Horoscope 16 March: ದಿನಭವಿಷ್ಯ; ಮಕ್ಕಳ ವಿವಾಹದ ಚಿಂತೆ, ಹಣಕಾಸಿನ ಸ್ಥಿತಿ ಸುಧಾರಿಸುತ್ತದೆ

Nitya Bhavishya: 2024 ಮಾರ್ಚ್​ 16 ಶನಿವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಇಂದಿನ ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ. ಯಾವ ರಾಶಿಯವರು ಇಂದು ಜಾಗೃಕರಾಗಿರಬೇಕು ಎಂದು ನಿತ್ಯ ಭವಿಷ್ಯದಿಂದ ತಿಳಿಯಿರಿ.

Horoscope 16 March: ದಿನಭವಿಷ್ಯ; ಮಕ್ಕಳ ವಿವಾಹದ ಚಿಂತೆ, ಹಣಕಾಸಿನ ಸ್ಥಿತಿ ಸುಧಾರಿಸುತ್ತದೆ
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: Mar 16, 2024 | 12:02 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್​​​​ 16) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಶನಿ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ರೋಹಿಣೀ, ಯೋಗ : ವಿಷ್ಕಂಭ, ಕರಣ : ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 41 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 41 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:41 ರಿಂದ ಮಧ್ಯಾಹ್ನ 11:11ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:11 ರಿಂದ ಸಂಜೆ 03:42ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:41 ರಿಂದ 08:11 ರ ವರೆಗೆ.

ಮೇಷ ರಾಶಿ: ಇಂದು ನಿಮಗೆ ಅನಿರೀಕ್ಷಿತ ಒತ್ತಡಗಳು ಬರಬಹುದು. ಯಾರ ಸಹಕಾರವೂ ಇಲ್ಲದೇ ಸ್ವತಂತ್ರವಾಗಿ ಇರಲು ಇಚ್ಛಿಸುವಿರಿ‌. ದೂರದ ಬಂಧುಗಳನ್ನು ಅಕಸ್ಮಾತ್ ಆಗಿ ಭೇಟಿಯಾಗುವ ಸಂದರ್ಭವು ಬರಬಹುದು. ಯಾರನ್ನೂ ನಿಕೃಷ್ಟವಾಗಿ ಕಾಣುವುದು ಬೇಡ. ಅವರವರ ಶಕ್ತಿ, ಸಾಮರ್ಥ್ಯಗಳು ಅವರಿಗಿರುತ್ತವೆ. ಅಸಂಗತ ಸಮಾಚಾರವನ್ನು ಒಪ್ಪಬೇಕಿಲ್ಲ. ನಿಮ್ಮನ್ನು ಲಕ್ಷಿಸಲು ಸಾಧ್ಯವಾಗದ ದೊಡ್ಡ ವ್ಯಕ್ತಿತ್ವ ನಿಮ್ಮದಾಗುವುದು. ಸ್ವಕೀಯರೇ ನಿಮ್ಮ ನಿಜವಾದ ವೇಗವನ್ನು ಕುಂಠಿತಗೊಳಿಸುವರು. ನಿಮ್ಮ ಪ್ರಯತ್ನವನ್ನು ಇತರರಿಗೂ ತಿಳಿಸುವ ಸಮಯ ಇಂದು. ತಪ್ಪು ಮಾಹಿತಿ ನೀಡಿ ನಿಮ್ಮ ದಾರಿ ತಪ್ಪಿಸಬಹುದು. ನಿಮ್ಮ ಕೈಲಾಗುವ ಕೆಲಸವನ್ನು ಮಾಡಿ ಕಿಂಚಿತ್ ಆದಾಯವನ್ನು ಮಾಡಿಕೊಳ್ಳುವಿರಿ. ನಿಮ್ಮ ಪ್ರಗತಿಯ ಬಗ್ಗೆ ಇತರರು ಪ್ರಶಂಸಿಸಬಹುದು.

