
ಆಹಾರದ ಉದ್ಯಮಕ್ಕೆ ಹೊಸ ತಿರುವು ಕೊಡಬಹುದು. ಅತ್ಯಂತ ಶ್ರಮವಹಿಸಿ ಕಾರ್ಯವನ್ನು ಮಾಡಲಿದ್ದೀರಿ. ಸಕಾರಾತ್ಮಕ ಚಿಂತನೆಗಳನ್ನು ಪ್ರಯತ್ನಪೂರ್ವಕವಾಗಿ ತಂದುಕೊಳ್ಳಬೇಕಿದೆ. ಸಂಗಾತಿಯನ್ನು ಬಿಟ್ಟಿರುವುದು ಬೇಸರ ತರಿಸಬಹುದು. ಇಂದು ತಿಳಿದು ಕೂಗಾಡಬಹುದು. ವಯೋಮಾನಕ್ಕೆ ಸಹಜವಾದ ಖಾಯಿಲೆಯಿಂದ ಕೊರಗುವಿರಿ. ನೀವು ಇಂದು ಅಸಹಾಯಕರಂತೆ ತೋರುವಿರಿ. ಉಪದೇಶ ನೀಡುವ ಬದಲು ಆಚರಿಸಿದರೆ ಉತ್ತಮ.
ಅಚಾತುರ್ಯದಿಂದ ಅನಾಹುತ ಮಾಡಿಕೊಳ್ಳುವಿರಿ. ಆಲಸ್ಯದಿಂದ ಮೇಲೆಳಬೇಕಾದ ಸ್ಥಿತಿ ಇದೆ. ಮನೆಯಲ್ಲಿ ನಿಮಗಾಗಿ ತರದ ವಸ್ತುಗಳನ್ನು ಇಷ್ಟಪಟ್ಟು ಪಡೆಯುವಿರಿ. ನಿಮ್ಮ ವಿಚಾರದಲ್ಲಿ ಬೇರೆಯವರು ಮಧ್ಯಪ್ರವೇಶ ಮಾಡುವರು. ಇದು ನಿಮಗೆ ಬಹಳ ಸಿಟ್ಟನ್ನು ತರಿಸೀತು. ಅದನ್ನು ವ್ಯಕ್ತಪಡಿಸಲು ನೀವು ಸೂಕ್ತ ಸಂದರ್ಭವನ್ನು ಹುಡುಕುವಿರಿ. ಕಳೆದುಕೊಂಡ ಸಂಬಂದವು ಮತ್ತೆ ಚಿಗುರಬಹುದು. ವ್ಯಾಪಾರಸ್ಥರಿಗೆ ಸ್ವಲ್ಪ ಆಲಸ್ಯವು ಇರುವುದು.
ತಂತ್ರಜ್ಞರಿಗೆ ಉತ್ತಮ ಕೆಲಸ ಸಿಗಲಿದೆ. ಭೋಗವಸ್ತುವಿನ ಜೊತೆ ಹೆಚ್ಚು ಕಾಲಕಳೆಯಲು ಬಯಸುವಿರಿ. ಬಂಧುಗಳ ಒಡನಾಟ ಹೆಚ್ಚಾಗುವುದು. ನಿಮ್ಮ ಗುರಿಯ ಬಗ್ಗೆ ಬಲ್ಲವರು ತಿಳಿಸಬಹುದು. ಮನಸ್ಸು ಉದ್ವೇಗಕ್ಕೆ ಒಳಗಾಗಿ ಏನನ್ನಾದರೂ ಹೇಳಿಬಿಡಬಹುದು. ದೈವಿಕ ವಿಘ್ನಗಳಿಗೆ ಅಲೌಕಿಕ ಉಪಾಯದಿಂದ ಪರಿಹಾರ ಸಾಧ್ಯವಾಗಲಿದೆ. ಒಂದೇ ಕೆಲಸದಿಂದ ಎರಡು ಪ್ರಯೋಜನವನ್ನು ಪಡೆಯುವಿರಿ. ಭೂಮಿಯ ವ್ಯವಹಾರವು ಸುಲಭಕ್ಕೆ ಕೈ ಹಿಡಿಯದು.
