ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಸಂಪಾದನೆಯ ಹಾದಿ ಬಹಳ ಕ್ಲಿಷ್ಟ ಎನಿಸುವುದು
Horoscope Today June 22: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಜ್ಯೇಷ್ಠ ಮಾಸದ ಶುಕ್ಲ ಪಕ್ಷದ ಅಷ್ಟಮೀ ತಿಥಿಯ ಸೋಮವಾರದಂದು ಸಂಪತ್ತಿಗೆ ಮರುಳು, ಉದ್ಯೋಗಕ್ಕೆ ಅಲ್ಪ ವಿರಾಮ, ಮೆಚ್ಚಿದವರ ಜೊತೆ ಪ್ರೀತಿ, ಶ್ರಮಕ್ಕೆ ಸಿಗದ ಅದಾಯ, ಹೋರಾಟ ಇವೆಲ್ಲ ಈ ದಿನದ ವಿಶೇಷ.

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಮೃಗಶಿರಾ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಉತ್ತರಾಫಲ್ಗುಣೀ, ಯೋಗ : ಹರ್ಷಣ, ಕರಣ : ಭದ್ರ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 47 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 07:33 – 09:09, ಯಮಗಂಡ ಕಾಲ 10:45 – 12:22, ಗುಳಿಕ ಕಾಲ 13:58 – 15:34.
ಮೇಷ ರಾಶಿ: ಅತಿಯಾದ ಬಳಕೆಯಿಂದ ಸಂಬಂಧಗಳು ಹಳಸಬಹುದು. ಅಗಾಧ ಜ್ಞಾನಕ್ಕೆ ಮನ ಸೋಲಬಹುದು. ನಿಮ್ಮ ಸ್ವಂತ ಉದ್ಯೋಗಕ್ಕೆ ವರ್ತಮಾನಕ್ಕೆ ತಕ್ಕಂತೆ ರೂಪವನ್ನು ಬದಲಿಸಿ, ಸತ್ತ್ವನ್ನು ಉಳಿಸಿಕೊಳ್ಳುವುದು ಉತ್ತಮ. ಕಳೆದುಹೋದುದರ ಬಗ್ಗೆ ನೆನೆಯುವುದು ಬೇಡ. ಪಡೆದುಕೊಳ್ಳುವ ವಿಧಾನದ ಕಡೆ ಗಮನಿಸಿ. ಕಛೇರಿಯಲ್ಲಿ ಇಂದು ವಾದಗಳು ನಡೆಯಬಹುದು. ವಿದ್ಯಾರ್ಥಿಗಳಿಗೆ ಸಾಲಬಾಧೆ ತಟ್ಟುವ ಸಾಧ್ಯತೆ ಇದೆ.
ವೃಷಭ ರಾಶಿ: ಒಂದಾದಮೇಲೊಂದರಂತೆ ಬರುವ ಕೆಲಸಗಳು ನಿಮಗೆ ಒತ್ತಡವಾಗಲಿದೆ. ಕ್ಷಣಕಾಲ ಏನನ್ನೂ ಯೋಚಿಸದೇ ಇರಿ. ಸದ್ಯ ಆಲಸ್ಯವೇ ಮೈತುಂಬಿಕೊಂಡಿರುವ ಕಾರಣ ಯಾವ ಅಂಶವೂ ನಿಮ್ಮೊಳಗೆ ಹೋಗದು. ಕಾಲವನ್ನು ಹಿಂದಕ್ಕೆ ಕಳುಹಿಸುವ ಪ್ರಯತ್ನ ಬೇಡ. ಯಾರೊಂದಿಗೂ ಮುಕ್ತವಾಗಿ ಮಾತನಾಡಲು ಅವಕಾಶ ಸಿಗದು. ಕೆಲವು ಸನ್ನಿವೇಶವು ನಿಮಗೆ ಇಷ್ಟವಾಗದು. ಕೆಲವು ವಿರೋಧವನ್ನು ನೀವು ಸಹಿಸಿಕೊಳ್ಳಲು ತಯಾರಿರಬೇಕು. ಅದರೂ ಅನಿವಾರ್ಯ ಎನಿಸೀತು.