ವೃಷಭ ರಾಶಿ: ಇಂದು ನೀವು ಭಾವನಾತ್ಮಕವಾಗಿ ಬಹಳ ದುರ್ಬಲರಾದಂತೆ ಕಾಣುವಿರಿ. ನಿಮ್ಮ ಮನಸ್ಸಿಗೆ ನೋವನ್ನು ಕೊಡುವವರಿಂದ ನೀವು ದೂರವಿರುವಿರಿ. ಆಸ್ತಿಯ ಬಗ್ಗೆ ಮೊಹವು ಬರಬಹುದು. ಶ್ರಮವಿಲ್ಲದೇ ಆದಾಯವನ್ನು ಪಡೆಯುವ ಬಯಕೆ ಇರುವುದು. ನಿಮ್ಮ ಪೂರ್ವ ನಿಶ್ಚಿತ ಯೋಜನೆಯನ್ನು ಬದಲಾಯಿಸುವಿರಿ. ನಿಮ್ಮ ದೌರ್ಬಲ್ಯವನ್ನು ಉಪಯೋಗಿಸಿಕೊಳ್ಳಬಹುದು. ನಿಮ್ಮ ಕೆಲಸಕ್ಕೆ ಪ್ರಶಂಸೆ ಸಿಗುವುದು. ನಿಮ್ಮ ಏಳಿಗೆ ಕಂಡು ಅಸೂಯೆ ಪಡುವವರ ಸಂಖ್ಯೆ ಹೆಚ್ಚಾಗಲಿದೆ. ಇನ್ನೊಬ್ಬರನ್ನು ನೀವು ನಯವಾಗಿ ವಂಚಿಸುವಿರಿ. ಅದಕ್ಕೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ಪ್ರವೃತ್ತರಾಗಿ ಕಾರ್ಯದಲ್ಲಿ ನಿಷ್ಠೆಯನ್ನು ತೋರಿಸಿ. ಪ್ರೀತಿಯ ಸುಖದಿಂದ ವಂಚಿತರಾಗುವಿರಿ. ವಿದೇಶಪ್ರಯಾಣದ ಗುಂಗಿನಿಂದ ಹೊರಬನ್ನಿ. ನಿಮ್ಮ ಮೇಲೆ ವಿರೋಧಿಗಳ ಆಕ್ರಮಣವು ಆಗಬಹುದು.

ಮಿಥುನ ರಾಶಿ: ಇಂದು ನೀವು ವಿಶ್ರಾಂತಿಯಲ್ಲಿಯೇ ದಿನವನ್ನು ಕಳೆಯುವಿರಿ. ಪ್ರಯಾಣ ಮಾಡುವ ಮನಸ್ಸಿದ್ದರೂ ಕೆಲವು ಅಶುಭ ಸೂಚನೆಯಿಂದ ಅದನ್ನು ಮುಂದೂಡುವಿರಿ. ವ್ಯವಹಾರದ ಪ್ರಜ್ಞೆಯನ್ನು ಇಟ್ಟುಕೊಂಡು ಮಾತನಾಡಿ. ನಿಮ್ಮ ಒಳ್ಳೆಯತನವನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ಬಳಕೆ ಆದೀತು. ನೆರೆಯವರು ನಿಮ್ಮ ವ್ಯವಹಾರದಲ್ಲಿ ಪ್ರವೇಶಪಡೆಯಬಹುದು. ಜಾಗರೂಕರಾಗಿ ಜನರಿಂದ ದೂರವಿರುವುದು ಒಳ್ಳೆಯದು. ನಿಮ್ಮ ಹುಸಿತನವು ಪ್ರಕಟವಾಗಬಹುದು. ನಿಮ್ಮದೇ ಆದ ಕುಟುಂಬದಲ್ಲಿ ಹಲವರು ಕಿರಿಕಿರಿ ಮಾಡಬಹುದು. ಹಿಂದೆ ಮುಂದೆ ಯೋಚಿಸದೆ ಏಕಾಏಕಿಯಾಗಿ ಯಾರಿಗೂ ಮಾತು ಕೊಡುವುದು ಬೇಡ. ಸಣ್ಣ ವಿಚಾರಕ್ಕೆ ದ್ವೇಷ ಸಾಧಿಸುವುದು ಸರಿಯಾಗದು. ಹೊಂದಾಣಿಕೆಯ ಕಡೆ ನಿಮ್ಮ ಗಮನವಿರಲಿ. ಪ್ರತ್ಯಕ್ಷವಾಗಿ ಕಾಣುವ ವ್ಯಕ್ತಿಗಳಿಗೆ ನಿಮ್ಮ ಬಗೆಗಿನ ದೃಷ್ಟಿಕೋನವೇ ಬದಲಾಗುವುದು.

