AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರ ಮಾತುಗಳು ಅನೇಕರ ಸಿಟ್ಟಿಗೆ ಕಾರಣವಾಗುವುದು..

Horoscope Today July 30: ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಗ್ರೀಷ್ಮ ಋತುವಿನ ಆಷಾಢ ಮಾಸದ ಕೃಷ್ಣ ಪಕ್ಷದ ಪ್ರತಿಪತ್ ತಿಥಿಯ ಗುರುವಾರದಂದು ವಿನಮ್ರತೆ, ಚಂಚಲತೆ, ಆಹಾರದಲ್ಲಿ ಮಿತಿ, ಅನಪೇಕ್ಷಿತ ವಾಗ್ವಾದ, ಮುಂಗೋಪದಿಂದ ದುಡುಕುವುದು, ವಿವಾಹಕ್ಕೆ ಅನ್ವೇಷಣೆ ಇದೆಲ್ಲ ಈ ದಿನದ ವಿಶೇಷ.

ದಿನ ಭವಿಷ್ಯ: ಇಂದು ಈ ರಾಶಿಯವರ ಮಾತುಗಳು ಅನೇಕರ ಸಿಟ್ಟಿಗೆ ಕಾರಣವಾಗುವುದು..
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on:Jul 30, 2026 | 12:24 AM

Share

ಮೇಷ ರಾಶಿ:

ಯಾರ ಬೆಂಬಲಕ್ಕೂ ನೀವು ಸುಮ್ಮನೇ ಇರಲಾರಿರಿ. ಭೂಮಿಯ ಉತ್ಪನ್ನವನ್ನು ತಯಾರಿಸುತ್ತಿದ್ದರೆ ಉತ್ತಮ‌ ಲಾಭವಿದೆ. ಸಾಲಬಾಧೆಯಿಂದ ಕೆಟ್ಟ ಕೆಲಸವನ್ನು ಮಾಡಲು ಪ್ರೇರಣೆಯಾಗಬಹುದು. ಇದರಿಂದ ಇನ್ನಷ್ಟು ಇಂದು ಹೊಸ ಕೆಲಸಕ್ಕಾಗಿ ಮಾಡಲಾಗುತ್ತಿರುವ ಪ್ರಯತ್ನಗಳು ಶುಭವಾಗಲಿದೆ. ಇಲ್ಲವಾದರೆ ನಷ್ಟವಾಗಬಹುದು. ಯಾರದೋ ಉಪಕಾರಕ್ಕಾಗಿ ನೀವು ವೃಥಾ ತಿರುಗಾಡುವಿರಿ. ಬೇಡವೆನಿಸಿದ್ದನ್ನು ಯಾವ ಕಾಲಕ್ಕೂ ಪಡೆಯಲಾರಿರಿ.

ವೃಷಭ ರಾಶಿ:

ಇಂದು ನಂಬಿಕೆಯ ವಿಚಾರದಲ್ಲಿ ಮನಸ್ಸು ಮುರಿದುಹೋಗುವುದು. ಹಣಕಾಸನ್ನು ಭದ್ರವಾಗಿ ಇಟ್ಟುಕೊಳ್ಳಿ. ಮೋಸ ಹೋಗುವ ಸಾಧ್ಯತೆ ಇದೆ. ಇಂದು ವ್ಯವಹಾರದಲ್ಲಿ ಲಾಭ ಪಡೆಯುತ್ತಾರೆ. ಹಳೆಯ ಸ್ನೇಹಿತರಿಂದ ನಿಮಗೆ ಸಹಾಯ ಸಿಗಲಿದೆ.‌ ಹಿರಿಯರ ಜೊತೆ ನಿಷ್ಠುರ ಏರ್ಪಡಬಹುದು. ನಿಮ್ಮ ವೈಯಕ್ತಿಕ ಕಾರ್ಯಗಳು ಹಲವು ಹಾಗಯೇ ಉಳಿದುಕೊಂಡಿರುವುದು. ಸಾಲದ ಬಾಧೆಯು ನಿಮ್ಮ ಮನಸ್ಸನ್ನು ಚುಚ್ಚುವುದು. ನಿಮ್ಮನ್ನು ನೀವೇ ನೋಡಿಕೊಳ್ಳುವಿರಿ.

