AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಮೋಸ ಹೋಗುವರು

ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ವರ್ಷ ಋತುವಿನ ಭಾದ್ರಪದ ಮಾಸದ ಕೃಷ್ಣ ಪಕ್ಷದ ಸಪ್ತಮೀ/ಅಷ್ಟಮೀ ತಿಥಿಯ ಶನಿವಾರದಂದು ವಿಪರೀತ ನೋವು, ಕಾರ್ಯಗಳಿಗೆ ವಿಘ್ನ, ಅಸ್ಪಷ್ಟ ಮಾತಿನಿಂದ ಕಲಹ, ವ್ಯವಹಾರದ ನಿಯಂತ್ರಣ, ಕೃತಘ್ನತೆ, ವೇತನದಿಂದ ಸಂಭ್ರಮ, ನೌಕರರ ವಂಚನೆ, ವಿಳಂಬಕ್ಕೆ ಬೇಸರ ಇವೆಲ್ಲ ಇಂದಿನ ವಿಶೇಷ.

ದಿನ ಭವಿಷ್ಯ: ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಮೋಸ ಹೋಗುವರು
ದಿನ ಭವಿಷ್ಯImage Credit source: Getty images
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Oct 03, 2026 | 1:02 AM

Share

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ವರ್ಷ, ಚಾಂದ್ರಮಾಸ : ಭಾದ್ರಪದ, ಸೌರ ಮಾಸ : ಕನ್ಯಾ, ಮಹಾನಕ್ಷತ್ರ : ಹಸ್ತಾ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ : ಸಪ್ತಮೀ/ಅಷ್ಟಮೀ, ನಿತ್ಯನಕ್ಷತ್ರ : ಆರ್ದ್ರಾ, ಯೋಗ : ವರಿಯಾನ್ , ಕರಣ : ಬವ, ಸೂರ್ಯೋದಯ – 06 – 09 am, ಸೂರ್ಯಾಸ್ತ – 06 – 07 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:09 – 10:39, ಯಮಗಂಡ ಕಾಲ 13:38 – 15:08, ಗುಳಿಕ ಕಾಲ 06:10 – 07:40.

ಮೇಷ ರಾಶಿ: ಮಕ್ಕಳ‌ ಮೇಲೆ ನಿಮಗೆ ಅತಿಯಾದ ಮೋಹವು ಇರಲಿದೆ. ದಾಂಪತ್ಯದಲ್ಲಿ ನೀವು ಸಂತೋಷವಾಗಿರಲು ಹೊಸ ಆಯಾಮವನ್ನು ಕಂಡುಕೊಳ್ಳುವಿರಿ.‌ ಅಯ್ಯೋ ಪಾಪ ಎನಿಸುವವರಿಗೆ ಕಿಂಚಿತ್ ಸಹಾಯವನ್ನೂ ಮಾಡುವಿರಿ. ಕುಟುಂಬವನ್ನು ಸಂತೋಷದಿಂದ ಇಡುವಿರಿ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಯಾರದೋ ತಪ್ಪಿಗೆ ನೀವು ಉತ್ತರಿಸಬೇಕಾಗಬಹುದು. ನಿಮ್ಮ ಮಾತನ್ನು ಎಲ್ಲರಿಗೂ ಅರ್ಥವಾಗುವಂತೆ ತಿಳಿಸಿ. ಮಾತು ಅಲ್ಪವಾಗಿದ್ದರೂ ಯೋಗ್ಯವಾದ ಮಾತುಗಳನ್ನು ಆಡುವಿರಿ.

ವೃಷಭ ರಾಶಿ: ಚಂಚಲವಾದ ಮನಸ್ಸನ್ನು ನೀವು ನಿಯಂತ್ರಿಸಲು ನಾನಾ ವಿಧವಾದ ಕಸರತ್ತು ಮಾಡುವಿರಿ. ಉದ್ಯೋಗದ ಸ್ಥಳದಲ್ಲಿ ಅಸಮಾಧಾನವಿರಲಿದ್ದು, ನೆಮ್ಮದಿಯಿಂದ ಕೆಲಸವನ್ನು ಮಾಡಲು ಕಷ್ಟವಾದೀತು. ಎಲ್ಲ ಕಾರ್ಯಗಳನ್ನೂ ಮುಗಿಸಿ ಆರಾಮಾಗಿ ಇರುವಿರಿ. ಇಂದಿನ‌ ನಿಮ್ಮ ಒತ್ತಡವನ್ನು ನಿವಾರಿಸಿಕೊಳ್ಳಲು ಏಕಾಂತಕ್ಕೆ ತೆರಳುವಿರಿ. ಸ್ನೇಹಿತರು ಅವರಿಗೆ ಅರಿವಿಲ್ಲದೇ ನಿಮ್ಮನ್ನು ತಪ್ಪು ದಾರಿಗೆ ಕರೆದೊಯ್ಯಬಹುದು.‌