ಕಟಕ ರಾಶಿ: ಇಂದು ಅನಿರೀಕ್ಷಿತ ಲಾಭಗಳ ಮೂಲಕ ಹಣಕಾಸಿನ ಸ್ಥಿತಿ ಸುಧಾರಿಸುತ್ತದೆ. ನಿಮ್ಮ ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸವು ಕಾಣಿಸುವುದು. ಸ್ಪರ್ಧೆಗಳಲ್ಲಿ ನೀವು ಸೋಲುವ ಸಾಧ್ಯತೆ ಇದೆ. ನೌಕರರ ಬೇಡಿಕೆಯನ್ನು ಈಡೇರಿಸಲು ನೀವು ಸಮರ್ಥರಾಗಬೇಕು. ಆದರೆ ಸಾಮರ್ಥ್ಯವನ್ನೂ ಅರಿತುಕೊಳ್ಳುವುದು ಮುಖ್ಯವಾಗುವುದು. ಮನಸ್ಸಿಗೆ ಮಂಕು ಕವಿದಂತೆ ಇರುವಿರಿ. ಕುಟುಂಬದ ಸಮಸ್ಯೆಯನ್ನು ಹಾಗೆಯೇ ಬಿಟ್ಟುಬಿಡುವಿರಿ. ಜೀವನದಲ್ಲಿ ಚುರುಕುತನ ಕಂಡುಕೊಳ್ಳಲು ದಾರಿಯನ್ನು ಕಂಡುಕೊಳ್ಳಿ. ಒತ್ತಡವನ್ನು ಹೇರಿ ಕೆಲಸವನ್ನು ಮಾಡಿಸಿಕೊಳ್ಳುವಿರಿ. ನಿಮಗೆ ಸಂಬಂಧಿಸಿದ ವಿಚಾರದಲ್ಲಿ ಮಾತ್ರ ನಿಮ್ಮ ಹಸ್ತಕ್ಷೇಪ ಇರಲಿ. ತಲ್ಲೀನರಾಗಿ ಎಲ್ಲ ಕಾರ್ಯವನ್ನು ಮಾಡುವಿರಿ. ಬಂಧುಗಳು ನಿಮ್ಮನ್ನು ಪ್ರಶಂಸಿಸಿ ಕಾರ್ಯವನ್ನು ಸಾಧಿಸಿಕೊಳ್ಳುವರು.