ಮಿಥುನ ರಾಶಿ: ಇಂದು ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಮಾಡದೇ ಕೆಲಸಗಳನ್ನು ಮಾಡಿ ಮುಗಿಸಿ. ಹಣವನ್ನು ಹೂಡಿಕೆ ಮಾಡಲು ಮುಂದಾಲೋಚನೆಯನ್ನು ಇಟ್ಟುಕೊಂಡು ಮಾಡಿ. ನಿಮ್ಮ ಚಿತ್ತ ಬೇರೆಯವರತ್ತ ಸುತ್ತಲಿದೆ. ಮಕ್ಕಳಿಂದ ಸಂತೋಷವನ್ನು ಪಡೆಯುವಿರಿ. ಇಂದು ನೀವು ಯಾರಿಗೋ ಕಾದು ಸಮಯವನ್ನು ಹಾಳು ಮಾಡಿಕೊಳ್ಳುವಿರಿ. ಭೂಮಿಯ ಖರೀದಿಯ ಬಗ್ಗೆ ಬಂಧುಗಳಿಂದ ಒತ್ತಡ ಬರಬಹುದು. ಸೂಕ್ಷ್ಮ ವಿಚಾರಗಳನ್ನು ಪಕ್ಷಪಾತವಿಲ್ಲದೇ ನಿರ್ಣಯಿಸಬೇಕಾಗುವುದು.
ಕರ್ಕಾಟಕ ರಾಶಿ: ನಿಮ್ಮ ಅಗತ್ಯದ ಹಣವನ್ನು ಪೂರೈಸಲು ಶ್ರಮಪಡುವಿರಿ. ನಾಳಿನ ಬಗ್ಗೆ ಚಿಂತೆ ನಿಮಗಿರಲಿದೆ. ಪಾಪಪ್ರಜ್ಞೆಯು ನಿಮ್ಮನ್ನು ಕಾಡಿ ಮನಸ್ಸು ದುರ್ಬಲವಾಗಬಹುದು. ಯಾರ ಸ್ಥಾನ, ಬುದ್ಧಿ, ಸ್ಥಳ, ಸಂದರ್ಭ, ವ್ಯಕ್ತಿಗಳನ್ನು ಅಪ್ರಯೋಜಕ ಎಂದು ತಿಳಿಯಬೇಡಿ. ಅಸ್ಪಷ್ಟವಾದ ವಿಚಾರಕ್ಕೆ ಕೈ ಹಾಕಬೇಡಿ. ಸಂಗಾತಿಯು ನಿಮ್ಮ ಬಗ್ಗೆ ತವರಿನಲ್ಲಿ ದೂರು ನೀಡಬಹುದು. ಉಗುರಿನಲ್ಲಿ ಆಗುವ ಕೆಲಸಕ್ಕೆ ಕೊಡಲಿ ತಂದಂತಾಗುವುದು. ಯಾವುದನ್ನೂ ಅತಿಯಾಗಿಸಿಕೊಳ್ಳುವುದು ಬೇಡ.
