Nitya Bhavishya: ಈ ರಾಶಿಯವರಿಗೆ ಇಂದು ಅದೃಷ್ಟ ಕೈ ಕೊಡುವುದು, ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಹಾದಿ ಸುಗಮ

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಫೆಬ್ರವರಿ 04, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Nitya Bhavishya: ಈ ರಾಶಿಯವರಿಗೆ ಇಂದು ಅದೃಷ್ಟ ಕೈ ಕೊಡುವುದು, ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಹಾದಿ ಸುಗಮ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Feb 04, 2024 | 12:10 AM

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ (ಫೆಬ್ರವರಿ 04) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ದಶಮೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ವೃದ್ಧಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 07 ಗಂಟೆ 01 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 31 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 05:05 ರಿಂದ 06:32ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:47 ರಿಂದ 02:13 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:39 ರಿಂದ 05:05ರ ವರೆಗೆ.

ಮೇಷ ರಾಶಿ: ನಿಮ್ಮ ಕುಟುಂಬ ಸದಸ್ಯರ ಸಲಹೆಯನ್ನು ಅನುಸರಿಸುವ ಮೂಲಕ ಅವರಿಗೆ ಸಂತೋಷವನ್ನು ಕೊಡುವಿರಿ. ಸಂಬಂಧಗಳಲ್ಲಿ ನಿಮ್ಮ ನಂಬಿಕೆ ಉಳಿಯುತ್ತದೆ. ನಿಮ್ಮ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ನೀವು ಪಡೆಯುತ್ತೀರಿ. ಕೆಲಸದಲ್ಲಿ ನಿಯಮಗಳಿಗೆ ಸಂಪೂರ್ಣ ಗಮನವನ್ನು ನೀಡುವುದು ಅವಶ್ಯಕ. ನಿಮ್ಮ ಹಣಕಾಸಿನ ಪರಿಸ್ಥಿತಿಗೆ ಸಂಬಂಧಿಸಿದಂತೆ ನೀವು ಒಂದು ಪ್ರಮುಖ ಹೆಜ್ಜೆಯನ್ನು ತೆಗೆದುಕೊಳ್ಳುವಿರಿ. ನಿಮಗೆ ಆಪ್ತರ ಜೊತೆ ಮಾತನಾಡದೇ ನೆಮ್ಮದಿಯು ಸಿಗದೇಹೋದೀತು. ಹೆಚ್ಚು ನಿರುಪಯುಕ್ತ ಮಾತುಗಳು ನಿಮ್ಮಿಂದ ಬರಬಹುದು. ಅನಿರೀಕ್ಷಿತ ಅಶುಭವಾರ್ತೆಯನ್ನು ನೀವು ಕೇಳಬೇಕಾದೀತು.‌ ತನ್ನವರ ಬಗ್ಗೆ ನಂಬಿಕೆ ಇರದು. ಹಲವು ದಿನಗಳಿಂದ ನೀವು ಬಯಸಿದ್ದು ಸಿಗಬಹುದು. ಉದ್ಯೋಗದಲ್ಲಿ ಉತ್ತಮ ಅವಕಾಶಗಳು ಬರಲಿವೆ. ಮೋಜಿಗಾಗಿ ಹಣವನ್ನು ವ್ಯಯಿಸುವಿರಿ.

ವೃಷಭ ರಾಶಿ: ಇಂದು ನಿಮಗೆ ಅದೃಷ್ಟವು ಪೂರ್ಣವಾಗಿ ಕೈ ಕೊಟ್ಟಂತೆ ತೋರುವುದು. ನೀವು ಹೊಸ ಕೆಲಸವನ್ನು ಪ್ರಾರಂಭಿಸಿದರೆ ನಿಮ್ಮ ಪ್ರಯತ್ನವೇ ಅಧಿಕವಾಗಿ ಇರಲಿದೆ. ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಹಾದಿ ಸುಗಮವಾಗಬಹುದು. ನಿಮ್ಮ ನಾಯಕತ್ವದ ಸಾಮರ್ಥ್ಯ ಎಲ್ಲರಿಗೂ ಅರಿವಾಗಬಹುದು. ವ್ಯಾಪಾರ ಮಾಡುವ ಜನರ ಸಂತೋಷಕ್ಕೆ ಕೊನೆಯೇ ಇರುವುದಿಲ್ಲ. ನಿಮಗೆ ಅಪಾಯವನ್ನು ತೆಗೆದುಕೊಳ್ಳುವ ಅವಕಾಶ ಸಿಕ್ಕಿದರೆ, ಅದನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳುವಿರಿ. ನಿವೃತ್ತಿಯನ್ನು ಪಡೆದ ಕಾರಣ ಮನಸ್ಸಿನಲ್ಲಿ ನಾನಾ ಪ್ರಕಾರದ ಆಲೋಚನೆಗಳು ಬರುವುದು. ಸಣ್ಣ ವ್ಯಾಪಾರವು ಹೆಚ್ಚುವರಿಯಾಗಿ ಲಾಭವನ್ನು ಕೊಡುವುದು. ಉದ್ಯೋಗದ ಕನಸನ್ನು ಕಾಣುತ್ತಾ ಇರುವಿರಿ. ಉತ್ತಮ‌ ವಸ್ತುಗಳ ಖರೀದಿ ಮಾಡುವಿರಿ. ಸಂತೋಷದಿಂದ ನೀವು ಹೆಚ್ಚು ದಿನವನ್ನು ಕಳೆಯುವಿರಿ. ಬಂಧುಗಳ ಮಾತಿನಿಂದ ನಿಮಗೆ ಬೇಸರವಾಗುವುದು.