ಮಿಥುನ ರಾಶಿ: ನಿಮ್ಮ ಬಿಡುವಿನ ದಿನದಲ್ಲಿಯೂ ಕುಟುಂಬದವರ ಬಗ್ಗೆ ಕಾಳಜಿ ಇರದು. ನೀವು ಮಾಡಬೇಕಂದು ಹೊರಟ ಕೆಲಸದಲ್ಲಿ ಜಯ ಆಗಲಿದೆ. ಸ್ತ್ರೀರಿಂದ ನಿಮಗೆ ವೃತ್ತಿಯಲ್ಲಿ ಸಹಕಾರವು ಸಿಗಲಿದೆ. ಹೊಸ ಬಂಧುಗಳ ಪರಿಚಯವು ನಿಮಗಾಗುವುದು. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಉಂಟಾಗಬಹುದು. ಚಮತ್ಕಾರದಂತೆ ಇಂದಿನ ಕೆಲಸವನ್ನು ಮಾಡುವಿರಿ. ನಿಮಗೆ ನಿರ್ದಿಷ್ಟ ವೇತನವನ್ನು ಪಡೆಯುವ ಹಂಬಲವಿರುವುದು. ಕಾನೂನಾತ್ಮಕ ವಿಚಾರಕ್ಕೆ ನಿಮ್ಮ ಒತ್ತು ಹೆಚ್ಚಿರುವುದು.

ಕರ್ಕಾಟಕ ರಾಶಿ: ನೀವು ಇಂದು ನಿಮಗೆ ಮಾತ್ರ ಗೊತ್ತಿರುವ ಇನ್ನೊಬ್ಬರ ರಹಸ್ಯವನ್ನು ಹೇಳುವಿರಿ. ಬಾಡಿಗೆ ಮನೆಯವರಾಗಿದ್ದರೆ ಮನೆಯನ್ನು ಬದಲಿಸುವಿರಿ. ಭೂವ್ಯವಹಾರವನ್ನು ಮಾಡುವವರಿಗೆ ಹೆಚ್ಚು ಲಾಭವು ಸಿಗಲಿದೆ. ಮನೆಯ ನವೀಕರಣದ ಕಡೆ ಯೋಚನೆ ಮಾಡುವಿರಿ. ಸ್ವಂತ ವಾಹನದ ದುರಸ್ತಿಗೆ ಖರ್ಚಾಗಬಹುದು. ನಾಯಕರನ್ನು ಹಿಂಬಾಲಿಸುವ ಬದಲು ನೀವೇ ನಾಯಕರಾಗಬಹುದು. ನಿಮ್ಮ ಬಗ್ಗೆಯೇ ನಿಮಗೆ ಕೀಳು ಅರಿಮೆ ಉಂಡಾಗಬಹುದು.‌

ಸಿಂಹ ರಾಶಿ: ಅಧಿಕಾರ ಮತ್ತು ಸಂಪತ್ತು ಪ್ರದರ್ಶನಕ್ಕೆ ಅಲ್ಲ ಎಂಬುದು ತಿಳಿಯುವುದು. ತೀರಿಸಲಾಗದಷ್ಟು ಮಾಡಿದ ಸಾಲಬಾಧೆಯಿಂದ ನಿಮಗೆ ಬಹಳ ತೊಂದರೆ. ನಿಮಗೆ ಸಹಾಯವನ್ನು ಕೇಳಲು ಮುಜುಗರವಾದೀತು. ವ್ಯಾಪಾರದ ಸಲುವಾಗಿ ದೂರಪ್ರಯಾಣವನ್ನು ಮಾಡಬೇಕಾಗಬಹುದು. ಸಣ್ಣ ವಿಚಾರದಲ್ಲಿ ನಿಮಗೆ ಇನ್ನೊಬ್ಬರ ಜೊತೆ ಕಲಹವಾದೀತು. ಒಳ್ಳೆಯ ಸಮಯವನ್ನು ನೀವು ನಿರೀಕ್ಷಿಸುವಿರಿ. ಉಳಿತಾಯವನ್ನೂ ಖರ್ಚನ್ನು ಸಮಾನವಗಿ ಕಾಣುವುದು ಕಷ್ಟ.

ಕನ್ಯಾ ರಾಶಿ: ನಿಮ್ಮ ಹಳೆಯ ಸಂಬಂಧಗಳು ಸಂಬಂಧಗಳಾಗಿಯೇ ಇರಲಿ. ಮಕ್ಕಳ ಅನಾರೋಗ್ಯದ ಕಾರಣ ಅವರ ಜೊತೆ ಇರಬೇಕಾಗುವುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಂಡು ಪಾಲಕರಿಗೆ ಆತಂಕವಾಗುವುದು. ಸ್ನೇಹಿತರಿಂದ ಉಡುಗೊರೆಗಳು ಸಿಗಬಹುದು. ತಾಯಿಯ ಪ್ರೀತಿಯು ನಿಮಗೆ ಹೆಚ್ಚು ಸಿಗುವುದು. ಇಂದು ನಿಮ್ಮ ಕೋಪವನ್ನು ನಿಯಂತ್ರಣಕ್ಕೆ ತಂದುಕೊಳ್ಳುವಿರಿ. ನಿಮ್ಮ ಯೋಜನೆಯನ್ನು ಸರಿಯಾಗಿ ನಿರ್ವಹಿಸಲು ಕಷ್ಟವಾದೀತು.

ತುಲಾ ರಾಶಿ: ಪ್ರೇಮಪ್ರಕರಣವು ನಿಮಗೆ ದುಃಖವನ್ನು ಕೊಟ್ಟೀತು. ನಿಮ್ಮನ್ನು ನಿಂದಿಸುವವರ ವಿರುದ್ಧ ಅತಿಯಾದ ಕೋಪವು ಬರಲಿದೆ. ಶತ್ರುಗಳೂ ನಿಮಗೆ ಉಪದೇಶ ಮಾಡುವರು. ಮಕ್ಕಳಿಗಾಗಿ ನೀವು ಬದಲಾವಣೆಯನ್ನು ಮಾಡಿಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ನೀವು ಬಹಳ ಅನಾದರ ತೋರುವುರಿ. ಆರೋಗ್ಯವು ನಿಮಗೆ ವರವಾಗಿದ್ದರೂ ಅದು ಕೆಲವು ಸಮಯ ಶಾಪವಾಗಿಯೂ ಪರಿಣಮಿಸಬಹುದು.

ವೃಶ್ಚಿಕ ರಾಶಿ: ಹಣಕಾಸಿನ ವಿಚಾರದಲ್ಲಿ ನಿಮಗೆ ಮೋಸವಾಗಲಿದ್ದು, ಅದರಲ್ಲೂ ನಿಮ್ಮವರೇ ಅದನ್ನು ಮಾಡಿದ್ದು ಎಂಬ ವದಂತಿಯು ನಿಮಗೆ ಸಹಿಸಲು ಅಸಾಧ್ಯವಾದುದಾಗಿದೆ. ನಿಮ್ಮ ಸಣ್ಣ ವ್ಯಾಪಾರವೂ ಆದಾಯದ ಮೂಲವಾಗಬಹುದು. ಎಂದೋ ನಿರೀಕ್ಷಿಸಿದ್ದ ಬಡ್ತಿಯು ಇಂದು ಸಿಗಲಿದೆ. ಯಾರಾದರೂ ಹುಳಿ ಹಿಂಡುವ ಕೆಲಸಕ್ಕೆ ಬರಬಹುದು. ಮಾತಿನ ನಿಯಂತ್ರಣವು ತಪ್ಪಿ‌ಹೋಗಲಿದೆ. ಬಂಧುಗಳು ನಿಮ್ಮ ಮನೆಗೆ ಬರಲಿದ್ದಾರೆ.

ಧನು ರಾಶಿ: ಕಾನೂನಿನಿಂದ ಜಯಿಸುವ ಉತ್ಸಾಹವು ಇಂದು ನಿರುತ್ಸಾಹದಲ್ಲಿ ಕೊನೆಯಾಗಲಿದೆ. ಎಲ್ಲವೂ ವಿಧಿಯ ನಿಯಮದಂತೆ ಆಗುತ್ತದೆ ಎಂಬ ಸತ್ಯವನ್ನು ನೀವು ಅರಿತರೂ ದುಃಖವು ಹೆಚ್ಚಾಗುವುದು. ನಿಮ್ಮರನ್ನು ನೀವು ದೂರ ಮಾಡಿಕೊಳ್ಳುವಿರಿ. ನಿಮಗೆ ಬರುವ ವಿವಾಹ ಸಂಬಂಧವನ್ನು ಬೇರೆ ಬೇರೆ ಕಾರಣಗಳನ್ನು ಕೊಟ್ಟು ನೀವು ನಿರಾಕರಿಸುವಿರಿ.‌ ನಿರ್ಭೀತಿಯು ನಿಮ್ಮ ಮಾರ್ಗವನ್ನು ತಪ್ಪಿಸಬಹುದು. ನಿಮ್ಮ ನೇರ ನುಡಿಗಳು ಇನ್ನೊಬ್ಬರಿಗೆ ನೋವನ್ನು ಕೊಟ್ಟೀತು.

ಮಕರ ರಾಶಿ: ನೀವು ಎಲ್ಲದಕ್ಕೂ ಅನುಕೂಲ ಯೋಗವನ್ನು ನೋಡುತ್ತ ಕುಳಿತಿರಲು ಆಗದು. ನೀವು ಪಡೆದುಕೊಂಡ ವಿರಾಮವನ್ನು ಆನಂದದಿಂದ ಕಳೆಯುವಿರಿ. ಸ್ನೇಹಿತರ ಮೇಲೆ ನಿಮಗೆ ಶಂಕೆ ಉಂಟಾಗಬಹುದು. ಹಣದ ವಿಚಾರವನ್ನು ನೀವು ಯಾರ ಬಳಿಯೂ ಹೇಳುವುದು ಬೇಡ. ಇಬ್ಬರ ನಡುವಿನ ಶೀತಲ ಸಮರವು ತಿಳಿಯಾಗಬಹುದು. ನಿಮ್ಮದೇ ಆದ ಬಳಗವು ಇರಲಿದ್ದು ಅವರ ಜೊತೆ ಸಮಯವನ್ನು ಕಳೆಯುವಿರಿ. ಕೃತಕತೆಯನ್ನು ಹೆಚ್ಚು ಕಾಲ ಪ್ರದರ್ಶಿಸಲಾಗದು.

ಕುಂಭ ರಾಶಿ: ನಿಮ್ಮನ್ನು ಸಂತೋಷಪಡಿಸಲು ನಿಮ್ಮನ್ನು ಚಂದದಲ್ಲಿ ಹೊಗಳುವರು. ಪುಣ್ಯಸ್ಥಳಕ್ಕೆ ಹೋಗುವ ಮನಸ್ಸಾಗುವುದು. ಕುಟುಂಬ ನಿರ್ವಹಣೆಯನ್ನು ಒತ್ತಡದಿಂದ ನೀವು ಮಾಡಬೇಕಾದೀತು. ತೆರೆದ ಮನಸ್ಸಿನಿಂದ ನೀವು ಯಾವ ಕಾರ್ಯವನ್ನೂ ಮಾಡುವುದೂ ಕಷ್ಟವಾದೀತು. ಯಾರಿಗಾದರೂ ನಿಮ್ಮ ವರ್ತನೆಯು ಇಷ್ಟವಾಗದೇ ಹೋಗಬಹುದು. ನಿಮಗೆ ಸೃಜನಾತ್ಮಕ ಕಾರ್ಯದಲ್ಲಿ ಆಸಕ್ತಿ ಹೆಚ್ಚು ಕಾಣಿಸುವುದು.

ಮೀನ ರಾಶಿ: ನಿಮ್ಮ ಮಾನಸಿಕ ತೊಳಲಾಟಕ್ಕೆ ಪೂರ್ಣವಿರಾಮದ ಅವಶ್ಯಕತೆ ಇದ್ದು, ಸರಿಯಾದ ವ್ಯಕ್ತಿಯಿಂದ ಅದು ಸಾಧ್ಯವಾಗುವುದು. ಆಪ್ತರನ್ನು ದೂರ ಮಾಡಿಕೊಂಡು ಸಂಕಟಪಡಬೇಕಾದೀತು. ಧಾರ್ಮಿಕ ಕಾರ್ಯಗಳಿಗೆ ವಿದೇಶ ಗಮನ ಸಾಧ್ಯತೆ. ಸಂಗಾತಿಯ ವಿಚಾರದಲ್ಲಿ ನಿಮಗೆ ಅಸಮಾಧಾನ ಎದ್ದು ಕಾಣುವುದು. ನಿಮ್ಮನ್ನು ಇಷ್ಟಪಡುವವರಿಗೆ ಸಮಯವನ್ನು ಕೊಡಿ. ಜಾಲತಾಣದಿಂದ ಅನೇಕರ ಸಂಪರ್ಕ ಸಾಧ್ಯತೆ.

ಲೋಹಿತ್ ಹೆಬ್ಬಾರ್ – 8762924271 (what’s app only)

Follow Us
ಲೋಹಿತ ಹೆಬ್ಬಾರ್​, ಇಡುವಾಣಿ
ಲೋಹಿತ ಹೆಬ್ಬಾರ್​, ಇಡುವಾಣಿ

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