Horoscope: ದಿನಭವಿಷ್ಯ; ಸಂಗಾತಿಯ ಜೊತೆ ಭಿನ್ನಮತವು ಬರಬಹುದು-ಎಚ್ಚರ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಇಂದಿನ (ಫೆಬ್ರವರಿ​​​​ 26) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ; ಸಂಗಾತಿಯ ಜೊತೆ ಭಿನ್ನಮತವು ಬರಬಹುದು-ಎಚ್ಚರ
ರಾಶಿ ಭವಿಷ್ಯ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 26, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 26) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಶತಭಿಷಾ, ಮಾಸ : ಮಾಘ, ಪಕ್ಷ : ಕೃಷ್ಣ, ವಾರ : ಸೋಮ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಉತ್ತರಾಫಲ್ಗುಣೀ, ಯೋಗ : ಧೃತಿ, ಕರಣ : ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 52 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 38 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 08:21 ರಿಂದ 09:49ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 11:17 ರಿಂದ 12:46ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:14 ರಿಂದ 03:42ರ ವರೆಗೆ.

ಧನು ರಾಶಿ : ನೀವು ಇಂದು ಸಕಾರಾತ್ಮಕವಾಗಿ ಇರಬೇಕಾಗುವುದು. ಇದರಿಂದ ನಿಮ್ಮ ಆರೋಗ್ಯದ ಮೇಲೂ ಉತ್ತಮ ಪರಿಣಾಮ ಇರುವುದು‌. ಯಾರಿಂದಲೂ ಧನಸಹಾಯವನ್ನು ಪಡೆಯಬಾರದು ಎಂಬ ಸಂಕಲ್ಪ ನಿಮ್ಮದಾಗಿರುವುದು. ಪ್ರಾಮಾಣಿಕತೆಯಿಂದ ನೀವು ಗೆಲ್ಲುವಿರಿ. ಉತ್ತಮ ಕೆಲಸವನ್ನು ಅಜ್ಞಾನದಿಂದ ನಷ್ಟ ಮಾಡಿಕೊಳ್ಳುವಿರಿ. ಉದ್ಯಮದ ಕಾರಣ ಇರುವ ಸ್ಥಳದಿಂದ ದೂರ ಹೋಗಬೇಕಾಗುವದು. ಸುಳ್ಳನ್ನಾಡಿ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಅಚಾತುರ್ಯದಿಂದ ಹಣವನ್ನು ಕಳೆದುಕೊಳ್ಳಬೇಕಾದೀತು. ಬೇಡದ ಕಾರ್ಯಕ್ಕೆ ಯಾರಾದರೂ ಪ್ರಚೋದಿಸಿಯಾರು. ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು. ಸಾಮಾಜಿಕವಾದ ಗೌರವವನ್ನು ನೀವು ಅನಾಯಾಸವಾಗಿ ಪಡೆದುಕೊಳ್ಳುವಿರಿ. ಯೋಗ್ಯವಾದ ಕೆಲಸದ ಕಡೆ ಗಮನವಿರಲಿ.

ಮಕರ ರಾಶಿ : ನಿಮ್ಮ ಸಂಗಾತಿಯ ಬಗ್ಗೆ ಪೂರ್ವಾಗ್ರಹ ಬೇಡ. ಉತ್ಸಾಹದಿಂದ ಏನನ್ನಾದರೂ ಮಾಡಿಕೊಳ್ಳುವಿರಿ. ನಿಮ್ಮನ್ನು ನೀವು ತೆರೆದುಕೊಳ್ಳುವ ಅವಶ್ಯಕತೆ ಇರಲಿದೆ. ನಿಮ್ಮ ಹಠದ ಸ್ವಭಾವವು ಇತರರಿಗೆ ನೋವನ್ನು ಕೊಡಬಹುದು. ಸಹೋದ್ಯೋಗಿಗಳ ಜೊತೆ ನಿಮ್ಮ ಮಾತು ಅಸಹವಾಗಿರುವುದು. ವಿವಾದದಲ್ಲಿರುವ ಆಸ್ತಿಯಿಂದ ಮಾರಾಟವು ನಿಧಾನವಾಗುವುದು. ಸರ್ಕಾರ ಕಾರ್ಯವು ಇಂದು ಪೂರ್ಣವಾಗದು ಎಂದು ಅಂದುಕೊಂಡಿದ್ದರೂ ಕೊನೆಗೆ ಕೆಲಸವಾಗುವುದು. ಎಲ್ಲರ ಮೇಲೂ ಅನುಮಾನ ಪಡುವ ದುರಭ್ಯಾಸವು ಬೆಳೆಯಬಹುದು. ಮನೆಯ ಸಮೀಪದಲ್ಲಿಯೇ ನಿಮ್ಮ ಉದ್ಯೋಗವು ಸಿಗಲಿದೆ. ಮನೆಯಲ್ಲಿ ತಾಳ್ಮೆಯಿಂದ ವ್ಯವಹರಿಸಿ. ನಿಮ್ಮ ವಾಹನಕ್ಕಾಗಿ ಖರ್ಚನ್ನು ಮಾಡಬೇಕಾಗುವುದು. ಸಿಕ್ಕ ಅವಕಾಶದಲ್ಲಿ ಪ್ರೀತಿಯಿರಲಿ. ಕೊರಗುತ್ತ ಇರುವುದು ಬೇಡ. ನಿಮ್ಮ ಆಡಂಬರದ ಜೀವನವು ಇತರರಿಗೆ ಅಸೂಯೆ ತರಬಹುದು.