ಮಿಥುನ ರಾಶಿ:

ಸಂಗಾತಿಯ ಜೊತೆ ಕಲಹದ ಕಾರಣ ಎಲ್ಲವೂ ಅಸ್ತವ್ಯಸ್ತ ಆಗಬಹುದು.‌ ಇಂದು ನಿಮಗೆ ಕುಟುಂಬ ಜೊತೆ ಸಲುಗೆಯಿಂದ ಕಾಲವನ್ನು ಕಳೆಯುವ ಮನಸ್ಸಿರುವುದು. ಕಾರ್ಯದ ಒತ್ತಡದಿಂದ ಪೂರ್ತಿಯಾಗಿ ಆಗದೇ ಹೋಗಬಹುದು. ಈ‌ ಮೊದಲೇ ನೀವು ನಿಲ್ಲಿಸಿದ ಯಾ ಕೆಲಸವು ಇಂದು ಪೂರ್ಣವಾಗುವುದು. ಮುಂದೆ ನಿಮ್ಮ ಹಣಕ್ಕೆ ತೊಂದರೆ ಬರಲಿದೆ. ಭೂ ವ್ಯವಹಾರದಲ್ಲಿ ಕೈ ಹಾಕಲು ಹೋಗಲೇಬೇಡಿ. ಹಣವನ್ನು ಹೊಂದಿಸುವುದು ಇಂದು ಸುಲಭದ ಕೆಲಸವಲ್ಲ‌. ಅನ್ಯರ ಕಾರಣದಿಂದ ತಾಳ್ಮೆಯ ಕಟ್ಟೆ ಒಡೆಯಬಹುದು.

ಕರ್ಕಾಟಕ ರಾಶಿ:

ನೀವು ಹಣವನ್ನು ಖರ್ಚು ಮಾಡದೇ ಜಿಪುಣರಂತೆ ತೋರುವಿರಿ. ಬಾಕಿಯಿರುವ ಗೃಹಕೃತ್ಯಗಳನ್ನು ಪೂರೈಸಲು ಒಂದು ಅನುಕೂಲಕರ ದಿನ. ಇಂದು ನಿಮ್ಮ ಮಾತಿನ ಮೃದುತ್ವವು ನಿಮ್ಮ ಗೌರವವನ್ನು ಹೆಚ್ಚಿಸುವುದು. ದುರಭ್ಯಾಸದಿಂದ ಗೊತ್ತಾಗದಂತೆ ಹಣವು ಖರ್ಚಾಗುವುದು. ಇಂದು ನಿಮ್ಮ ಸಹನೆಯ ಪರೀಕ್ಷೆಯೂ ಆಗಬಹುದು.‌ ಉತ್ತಮ ಫಲಿತಾಂಶ ಇದರಿಂದ ಹೊರಬರಲಿದೆ. ಬೇಕಾದವರನ್ನು ಮಾತಿನಿಂದ ದೂರ ಮಾಡಿಕೊಳ್ಳುವಿರಿ. ನಿಮ್ಮ ಅತಿಯಾದ ಮಾತು ಕಿರಿಕಿರಿ‌ ಮಾಡೀತು.

ಸಿಂಹ ರಾಶಿ:

ವಿದ್ಯಾಭ್ಯಾಸದಲ್ಲಿ ಪ್ರಗತಿಯ ಜೊತೆ ಶತ್ರುಗಳೂ ಉಂಟಾಗುವರು. ನಿಮ್ಮ ಮುಂಗೋಪವು ಸಂಗಾತಿಗೆ ಮುಜುಗರ ಆಗುವುದು. ಉದ್ಯೋಗದಿಂದ ಹೊರನಡೆಯುವ ಸಾಧ್ಯತೆ ಇದೆ. ಇಂದು ನೀವು ಜೀವನೋಪಾಯಕ್ಕೆ ತೋಚಿದ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವಿರಿ. ನಿಮ್ಮ ಕಾರ್ಯದ ವಿಳಂಬದಿಂದ ಮೇಲಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗುವಿರಿ. ಧನ ಮತ್ತು ಮಾನಗಳನ್ನು ಕಳೆದುಕೊಳ್ಳಬೇಕಾಗುವುದು. ಸ್ಥಾನವು ಕೈ ತಪ್ಪುವುದು ಎಂಬ ಭೀತಿ ಇರಲಿದೆ.

ಕನ್ಯಾ ರಾಶಿ:

ಸ್ನೇಹಿತರ ಒತ್ತಾಯಕ್ಕೆ ಮೋಜಿಗಾಗಿ ಹಣವನ್ನು ಹಾಕಿ ಕಳೆದುಕೊಳ್ಳುವಿರಿ. ಮನೆಯ ಬಗ್ಗೆ ನಿಮಗೆ ಒಲವು ಕಡಮೆಯಾದೀತು. ಸಮಯಕ್ಕೆ ಸರಿಯಾಗಿ ನಿಮ್ಮ ಜವಾಬ್ದಾರಿಯನ್ನು ಮುಗಿಸುವಿರಿ. ನಿಮ್ಮ ಶತ್ರುಗಳ ಸಂಖ್ಯೆಯು ಇಂದು ಹೆಚ್ಚಾಗಬಹುದು. ರಾಜಕೀಯದಲ್ಲಿ ತೊಡಗಿರುವ ಜನರಿಗೆ ಒಳ್ಳೆಯ ಅನುಕೂಲವಿರಲಿದೆ. ಹಣದ ಅಪವ್ಯಯವು ಆಗದಂತೆ ನೋಡಿಕೊಳ್ಳಿ. ಮಾತಿನಲ್ಲಿ ಹಿಡಿತವಿದ್ದರೆ ನಿಮಗೆ ಇಂದು ಕ್ಷೇಮ.