ಸಿಂಹ ರಾಶಿ: ಇಂದು ಸಕಾರಾತ್ಮಕ ಆಲೋಚನೆಯಿದ್ದರೂ ಬೇಸರವು ಎಲ್ಲಿಂದಲಾದರೂ ಬರಬಹುದು. ನೀವು ಅಪರೂಪವಾಗಿ ಭೇಟಿಯಾಗುವ ಜನರೊಂದಿಗೆ ಪ್ರೀತಿಯಿಂದ ಮಾತನಾಡುವಿರಿ. ಸಮಯಕ್ಕೆ ಸರಿಯಾಗಿ ಕೆಲಸ ಕಾರ್ಯಗಳನ್ನು ಮಾಡಿ ಮುಗಿಸುವಿರಿ. ಯಾರನ್ನೂ ದೂಷಿಸುವುದು ನಿಮಗೆ ಹೇಳಿಸಿದ್ದಲ್ಲ. ಕೃಷಿಗೆ ಸಂಬಂಧಿಸಿದ ಕಾರ್ಯವನ್ನು ವೇಗವಾಗಿ ಮಾಡಿಕೊಳ್ಳಿ. ಮಕ್ಕಳ ವಿವಾಹದ ಚಿಂತೆಯು ಕಾಡಬಹುದು. ಅಧಿಕಾರ ಮತ್ತು ವರ್ಚಸ್ಸು ಹೆಚ್ಚಿಸಿಕೊಳ್ಳುವ ಅವಕಾಶ ಬರುವುದು. ಸಕಾರಾತ್ಮಕ ಯೋಚನೆಯಿಂದ ಮುಂದಡಿ ಇಡಬೇಕಾದೀತು. ನಿಮ್ಮ ಬುದ್ಧಿಶಕ್ತಿಗೆ ತಕ್ಕಂತೆ ಕೆಲಸದಲ್ಲಿ ಜಯವನ್ನು ಸಾಧಿಸುವಿರಿ. ಔಷಧದ ವ್ಯಾಪಾರದಿಂದ ನಿಮಗೆ ಅಧಿಕ ಲಾಭವಾಗಬಹುದು. ಧೈರ್ಯದಿಂದ ಮುನ್ನಡೆಯುವ ಇಚ್ಛಾಶಕ್ತಿಯನ್ನು ರೂಢಿಸಿಕೊಳ್ಳಿ. ಸಾಮಾಜಿಕವಾಗಿ ಏನನ್ನಾದರೂ ಮಾಡಬೇಕು ಎಂದೆನಿಸಬಹುದು. ಸ್ವಂತ ಉದ್ಯೋಗವನ್ನು ನಡೆಸಲು ಚಿಂತಿಸುವುದು ಉತ್ತಮ.

ಕನ್ಯಾ ರಾಶಿ: ಇಂದು ನಿಮಗೆ ಎಲ್ಲವೂ ನಿಮ್ಮ ಕೈಯಲ್ಲೆ ಇದೆ ಎಂಬ ಭಾವವು ಬರಬಹುದು. ಅಹಂಕಾರದ ಕಾರಣ ಖರೀದಿಯಲ್ಲಿ ಹೆಚ್ಚು ಹಣವನ್ನು ಕಳೆದುಕೊಳ್ಳುವಿರಿ. ವಿವಾಹಕ್ಕೆ ಮಾತುಕತೆಗಳು ಆಗಲಿದ್ದು ನಿಮಗೆ ಇಷ್ಟು ದಿನದ ಬೇಸರವು ಮಾಯವಾಗುವುದು. ಯಾವುದೇ ದ್ವಂದ್ವಗಳು ಬಂದರು ನಿರ್ಧಾರಕ್ಕೆ ಹೋಗದೇ ಸ್ವಲ್ಪ ಕಾಲ ಸುಮ್ಮನಿರಿ. ಧೃತಿಗೆಡುವ ಅವಶ್ಯಕತೆ ಇರುವುದಿಲ್ಲ. ಉದ್ವೇಗದಿಂದ ಸಿಟ್ಟುಗೊಂಡು ಅಪ್ರಿಯರಾಗುವಿರಿ. ಇಂದಿನ ಕೆಲಸಗಳು ಬೇಗ ಮುಕ್ತಾಯವಾಗಿ ನಿಶ್ಚಿಂತೆಯಿಂದ ಇರುವಿರಿ. ವೈದ್ಯಕೀಯ ಕ್ಷೇತ್ರದ ಕಲಿಕೆ ಬಹಳ ಕಷ್ಟವೆನಿಸಬಹುದು. ಮರೆವು ನಿಮಗೆ ವರವಾದಂತೆ ಅನ್ನಿಸುವುದು. ವಿದ್ಯಾಭ್ಯಾಸಕ್ಕೆ ಮನೆಯನ್ನು ಬಿಟ್ಟು ದೂರವಿರಲು ನಿರ್ಧಾರ ಮಾಡುವಿರಿ. ನಿಮ್ಮ ಇಂದಿನ ಆರ್ಥಿಕಲಾಭವು ನಿಮಗೆ ಹೆಚ್ಚು ಸುಖವನ್ನು ಕೊಡಬಹುದು. ಸಣ್ಣ ಉದ್ಯೋಗವಾದರೂ ಯೋಜನಾಬದ್ಧವಾಗಿರಲಿ.