ಹಣವನ್ನು ಗಳಿಸುವ ಹಂಬಲವು ಅತಿಯಾಗಿದ್ದರೂ ದಾರಿಗಳು ಮಾತ್ರ ಕಾಣಿಸದೇ ಇದ್ದೀತು. ಮರಣಭೀತಿಯು ನಿಮ್ಮನ್ನು ಕಾಡಬಹುದು. ಕೆಟ್ಟ ಆಲೋಚನೆಗಳನ್ನು ಬಿಟ್ಟು ಸರಿಯಾದುದರ ಬಗ್ಗೆ ಗಮನವಿರಲಿ. ಅಲ್ಪಾದಾಯದಲ್ಲಿ ತೃಪ್ತಿಪಡುವಿರಿ. ಕುಟುಂಬದಿಂದ ನಿಮ್ಮ ಬಗ್ಗೆ ಮಹತ್ತರವಾದ ಬದಲಾವಣೆ ಕಾಣಿಸುವುದು. ಸಂಗಾತಿಯ ಆಯ್ಕೆಯನ್ನು ಸರಿಯಾಗಿ ಮಾಡಿಕೊಳ್ಳಿ. ಮಕ್ಕಳು ನಿಮ್ಮ ಕೆಲಸಕ್ಕೆ ತೊಂದರೆ ಕೊಡಬಹುದು.
ಪರಾವಲಂಬನೆಯನ್ನು ಇಂದು ಕಡಿಮೆಮಾಡುವಿರಿ. ಉನ್ನತ ವಿದ್ಯಾಭ್ಯಾಸವು ಕಷ್ಟವೆನಿಸಬಹುದು. ತುಂಬಾ ಕಷ್ಟದಿಂದ ಗಳಿಸಿದ ಹಣವನ್ನು ಖರ್ಚುಮಾಡಲು ಮನಸ್ಸುಬಾರದು. ಹೊರಗಡೆ ಸುತ್ತಾಡಲು ಹೋಗಬಹುದು. ಅಪರಿಚಿತ ಸ್ಥಳದಲ್ಲಿಯೂ ಪರಿಚಿತರ ಭೇಟಿಯಾಗಲಿದೆ. ಇನ್ನೊಬ್ಬರನ್ನು ಅನುಕರಿಸುವ ನಿಮ್ಮ ಸ್ವಭಾವವನ್ನು ಬಿಡುವುದು ಒಳ್ಳೆಯದು. ಕೆಲವು ವಿಚಾರದಲ್ಲಿ ಧೈರ್ಯದ ಕೊರೆತೆ ಕಾಣುವುದು. ನೂತನ ಸ್ನೇಹವನ್ನು ಬೆಳೆಸಿಕೊಳ್ಳುವಿರಿ.
ಗೃಹೋಪಯೋಗಿ ವ್ಯಾಪಾರದಲ್ಲಿ ಮಂದಗತಿ ಇರಲಿದೆ. ಯಂತ್ರೋಪಕರಣದ ಮಾರಾಟಗಾರಿಗೆ ಲಾಭವು ಆಗುವುದು. ಕೆಲಸದ ಸ್ಥಳದಲ್ಲಿ ಎಲ್ಲರೂ ನಿಮ್ಮ ಹಿಡಿತದಲ್ಲಿ ಇರಬೇಕು ಎನ್ನುವ ಮಾನಸಿಕ ಸ್ಥಿತಿಯನ್ನು ಬೆಳೆಸಿಕೊಳ್ಳುವಿರಿ. ಸಂಗಾತಿಯ ಜೊತೆ ಮಾತನಾಡಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ನಿಮ್ಮ ವಿದ್ಯಾಪ್ರಗತಿಯು ಬಹಳ ಯಶಸ್ವಿಯಾಗುವುದು. ನಿಮ್ಮಲ್ಲಿರುವ ಅಲ್ಪ ಹಣವನ್ನು ಸೇರಿಸಿ ಕೊಡಬೇಕಾದವರಿಗೆ ಹಣವನ್ನು ಕೊಡುವಿರಿ.
ಸಹನೆಯನ್ನು ಕಳೆದುಕೊಳ್ಳುವ ಸಂದರ್ಭದಲ್ಲಿ ನಿಮಗೆ ಎಚ್ಚರಿಕೆ ಇರಲಿ. ಬಹಳ ಆಯಾಸವಾದಂತೆ ಎನಿಸಬಹುದು. ನಿನ್ನೆಯ ಸುಸ್ತಿನಿಂದ ಹೊರಬರಲು ವಿಶ್ರಾಂತಿ ಪಡೆಯುವಿರಿ. ಮಂಗಲಕರವಾದ ಕಾರ್ಯವನ್ನು ಆರಂಭ ಮಾಡಲು ಪ್ರಶಸ್ತ ದಿನ ಎನಿಸುವುದು. ಒಂದೇ ಕೆಲಸದಲ್ಲಿ ಮಗ್ನರಾಗಿ ಮಾಡಬೇಕಾದ ಕೆಲವು ಕೆಲಸವನ್ನು ಮರೆಯುವಿರಿ. ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗಬೇಕು ಎಂದು ಅನ್ನಿಸಬಹುದು.
ಈಗಿರುವ ಕೆಲಸವನ್ನು ಬಿಟ್ಟು ಸ್ವಂತ ಉದ್ಯೋಗಕ್ಕೆ ಮನಸ್ಸು ಒತ್ತಾಯ ಮಾಡುವುದು. ಅತಿಯಾಗಿ ದೇಹವನ್ನು ದಂಡಿಸಬೇಡಿ. ಹಣವಿದ್ದರೂ ವಾಹನವನ್ನು ಕೊಳ್ಳುವ ಯೋಗ ದೂರವಿದೆ. ವಸ್ತುಗಳ ಕಳ್ಳತನವಾಗಬಹುದು. ಇದೇ ವಿಚಾರಕ್ಕೆ ಮನೆಯಲ್ಲಿ ಕಲಹವಾದೀತು. ವೈಯಕ್ತಿಕ ವಿಚಾರಕ್ಕೆ ಯಾರನ್ನೂ ಸೇರಿಸಿಕೊಳ್ಳಲು ಬಯಸುವುದಿಲ್ಲ. ಯಾರನ್ನಾದರೂ ಗೆಳೆಯರನ್ನಾಗಿ ಮಾಡಿಕೊಳ್ಳುವಿರಿ. ಆದಾಯಕ್ಕೆ ಯಾರಿಂದಲಾದರೂ ಅಡ್ಡಿಯಾಗಿ, ಸಿಟ್ಟುಗೊಳ್ಳುವಿರಿ.
ಆಸ್ತಿಯ ವಿಚಾರದಲ್ಲಿ ನಿಮಗೆ ಅಕ್ಕಪಕ್ಕದವರ ಜೊತೆ ಅಸಮಾಧಾನ ವ್ಯಕ್ತವಾಗುವುದು. ಸಂಗಾತಿಯ ಜೊತೆ ಸಂತೋಷ ಕೂಟದಲ್ಲಿ ಭಾಗವಹಿಸುವಿರಿ. ಸ್ನೇಹಿತರಿಂದ ಹಣವನ್ನು ಸಾಲವಾಗಿಯೂ ಒಡೆಯಬಹುದು. ಸುವ್ಯವಸ್ಥಿತ ಭವಿಷ್ಯದ ಕನಸು ಕಾಣುವಿರಿ. ಅಸ್ಥಿರವಾದ ವ್ಯವಸ್ಥೆಯು ಕಿರಿಕಿರಿಯನ್ನು ಉಂಟುಮಾಡಬಹುದು. ಸಂಗಾತಿಯ ಆಯ್ಕೆಯಲ್ಲಿ ನಿಮಗೆ ಅನೇಕ ಗೊಂದಲಗಳು ಬರುವುದು.