ತುಲಾ ರಾಶಿ:

ಇಂದು ನಿಮ್ಮ ಕೆಲಸದ ಮೇಲೆ ಮಾತ್ರ ಗಮನಹರಿಸಿದರೆ ಉತ್ತಮ. ಏನಾದರೂ ಬಾಲಿಶವಾದದ್ದನ್ನು ಮಾಡುವ ಮೊದಲು ನಿಮ್ಮ ವರ್ತನೆಯ ಪರಿಣಾಮದ ಬಗ್ಗೆ ಆಲೋಚಿಸಿ. ಇಂದು ಹಣದ ವಿಷಯದಲ್ಲಿ ಅನುಕೂಲವಿದೆ. ಮಕ್ಕಳಿಗೆ ಸಂಬಂಧಿಸಿದ ಶುಭ ಸುದ್ದಿಯು ಬರಲಿದೆ. ಸ್ನೇಹಿತನ ಭೇಟಿಯಿಂದ ಮನಸ್ಸು ತುಂಬಾ ಸಂತೋಷವಾಗುವುದು. ಅವರ ಎಲ್ಲಾ ಸಹಕಾರಗಳನ್ನು ತೆಗೆದುಕೊಳ್ಳಿ. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಬಹುದು.

ವೃಶ್ಚಿಕ ರಾಶಿ:

ಆದಾಯ ಕಡಿಮೆ ಇದ್ದರೂ ನೆಮ್ಮದಿ ಇರಲಿದೆ. ಇಂದು ನಿಮ್ಮ ಮಾತು ಕಡಿಮೆ ಇದ್ದಷ್ಟೂ ನಿಮಗೂ ನಿಮ್ಮ ಕುಟುಂಬಕ್ಕೂ ಒಳ್ಳೆಯದು. ಅವಿವಾಹಿತರಿಗೆ ಮಾಂಗಲ್ಯ ಭಾಗ್ಯ ಕೂಡಿಬರಲಿದೆ. ಕ್ರೀಡೆಯಲ್ಲಿ ಜಯಗಳಿಸುವ ಸಾಧ್ಯತೆ ಇದೆ. ನಿಮ್ಮ ಹೂಡಿಕೆಯಿಂದ ವ್ಯರ್ಥ ಓಡಾಟವಾಗಬಹುದು. ಯಾರನ್ನೋ ಅವಲಂಬಿಸಿ ನೀವು ಕೆಲಸ ಮಾಡುವುದು ಬೇಡ. ಯಾವುದೇ ಕೆಲಸಕ್ಕೆ ಬೇರೆಯವರ ಮೇಲೆ ಅವಲಂಬಿತರಾಗಬೇಡಿ. ಉದ್ಯಮವು ದಿಕ್ಕು ತಪ್ಪದಂತೆ ನೋಡಿಕೊಳ್ಳಿ.

ಧನು ರಾಶಿ:

ಯಾರಿಗೂ ದ್ವೇಷ ಬರುವಂತಹ ಕೆಲಸವನ್ನು ಮಾಡುವುದು ಬೇಡ. ಇಂದು ಅನಿರೀಕ್ಷಿತವಾಗಿ ವೈವಾಹಿಕ ಸಂಬಂಧವು ಕೂಡಿ ಬರಬಹುದು. ಬಂದ ಯೋಗವನ್ನು ಬಿಡುವುದು ಬೇಡ. ಇಂದು ಏನನ್ನೂ ಸಾಲವಾಗಿ ಕೊಡುವುದು ಬೇಡ. ಅಧಿಕ ಖರ್ಚೇ ನಿಮ್ಮ ಅಶಾಂತಿಗೆ ಕಾರಣವಾಗುವುದು. ಮನೆ ಸದಸ್ಯರ ಮಧ್ಯೆ ಮೂಡಿದ್ದ ಭಿನ್ನಾಭಿಪ್ರಾಯಗಳು ದೂರವಾಗಿ ಸೌಹಾರ್ದತೆ ಮೂಡಲಿದೆ. ಸ್ವಂತ ಬುದ್ಧಿಯಿಂದ ನಿಮ್ಮ ಕಾರ್ಯವನ್ನು ಮಾಡಿಕೊಳ್ಳಿ. ವ್ಯಾಪಾರಕ್ಕೆ ಯೋಗ್ಯವಾದ ಮಾತು ಇರಲಿ.