ಸಿಂಹ ರಾಶಿ: ನಿಮ್ಮಲ್ಲಿ ವಿದ್ಯೆ, ಸಂಪತ್ತು ಎಲ್ಲವೂ ಇದ್ದರೂ ಪ್ರಯೋಜನಕ್ಕೆ ಬಾರದಾಗಿದೆ. ನಿಮ್ಮಿಂದ ಮನೆಯು ಕೆಲವನ್ನು ನಿರೀಕ್ಷಿಸುತ್ತದೆ. ಕೇಳಿಕೊಂಡು ಮಾಡಿ ನೀವೂ ಹೇಳಬೇಕಾದುದನ್ನು ಹೇಳುವಲ್ಲಿ ಹೇಳಿ. ಸುಮ್ಮನೇ ಹರಟೆ ಹೊಡೆದು ಪ್ರಯೋಜನವಗಾದು. ಅಧಿಕಾರದ ನೀವೂ ದುರುಪಯೋಗ ಮಾಡಿಕೊಳ್ಳಬೇಡಿ, ಬೇರೆಯವರು ಮಾಡದಂತೆ ಎಚ್ಚರವಹಿಸಿ. ಅನವಶ್ಯಕವಾಗಿ ಹಣವನ್ನು ವ್ಯರ್ಥ ಮಾಡಿಕೊಳ್ಳುವಿರಿ. ಸಂಗಾತಿಯ ಬೆಂಬಲ ಸಿಗಲಿದೆ.
ಕನ್ಯಾ ರಾಶಿ: ಹಣದ ಆಮಿಷವನ್ನು ತೋರಿಸಿ ನಿಮ್ಮನ್ನು ವಂಚಿಸುವ ಸರಳ ಉಪಾಯವಾಗಿದೆ. ನಿಮ್ಮ ಮಾತುಗಳು ದುರುದ್ದೇಶದಿಂದ ಕೂಡಿದೆ ಎಂದು ನಿಮಗಾಗದವರು ಗುಲ್ಲೆಬ್ಬಿಸಬಹುದು. ಇಂದು ಮನೆಯಲ್ಲಿ ಸಣ್ಣ ಸಣ್ಣ ಖರ್ಚುಗಳಿಗೆ ಧನವನ್ನು ಖರ್ಚು ಮಾಡಬೇಕಾಗಬಹುದು. ಅದೇ ಒಂದು ದೊಡ್ಡ ಮೊತ್ತವಾಗಲಿದೆ. ನಿಮ್ಮ ಜೀವನವನ್ನು ಲಘುವಾಗಿ ಕಾಣುವುದು ಬೇಡ. ವ್ಯವಸ್ಥೆ ಇರುವುದೇ ಹೀಗೆ ಎಂಬ ನಿರ್ಧಾರದಿಂದ ಸಮಾಧಾನ ಸಿಗಲಿದೆ. ಸುಮ್ಮನೇ ಖರ್ಚಿಗೊಂದು ದಾರಿಯಾಗುದು. ಸಾಮರ್ಥ್ಯವನ್ನು ಬಳಕೆಯಾಗುವಲ್ಲಿ ಉಪಯೋಗಿಸಿ.
ತುಲಾ ರಾಶಿ: ಕೆಲಸದಲ್ಲಿ ಉತ್ಸಾಹ ಕಡಿಮೆ ಎನಿಸಿದಾಗ ಸ್ವಲ್ಪ ಸಮಯ ಬೇರೆ ಕಾರ್ಯದಲ್ಲಿ ಮಗ್ನರಾಗಿ. ನಿಮ್ಮ ಸಾಮಾಜಿಕ ಸೇವೆಗೆ ಗೌರವವು ಸಿಗಲಿದೆ. ರಾಜಕೀಯ ವ್ಯಕ್ತಿಗಳ ಬಲದ ಪ್ರದರ್ಶನವು ಇಂದಾಗಲಿದೆ. ಸ್ವಲ್ಪ ಕಾಲದ ಏನನ್ನೂ ಯೋಚಿಸದೇ ಮೌಲವಾಗಿರುವುದನ್ನು ಅಭ್ಯಾಸ ಮಾಡಿ. ಶ್ರಮವನ್ನು ವ್ಯರ್ಥಮಾಡಬೇಡಿ. ವ್ಯಾಪರಸ್ಥರಿಗೆ ಉತ್ತಮಲಾಭದ ದಿನವಾಗಲಿದೆ. ನಂಬಿಕೆಯನ್ನು ಉಳಿಸಿಕೊಳ್ಳುವ ಬಗ್ಗೆ ಯೋಚಿಸಿ ಮಾರುಕಟ್ಟೆಯಿಂದ ಹೆಚ್ಚಿನ ಲಾಭವನ್ನು ಪಡೆಯಲು ಆಗುವುದು. ನಿಮ್ಮ ವ್ಯಾಪಾರ ವಿಸ್ತರಣೆಯನ್ನು ಮಾಡಲು ನಿರ್ಧಾರ ಮಾಡುವಿರಿ.