ಕುಂಭ ರಾಶಿ : ನಿಮ್ಮ ಭೂಮಿಯ ವಿವಾದವು ದೊಡ್ಡದಾಗಬಹುದು. ನಿಮಗೆ ಬೇಕಾದುದನ್ನು ಹಠ ಮಾಡಿ ಪಡೆದುಕೊಳ್ಳುವಿರಿ. ನಿಮ್ಮನ್ನು ಪ್ರೀತಿಸುವವರಿಗೆ ಸಮಯವನ್ನು ಕೊಡಿ. ಹಣವನ್ನು ಅನ್ಯ ಕಾರ್ಯಕ್ಕೆ ಬಳಸುವಿರಿ. ಕಲಾವಿದರು ಅವಕಾಶದಿಂದ ವಂಚಿತರಾಗಬೇಕಾಗುವುದು. ಇಂದು ನಿಮಗೆ ಸಾಮಾಜಿಕ ಕಾರ್ಯಗಳಿಗೆ ಪ್ರೇರಣೆ ಸಿಗಬಹುದು. ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಓಡಾಟವು ಅಧಿಕವಾಗಿ ಇರುವುದು. ಸ್ನೇಹಿತರು ನಿಮಗೆ ಸುಳ್ಳು ಹೇಳುವರು. ಮಕ್ಕಳ ವಿದ್ಯಾಭ್ಯಾಸಕ್ಕೆ ನೀವೇ ವಿಶೇಷ ಕಾಳಜಿಯನ್ನು ತೋರಿ ಅವರನ್ನು ಓದಿಗೆ ಪ್ರೇರಣೆ ಕೊಡಬೇಕಾಗುವುದು. ದಿನದ ಕೆಲಸವೇ ಇಂದು ಬಹಳ ಆಗಲಿದ್ದು ಇನ್ನೊಬ್ಬರ ಕೆಲಸವನ್ನು ಮಾಡಿಕೊಡಲು ತಾಳ್ಮೆ ಇರಲಾರದು. ಹೂಡಿಕೆಗೆ ಯಾರಿಂದಲಾದರೂ ಪ್ರೇರಣೆ ಸಿಗಬಹುದು. ಇಂದು ನಿಮ್ಮ ಉತ್ಸಾಹವನ್ನು ಯಾರಿಂದಲೂ ಸಾಧ್ಯವಾಗದು. ಸುಖದ ಸಾಧನವನ್ನು ನೀವು ಕೈ ಬಿಡುವಿರಿ.

ಮೀನ ರಾಶಿ : ಇಂದು ನೀವು ಜೀವನದ ಎಲ್ಲ ಕ್ಷಣಗಳನ್ನು ಸಂತೋಷದಿಂದ ಅನುಭವಿಸುವಿರಿ. ಬರಬೇಕಿದ್ದ ಹಣಗಳು ಇಂದು ನಿಮ್ಮ ಕೈ ಸೇರುವುದರಿಂದ ಹಣಕಾಸಿನ ಪರಿಸ್ಥಿತಿ ಸುಧಾರಿಸುತ್ತದೆ. ಇಂದು ಕೆಲಸದಲ್ಲಿ ಉತ್ಸಾಹವು ಹೆಚ್ಚಿರುವುದು. ಕಾರ್ಯದಲ್ಲಿ ಸಂಪೂರ್ಣ ಜಾಗರೂಕರಾದಾಗ ಮಾತ್ರ ಅವಕಾಶಗಳು ನಿಮ್ಮದಾಗುತ್ತವೆ. ಕಛೇರಿ ಕೆಲಸದಿಂದ ನಿಮ್ಮ ಸ್ವಂತ ಕೆಲಸಕ್ಕೆ ತೊಂದರೆಯಾಗಬಹುದು.‌ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನವನ್ನು ನೀಡುವರು. ಬಂಧುಗಳ ವಿವಾಹದ ಕಾರ್ಯಕ್ಕೆ ಓಡಾಟ ಮಾಡಬೇಕಾದೀತು. ಇಂದು ಒಂದಿಷ್ಟು ಆಯಾಸ ಬಿಟ್ಟರೆ, ಮತ್ತೇನೂ ಆಗದು. ಇನ್ನೊಬ್ಬರ ಬಗ್ಗೆ ನಿಮ್ಮಲ್ಲಿ ಕುತೂಹಲ ಇರಲಿದೆ. ಸಜ್ಜನರ ಜೊತೆ ಸಮಯ ಕಳೆಯುವ ಅವಕಾಶ ಸಿಗುವುದು. ಸಂಗಾತಿಯ ಜೊತೆ ಭಿನ್ನಮತವು ಬರಬಹುದು. ಕುಟುಂಬದ ಹಿರಿಯರ ಅನಾರೋಗ್ಯದ ಕಾರಣ ನಿಮ್ಮ ಸ್ವಂತ ಕಾರ್ಯವನ್ನು ಮಾಡಿಕೊಳ್ಳಲಾಗದು.

-ಲೋಹಿತ ಹೆಬ್ಬಾರ್ – 8762924271 (what’s app only)

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?