ಮಕರ ರಾಶಿ:

ಇಂದು ದೇವರ ಮೇಲೆ‌ ಸಂಪೂರ್ಣ ಭಾರ ಹಾಕಿ ನಿಮ್ಮ ಕಾರ್ಯವನ್ನು ಆರಂಭಿಸುವಿರಿ. ನಿಮ್ಮ ಅತ್ಯುತ್ಸಾಹಕ್ಕೆ ದೇಹವು ಸಹಕರಿಸದೇ ಇರಬಹುದು. ಮಕ್ಕಳ ತುಂಟಾಟಕ್ಕೆ ಅವರಿಗೆ ಬೈದು ಅವರ ದ್ವೇಷಕ್ಕೆ ಕಾರಣರಾಗುವಿರಿ. ಇಂದು ಕಲೆಗೆ ಸಂಬಂಧಿಸಿ ಮಾಡುತ್ತಿರುವ ಸುಖಾಂತ್ಯವಾಗುವುದು. ಪಾಲುದಾರರ ಜೊತೆಗಿನ ಒಪ್ಪಂದವು ಅಂತ್ಯವಾಗಬಹುದು. ಉದ್ಯಮದಲ್ಲಿ ನಿಮಗೆ ಪ್ರಗತಿ ಕಾಣಿಸುವುದು.

ಕುಂಭ ರಾಶಿ:

ಸಾಮಾಜಿಕ ಜಾಲತಾಣದಲ್ಲಿ ಸಮಯವನ್ನು ಹೆಚ್ಚು ಕಳೆಯಬಹುದು. ಇಂದು ಹಣಕಾಸಿನ ವಿಚಾರದಲ್ಲಿ ಮಾಡಿದ ಪ್ರಯತ್ನಗಳು ಸಫಲವಾಗುವುವು. ಕಲೆಗೆ ಸಂಬಂಧಿಸಿದವರಾಗಿದ್ದರೆ ದೂರದ ಊರಿಗೆ ಪ್ರಯಾಣ ಮಾಡುವಿರಿ. ಮರ್ಯಾದೆಯನ್ನು ಮೀರಿ‌ ನೀವು ವರ್ತಿಸುವುದು ಕಷ್ಟವಾಗುವುದು. ದೇಹಕ್ಕೆ ಆಯುಧದಿಂದ ಘಾಸಿಯಾಗಬಹುದು. ಆತುರದಲ್ಲಿ ಯಾವುದೇ ಕೆಲಸ ಮಾಡುವುದನ್ನು ಮುಖ್ಯ ಕಾರ್ಯಗಳೇ ಮರೆತುಹೋಗಬಹುದು.

ಮೀನ ರಾಶಿ:

ನಿಮ್ಮೊಳಗೆ ಅತೃಪ್ತಭಾವವು ಇರಲಿದೆ‌. ಇಂದು ಹೊಸ ಆದಾಯದ ಮೂಲಗಳು ಹುಟ್ಟಿಕೊಳ್ಳಬಹುದು. ಇದು ನಿಮಗೆ ಬಹಳ ದಿನಗಳ ಅನಂತರದ ಸಂತೋಷ ನೀಡುವ ಸಂಗತಿಯಾಗಲಿದೆ. ಇಂದು ಮಾಡುವ ಸ್ವಯಂ ಸೇವೆಯ ಕೆಲಸ ಹೆಮ್ಮೆಯಾಗುವುದು. ಸಾಮರಸ್ಯವನ್ನು ಉಂಟುಮಾಡುವುದು ಸುಲಭದ ಕಾರ್ಯವಲ್ಲ. ಯಾವುದೇ ಹೂಡಿಕೆ ಸಂಬಂಧಿತ ಯೋಜನೆಯ ಬಗ್ಗೆ ನಿಮಗೆ ಮಾಹಿತಿ ಬಂದರೆ, ಹಣವನ್ನು ಹೂಡುವುದು ಬೇಡ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಪುಷ್ಯಾ, ವಾರ : ಗುರು, ಪಕ್ಷ : ಕೃಷ್ಣ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ಶೋಭನ, ಕರಣ : ತೈತಿಲ, ಸೂರ್ಯೋದಯ – 06 – 05 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 14:01 – 15:36, ಯಮಗಂಡ ಕಾಲ 06:06 – 07:41, ಗುಳಿಕ ಕಾಲ 09:16 – 10:51

-ಲೋಹಿತ್ ಹೆಬ್ಬಾರ್-8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:23 am, Thu, 30 July 26

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು