ದಿನ ಭವಿಷ್ಯ: ಇಂದು ಈ ರಾಶಿಯವರು ಅನ್ಯಾಯಕ್ಕೆ ಒಳಗಾಗುವರು
Horoscope Today July 26: ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಗ್ರೀಷ್ಮ ಋತುವಿನ ಆಷಾಢ ಮಾಸದ ಶುಕ್ಲ ಪಕ್ಷದ ದ್ವಾದಶೀ ತಿಥಿಯ ಭಾನುವಾರದಂದು ಬಯಕೆಯ ಪೂರೈಕೆ, ಕಲಾವಿದರಿಗೆ ಸಮ್ಮಾನ, ಸಲ್ಪ ಸಂಪತ್ತಿನ ದಾನ, ಹಿತವನ್ನು ಆಲಿಸುವುದು, ಮಾನಸಿಕ ಅಸ್ಥಿರತೆ ಇವೆಲ್ಲ ಇಂದಿನ ವಿಶೇಷ.

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಪುಷ್ಯಾ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಮೂಲಾ, ಯೋಗ : ವಿಷ್ಕಂಭ, ಕರಣ : ಕೌಲವ, ಸೂರ್ಯೋದಯ – 06 – 05 am, ಸೂರ್ಯಾಸ್ತ – 06 – 47 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:12 – 18:47, ಯಮಗಂಡ ಕಾಲ 12:26 – 14:01, ಗುಳಿಕ ಕಾಲ 15:37 – 17:12
ಮೇಷ ರಾಶಿ: ಇಂದು ನಿಮ್ಮ ಅನಪೇಕ್ಷಿತ ಹಸ್ತಕ್ಷೇಪದಿಂದಾ ಲಾಭದ ಹಾದಿಯ ಮೇಲೆ ವಿಪರೀತ ಪರಿಣಾಮ ಉಂಟಾಗಬಹುದು. ಎಲ್ಲವನ್ನೂ ನೀವು ನಿಭಾಯಿಸಲು ಸಾಧ್ಯವಾಗದು. ಎಷ್ಟೋ ದಿನಗಳಿಂದ ಅನುಭವಿಸಬೇಕಾದುದನ್ನು ನೀವು ಇಂದು ಅನುಭವಿಸುವಿರಿ. ಇಂದು ಬರುವ ಒಳ್ಳೆಯ ಸುದ್ದಿಯು ನಿಮ್ಮ ಉತ್ಸಾಹವನ್ನು ಇಮ್ಮಡಿಗೊಳಿಸೀತು. ನಿಮ್ಮ ಮಾತೇ ನಿಮಗೆ ಮುಳುವಾಗಬಹುದು. ನಿಮಗೆ ಬೇಕಾದ ಯಾವುದನ್ನೂ ಇಂದು ಸುಲಭವಾಗಿ ಪಡೆಯಲಾಗದು.
ವೃಷಭ ರಾಶಿ: ಮಹಿಳೆಯರಿಂದ ನಿಮಗೆ ವಿರೋಧವು ಬರಬಹುದು. ಇಂದು ನಿಮ್ಮ ಆರ್ಥಿಕ ಮತ್ತು ಕೌಟುಂಬಿಕ ತೊಂದರೆಗಳು ನಿಮ್ಮನ್ನು ಮತ್ತಷ್ಟು ಒತ್ತಡಕ್ಕೆ ಒಯ್ಯಬಹುದು. ದುರದೃಷ್ಟವನ್ನು ದಾನದಿಂದ ತೊಳೆದುಕೊಳ್ಳುವ ದಾರಿಯು ಗೊತ್ತಾಗಲಿದೆ. ಇಂದು ನಿಮಗೆ ಬಂಧನದಂತೆ ಅನ್ನಿಸಬಹುದು. ಅಪಮಾನದ ಭಯದಿಂದ ಕೆಲಸ ಮಾಡುವಿರಿ. ಒಳ್ಳೆಯ ಸುದ್ದಿಯ ನಿರೀಕ್ಷೆಯಲ್ಲಿ ನೀವಿರುವಿರಿ.ಯಾರ ಮಾತನ್ನೂ ನಿರ್ಲಕ್ಷ್ಯ ಮಾಡಬೇಡಿ. ಇನ್ನೊಬ್ಬರನ್ನು ನೋವನ್ನು ನೀವು ಅರ್ಥ ಮಾಡಿಕೊಳ್ಳದೇ ವ್ಯವಹತಿಸುವಿರಿ.
