AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರ ಕಷ್ಟಕ್ಕೆ ಅಸಹಕಾರ, ಜೀವನದ ಮೇಲೇ ಜುಗುಪ್ಸೆ…

Horoscope Today 07 August : ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಗ್ರೀಷ್ಮ ಋತುವಿನ ಆಷಾಢ ಮಾಸದ ಕೃಷ್ಣ ಪಕ್ಷದ ನವಮೀ ತಿಥಿಯ ಶುಕ್ರವಾರದಂದು ವೈದ್ಯಚಿಕಿತ್ಸೆ, ನಿರ್ಲಕ್ಷ್ಯದ ಅನುಭವ, ವ್ಯಕ್ತಿಯ ಬದಲಾವಣೆ, ಔದ್ಯೋಗಿಕ ವ್ಯಕ್ತಿತ್ವ, ಆರೋಗ್ಯದಲ್ಲಿ ವ್ಯತ್ಯಾಸ, ಸಮೂಹದಲ್ಲಿ ತಪ್ಪು, ದುರಸ್ತಿಯಿಂದ‌ ಬೇಸರ ಇವೆಲ್ಲ ಈ ದಿನದ ಭವಿಷ್ಯ.

ದಿನ ಭವಿಷ್ಯ: ಇಂದು ಈ ರಾಶಿಯವರ ಕಷ್ಟಕ್ಕೆ ಅಸಹಕಾರ, ಜೀವನದ ಮೇಲೇ ಜುಗುಪ್ಸೆ...
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Aug 07, 2026 | 12:32 AM

Share

ಮೇಷ ರಾಶಿ:

ಎಲ್ಲದಕ್ಕೂ ಕುಟುಂಬದ ಸಹಕಾರವನ್ನು ಪಡೆಯುವಿರಿ. ಇಂದು ಮನೆಯಲ್ಲಿ ಏನಾದರೂ ತೊಂದರೆ ಕಾಣಿಸಿಕೊಳ್ಳಬಹುದು. ನಿಮ್ಮ ನಿರೀಕ್ಷಿತ ಗುರಿಯನ್ನು ತಲುಪಲು‌ ನೀವು ವಿಳಂಬ ಆಗಬಹುದು. ಇನ್ನೊಬ್ಬರ ತಪ್ಪನ್ನು ಅರ್ಥಮಾಡಿಕೊಳ್ಳುವ ಸ್ಥಿತಿಯಲ್ಲಿ ನೀವು ಇರಲಾರಿರಿ. ವಿಕಲ್ಪಗಳು ನಿಮ್ಮ ಮಾರ್ಗಕ್ಕೆ ಆಗಾಗ ಅಡ್ಡಿಯನ್ನು ಕೊಡುತ್ತವೆ. ಪರೀಕ್ಷೆಗಳನ್ನು ಎದುರಿಸುವುದು ನಿಮಗೆ ಸಹಜ ಕೆಲಸವಾಗಿದೆ. ಸಂಗಾತಿಯ ಜೊತೆಗಿನ ಸಂಬಂಧವನ್ನು ಗಟ್ಟಿಯಾಗಿಸುವಿರಿ.

ವೃಷಭ ರಾಶಿ :

ಎಲ್ಲ ಷರತ್ತುಗಳಿಗೂ ಸರಿಯಾದ ನಿಬಂಧನೆ ಇರಲಿ. ಪಿತ್ರಾರ್ಜಿತ ಸಂಪತ್ತಿನಿಂದ ಸುಖವು ಇರುವುದು. ಸಹೋದರ ಜೊತೆ ಕಲಹವು ಆಗಬಹುದು. ಸಾಹಸ ಮಾಡಲು ಹೋಗುವಾಗ ಎಚ್ಚರವಿರಲಿ. ‌ಮುಖಭಂಗ ಮಾಡಿಕೊಂಡು ಬರಬೇಕಾದೀತು. ಆಪ್ತರಿಂದ ಧನವನ್ನು ನಿರೀಕ್ಷಿಸಿ, ಪಡೆದುಕೊಳ್ಳುವಿರಿ. ವಿದ್ಯಾಭ್ಯಾಸವನ್ನು ನೀವು ಅನ್ಯರ ಒತ್ತಾಯಕ್ಕೆ ಮಾಡುವಿರಿ. ಅತಿಯಾದ ಮರೆವು ಉಂಟಾಗಲಿದೆ ಇಂದು. ಪರಿಚಯವಿಲ್ಲದ ಜನರಿಂದ ನೀವು ಅಂತರವನ್ನು ಕಾಯ್ದುಕೊಳ್ಳುವಿರಿ.

