AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ : ಇಂದು ಈ ರಾಶಿಯವರ ವಾಗ್ವಾದ ಸ್ತ್ರೀಯರ ಜೊತೆ ಬೇಡ, ನಕಾರಾತ್ಮಕ ಪರಿಣಾಮ ಬೀರುವುದು…

ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ವರ್ಷ ಋತುವಿನ ಭಾದ್ರಪದ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿಯ ಶನಿವಾರದಂದು ದುಡುಕು ನಿರ್ಧಾರ, ಅಪ್ರಶಂಸೆಯಿಂದ ಬೇಸರ, ಸ್ನೇಹದಿಂದಲೇ ಶತ್ರುತ್ವ, ಅಹಂಕಾರಕ್ಕೆ ಸೋಲು, ವ್ಯವಹಾರ ಮುಂದೂಡಿಕೆ ಇವೆಲ್ಲ ಈ ದಿನದ ವಿಶೇಷ‌.

ದಿನ ಭವಿಷ್ಯ : ಇಂದು ಈ ರಾಶಿಯವರ ವಾಗ್ವಾದ ಸ್ತ್ರೀಯರ ಜೊತೆ ಬೇಡ, ನಕಾರಾತ್ಮಕ ಪರಿಣಾಮ ಬೀರುವುದು...
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Oct 10, 2026 | 12:20 AM

Share

ಮೇಷ ರಾಶಿ:

ಅವಸರವಸರದಿಂದ ಇಂದಿನ ಕಾರ್ಯಗಳನ್ನು ಮಾಡಬೇಕಾಗಬಹುದು. ವಿರೋಧಿಗಳು ನಿಮ್ಮ ಬೆನ್ನುಬಿಡದೇ ಪೀಡಿಸಬಹುದು. ಇಂದು ಯಾವುದಕ್ಕೂ ಉಪಯೋಗವಾಗದೇ ಹಣವು ವ್ಯರ್ಥವಾಗಬಹುದು. ನಿಮ್ಮ ಬಗ್ಗೆ ಬಂದ ಕಾನೂನಿನ ತೀರ್ಪು ನಿಮಗೆ ಪೂರ್ಣ ಸಮಾಧಾನವನ್ನು ನೀಡದು. ನಿಮ್ಮ ಸಾಮರ್ಥ್ಯದ ಬಗ್ಗೆ ನಿಮಗೆ ಗೊಂದಲವಿರಬಹುದು. ಉದ್ಯೋಗದಲ್ಲಿ ಬದಲಾವಣೆಯನ್ನು ಬಯಸುವಿರಿ. ಜೀವನ ಸಂಗಾತಿಯ ಅನ್ವೇಷಣೆಯಲ್ಲಿ ನೀವು ಸೋಲಬಹುದು.

ವೃಷಭ ರಾಶಿ:

ಅಪರಿಚಿತರಿಂದ ಹಣಕ್ಕಾಗಿ ಒತ್ತಡ ಬರಬಹುದು. ಸಮಾರಂಭಗಳಿಗೆ ಆಹ್ವಾನವು ಬರಬಹುದು. ಸಮಯ ಪಾಲನೆಯಲ್ಲಿ ನೀವು ಬಹಳ ನಿಷ್ಠುರರಾಗುವಿರಿ. ಕೆಲಸದಲ್ಲಿ ನಿಮಗೆ ತೊಡಕುಗಳು ಬಂದರೆ ಸಹೋದ್ಯೋಗಿಗಳ ಸಹಾಯವನ್ನು ಪಡೆಯಿರಿ. ಸಂಗಾತಿಯ ಇಂಗಿತವನ್ನು ಇಡೇರಿಸಲಾರಿರಿ. ವೃತ್ತಿಯ ಸ್ಥಳದಲ್ಲಿ ನೀವು ಉತ್ತಮ ಪ್ರದರ್ಶನ ನೀಡುವಿರಿ. ಮಕ್ಕಳನ್ನು ವಿದ್ಯಾಭ್ಯಾಸಕ್ಕೆ ತೊಡಗಿಸಲು ಪ್ರಯತ್ನಶೀಲರಾಗುವಿರಿ.