ಮಿಥುನ ರಾಶಿ: ಮನೆಯಲ್ಲಿ ಮಾಡಲಾಗದೇ ಮುಂದೂಡಿದ್ದ ಧಾರ್ಮಿಕ ಕಾರ್ಯಗಳು ನಡೆಯಲಿವೆ. ಈ ದಿನ ನಿಮ್ಮ ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಬರುವ ಸಾಧ್ಯತೆ ಇದೆ. ದೂರಾಲೋಚನೆಯಿಂದ ನಿಮ್ಮ ಮೇಲಿನ ಗೌರವ ಹಾಗು ಪ್ರೀತಿಯು ಇರುವುದರಿಂದ ಅಲ್ಲಿಯೇ ಅದು ಮುಕ್ತಾಯವಾಗಬಹುದು. ಅನವಶ್ಯಕ ಮಾತುಗಳಿಗೆ ಅವಕಾಶ ಮಾಡಿಕೊಡವುದು ಬೇಡ. ಉದ್ಯಮವನ್ನು ನಡೆಸಲು ಇನ್ನೊಬ್ಬರ ಜೊತೆ ಸೇರಿಕೊಳ್ಳುವಿರಿ.
ಕರ್ಕಾಟಕ ರಾಶಿ: ಮಾತನ್ನು ಆಡುವಾಗ ಪದಗಳ ಮೇಲೆ ಗಮನವಿರಲಿ. ದಿನ ನೀವು ಕಠಿಣ ಪರಿಶ್ರಮದ ಅನಂತರ ಅಂದುಕೊಂಡಿದ್ದನ್ನು ಅಲ್ಪವಾದರೂ ಸಾಧಿಸುವಿರಿ. ನೀವು ಇಂದು ಸುಳ್ಳನ್ನಾಡಬೇಕಾಗಿ ಬರವುದು. ಅಶಿಸ್ತಿನಿಂದ ನಿಮಗೆ ಕೋಪ ಬರಲಿದ್ದು ಮನೆಯವರ ಮೇಲೆ ತೋರಿಸುವಿರಿ. ಇಂದಿನ ಘಟನೆಗಳು ಮಾನಸಿಕವಾಗಿ ಕಿರಿಕಿರಿಯನ್ನು ಮಾಡುತ್ತವೆ. ಸಹವಾಸದಿಂದ ದುರಭ್ಯಾಸವನ್ನು ಬೆಳೆಸಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಅಸಮತೋಲನ ಕಾಣಿಸಿಕೊಳ್ಳುವುದು.
ಸಿಂಹ ರಾಶಿ: ಸಿಕ್ಕ ಉದ್ಯೋಗವು ಮುಂದೆ ಅನೇಕ ಲಾಭವನ್ನು ಮಾಡಿ ಕೊಡಲಿದೆ. ಈ ದಿನ ನೀವು ಶುಭ ಕಾರ್ಯಗಳಲ್ಲಿ ಉತ್ಸಾಹದಿಂದ ಭಾಗವಹಿಸುವಿರಿ. ಯೋಗ್ಯತೆಯನ್ನು ಅರಿತು ಕೆಲವನ್ನು ಕೊಡಿ. ಆಹಾರದಿಂದ ನಿಮ್ಮ ಆರೋಗ್ಯವನ್ನು ಉತ್ತಮವಾಗಿಸಿಕೊಳ್ಳುವಿರಿ. ಪ್ರೇಮದಲ್ಲಿ ಸಂದೇಹಕ್ಕೆ ಆಸ್ಪದ ಕೊಡುವುದು ಬೇಡ. ಸ್ವಾಮಿನಿಷ್ಠೆಯನ್ನು ಇಟ್ಟುಕೊಂಡವರಿಗೆ ಆದ್ಯತೆ ಸಿಗಲಿದೆ. ಕುಟುಂಬದವರ ಜೊತೆ ನಿಮ್ಮ ಸಮಯವನ್ನು ನೀಡಿ. ಉದ್ಯೋಗದ ಸ್ಥಳವು ಇಂದು ನಿಮಗೆ ಖುಷಿಯ ಸ್ಥಳ.