ಮಿಥುನ ರಾಶಿ:

ಇಂದು ನಿಮ್ಮ ಪ್ರಭಾವವು ಜನರಿಗೆ ತಾನಾಗಿಯೇ ಗೊತ್ತಾಗುತ್ತದೆ. ಕುಟುಂಬದಲ್ಲಿ ನೆಮ್ಮದಿ ಸಿಗದೆಂದು ಮತ್ತೇನನ್ನೋ ಮಾಡಲು ಹೋಗುವುದು ಬೇಡ. ಸರ್ಕಾರದಲ್ಲಿ ಆಗಬೇಕಾದ ನಿಮ್ಮ ಕೆಲಸವು ಸ್ವಲ್ಪ ವೇಗವನ್ನು ಪಡೆಯವುದು. ಅಹಂಕಾರಕ್ಕೆ ಪೆಟ್ಟಾದರೆ ಅಹಂ ಹೋಗುತ್ತದೆ.‌ ಕೇವಲ ಕಾರ ಮಾತ್ರ ಉಳಿಯುತ್ತದೆ. ಯಾರೋ ನೀಡಿದ ವಸ್ತುಗಳನ್ನು ಉಪಯೋಗಿಸುವಾಗ ಹಿಂದೇಟು ಹಾಕುವಿರಿ. ನಿಮ್ಮ ಆಪ್ತರ ಜೊತೆ ಕೆಲವು ಸಂತೋಷದ ಕ್ಷಣಗಳನ್ನು ಕಳೆಯುವಿರಿ.

ಕರ್ಕಾಟಕ ರಾಶಿ:

ನಿಮ್ಮ ಮಾತಿನಿಂದ ಇಂದು ಆಗಬೇಕಾದ ಕೆಲಸವು ಆಗುವುದು. ನವೀನ ಆಲೋಚನೆಗಳು ಮತ್ತು ಸೃಜನಶೀಲತೆಯೊಂದಿಗೆ ಮಾಡಿದ ಕೆಲಸವು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ಇಂದು ನೀವು ಹೆಚ್ಚು ಶೋಕಿ ಮಾಡಲು ಇಷ್ಡಪಡುವಿರಿ. ನಿಮ್ಮ ಬಂಧುಗಳು ಹಣಕಾಸಿನ ಸಹಾಯಕ್ಕಾಗಿ ನಿಮ್ಮನ್ನು ಕೇಳಿಯಾರು. ನೀವು ದೊಡ್ಡ ಅಪಾಯವನ್ನು ತೆಗೆದುಕೊಳ್ಳುವ ಶಕ್ತಿಯನ್ನು ಇಟ್ಟುಕೊಂಡಿಲ್ಲ. ದೂರದಲ್ಲಿ ಇದ್ದರಷ್ಟೇ ಚೆನ್ನ ಎಲ್ಲವೂ ಎನ್ನುವ ಅರಿವು ಬರಬಹುದು.

