಲಿದೆ. ದಾಂಪತ್ಯದ ಸಾಮರಸ್ಯವನ್ನು ನೀವು ಉಳಿಸಿಕೊಳ್ಳಿ. ನಿಮ್ಮದಲ್ಲದ ಕೆಲಸವು ನಿಮಗೇ ಬರಬಹುದು. ಮನೋರಂಜನೆಯಲ್ಲಿ ಹೆಚ್ಚಿನ ಸಮಯವನ್ನು ಕಳೆಯುವಿರಿ. ಸಹೋದ್ಯೋಗಿಗಳ ಸಹವಾಸದಿಂದ ಕೆಟ್ಟ ಅಭ್ಯಾಸವನ್ನು ಕಲಿಯುವಿರಿ. ಓದಿನಲ್ಲಿ ಏಕಾಗ್ರತೆಯ ಕೊರತೆ ಕಾಣಲಿದೆ.‌ ತಂದೆಯ ಜೊತೆ ಕಲಹವಾಗಿ ಮನೆಯಿಂದ ದೂರವಿರುವಿರಿ. ನಿಮ್ಮ ಮಾತುಗಳು ಕೆಲವರಿಗೆ ಇಷ್ಟವಾಗದೇ ಹೋಗುವುದು. ಪ್ರೇಮವನ್ನು ನಿಭಾಯಿಸುವುದು ಕಷ್ಟವಾಗುವುದು. ಪ್ರಿಯವಾದ ವಸ್ತುವನ್ನು ಪಡೆಯಲು ಹಣದ ಅಭಾವವಿರುವುದು.

ವೃಶ್ಚಿಕ ರಾಶಿ: ಒಳ್ಳೆಯ ಕಾರ್ಯಗಳು ನಿಮ್ಮನ್ನು ಕಾಪಾಡಬಹುದು. ಇಂದು ಸಾಮಾಜಿಕ ಕಾರ್ಯಗಳಿಂದ ಸಂತೋಷವೂ ಹೊಸತನವೂ ನಿಮಗೆ ಸಿಗಲಿದೆ. ಅಧಿಕಾರದಿಂದ ನಿಮ್ಮ ವರ್ತನೆಯು ಬದಲಾಗಬಹುದು. ನೌಕರರ ಬಗ್ಗೆ ನಿಮಗೆ ಅಸಮಾಧಾನ ಇರುವುದು. ಸಂತೋಷವನ್ನು ನೀವು ಹಂಚಿಕೊಳ್ಳುವಿರಿ. ನಿಮ್ಮ ಕಾರ್ಯಸಾಧನೆಗೆ ಯಾರನ್ನಾದರೂ ಬಳಸಿಕೊಳ್ಳುವಿರಿ. ನಿಮ್ಮ ಕೆಲಸಗಳಿಗೆ ನಿಗದಿತ ಸಮಯವನ್ನು ಕೊಡುವುದು ಮುಖ್ಯವಾಗಬಹುದು. ಆಯ್ಕೆಗಳು ನಿಮ್ಮನ್ನು ಗೊಂದಲಕ್ಕೆ ದೂಡಬಹುದು. ಸಂಗಾತಿಯ ವರ್ತನೆಯ ಬಗ್ಗೆ ನಿಮಗೆ ಹೆಚ್ಚು ಬೇಸರವಾಗಬಹುದು. ಹಣದ ವಿಚಾರವನ್ನು ಇಂದು ಹೆಚ್ಚು ಮಾಡುವಿರಿ. ಧಾರ್ಮಿಕ ಆಚರಣೆಯಲ್ಲಿ ಸ್ವಲ್ಪ ತೊಡಗುವಿರಿ. ತಾಯಿಯ ಪ್ರೀತಿಯು ನಿಮಗೆ ಅಪರೂಪವೆನಿಸುವಂತೆ ಆಗುವುದು.‌ ನಿಮ್ಮ ಸ್ವಭಾವವನ್ನು ಬಿಟ್ಟು ಎಲ್ಲರ ಜೊತೆ ಹೊಂದಾಣಿಕೆಯಿಂದ ಇರಬೇಕಾಗುವುದು.

ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