ತುಲಾ ರಾಶಿ: ನಿಮ್ಮ ಚಂಚಲ ಸ್ವಭಾವವು ವೈವಾಹಿಕ ಜೀವನದಲ್ಲಿ ಒಡಕು ತರಬಹುದು. ನಿಮ್ಮ ಪ್ರೀತಿಪಾತ್ರರ ಜೊತೆ ಸಭ್ಯವಾಗಿ ನಡೆದುಕೊಳ್ಳಿ. ಕುಟುಂಬದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಯಾವುದಾದರೂ ಮಾರ್ಗವನ್ನು ಅನುಸರಿಸುವಿರಿ. ಎಲ್ಲ ಶ್ರಮದ ಅನಂತರವೂ ಮತ್ತೇನೋ ಉಳಿದುಕೊಳ್ಳುವುದು. ಅದು ಶೇಷವಾಗಿಯೇ ಉಳಿಯುತ್ತ ಹೋಗಬಹುದು. ಅಧಿಕ ಆದಾಯದಿಂದ ನಿಮ್ಮ ನೆಮ್ಮದಿಯ ಹರಣವಾಗಿದೆ ಎಂದು ಅನ್ನಿಸಲೂಬಹುದು. ಹಣಕ್ಕಾಗಿ ಕಿರಿಕಿರಗಳು ಅಧಿಕವಾದಂತೆ ತೋರುವುದು. ವಿದ್ಯಾರ್ಥಿಗಳು ಮನೋಭಾವವನ್ನು ಬದಲಿಸಿಕೊಳ್ಳುವ ಅಗತ್ಯವಿದೆ. ವರ್ತನೆಯು ಹಾದಿ ತಪ್ಪಿದಂತೆ ಹೆಚ್ಚಿನವರಿಗೆ ತೋರುವುದು. ನಿಮಗೆ ಇಂದು ಬರುವ ಅಶುಭವಾರ್ತೆಯಿಂದ ತಲ್ಲಣಿಸಬಹುದು. ನಿಮ್ಮ ತಾಳ್ಮೆಯೇ ಗುರಿಯನ್ನು ತಲುಪಲು ಸಹಕಾರಿಯಾಗಿರುವುದು. ಒತ್ತಡ ಕಡಿಮೆಯಾಗಿ ಮನೆಯಲ್ಲಿ ನೆಮ್ಮದಿಯಿಂದ ಇರುವಿರಿ. ಬರಲಿರುವ ಹಣವನ್ನು ಸರಿಯಾಗಿ ವಿನಿಯೋಗವಾಗುವಂತೆ ನೋಡಿ. ಸ್ಥಿರಾಸ್ತಿಯಲ್ಲಿ ಲಾಭವನ್ನು ಪಡೆಯಲು ತಂತ್ರವನ್ನು ಬಳಸುವಿರಿ.