ಸಿಂಹ ರಾಶಿ:

ಇಂದು ನೀವು ಪಿತ್ರಾರ್ಜಿತ ಆಸ್ತಿಯ ಬಗ್ಗೆ ಆಸಕ್ತಿ ಹೊಂದುವಿರಿ.‌ ನಿಮ್ಮ ಪ್ರಭಾವ ಇಂದು ಯಾವ ಕಾರ್ಯಕ್ಕೂ ಸಹಾಯಮಾಡದು. ಅಧಿಕಾರದ ಬಲಾಬಲವನ್ನು ತಿಳಿದುಕೊಳ್ಳ ವಾಗ್ವಾದವು ಅಧಿಕಾರಿಗಳ ನಡುವೆ ನಡೆಯಬಹುದು. ಪುಸ್ತಕ ಮಾರಾಟ ಮಾಡುವವರಿಗೆ ಲಾಭ. ಸಂಬಂಧಗಳಲ್ಲಿ ತಾಳ್ಮೆಯನ್ನು ಕಾಪಾಡಿಕೊಳ್ಳಿ ನೀವು ಹಿರಿಯರ ಮಾತನ್ನು ಕೇಳಬೇಕು ಮತ್ತು ಅನುಸರಿಸುವದೂ ಮುಖ್ಯ. ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಗೊಂದಲ ಸೃಷ್ಟಿಯಾಗಬಹುದು.

ಕನ್ಯಾ ರಾಶಿ:

ಇಂದು ನೀವು ಅನ್ಯಸ್ಥಳದಲ್ಲಿ ಆಕಸ್ಮಿಕವಾಗಿ ವಾಸಮಾಡಬೇಕಾಗುವುದು. ಎಷ್ಟೇ ಎಚ್ಷರವಿದ್ದರೂ ಪ್ರೀತಿಯಲ್ಲಿ ಬೀಳುವ ಸಾಧ್ಯತೆ ಇದೆ.‌ ನೀವು ಏಕಾಗ್ರತೆಯ ಕೊರತೆಯನ್ನು ಅನುಭವಿಸುವಿರಿ. ಕೆಲಸವು ಮಧ್ಯಂತರವಾಗಿ ಮುಂದುವರಿಯುತ್ತದೆ. ಮಹಿಳೆಯರು ನಿಮ್ಮಿಂದ ಸಹಾಯವನ್ನು ಪಡೆಯುವರು. ವಿದ್ಯಾಭ್ಯಾಸಕ್ಕೆ ಯಾವುದಾರೂ ಅಪ್ರಬುದ್ಧ ವಿವಾದಕ್ಕೆ ಸಿಲುಕಿಕೊಂಡು ಮನಸ್ತಾಪವಾಗುವುದು. ಕಠಿಣ ಪರಿಶ್ರಮಕ್ಕೆ ಸರಿಯಾಗಿ ಯಶಸ್ಸು ಸಿಗುತ್ತದೆ.

ತುಲಾ ರಾಶಿ:

ನೀವು ಹಣಕಾಸಿನ ಮುಗ್ಗಟ್ಟು ಎದುರಿಸಬೇಕಾಗುವುದು. ದೀರ್ಘಕಾಲದ ನೋವನ್ನು ಕಡಿಮೆ ಮಾಡಿಕೊಳ್ಳಲು ಇಂದು ಪ್ರಯತ್ನಿಸುವಿರಿ. ವೈದ್ಯವೃತ್ತಿಯಲ್ಲಿ ತೊಡಗಿದ್ದರೆ ನಿಮಗೆ ಕೆಟ್ಟ ವಾರ್ತೆಯು ಬರಬಹುದು. ಬೇಡವೆಂದರೂ ನಕಾರಾತ್ಮಕ ವಿಚಾರಗಳೇ ನಿಮ್ಮ ಕಿವಿಗಳಿಗೆ ಬರಲಿವೆ. ಅನಿರೀಕ್ಷಿತವಾಗಿ ಮೃಷ್ಟಾನ್ನ ಭೋಜನ ನಿಮಗೆ ಇಂದು ಸಿಗಲಿದೆ. ಭೋಗವಸ್ತುಗಳನ್ನು ಖರೀದಿಸಿ ಹಣವನ್ನು ವ್ಯರ್ಥಮಾಡಿಕೊಳ್ಳದೇ ಅದರ ಪ್ರಯೋಜನ ಪಡೆಯಿರಿ. ಪ್ರಣಯ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ.