ಮಿಥುನ ರಾಶಿ:

ನಿಮ್ಮ ಒರಟು ಸ್ವಭಾವದಿಂದ ಎಲ್ಲರಿಂದ ದೂರಾಗುವಿರಿ. ಸ್ತ್ರೀಯರು ಖರೀದಿಯಲ್ಲಿ ಸಮಯವನ್ನು ಕಳೆಯುವರು. ಭೋಗವಸ್ತುಗಳಿಂದ ಧನನಷ್ಟವು ಆಗುವುದು. ಪ್ರಯಾಣದಿಂದ ನಿಮಗೆ ಆಯಾಸವಾಗಬಹುದು. ಸಾಮಾಜಿಕ ಕೆಲಸವು ನಿಮಗೆ ಸಾಕೆನಿಸಬಹುದು. ವಿವಾಹಕ್ಕೆ ಸಂಬಂಧಿಸಿದಂತೆ ತಾಯಿಯ ಜೊತೆ ಕಲಹವಾಗುವುದು. ಆರಂಭ ಶೂರತ್ವವು ಅಪಾಯಕಾರಿಯಾಗುವುದು. ಸಮಯವನ್ನು ಸದುಪಯೋಗ ಮಾಡಿಕೊಳ್ಳಲು ಯೋಜನೆಯನ್ನು ರೂಪಿಸಿಕೊಳ್ಳುವಿರಿ.

ಕರ್ಕಾಟಕ ರಾಶಿ:

ಅಧಿಕ ತಿರುಗಾಟವು ನಿಮ್ಮ ಉತ್ಸಾಹವನ್ನು ಕಡಿಮೆ ಮಾಡುವುದು. ಉದ್ಯೋಗದ ಸ್ಥಳದಲ್ಲಿ ಇಂದು ನಿಮ್ಮನ್ನೇ ಹೆಚ್ಚು ಗಮನಿಸಬಹುದು. ಸ್ಥಿರಾಸ್ತಿಯ ಬಗ್ಗೆ ಯಾರಾದರೂ ಮಧ್ಯಪ್ರವೇಶವನ್ನು ಪಡೆಯಬಹುದು. ಉದ್ಯಮವು ಸ್ವಲ್ಪ ಹಿನ್ನಡೆಯನ್ನು ಪಡೆಯಬಹುದು. ದೂರ ಬಂಧುಗಳ‌ ಭೇಟಿಯಾಗುವುದು. ಕಲಹವಾಗುವ ಸಂದರ್ಭದಲ್ಲಿ ನೀವು ಜಾಣ್ಮೆಯನ್ನು ವಹಿಸಿ ಸುಮ್ಮನಿರುವಿರಿ. ಹಣದ ಹರಿವು ಇದ್ದರೂ ಖರ್ಚಿನ ದಾರಿಯೂ ತೆರೆದಿರುತ್ತದೆ.

ಸಿಂಹ ರಾಶಿ:

ಇಂದು ನಿಮಗೆ ಉಳಿಸಿಕೊಳ್ಳುವುದಕ್ಕಿಂತ ಕಳೆದುಕೊಳ್ಳುವುದಕ್ಕೆ ಆಸಕ್ತಿ ಹೆಚ್ಚು. ಮನೆಯ ಬೇಡದ ವಸ್ತುಗಳನ್ನು ಎಲ್ಲವನ್ನೂ ಖಾಲಿ ಮಾಡುವಿರಿ. ಸಿಕ್ಕ ಸಮಯವನ್ನು ಸದುಪಯೋಗ ಮಾಡಿಕೊಳ್ಳುವ ಬಗ್ಗೆ ಆಲೋಚಿಸಿ. ಪ್ರಾಣಿಗಳಿಂದ ನಿಮಗೆ ಭಯವಾಗಲಿದೆ. ವಿವಾಹವನ್ನು ಆಗದೇ ಇರಲು ನಿಮಗೆ ಹತ್ತಾರು ಕಾರಣಗಳು ಇರಲಿದೆ. ಕೆಲಸಗಳನ್ನು ಮುಂದೂಡುವುದು ನಿರಾಸಕ್ತಿಯನ್ನು ತೋರಿಸುವುದು. ಉತ್ತಮ‌ವಾದ ಭೂಮಿಯನ್ನು ನೀವು ಖರೀದಿಸಲು ಮುಂದಾಗುವಿರಿ.