ವೃಶ್ಚಿಕ ರಾಶಿ: ಇಂದು ನೀವು ಒಂಟಿಯಾಗಿ ವಾಹನದಲ್ಲಿ ದೂರಪ್ರಯಾಣ ಮಾಡುವಿರಿ. ಯಾವುದನ್ನೂ ನಿರ್ಲಕ್ಷ್ಯ ಭಾವದಿಂದ ನೋಡದೇ ಸರಿಯಾದ ಕ್ರಮವನ್ನು ಅನುಸರಿಸಬೇಕಾಗುವುದು. ಆರ್ಥಿಕತೆಯ ವಿಚಾರದಲ್ಲಿ ನೀವು ಕೆಲವರ ಮಾರ್ಗದರ್ಶನದ ಅವಶ್ಯಕತೆ ಇರಲಿದೆ. ಸೃಜನಾತ್ಮಕವಾಗಿ ಏನನ್ನಾದರೂ ಮಾಡಲು ಹೋಗಿ ಎಡವುವಿರಿ. ನಿಮ್ಮ ಮೇಲಿನ ಗೌರವು ಈ ಕಾರಣಕ್ಕೆ ಕಡಿಮೆ ಆಗಬಹುದು. ನಿಮ್ಮ ವ್ಯಾಪಾರ ವ್ಯವಹಾರದಲ್ಲಿ ಪಾರದರ್ಶಕತೆ ಮಾತ್ರ ಇರಲಿ. ಮಕ್ಕಳ ವಿವಾಹದ ಬಗ್ಗೆ ಚಿಂತಿಸಿ ಭಾವುಕರಾಗುವಿರಿ. ಸಹೋದ್ಯೋಗಿಗಳು ಉದ್ಯೋಗಕ್ಕೆ ಸಂಬಂಧಿಸಿದ ಗೊಂದಲವನ್ನು ಪಹಿಹರಿಸಲು ಸಹಕಾರ ನೀಡಬಹುದು. ಪಾವತಿಸಲು ಕಷ್ಟವಾಗುವಷ್ಟು ಸಾಲವನ್ನು ನೀವು ಮಾಡುವುದು ಬೇಡ. ಸ್ತ್ರೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ಸಿಗಬಹುದು. ಇನ್ನೊಬ್ಬರು ಇಟ್ಟ ನಂಬಿಕೆಯನ್ನು ಉಳಿಸಿಕೊಳ್ಳಿ.

ಧನು ರಾಶಿ: ಇಂದು ನಿಮ್ಮ ಬಿಡುವಿಲ್ಲದ ಒತ್ತಡದಲ್ಲಿಯೂ ನಿಮ್ಮ ವೈಯಕ್ತಿಕ ಕಾರ್ಯವನ್ನು ಮಾಡಿಕೊಳ್ಳುವಿರಿ. ಭೂಮಿಗೆ ಸಂಬಂಧಿಸಿದ ಚಟುವಟಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ. ಅಗತ್ಯಕ್ಕಿಂತ ಹೆಚ್ಚು ಸಮಯವನ್ನು ಸ್ನೇಹಿತರ ಜೊತೆ ಕಳೆಯುವುದರಿಂದ ಭವಿಷ್ಯದಲ್ಲಿ ಕೆಲವು ಅನಿರೀಕ್ಷಿತ ಸವಾಲುಗಳ ಬಗ್ಗೆ ತಿಳಿಯುವಿರಿ. ಆದರೆ ಒಂದು ಮಿತಿಯಲ್ಲಿ ಇರಲಿ. ಬಹಳ ದಿನಗಳ ಅನಂತರ ಸಹೋದರರ ಭೇಟಿಯಾಗಲಿದ್ದು, ಸಂತೋಷವು ಇಮ್ಮಡಿಸುವುದು. ಸಕಾರಾತ್ಮಕವಾಗಿ ಚಿಂತಿಸಿ ಕಾರ್ಯದಲ್ಲಿ ತೊಡಗಿಕೊಳ್ಳಿ. ಗೃಹ ನಿರ್ಮಾಣದಂತಹ ಕಾರ್ಯಕ್ಕೆ ಕೈ ಹಾಕುವುದು ಬೇಡ. ತೀರ್ಥ ಕ್ಷೇತ್ರದಲ್ಲಿ ವಾಸಮಾಡುವ ಸಂದರ್ಭವು ಬರಬಹುದು. ಪುಣ್ಯವೆಂದು ಭಾವಿಸಿ. ವ್ಯವಹಾರದಲ್ಲಿ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ಅನಗತ್ಯ ವಾದ ವಿವಾದಗಳಿಂದ ದೂರವಿರಿ. ಇಂದು ಸೇವಿಸುವ ಆಹಾರದ ಬಗ್ಗೆ ನಿಮಗೆ ಸರಿಯಾದ ನಿಗಾ ಇರಲಿ.