ಮಿಥುನ ರಾಶಿ: ನಿಮಗೆ ಇಂದು ಸಹೋದ್ಯೋಗಿಯ ಮಾತುಗಳು ಇಷ್ಟವಾಗದೇಹೋಗಬಹುದು. ನೀವು ಅಧಿಕಾರದ ದುರುಪಯೋಗ ಮಾಡಿಕೊಳ್ಳುವಿರಿ. ಪೂರ್ವಿಕರ ಆಸ್ತಿಯ ಬಗ್ಗೆ ನಿಮಗೆ ಆಸಕ್ತಿ ಇರದು. ನಿಮ್ಮ ಕೆಲಸದಲ್ಲಿ ನೀವು ಹೆಚ್ಚು ಜವಾಬ್ದಾರಿಯಿಂದ ವರ್ತಿಸುವಿರಿ. ನೀವು ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮವಾಗಿ ಕಾರ್ಯವನ್ನು ಮಾಡಬಲ್ಲರು ಎಂಬ ದೃಢತೆಯು ಇರಲಿದೆ. ನಿಮ್ಮ ಸ್ಥಾನ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ನಿಮ್ಮ ಗುರಿಯನ್ನು ಸರಿಯಾಗಿ ನಿರ್ಧರಿಸಿಕೊಳ್ಳಿ. ರಾಜಕೀಯದಲ್ಲಿ ಕೆಲಸ ಮಾಡುವ ಸ್ಥಳೀಯರು ಎಚ್ಚರಿಕೆಯಿಂದ ಇರಬೇಕು. ಭವಿಷ್ಯದ ಬಗ್ಗೆ ನಿಮಗೆ ಏನೇನೋ ಆಲೋಚನೆಗಳನ್ನು ಇಟ್ಟುಕೊಳ್ಳುವಿರಿ. ಮಾತಿನ ಅಸ್ಪಷ್ಟತೆಯು ಕೇಳುಗರಿಗೆ ಕಷ್ಟವಾದೀತು. ನಿಮ್ಮ ಅಭಿಪ್ರಾಯವನ್ನು ತಿಳಿಸಬೇಕಾದಲ್ಲಿ ತಿಳಿಸಿ. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ತೋರಿಸಬಹುದು. ಸಜ್ಜನರ ಸಹವಾಸವು ಅನಿರೀಕ್ಷಿತವಾಗಿ ಸಿಗುವುದು.

ಕರ್ಕ ರಾಶಿ: ಇಂದು ವ್ಯವಹಾರದಲ್ಲಿ ನಿಮ್ಮ ಸ್ವಂತ ಕೆಲಸಕ್ಕಿಂತ ಹೆಚ್ಚಾಗಿ ಇತರರ ಕೆಲಸದ ಮೇಲೆ ಕೇಂದ್ರೀಕರಿಸುವಿರಿ. ನೀವು ನಷ್ಟವನ್ನು ಅನುಭವಿಸುವ ಸಾಧ್ಯತೆಯಿದೆ. ನೀವು ಈ ಹಿಂದೆ ಯಾರಿಗಾದರೂ ಹಣವನ್ನು ಸಾಲವಾಗಿ ನೀಡಿದ್ದರೆ, ನೀವು ಅದನ್ನು ಪಡೆಯಬಹುದು. ನಿಮ್ಮ ವೃತ್ತಿಜೀವನದಲ್ಲಿ ನಿಮಗೆ ಉತ್ತಮ ಅವಕಾಶ ಸಿಗುವ ಸಾಧ್ಯತೆಯಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡುವರು. ಕಿರಿಯರಿಂದ ನೀವು ಸಲ್ಲದ ಮಾತನ್ನು ಕೇಳುವಿರಿ. ಉದ್ಯೋಗದಲ್ಲಿ ನಿಮಗೆ ಬೆಂಬಲಿಸುವವರು ಹೆಚ್ಚಿರಬಹುದು. ಸಂಗಾತಿಯು ನಿಮ್ಮ ಬಗ್ಗೆ ಸರಿಯಾಗಿ‌ ತಿಳಿದುಕೊಳ್ಳದೇ ಹೋಗಬಹುದು. ಎಲ್ಲರಿಂದ ಹೊಗಳಿಸಿಕೊಳ್ಳಬೇಕು ಎಂದು ಅನ್ನಿಸಬಹುದು. ಹಿರಿಯ ಸ್ಥಾನದಲ್ಲಿ ನಿಂತು ಜವಾಬ್ದಾರಿಯನ್ನು ನಿರ್ವಹಿಸಬೇಕಾಗುವುದು. ಸ್ತ್ರೀಯರಿಗೆ ಮನೆಯ ಕೆಲಸವು ಸಾಕೆನಿಸಿ ಹೊರಗೆ ಹೋಗಬೇಕು ಎನಿಸಬಹುದು.

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