ನಿಮ್ಮ ಸಂತೋಷ ಅನ್ಯರ ಹಸ್ತದಲ್ಲಿ ಇಲ್ಲ ಎಂಬುದು ಗೊತ್ತಾಗಲಿ. ಕುಟುಂಬದವರ ಮಾತಿನ ಅಲಕ್ಷ್ಯದಿಂದ ನಿಮಗೆ ಸಮಸ್ಯೆಯಾದೀತು. ಹಿರಿಯರಿಗೆ ತೊಂದರೆಯನ್ನು ಕೊಡಲು ಹೋಗಬೇಡಿ. ಇಂದು ನಿಮ್ಮ ಭಾರ ಇಳಿಯಿತು ಎಂಬ ಹರ್ಷೋದ್ಗಾರ ಬೇಡ. ಮತ್ತೊಂದು ನಿಮ್ಮ ಹೆಗಲೇರುವ ಸಾಧ್ಯತೆ ಇದೆ. ನೀವು ಬಯಸಿದ ವಸ್ತುವು ಅನಾಯಾಸವಾಗಿ ದೊರೆಯುವುದು. ಒಬ್ಬರೇ ಎಲ್ಲಿಯಾದರೂ ಸುತ್ತಾಟ ಮಾಡಬಹುದು. ಅನವಶ್ಯಕವಾದ ಚಿಂತನೆಯಿಂದ ಆತ್ಮವಿಶ್ವಾಸವನ್ನು ನೀವೇ ಹಾಳುಮಾಡಿಕೊಳ್ಳುವಿರಿ.
ದುಃಖದಿಂದ ಇದ್ದವರಿಗೆ ಆಪ್ತರ ಜೊತೆ ಮಾತುಕತೆಗಳು ಆಗಬಹುದು. ಬಯಕೆಯನ್ನು ಬಹಳ ಬಲವಾಗಿ ಹಿಡಿದಿಟ್ಟುಕೊಳ್ಳುವಿರಿ. ತೊಂದರೆಯನ್ನು ತೆಗೆದುಕೊಳ್ಳದೇ ಕೆಲಸವನ್ನು ಮುಗಿಸುವ ಮಾನಸಿಕ ಸ್ಥಿತಿಯನ್ನು ಹೊಂದಿದ್ದೀರಿ. ಇಂದು ನಿಮ್ಮ ಪರೀಕ್ಷೆಯ ಕಾಲವಾಗಿದ್ದು ಸ್ಥೈರ್ಯವು ಕಡಿಮೆ ಆಗುವುದು. ಸೌಂದರ್ಯಕ್ಕೆ ಹೆಚ್ಚು ಒತ್ತು ಕೊಡಬಹುದು. ಯಾವುದೇ ಪ್ರಭಾವಕ್ಕೆ ಒಳಗಾಗದೆ ಸ್ವಂತ ನಿರ್ಧಾರಕ್ಕೆ ಬದ್ಧರಾಗುವಿರಿ.
ಕಡಿಮೆ ವೆಚ್ಚದಲ್ಲಿ ಹೆಚ್ಚು ಸಂಪಾದಿಸುವ ಯೋಜನೆಯನ್ನು ಹಾಕಿಕೊಳ್ಳುವುದಕ್ಕೆ ಎಲ್ಲಿಂದಲಾದರೂ ನಿಮಗೆ ಐಡಿಯಾ ಸಿಗಬಹುದು. ಬೇಡದ ಯೋಚನೆಗಳೇ ನಿಮ್ಮ ತಲೆಯಲ್ಲಿ ಸುತ್ತಬಹುದು. ನಿಮ್ಮದೇ ಮನಸ್ಸಾದರೂ ನಿಮ್ಮ ಮಾತನ್ನು ಕೇಳದೇ ಇದ್ದೀತು. ನೀವು ಅಂದು ಕೊಂಡ ವಿಚಾರಗಳು ನಿಮ್ಮಿಂದ ಆಗಿಲ್ಲ ಎಂಬ ಬೇಸರವು ಉಂಟಾದೀತು. ಪ್ರೀತಿಪಾತ್ರರಿಗೆ ಸಮಯ ವ್ಯರ್ಥ ಮಾಡುವಿರಿ. ನಿಮ್ಮ ಪ್ರೇಮವು ಇಂದು ಯಾರಿಂದಲೋ ಬಹಿರಂಗವಾಗುವುದು.
ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಪುಷ್ಯಾ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ವೈಧೃತಿ, ಕರಣ : ಬವ, ಸೂರ್ಯೋದಯ – 06 – 04 am, ಸೂರ್ಯಾಸ್ತ – 06 – 47 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:15 – 10:15, ಯಮಗಂಡ ಕಾಲ 14:15 – 15:37 ಗುಳಿಕ ಕಾಲ 06:05 – 07:40
– ಲೋಹಿತ್ ಹೆಬ್ಬಾರ್-8762924271 (what’s app only)
ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