ಮಕರ ರಾಶಿ: ನಿಮ್ಮ ಅನಗತ್ಯ ಆಲೋಚನೆಗಳು ನಿಮ್ಮನ್ನು ಒಂದೆಡೆ ಕುಳಿತುಕೊಳ್ಳಲು ಬಿಡದು. ನೀವೇ ಮಾಡಿಕೊಂಡ ಎಡವಟ್ಟಿನಿಂದ ತೊಂದರೆಯನ್ನು ಅನುಭವಿಸಬೇಕಾಗುವುದು. ಹಣವನ್ನು ಕೊಟ್ಟು ಅನಂತರ ಅವರ ಮೇಲೆ‌ ಸಂಶಯಪಡುವ ಅಗತ್ಯವಿಲ್ಲ. ಮನೆಯಲ್ಲಿಯೇ ಕುಳಿತು ಉದ್ಯೋಗವನ್ನು ಮಾಡಿ ಆರ್ಥಿಕತೆಯನ್ನು ಸುಧಾರಿಸಿಕೊಳ್ಳುವಿರಿ. ಅಧಿಕ ಖರ್ಚನ್ನು ನಿಯಂತ್ರಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಸಲಹೆಯನ್ನು ಏಕಚಿತ್ತದಿಂದ ಸ್ವೀಕರಿಸಿ, ನಿಮ್ಮ ವಿವೇಕದಿಂದ ಬಳಸಿಕೊಳ್ಳಿ. ಅನ್ಯರಿಂದ ಹಣಕಾಸಿನ ವಿಷಯದಲ್ಲಿ ಮೋಸ ಹೋಗುವ ಸನ್ನಿವೇಶವು ಬರಬಹುದು. ಯಾರಾದರೂ ನಿಮ್ಮನ್ನು ಯಾವುದಾದರೂ ಕಾರ್ಯಕ್ಕೆ ಪ್ರೋತ್ಸಾಹಿಸಬಹುದು. ನಿಮ್ಮ ಬಗ್ಗೆ ನಿಮಗೆ ಗೊತ್ತಿರಲಿ. ಎಲ್ಲವೂ ನಿಮ್ಮಿಂದ ಆದರೂ ಹೇಳಿಕೊಳ್ಳುವಾಗ ಗೌಣವಾಗಿರಲಿ. ದಾಂಪತ್ಯದಲ್ಲಿ ಸಲುಗೆಯು ಅತಿಯಾಗಿ ಅನಂತರ ಗಂಭೀರವಾಗುವುದು.

ಕುಂಭ ರಾಶಿ: ಇಂದು ನಿಮ್ಮ ಆರೋಗ್ಯವನ್ನು ಅಷ್ಟು ಜಾಗರೂಕತೆಯಿಂದ ನೋಡಿಕೊಳ್ಳಬೇಕು. ಹೂಡಿಕೆಯ ಸಮಯದಲ್ಲಿ ವ್ಯತ್ಯಾಸ ಆದ ಕಾರಣ ನಷ್ಟ ಮಾಡಿಕೊಳ್ಳುವಿರಿ. ನಿಮ್ಮ ಅನುಭವವೇ ಎಲ್ಲದಕ್ಕೂ ಮೂಲವಾದ ಕಾರಣ ಅದನ್ನು ಆಧಾರ ಸಹಿತವಾದ ಪ್ರಸ್ತುತಪಡಿಸಿ. ವ್ಯಾವಹಾರಿಕ ದಾಖಲೆಗಳನ್ನು ನೀವು ಭದ್ರವಾಗಿ ಇರಿಸಿಕೊಳ್ಳಿ. ಕಲಿಕೆಯಲ್ಲಿ ಚುರುಕುತನವನ್ನು ರೂಢಿಸಿಕೊಳ್ಳುವುದು ಭವಿಷ್ಯದ ದೃಷ್ಟಿಯಿಂದ ಉತ್ತಮ. ಇಂದು ನಿಮ್ಮಲ್ಲಿ ಆತ್ಮಸ್ಥೈರ್ಯವು ಇರಲಿದೆ. ಮಾನಸಿಕವಾಗಿ ಸದೃಢರಾಗುವಿರಿ. ನೀವು ಅಂದಿಕೊಂಡಂತೆ ಸಹೋದರಿಯರಿಂದ ಸಹಕಾರ ದೊರೆಯುವುದಿಲ್ಲ. ಮೈಯ್ಯಲ್ಲ ಕಣ್ಣಿದ್ದರೂ ನಿಮಗೆ ವಂಚಿಸುವವರು ಇರುವರು. ನಿಮ್ಮ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ತಾಯಿಯ ಕಡೆಯಿಂದ ನಿಮಗೆ ಆರ್ಥಿಕ ಸಹಾಯವು ಸಿಗಬಹುದು. ಕಳೆದುಕೊಂಡು ವಸ್ತುವಿನ ಮೌಲ್ಯವು ಇಂದು ಗೊತ್ತಾಗುವುದು.