ವೃಶ್ಚಿಕ ರಾಶಿ:

ಅಕಾರಣ ಹಾಗೂ ಶೀಘ್ರ ಕೋಪಿಗಳಾಗುವಿರಿ. ನಿಮ್ಮ ಗುರಿಗಳು ಬದಲಾದಷ್ಟೂ ನಿಮ್ಮ‌ ಶ್ರಮವೂ ವ್ಯರ್ಥವಾಗಬಹುದು. ಸಂಗಾತಿಯ ಜೊತೆ ಹೆಚ್ಚು ಕಾಲ ಕಳೆಯುವ ಮನಸ್ಸಿದ್ದರೂ ಆತ್ಮೀಯತೆಯು ನಿಮ್ಮ ನಿಲುವನ್ನು ಬದಲಿಸಬಹುದು. ನಿಮ್ಮನ್ನು ನಿಮ್ಮವರಿಗೆ ಪರಿಚಯ ಮಾಡಿಕೊಡುವ ಸನ್ನಿವೇಶ ಬರಬಹುದು. ಹಿರಿಯರ ಎದುರು ಮಾತನಾಡಲು ನೀವು ಹೆದರುವಿರಿ. ಆತ್ಮವಿಶ್ವಾಸವು ಇದ್ದರೂ ಅದನ್ನು ಸರಿಯಾಗಿ ಬಳಸಿಕೊಳ್ಳಲು ಆಗದು.

ಧನು ರಾಶಿ:

ಇಂದು ನಿಮ್ಮ ಸುತ್ತಲು ವಿರೋಧಿಗಳು ಹೊಂಚು ಹಾಕಿ ನಿಮ್ಮ ಅವನತಿಯನ್ನುವ ಕಾಯುತ್ತಿರಬಹುದು. ನಿಮಗೆ ಬಂದ ಕಾರ್ಯಗಳನ್ನು ನೀವೇ ಮಾಡಿ. ಮಕ್ಕಳ‌‌ ಮೇಲೆ ನಿಮಗೆ ಬೇಸರ ಉಂಟಾಗಬಹುದು. ತಾಳ್ಮೆಯನ್ನು ಕಳೆದುಕೊಳ್ಳುವ ಸ್ಥಿತಿಯು ಎದುರಾಗಬಹುದು. ವಾಹನದಿಂದ ಅಲ್ಪ ಸಂಪಾದನೆಯಾಗುವುದು. ವಾಹನದಿಂದ ಲಾಭವನ್ನು ಪಡತುವಿರಿ. ಅತಿಯಾದ ವೇಗ ಬೇಡ. ಹಣಕಾಸಿಗೆ ಸಂಬಂಧಿಸಿದ ವೃತ್ತಿಯಲ್ಲಿ ಒತ್ತಡ ಕಾಣಿಸುವುದು.

ಮಕರ ರಾಶಿ:

ನೋವಿನ ಈ ದಿನವನ್ನು ಕಳೆಯಲು ನಿಮಗೆ ಕಷ್ಟವಾಗುವುದು. ಹೊಸ ಆರ್ಥಿಕ ವ್ಯವಹಾರಗಳನ್ನು ಇಂದು ನೀವು ಮಾಡಿರಿ. ನೀವು ಇಂದು ನಂಬಿಕೆಯನ್ನು ಸುಳ್ಳು ಮಾಡುವಿರಿ. ನಿಮ್ಮ ಪ್ರಾಬಲ್ಯವೇ ಮೇಲಾದೀತು. ನೂತನ ವಸ್ತುಗಳ ಖರೀದಿಗೆ ಹಣವು ಖರ್ಚಾದೀತು. ನೀವು ಎಲ್ಲರ ಜೊತೆ ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ಕಷ್ಡವಾಗಬಹುದು. ನೀವು ಇಂದು ಅನಿರೀಕ್ಷಿತವಾಗಿ ಆರ್ಥಿಕ ಲಾಭವನ್ನು ಪಡೆಯಬಹುದು.