ವೃಶ್ಚಿಕ ರಾಶಿ: ನಿಮ್ಮ ಇಂದಿನ ಕಾರ್ಯದ ಒತ್ತಡ ನಿಮ್ಮನ್ನು ಒತ್ತಡಕ್ಕೆ, ಉದ್ವೇಗಕ್ಕೆ ಒಯ್ಯಬಹುದು. ಇಂತಹ ಸಂದರ್ಭಗಳಲ್ಲಿ ಸುಮ್ಮನೆ ಸ್ವಲ್ಪ ಹೊತ್ತು ಮಾಡುವ ಕೆಲಸಗಳತ್ತ ಗಮನಹರಿಸಿ. ನೀವು ಮಾಡಲಿರುವ ಕೆಲಸಗಳು ಪರ್ವತದಷ್ಟು ಇರಲಿದೆ. ದೂರಪ್ರಯಾಣವನ್ನು ಮುಂದೂಡುವುದು ಒಳ್ಳೆಯದು. ನಿಮ್ಮ ಹಾದಿಯನ್ನು ನೋಡಿಕೊಳ್ಳುವ ಸಮಯವಿದಾಗಿರುತ್ತದೆ. ಯಾರನ್ನೋ ದೂಷಿಸುವುದರಿಂದ ಯಾವ ಲಾಭವೂ ಆಗದು. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಆಸಕ್ತಿ ಕಳೆದುಕೊಳ್ಳಬಹುದು, ಪ್ರೀತಿ ಪಾತ್ರರನ್ನು ನೀವು ಚೆನ್ನಾಗಿ ನೋಡಿಕೊಳ್ಳುವಿರಿ.
ಧನು ರಾಶಿ: ಇಂದು ನೀವು ಹೊಸ ಕೆಲಸವನ್ನು ಆರಂಭಿಸಿದರೆ ಕಾರಣಾಂತರಗಳಿಂದ ಸ್ಥಗಿತಗೊಳ್ಳುವುದು ಅಥವಾ ನಿಧಾನವಾಗಿ ಅಭಿವೃದ್ಧಿಯನ್ನು ಹೊಂದುವುದು. ಎಲ್ಲರ ಸಹಬಾಳ್ವೆಯಿಂದ ಇರುವುದು ಸಾಧ್ಯವಾಗದು. ಯಾವುದೇ ವಿಚಾರಚವನ್ನು ತಲೆಗೆ ಏರಿಸಿದಷ್ಟೂ ತೊಂದರೆಯೇ. ಸುಲಭವೆಂದು ಕೆಲಸವು ಕಷ್ಟವೆನಿಸಬಹುದು. ಕಾಮಗಾರಿಯ ಬಗ್ಗೆ ಸದ್ಭಾವವಿರದು. ಮನೆಯ ಕಾರ್ಯದಲ್ಲಿ ನಿಮ್ಮ ಇಡೀ ದಿನವು ಕಳೆದು ಹೋದುದ್ದು ಗೊತ್ತಾಗದೇ ಹೋಗಬಹುದು.