ಕನ್ಯಾ ರಾಶಿ:

ಮಹಿಳಾ ಕಲಾವಿದರಿಗೆ ಪ್ರಶಂಸೆ ಇರಲಿದೆ. ಸಾಲಗಾರ ಬಾಧೆಯು ಕಡಿಮೆ ಇರುವುದರಿಂದ ಕೊಡಬೇಕಾದ ಹಣವನ್ನು ಯಾವುದಾರೂ ಮೂಲದಿಂದ ಸಂಗ್ರಹಿಸಿಕೊಳ್ಳಿ. ಮನೆಯಿಂದ ಇಂದಯ ದೂರವಿರಬೇಕಾಗುವುದು. ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು. ವಿವಾಹಯೋಗವು ಬಂದಿರುವುದರಿಂದ ಇನ್ನು ಹಿಂಜರಿಕೆ ಬೇಡ. ಕೃಷಿಯಲ್ಲಿ ಇಂದು ತೊಡಗಿಕೊಳ್ಳುವಿರಿ. ಧಾರ್ಮಿಕ ಆಚರಣೆಗಳಲ್ಲಿ ಆಸಕ್ತಿಯು ಹೆಚ್ಚು ಇರುವುದು.

ತುಲಾ ರಾಶಿ:

ನಿಮ್ಮನ್ನು ಯಾವುದಾದರೂ ಕಾರಣಕ್ಕೆ ಹೊಗಳುವವರು ಇರುವರು. ಹಿರಿಯರ ಮಾತನ್ನು ಕೇಳಿ, ತೊಂದರೆಯನ್ನು ತಪ್ಪಿಸಿಕೊಳ್ಳುವಿರಿ. ಇಷ್ಟ ವಸ್ತುಗಳನ್ನು ಖರೀದಿಸುವ ಸುದಿನ ಇಂದು. ಯಾವುದೇ ವ್ಯವಸ್ಥೆಗೆ ವಿರುದ್ಧವಾಗಿ ಹೋಗುವುದು ಬೇಡ. ದಾನವನ್ನು ಹೆಚ್ಚು ನಿಮ್ಮ‌ ನಿಯಮಗಳನ್ನು ಬಿಟ್ಟು ನೀವು ಹೋಗಲಾರಿರಿ. ಯಾರಾದರೂ ನಿಮ್ಮನ್ನು ಮೂರ್ಖರನ್ನಾಗಿ ಮಾಡಬಹುದು. ನೀವು ಹಣ ಸಂಪಾದನೆಗೆ ಆರಿಸಿಕೊಂಡ‌ ಮಾರ್ಗವು ಸರಿಯೆನಿಸದೇ ಇರಬಹುದು.

ವೃಶ್ಚಿಕ ರಾಶಿ:

ಇಂದು ಹಿತಶತ್ರುಗಳಿಂದ ಧನವು ನಷ್ಟವಾಗಲಿದೆ. ಉದ್ಯೋಗದಲ್ಲಿ ಹೆಚ್ಚಿದ ಜವಾಬ್ದಾರಿಯಿಂದ ನೀವು ಕುಟುಂಬಕ್ಕೆ ಸಮಯವನ್ನು ಕೊಡುವುದು ಕಷ್ಟವಾದೀತು. ಕೆಲವು ವಿಚಾರಗಳು ಸಮಯಮಿತಿಯನ್ನು ಹಾಕಿಕೊಳ್ಳದೇ ಇದ್ದರೆ ಕಾರ್ಯದಲ್ಲಿ ಪ್ರಗತಿ ಇರದು. ಹಣ ಸಂಪಾದನೆಯು ನಿಮಗೆ ಕಷ್ಟವೆನಿಸಿದ ಕಾರ್ಯವನ್ನು ಮೊದಲು ಆರಂಭಿಸುವಿರಿ. ರಕ್ಷಣಾ ವ್ಯವಸ್ಥೆಯಲ್ಲಿ ಇರುವವರಿಗೆ ತೊಂದರೆಗಳು ಆಗಬಹುದು. ನಿಯಮವನ್ನು ಮೀರಿ ವರ್ತಿಸುವುದು ಬೇಡ. ಸ್ನೇಹಿತರ ಜೊತೆ ಹೆಚ್ಚು ಮೋಜಿನಲ್ಲಿ ಸಮಯವನ್ನು ಕಳೆಯುವಿರಿ.

ಧನು ರಾಶಿ:

ಹೊಸ ಯೋಜನೆಯನ್ನು ನಿಮ್ಮದಾಗಿಸಿಕೊಳ್ಳುವಿರಿ. ದಾಂಪತ್ಯದಲ್ಲಿ ಸಾಮರಸ್ಯದ ಕೊರತೆಯು ಎದ್ದು ತೋರುವುದು.‌ ಸಂಪಾದನೆಗಾಗಿ ಇಬ್ಬರೂ ಪ್ರಯತ್ನಿಸಬೇಕಾಗಬಹುದು. ಯಾರದೋ ಮೇಲಿನ ಬೇಸರವನ್ನು ಮತ್ಯಾರದೋ ಮೇಲೆ ಸಿಟ್ಟಾಗಿ ವ್ಯಕ್ತಪಡಿಸುವಿರಿ. ಕೆಲವನ್ನು ಮರೆತು ಮುನ್ನಡೆಯುವುದೇ ಉತ್ತಮ. ಹೂಡಿಕೆಯು ನಿಮಗೆ ನಿರೀಕ್ಷಿತ ಆದಾಯವನ್ನು ನೀಡುವುದಿಲ್ಲ. ಅನಿರೀಕ್ಷಿತ ಅತಿಥಿಗಳ ಭೇಟಿಯಿಂದ ಗಲಿಬಿಲಿಗೊಳ್ಳುವ ಸಂದರ್ಭ.

ಮಕರ ರಾಶಿ:

ಇಂದಿನ ವಿಫಲತೆಯು ನಿಮಗೆ ಛಲವನ್ನು ತರಬಹುದು. ಕಛೇರಿಯಲ್ಲಿ ಒತ್ತಡವು ಇದ್ದರೂ ಅದೆನ್ನೆಲ್ಲ ಮರೆತು ಆರಾಮಾಗಿ ಇರುವಿರಿ. ನಿಮ್ಮ ಮಾತು ಎಲ್ಲರಿಗೂ ಇಷ್ಟವಾದೀತು. ಸಮಯವನ್ನು ಕಳೆಯಲು ಸ್ನೇಹಿತರ ಜೊತೆ ವಿಹಾರಕ್ಕೆ ಹೋಗಬಹುದು. ಯಾರದೋ ಮೇಲಿನ ಕೋಪಕ್ಕೆ ಮಕ್ಕಳಮೇಲೆ ಸಿಟ್ಟಾಗುವಿರಿ. ನಿಮ್ಮ ಮೇಲೆ ಬರುವ ಯಾವ ಅಪವಾದವನ್ನೂ ಮನಸ್ಸಿಗೆ ತೆಗೆದುಕೊಳ್ಳದೇ ನೆಮ್ಮದಿಯಿಂದ ಇರುವಿರಿ. ನಿಮ್ಮನ್ನು ತೋರಿಸುವ ಸಮಯವು ಇಂದು ಬರಬಹುದು.