ಕನ್ಯಾ ರಾಶಿ: ವಿನಾಕಾರಣ ವಾಗ್ವಾದವನ್ನು ಮಾಡಿಕೊಳ್ಳುವಿರಿ. ಭೂಮಿಯ ವ್ಯವಹಾರದಲ್ಲಿ ನೀವು ಹಣವನ್ನು ಸಂಪಾದಿಸಲಿದ್ದೀರಿ. ನೀವು ಈ ದಿನ ಕೆಲಸದ ಸ್ಥಳದಲ್ಲಿ ಕೊಪವನ್ನು ಮಾಡಿಕೊಳ್ಳದಿರುವುದು ಒಳ್ಳೆಯದು. ವೈದ್ಯಕೀಯ ವೃತ್ತಿಯಲ್ಲಿ ಪ್ರಗತಿಯನ್ನು ಸಾಧಿಸುವ ಯೋಜನೆ ಇರುವುದು. ಹಣಕಾಸಿನ ವಿಚಾರದಲ್ಲಿ ನೀವು ದಂಡ ತೆರಬೇಕಾದೀತು. ಪ್ರಯಾಣದಲ್ಲಿ ಕೆಲವು ಕಾಲ ತಡೆಯುಂಟಾಗಲಿದ್ದ ಗಲಿಬಿಲಿಗೊಳ್ಳುವಿರಿ. ಅಪರಿಚಿತರ ಮಾತನ್ನು ಕೇಳಿ ಎಲ್ಲ ಕಾರ್ಯವನ್ನೂ ಹಾಳುಮಾಡಿಕೊಳ್ಳುವಿರಿ.
ತುಲಾ ರಾಶಿ: ನಿಮ್ಮ ದಾಂಪತ್ಯದಲ್ಲಿ ಹೆಚ್ಚಿನ ಸುಖವು ಸಿಗುವ ಸೂಚನೆ ಇರುವುದು. ಕೆಲಸಗಳನ್ನು ಬಹಳ ಸಂಕೀರ್ಣ ಮಾಡಿಕೊಳ್ಳುವಿರಿ. ಸರಳವಾದ ಆಲೋಚನೆಯಿಂದ ನಿಮ್ಮ ಕೆಲಸಗಳು ಸಲೀಸಾಗಬಹುದು. ಅಂಗೈ ಗಾಯಕ್ಕೆ ಕನ್ನಡಿ ನೋಡುವ ಅವಶ್ಯಕತೆ ಇಲ್ಲ. ಬೇಕಾದುದನ್ನು ಅವರಿಗೆ ನೀಡಿ ಖುಷಿಪಡಿಸುವಿರಿ. ಭಕ್ತಿಯಲ್ಲಿ ಏಕಾಗ್ರತೆಯನ್ನು ಸಾಧಿಸಲಾಗದು. ನಿಮ್ಮಿಂದ ಪಾಲಕರಿಗೆ ತೊಂದರೆಯಾಗುವುದು.
ವೃಶ್ಚಿಕ ರಾಶಿ: ಇಂದು ನಿಮ್ಮ ಬಲವಂತದ ಪ್ರೇಮ ತಪ್ಪಿಹೋಗುವುದು. ನಿಮಗೆ ಇಷ್ಟವಾದವರ ಜೊತೆ ನಿಮ್ಮ ವಾಯವಿಹಾರ ಮಾಡುವಿರಿ. ಇಂದು ಬಾಯಿ ಚಪಲಕ್ಕೆ ಅಹಿತಕರವಾದ ಆಹಾರವನ್ನು ಸೇವಿಸುವಿರಿ. ನಿಮ್ಮ ಎಲ್ಲ ಕೆಲಸಗಳೂ ಸಮಯಕ್ಕೆ ಸರಿಯಾಗಿ ಮುಗಿಸಿಕೊಂಡು ಕುಳಿತುಕೊಳ್ಳುವಿರಿ. ಒಳ್ಳೆಯ ಉದ್ದೇಶಕ್ಕೆ ಮಾಡಿದ ಕಾರ್ಯವು ದುರುಪಯೋಗವಾಗಲಿದೆ. ಹಳೆಯ ಮನೆಯ ರಿಪೇರಿ ಕೆಲಸ ಮಾಡುವಿರಿ. ನೂತನ ಉದ್ಯೋಗವನ್ನು ಆರಂಭಿಸಲು ಭಯವಿರುವುದು.
ಧನು ರಾಶಿ: ಇಂದು ವಿದ್ಯಾರ್ಥಿಗಳಿಗೆ ತಾಯಿಯಿಂದ ತಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವರು. ಅಧರ್ಮ ಮಾರ್ಗದಲ್ಲಿ ಹೋಗಲು ಯಾರದರೂ ಪ್ರೇರಣೆ ಕೊಡಬಹುದು. ಈ ದಿನ ನಿಮಗೆ ವಾಹನ ಮತ್ತು ವಸತಿಗೆ ಸಂಬಂಧಿಸಿದ ಸಮಸ್ಯೆಗಳು ಉಂಟಾಗಬಹುದು. ಉನ್ನತ ವಿದ್ಯಾಭ್ಯಾಸಕ್ಕೆ ನಿಮ್ಮವರು ಸಲಹೆ ಕೊಡಬಹುದು. ನಿಮ್ಮ ಹಣವನ್ನು ಪರಿಚಿತರು ಕೇಳಬಹುದು. ನಿಮ್ಮ ಸೌಂದರ್ಯ ನಿಮಗೆ ತೊಂದರೆ ಕೊಡಬಹುದು.