ಮಕರ ರಾಶಿ: ಜನರೊಡನೆ ಬಾಂಧವ್ಯವನ್ನು ಚೆನ್ನಾಗಿಸಿಕೊಳ್ಳಿ. ಆತುರಪಟ್ಟು ಅವಗಢಕ್ಕೆ ಸಿಲುಕಬೇಡಿ. ಮಕ್ಕಳಿಂದ ಸಂತೋಷವು ಸಿಗಲಿದೆ. ನಿಮಗೆ ಎಲ್ಲವೂ ತಿಳಿದಿದ್ದರೂ ಬೇಕಾದ ಸಂದರ್ಭದಲ್ಲಿ ಅದು ನೆನಪಾಗದು. ಸ್ವಾಭಿಮಾನದಿಂದ ಬದುಕಲು ಪ್ರಯತ್ನಿಸಿದರೂ ಅದನ್ನು ತಪ್ಪಿಸುವರು. ವಿವಾದವಾಗುವ ಮಾತುಗಳನ್ನು ಆಡಬೇಡಿ. ಸಂಗಾತಿಯ ಜೊತೆಗಿನ ಕಲಹವು ನಿಮ್ಮ ಇಡೀ ದಿನವನ್ನು ಸರಿಯಾಗಿ ಕಳೆಯುವಂತೆ ಮಾಡದು. ದೂರಪ್ರಯಾಣವು ಆಯಾಸವನ್ನು ಕೊಡಬಹುದು.
ಕುಂಭ ರಾಶಿ: ಉತ್ತಮರ ಸಹವಾಸ ನಿಮಗೆ ಹೊಸದಾದ ದಿಕ್ಕನ್ನು ತೋರಿಸಬಹುದು. ನಂಬಿಕೆಯನ್ನು ಇಡುವಾಗ ಮುನ್ನೆಚ್ಚರವಿರಲಿ. ಪ್ರಣಯಪ್ರಸಂಗದಲ್ಲಿ ಆಕಸ್ಮಿಕ ತಿರುವುಗಳು ಇರಬಹುದು. ಅಪರಿಚಿತರು ನಿಮ್ಮನ್ನು ವಶಪಡಿಸಿಕೊಳ್ಳಲು ಅನೇಕ ವಿಧವಾದ ಪ್ರಯತ್ನವನ್ನು ಮಾಡುವರು. ನಿಷ್ಠೆಯಿಂದ ಇದ್ದರೂ ನಿಮಗೆ ಅಪವಾದಬರಬಹುದು. ಇಂದು ನೀವು ಸಿಡಿದೇಳುವ ಸಂದರ್ಭವು ಬರಬಹುದು. ವೃತ್ತಿಶೀಲರು ತಮ್ಮನ್ನು ಅತಿಮಾನುಷರಂತೆ ತೋರ್ಪಡಿಸುವರು.
ಮೀನ ರಾಶಿ: ಇಂದು ಆತುರದಲ್ಲಿ ಮಾಡಿದ ಕಾರ್ಯವನ್ನೇ ಮತ್ತೆ ಮಾಡಬೇಕಾದೀತು. ಉದ್ವೇಗಕ್ಕೆ ಒಳಗಾಗಬಹುದು. ಎಲ್ಲವೂ ಖಾಲಿ ಖಾಲಿ ಅನ್ನಿಸಬಹುದು. ಹಣಕಾಸಿನ ಸಮಸ್ಯೆಗಳು ಹೆಚ್ಚಾಗಬಹುದು. ಪ್ರೇಮಾಂಕುರವು ಆಗಬಹುದು. ನಿಮ್ಮ ಕೆಲಸದ ಮೇಲೆ ಸ್ವಲ್ಪ ಗಮನವಿರಲಿ. ಮನೆಯಲ್ಲಿ ನಡೆಯುವ ಘಟನೆಗಳು ಕುತೂಹಲ ತರಿಸಬಹುದು. ವ್ಯವಹಾರದಲ್ಲಿ ಇಂದು ನಿಮಗೆ ತುಂಬಾ ಒತ್ತಡದ ದಿನವಾಗಿರುತ್ತದೆ. ನಿಮ್ಮ ಹಣವನ್ನು ಬಲಾತ್ಕಾರದಿಂದ ಪಡೆಯಬೇಕಾಗಬಹುದು.
ಲೋಹಿತ್ ಹೆಬ್ಬಾರ್ – 8762924271 (what’s app only)