ಮೀನ ರಾಶಿ: ಇಂದು ನಿಮ್ಮ ಆಪತ್ಕಾಲದ ಸ್ಥಿತಿಯು ಸಾಲವನ್ನು ಯಾರಿಂದಲಾದರೂ ಪಡೆಯುವಂತೆ ಮಾಡುವುದು. ನಿಮ್ಮ ಆಪ್ತರಿಗೆ ನಿಮ್ಮಿಂದ ಉಡುಗೊರೆ ಸಿಗಲಿದೆ. ಆತ್ಮವಿಶ್ವಾಸದಿಂದ ಇಡುವ ಹೆಜ್ಜೆಗಳು ನಿಮ್ಮ ಗೆಲುವಿನ‌ ಮೈಲುಗಲ್ಲಾಗಲಿವೆ. ಹೆಚ್ಚಾಗಲಿದ್ದು ಉದ್ಯೋಗ ವ್ಯವಹಾರದಲ್ಲಿ ಪ್ರಗತಿಯ ಹಾದಿಗಳು ತೆರೆಯಲಿವೆ. ಕಲಿತ ವಿದ್ಯೆಯ ಪ್ರದರ್ಶನಕ್ಕೆ ಅವಕಾಶವು ಸಿಗಲಿದೆ. ಆಧ್ಯಾತ್ಮಿಕ ಚಿಂತನೆಗಳಿಂದ ಮನಸ್ಸಿಗೆ ಶಾಂತತೆಯನ್ನು ಪಡೆಯುವಿರಿ. ವ್ಯಾಪಾರದ ಆದಾಯಕ್ಕೆ ನಿಮ್ಮದೇ ತಂತ್ರವನ್ನು ಬಳಸುವಿರಿ. ಮನೆ ಹಿರಿಯರ ಆರೋಗ್ಯದ ಕಡೆ ಗಮನ ನೀಡಿ. ನಿಮ್ಮ ಪರಿಶ್ರಮಕ್ಕೆ ತಕ್ಕಷ್ಟು ಹಣ ಬರದೆ ತೊಂದರೆ ಅನುಭವಿಸುವಿರಿ. ಮಂದಗತಿಯಲ್ಲಿ ಸಾಗುವ ಕೆಲಸಗಳಿಗೆ ವೇಗವನ್ನು ಕೊಡುವಿರಿ. ನಿಮಗೆ ಆತ್ಮತೃಪ್ತಿಯು ಇರುವುದು. ವಾಹನ ಚಲಾಯಿಸುವಾಗ ಎಚ್ಚರ ಇರಲಿ. ಕಾನೂನಾತ್ಮಕ ಹೋರಾಟಕ್ಕೆ ನಿಮಗೆ ಯಾರಿಂದಲಾದರೂ ಬೆಂಬಲವು ಇರುವುದು.

ಲೋಹಿತ ಹೆಬ್ಬಾರ್ – 8762924271 (what’s app only)