ಮಕರ ರಾಶಿ: ಇಂದು ನೀವು ಕೆಲಸವು ಬೇಕಷ್ಟು ಇದ್ದರೂ ಸುಮ್ಮನೆ ಸ್ವಲ್ಪ ಹೊತ್ತು ಕುಳಿತುಕೊಳ್ಳಿ. ಮನಸ್ಸು ಶಾಂತವಾಗುವುದು. ಇಂದು ನೀವು ಧೈರ್ಯವನ್ನು ಕಳೆದುಕೊಳ್ಳದೇ ಮುನ್ನಡೆಯಿರಿ. ಕೆಲವು ನಷ್ಟಗಳು ನಿಮ್ಮ ಮನಸ್ಸಿನ ಮೇಲೆ ವಿಪರೀತ ಪರಿಣಾಮವನ್ನು ಉಂಟುಮಾಡದು. ಹಣಕಾಸಿನ ವಿಚಾರದಲ್ಲಿ ಕಛೇರಿಯಲ್ಲಿ ಕಲಹವಾದೀತು. ದಾಖಲೆಗಳನ್ನು ಸರಿಯಾಗಿ ಇಡಿ. ಸಂಗಾತಿಯ ಮಾತು ಸಂಕಟವನ್ನು ತರಬಹುದು. ತುರ್ತು ಪ್ರಯಾಣವನ್ನು ಒಪ್ಪದೇ ಮುಂದೂಡುವಿರಿ.
ಕುಂಭ ರಾಶಿ: ಮನೆಯಿಂದ ದೂರವಿರುವ ನಿಮಗೆ ಕುಟುಂಬದವರ ನೆನಪಾಗುವುದು. ಎಂದೋ ಹೂಡಿದ ಹಣವು ಇಂದು ಉಪಯೋಗಕ್ಕೆ ಬರಲಿದೆ. ಇಂದು ನೀವು ಹಣಕಾಸಿನ ವ್ಯವಹಾರಕ್ಕೆ ವಾದ ಮಾಡುವ ಹಾಗೆ ಆಗಬಹುದು. ನಿಮ್ಮ ಕಾರ್ಯಕ್ರಮಗಳು ಎಲ್ಲವೂ ವ್ಯತ್ಯಾಸವಾಗಲಿದೆ. ಯಾರನ್ನೂ ಸಹಿಸಿಕೊಳ್ಳುವ ಸ್ಥಿತಿ ಇರದು. ಸಂಪನ್ಮೂಲವ್ಯಕ್ತಿಗಳ ಭೇಟಿಯಾಗಲಿದೆ. ನಿಮ್ಮ ಸಂಕುಚಿತ ಭಾವವು ಇಷ್ಟವಾಗದು. ಅವರ ಜೊತೆ ನಿಮ್ಮ ವರ್ತನೆಯು ಆಪ್ತವಾಗಿ ಇರಲಿದೆ. ಅಕಾಲಿಕ ಭೋಜನ ಅತಿಯಾಗುವುದು.
ಮೀನ ರಾಶಿ: ಯಾರ ಜೊತೆಗೂ ವಿವಾದವನ್ನು ಮಾಡಲು ಹೋಗಬೇಡಿಕೊಳ್ಳದೇ ದಿನವನ್ನು ಕಳೆಯುವಿರಿ. ಇಂದು ನಿಮ್ಮ ಸಮಯವು ಸದುಪಯೋಗವಾಗಿದೆ ಎಂದು ಅನ್ನಿಸಬಹುದು. ನಿಮ್ಮ ಬುದ್ಧಿಯಿಂದ ನಿಮಗೆ ಸಿಗಬೇಕಾದುದನ್ನು ಪಡೆದುಕೊಳ್ಳಬಹುದು. ಆದಷ್ಟು ಚರಾಸ್ತಿಯ ಬಗ್ಗೆ ಚರ್ಚೆ ಮಾಡುವುದನ್ನು ತಪ್ಪಿಸಿ. ಜಲಮೂಲಗಳಿಂದ ಅಧಿಕ ಆದಾಯ ಸಿಗಬಹುದು. ಆಪ್ತರ ಸಹಕಾರವನ್ನು ನೀವು ಅಲ್ಲಗಳೆಯುವಿರಿ.
ಲೋಹಿತ್ ಹೆಬ್ಬಾರ್-8762924271 (what’s app only)