ಕುಂಭ ರಾಶಿ:

ನೀವು ಉತ್ತಮ ಸ್ನೇಹಿತರ ಬಳಗವನ್ನು ಹೊಂದಿರುವಿರಿ. ವೃತ್ತಿ ಜೀವನದಲ್ಲಿ ಪರಿಚಯಗಳು ಹೆಚ್ಚಾಗುತ್ತವೆ. ಅತಿಥಿಗಳ ಆಗಮನದಿಂದ ಮನೆಯಲ್ಲಿ ಆಹ್ಲಾದಕರ ವಾತಾವರಣವಿರುತ್ತದೆ. ಪರರ ಮೇಲೆ ಪಶ್ಚಾತ್ತಾಪ ಭಾವ ಬರುವುದು. ಬಹಳ ದಿನಗಳಿಂದ ನಿಂತ‌ ಕಾರ್ಯಕ್ಕೆ ಚಾಲನೆ‌ ಸಿಗಲಿದೆ. ವಿವಾಹದ ಮಾತುಕತೆ ವಿಳಂಬವಾಗಿ‌ ನಿಮಗೆ ಬೇಸರ ತರಿಸಬಹುದು. ನಿಮ್ಮ ಆದಾಯದ ಜೊತೆಗೆ ನಿಮ್ಮ ಖರ್ಚುಗಳೂ ಹೆಚ್ಚಾಗುತ್ತವೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ವೃದ್ಧಿಸಲು ತುಂಬಾ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ.

ಮೀನ ರಾಶಿ:

ಸಹೋದರರ ನಡುವೆ ಮನೆಯ ವಿಚಾರದಲ್ಲಿ ಭಿನ್ನಾಭಿಪ್ರಾಯ ಬರಬಹುದು. ತೀರ್ಥಯಾತ್ರೆಯಲ್ಲಿ ಅನಿರೀಕ್ಷಿತನೀವು ಇಂದು ಸಂಪನ್ಮೂಲ‌ ವ್ಯಕ್ತಿಳಾಗಿ ನೀವು ಇರುವಿರಿ. ಇಷ್ಟವಾದ ವಸ್ತುಗಳ ಖರೀದಿಯಲ್ಲಿ ಆಸಕ್ತಿ ಅಧಿಕವಾಗುವುದು. ಸಮಯಕ್ಕೆ ನೀವು ಹೆಚ್ಚು ಮಹತ್ತ್ವವನ್ನು ಕೊಡಬಹುದು. ವಿಶೇಷ ವ್ಯಕ್ತಿಯ ಬಗ್ಗೆ ಒಂಟಿ ಜನರ ಆಸಕ್ತಿ ಹೆಚ್ಚಾಗುತ್ತದೆ. ಇಂದು ನಿಮ್ಮ ಭಾವನೆಗಳನ್ನು ನಿಮ್ಮ ಪ್ರೇಮಿಗೆ ಮುಕ್ತವಾಗಿ ವ್ಯಕ್ತಪಡಿಸಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಆಶ್ಲೇಷಾ, ವಾರ : ಶುಕ್ರ, ಪಕ್ಷ : ಕೃಷ್ಣ, ತಿಥಿ : ನವಮೀ, ನಿತ್ಯನಕ್ಷತ್ರ : ರೋಹಿಣೀ, ಯೋಗ : ವ್ಯಾಘಾತ, ಕರಣ : ವಣಿಜ, ಸೂರ್ಯೋದಯ – 06 – 07 am, ಸೂರ್ಯಾಸ್ತ – 06 – 43 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:51 – 12:25, ಯಮಗಂಡ ಕಾಲ 15:34 – 17:09, ಗುಳಿಕ ಕಾಲ 07:42 – 09:16

-ಲೋಹಿತ್ ಹೆಬ್ಬಾರ್-8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us