ಕುಂಭ ರಾಶಿ:

ವ್ಯಾಪಾರದಲ್ಲಿ ಲಾಭವು ಕಡಿಮೆ ಕಾಣಿಸುವುದು. ನೀವು ಧಾರ್ಮಿಕ ಆಚರಣೆಯಲ್ಲಿ ಆಸಕ್ತಿಯು ಹೆಚ್ಚು ಇರಲಿದೆ. ಕೆಲಸಕ್ಕೆ ಸಂಬಂಧಿಸಿದಂತೆ ಗೊಂದಲವು ಇರಬಹುದು. ಹೆಚ್ಚು ಒತ್ತಡವು ನಿಮ್ಮ ಆರೋಗ್ಯವನ್ನು ಕೆಡಿಸಬಹುದು. ನಿಮ್ಮ ರಹಸ್ಯವನ್ನು ಯಾರ ಬಳಿಯಾದರೂ ಹೇಳಿಕೊಳ್ಳಬೇಕಾಗಿ ಬರಬಹುದು. ಹೊಸ ಉದ್ಯಮವನ್ನು ಅರಸುವವರು ಹೆಚ್ಚು ಅನ್ವೇಷಣೆಯನ್ನು ಮಾಡಬೇಕಾದೀತು. ನೇರ ಮಾತಿನಿಂದ ವ್ಯಾಪರಕ್ಕೆ ತೊಂದರೆ ಉಂಟಾಗಬಹುದು.

ಮೀನ ರಾಶಿ:

ಸಾಮಾಜಿಕವಾಗಿ ಮನ್ನಣೆ ಸಿಕ್ಕರೂ ಅದನ್ನು ನೀವು ನಿರಾಕರಿಸುವಿರಿ. ವ್ಯಾವಹಾರಿಕವಾಗಿ ನೀವು ಸಡಿಲಾಗುವುದು ಬೇಡ. ಹೆಚ್ಚಿನ ಸಮಯವನ್ನು ಅಧ್ಯಯನದಲ್ಲಿ ಕಳೆಯುವಿರಿ. ನಿಮ್ಮ ಸಂಪತ್ತಿಗೆ ಇತರರ ದೃಷ್ಟಿಯು ಬೀಳಬಹುದು.‌ ಬರಬೇಕಾದ ಹಣವು ವಿಳಂಬವಾಗಬಹುದು.‌ ಅತಿಯಾದ ನಿರೀಕ್ಷೆಯಲ್ಲಿ ನೀವು ಉಳಿದ ವಿಚಾರಗಳಲ್ಲಿ ಮೈ ಮರೆಯುವಿರಿ. ಹೆಚ್ಚಿದ ಕುಟುಂಬದ ಜವಾಬ್ದಾರಿಗಳಿಂದ ನಿಮ್ಮ ಆಸಕ್ತಿಯ ಕ್ಷೇತ್ರಗಳಲ್ಲಿ ಗಮನ ಕಡಿಮೆ ಆಗುವುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ವರ್ಷ, ಚಾಂದ್ರಮಾಸ : ಭಾದ್ರಪದ, ಸೌರ ಮಾಸ : ಕನ್ಯಾ, ಮಹಾನಕ್ಷತ್ರ : ಹಸ್ತಾ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ : ಅಮಾವಾಸ್ಯಾ, ನಿತ್ಯನಕ್ಷತ್ರ : ಹಸ್ತಾ, ಯೋಗ : ಐಂದ್ರ, ಕರಣ : ನಾಗವಾನ್, ಸೂರ್ಯೋದಯ – 06 – 10 am, ಸೂರ್ಯಾಸ್ತ – 06 – 02 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:08 – 10:38, ಯಮಗಂಡ ಕಾಲ 13:36 – 15:05, ಗುಳಿಕ ಕಾಲ 06:10 – 07:39

– ಲೋಹಿತ್ ಹೆಬ್ಬಾರ್ – 8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಲೋಹಿತ ಹೆಬ್ಬಾರ್​, ಇಡುವಾಣಿ
ಲೋಹಿತ ಹೆಬ್ಬಾರ್​, ಇಡುವಾಣಿ

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು