ದಿನ ಭವಿಷ್ಯ: ಇಂದು ಈ ರಾಶಿಯವರು ಅಪಮಾನವನ್ನು ವ್ಯಕ್ತಪಡಿಸಲು ಕಾಯುವರು…

ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ವರ್ಷ ಋತುವಿನ ಭಾದ್ರಪದ ಮಾಸದ ಶುಕ್ಲ ಪಕ್ಷದ ಪೂರ್ಣಿಮಾ ತಿಥಿಯ ಶನಿವಾರದಂದು ಕಾಯುವಿಕೆ ಕಷ್ಟ, ದೇವರ ಕಾರ್ಯ, ನಿರಪೇಕ್ಷಿತ ಸಹಾಯ, ಅನಾರೋಗ್ಯದಿಂದ ಭಯ, ಯಂತ್ರಗಳ ಬಳಕೆ, ಹೊಸ ಜವಾಬ್ದಾರಿಯಿಂದ ಒತ್ತಡ, ಸಾಲದ ಹಣ ವಾಪಾಸು ಇದೆಲ್ಲ ದಿನದ ವಿಶೇಷ‌.

ದಿನ ಭವಿಷ್ಯ: ಇಂದು ಈ ರಾಶಿಯವರು ಅಪಮಾನವನ್ನು ವ್ಯಕ್ತಪಡಿಸಲು ಕಾಯುವರು...
ದಿನ ಭವಿಷ್ಯ
Edited By:

Updated on: Sep 26, 2026 | 12:40 AM

ಮೇಷ ರಾಶಿ:

ಕಷ್ಟವಾದರೂ ಸಂತೋಷದಿಂದ ಕೆಲಸವನ್ನು ಮಾಡುವಿರಿ. ನಿಮಗೆ ಇಂದು ಪ್ರೇಮದ ವಿಚಾರದಲ್ಲಿ ಆಸಕ್ತಿ ಹೆಚ್ಚಾಗಿದ್ದು ಪ್ರೇಮಿಯನ್ನು ನೋಡಲು ಹಂಬಲಿಸುವಿರಿ. ಮಹಿಳಾ ಉದ್ಯೋಗಿಗಳಿಗೆ ಸೂಕ್ತಸ್ಥಾನವು ಸಿಗಲಿದೆ. ಎಲ್ಲಿಯೋ ಹೂಡಿಕೆ‌ ಮಾಡಿ ನಷ್ಟಮಾಡಿಕೊಳ್ಳುವಿರಿ. ಯಾರ ಮೇಲೂ ದೂರನ್ನು ಹಾಕುವುದು ಬೇಡ. ಭೂವಿಚಾರದ ಕಾನೂನು ಸಮರದಲ್ಲಿ ನಿಮಗೆ ಆಸಕ್ತಿ ಹೆಚ್ಚಾಗಬಹುದು. ಆರ್ಥಿಕವಾಗಿ ಸಬಲರಾಗಲು ವಿವಿಧ ಆರ್ಥಿಕ ಮೂಲವನ್ನು ಹುಡುಕುವಿರಿ.

ವೃಷಭ ರಾಶಿ:

ಬೇರೆಯವರು ಖುಷಿಪಡುವಂತೆ ಮಾತನಾಡುವಿರಿ. ಆರ್ಥಿಕ ಸಹಾಯವು ಸಿಗದೇ ಕಷ್ಟಪಡಬೇಕಾದೀತು. ಮನಸ್ಸು ಚಂಚಲವಾಗಿ ಕೆಲಸವು ಸೂಚಿಸದೇ ಇದ್ದೀತು. ಚರ ಆಸ್ತಿಯನ್ನು ಕಳೆದುಕೊಳ್ಳಬಹುದು. ಯಾರಾದರೂ ನಿಮಗೆ ಸ್ಫೂರ್ತಿಯಾಗಬಹುದು. ಶೈಕ್ಷಣಿಕ ಕೆಲಸದಲ್ಲಿ ವಿರಾಮವಿರದು. ಬಂಧುಗಳ ಭೇಟಿಯು ಸುಖವನ್ನು ಕೊಡುವುದು. ಒಂದೇ ವಿಚಾರವನ್ನು ಮನನ‌ ಮಾಡುವಿರಿ. ಸಂಗಾತಿಯ ನಡುವೆ ಭಿನ್ನಾಭಿಪ್ರಾಯ ಬರಲಿದೆ.

ಮಿಥುನ ರಾಶಿ:

ಆಪ್ತರು ನಿಮಗೆ ಬರುವ ಸಂಕಟದಲ್ಲಿ ಜೊತೆಯಾಗುವರು. ಇನ್ನೊಬ್ಬರಿಗೆ ಸಹಾಯ ಮಾಡುವ ಮನಸ್ಸಾಗುವುದು. ನಿರೀಕ್ಷಿಸಿದಷ್ಟು ಸಂಪತ್ತು ಸಿಗದೇ ಹೋದೀತು. ಯಾರದೋ ತಪ್ಪಿಗೆ ನೀವು ಬಲಿಯಾಗಬೇಕಾಗುವುದು. ಐಷಾರಾಮಿ ವಸ್ತುಗಳನ್ನು ಖರೀದಿಸಿದರೂ ನಿಮಗೆ ಸಂತೃಪ್ತಿ ಸಿಗದು. ಮನೋರಂಜನೆಯಲ್ಲಿ ಹೆಚ್ಚು ಸಮಯವನ್ನು ಕಳೆಯುವಿರಿ. ಯಂತ್ರದ ಮಾರಾಟದಿಂದ ಲಾಭವಿರಲಿದೆ. ಸಣ್ಣ ವ್ಯಾಪಾರದಲ್ಲಿ ಅಲ್ಪ ಲಾಭವಾಗಲಿದೆ.

ಕರ್ಕಾಟಕ ರಾಶಿ:

ನಿಮಗೆ ಬರಬೇಕಾದ ಹಣವು ಅನಿರೀಕ್ಷಿತ ರೀತಿಯಲ್ಲಿ ಬಂದರೂ ಅದು ಇನ್ನೊಂದು ಮಾರ್ಗದಲ್ಲಿ ಖಾಲಿಯಾಗುವುದು. ನಿಮಗೆ ಇಷ್ಟವಿಲ್ಲದವರನ್ನು ಮನಸ್ಸಿನಿಂದ ಹೊರಹಾಕಿ. ಆತುರದಲ್ಲಿ ಗೃಹನಿರ್ಮಾಣವನ್ನು ಮಾಡಿಕೊಂಡು ಅನಂತರ ಸಿಟ್ಟಾಗುವಿರಿ. ವಾಹನವನ್ನು ಚಾಲಾಯಿಸುವಾಗ ಅನೇಕ ನಕಾರಾತ್ಮಕ ಯೋಚನೆಗಳು ಬರಲಿದೆ. ಸದುದ್ದೇಶದ ಸಂಬಂಧಗಳು ನಿಮಗೆ ಯಶಸ್ಸು ಕೊಡುವುದು. ಇಂದು ಹೆಚ್ಚು ಶ್ರಮವಹಿಸಿ ಕೆಲಸವನ್ನು ಮಾಡಬೇಕಾದೀತು.

ಸಿಂಹ ರಾಶಿ:

ನಿಮ್ಮ ಕರ್ತವ್ಯಗಳನ್ನು ಮರೆಯು ಸಾಧ್ಯತೆ ಇದ್ದು, ಯಾರೋ ಅದನ್ನು ನೆನಪಿಸಬೇಕಾದೀತು. ಹೂಡಿಕೆಯನ್ನು ಮಾಡಿ ಹೊಸ ಚಿಂತೆಯನ್ನು ತಂದುಕೊಳ್ಳುವಿರಿ. ಇಷ್ಟ ಮಿತ್ರರ ಜೊತೆ ಸಮಯವನ್ನು ಕಳೆಯುವಿರಿ. ಅಸೂಯೆಯ ಕಾರಣ ಯಾವ ಸಂತೋಷವ‌ನ್ನೂ ನೀವು ಪೂರ್ಣವಾಗಿ ಅನುಭವಿಸಲಾರಿರಿ. ನಿಮಗೆ ಬರಬೇಕಾದ ಹಣವನ್ನು ಕೇಳಿ ಪಡೆಯುವಿರಿ. ನಿಮ್ಮ ಸ್ಥಾನವನ್ನು ನೀವು ಬಿಟ್ಟಕೊಡುವಿರಿ. ಮತ್ತೆ ಆರೋಗ್ಯವು ಕಡೆವುದು ನಿಮಗೆ ಕಷ್ಟವಾಗುವುದು.

ಕನ್ಯಾ ರಾಶಿ:

ನಿಮಗೆ ವಿದೇಶಕ್ಕೆ ಸಂಬಂಧಪಟ್ಟ ವ್ಯವಹಾರದಲ್ಲಿ ಪಾಲುದಾರಿಕೆ ಸಿಗಬಹುದು. ಒಂದೇ ಕೆಲಸದಲ್ಲಿ ಮಗ್ನರಾಗಿ ಮಾಡಬೇಕಾದ ಕೆಲಸವನ್ನು ಮರೆಯಬಹುದು. ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗುವ ಮನಸ್ಸಾಗುವುದು. ಹೊಸ ವಸ್ತುಗಳು ನಿಮಗೆ ಖುಷಿಯನ್ನು ಕೊಟ್ಟೀತು. ಪ್ರೇಮ ಸಂಬಂಧವು ದಾರಿತಪ್ಪಬಹುದು. ನಿಮ್ಮಲ್ಲಿರುವ ಅಲ್ಪ ಹಣವನ್ನು ಸೇರಿಸಿ ಕೊಡಬೇಕಾದವರಿಗೆ ಹಣವನ್ನು ಕೊಡುವಿರಿ.

ತುಲಾ ರಾಶಿ :

ನಿಮ್ಮದಾದ ಸಂಪತ್ತನ್ನು ಇನ್ನೊಬ್ಬರಿಗೆ ಕೊಡಬೇಕಾಗುವುದು. ನಿಮ್ಮ ವ್ಯಕ್ತತ್ವಕ್ಕೆ ಕಳಂಕವನ್ನು ಶತ್ರುಗಳು ಮಸಿ ಬಳಿಯಬಹುದು. ಬೆನ್ನು ನೋವು ನಿಮ್ಮ ಯಾವ ಕೆಲಸವನ್ನೂ ಮಾಡಲು ಕೊಡದು. ಉದ್ಯೋಗಕ್ಕೆ ವಿರಾಮ ಹೇಳಿ ಹೊರಗೆ ಸುತ್ತಾಟವನ್ನು ಮಾಡಲಿದ್ದೀರಿ. ಸಂಗಾತಿಯ ಜೊತೆ ಹಳೆ ವಿಚಾರಗಳನ್ನು ಮಾತನಾಡುವಿರಿ. ಅಪರೂಪಕ್ಕೆ ಸಿಕ್ಕ ಆಹಾರವನ್ನು ಮಿತವಾಗಿ ಸೇವಿಸಿ, ಆರೋಗ್ಯವನ್ನು ಕಾಅಡಿಕೊಳ್ಳಿ.

ವೃಶ್ಚಿಕ ರಾಶಿ:

ನಿಮ್ಮ ಮಕ್ಕಳ ಬಗ್ಗೆ ನೀವು ಸರಿಯಾಗಿ ತಿಳಿದುಕೊಳ್ಳುವ ಅವಶ್ಯಕತೆ ಇದೆ. ವ್ಯಾಪರವು ನಷ್ಟವಾದರೂ ತಾಳ್ಮೆಯಿಂದ ಇದ್ದು ಇದನ್ನು ಮುಂದುವರಿಸಿ. ಮೂರನೇ ವ್ಯಕ್ತಿಗಳ ಒತ್ತಡಕ್ಕೆ ಮಣಿದು ನಿಮ್ಮ ಕೆಲಸ ಹಾಗೂ ನಿರ್ಧಾರವನ್ನು ಬಯಸುವಿರಿ. ವಿದೇಶವನ್ನು ಸುತ್ತುವ ಮನಸ್ಸಾಗುವುದು. ವಿವಾಹಕ್ಕೆ ಸಂಬಂಧಿಸಿದಂತೆ ಮಾತುಕತೆ ಸ್ಪಂದನ ಇರದು. ಸ್ವಾಲಂಬಿಯಾಗುವುದು ಕೂಡಲೇ ಕಷ್ಟ.

ಧನು ರಾಶಿ:

ಧಾರ್ಮಿಕ ಕಾರ್ಯಗಳಿಗೆ ಮುಂದಾಳುತ್ವವವನ್ನು ವಹಿಸುವಿರಿ. ನಿಮ್ಮ ಬಳಿ ಸಾಲವನ್ನು ಕೇಳಬಹುದು. ವೈದ್ಯರಿಗೆ ಪ್ರಶಂಸೆ ಸಿಗಬಹುದು.‌ ಸರ್ಕಾರಿ ಉದ್ಯೋಗಿಗಳ ಸ್ಥಾನವು ಬದಲಾಗುವುದು. ಎಲ್ಲವನ್ನೂ ತಿಳಿದಿದ್ದೇ‌ನೆ ಎಂಬ ಅಹಂಕಾರ ಬೇಡ. ಮನೆಯ ವಾತಾರಣದಲ್ಲಿ ಇರಲು ಖುಷಿಪಡುವಿರಿ. ಗುರಿಯ ನಿರ್ಧಾರವನ್ನು ಸಕಲ ಪ್ರಯತ್ನಗಳಿಂದ ಮಾಡಿ. ನಿಮ್ಮ ವಸ್ತುಗಳನ್ನು ಸ್ನೇಹಿತನಿಗೆ ದಾನವಾಗಿ ಕೊಡುವಿರಿ. ಮಕ್ಕಳ‌ ಜೊತೆ ಸಮಯವನ್ನು ಕಳೆಯುವುದು ಇಷ್ಟವಾದೀತು.

ಮಕರ ರಾಶಿ:

ಸಂಗಾತಿಯ ನೋವನ್ನು ಕೇಳುವಷ್ಟು ತಾಳ್ಮೆ ಇಲ್ಲವಾದೀತು. ಸರಿಯಾದ ಸಮಯಕ್ಕೆ ವೈದ್ಯರ ಬಳಿ ಹೋಗಿ ಆರೋಗ್ಯವನ್ನು ಸರಿ ಮಾಡಿಕೊಳ್ಳುವಿರಿ. ನಿಮ್ಮ ನಿರ್ಬಂಧಗಳು ಕುಟುಂಬದವರಿಗೆ ಇಷ್ಟವಾಗದು. ನಿಮ್ಮ ಜವಾಬ್ದಾರಿಯನ್ನು ಸಂಗಾತಿ ನಿರ್ವಹಿಸುವಳು. ಕಛೇರಿಯ ಒತ್ತಡದ ಕೆಲಸವನ್ನು ಮನೆಗೂ ತಂದುಕೊಳ್ಳುವಿರಿ. ಸಂಗಾತಿಯನ್ನು ಹೊರಗೆ ಸುತ್ತಾಡಲು ಕರೆಯುವಿರಿ. ಯಾರೋ ಕೊಟ್ಟದ್ದನ್ನು ಸ್ವೀಕರಿಸುವುದಿಲ್ಲ.

ಕುಂಭ ರಾಶಿ:

ನಿಮ್ಮ ಮಾತು ಇಂದು ಕೇಳುಗರಿಗೆ ಹಿಂಸೆ ಕೊಡಬಹುದು. ಸಂಗಾತಿಯ ನಡುವೆ ಭಿನ್ನಾಭಿಪ್ರಾಯವು ಬರಬಹುದು. ಸತತ ಸುತ್ತಾಟದಿಂದ ಆಯಾಸವಾಗಲಿದೆ. ನಿಮ್ಮ ಆಸೆಗಳನ್ನು ಇನ್ನೊಬ್ಬರ ಜೊತೆ ಹಂಚಿಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ನಿಮಗೆ ಚಿಂತೆಯು ಕಾಡಬಹುದು. ಹೊಸ ಕೆಲಸಕ್ಕೆ‌ ನಿಮಗೆ ಧೈರ್ಯವು ಸಾಕಾಗದು. ಯಾವುದೇ ಪ್ರಭಾವಕ್ಕೆ ಒಳಗಾಗದೆ ಸ್ವಂತ ನಿರ್ಧಾರಕ್ಕೆ ಬದ್ಧರಾಗುವಿರಿ. ಭೂ ವ್ಯವಹಾರದಲ್ಲಿ ನಿಶ್ಚಿತ ಲಾಭವು ಪ್ರಾಪ್ತವಾಗಲಿದೆ.

ಮೀನ ರಾಶಿ:

ನೀವು ಸುತ್ತಾಟಕ್ಕೆಂದು ಮಕ್ಕಳ ಜೊತೆ ಹೋಗುವಿರಿ. ಎಷ್ಟೇ ಕಷ್ಟಪಟ್ಟರೂ ಬಯಸಿದ್ದನ್ನು ಪಡೆಯಲು ಕಷ್ಟವಾದೀತು. ಸಂಗಾತಿಯ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ನೀವು ವ್ಯಾಪಾರದಲ್ಲಿ ಆರ್ಥಿಕ ಲಾಭಕ್ಕಿಂತ ಗ್ರಾಹಕರ ವಿಶ್ವಾಸ ಗಳಿಸುವುದು ಇಂದು ನಿಮಗೆ ಮುಖ್ಯವೆನಿಸುವುದು. ಶುಭ ಕಾರ್ಯದಲ್ಲಿ ನೀವು ತೊಡಗುವಿರಿ. ಮಾತನ್ನು ಕಡಿಮೆ ಮಾಡುವಿರಿ. ಮಹಿಳಾ ಉದ್ಯೋಗಿಗಳು ಹೆಚ್ಚಿನ ಸ್ಥಾನವನ್ನು ಪಡೆಯುವಿರಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ವರ್ಷ, ಚಾಂದ್ರಮಾಸ : ಭಾದ್ರಪದ, ಸೌರ ಮಾಸ : ಕನ್ಯಾ, ಮಹಾನಕ್ಷತ್ರ : ಉತ್ತರಾಫಲ್ಗುಣೀ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ಪೂರ್ಣಿಮಾ, ನಿತ್ಯನಕ್ಷತ್ರ : ಉತ್ತರಾಭಾದ್ರ, ಯೋಗ : ಗಂಡ, ಕರಣ : ಬವ, ಸೂರ್ಯೋದಯ – 06 – 09 am, ಸೂರ್ಯಾಸ್ತ – 06 – 11 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:10 – 10:41, ಯಮಗಂಡ ಕಾಲ 13:41 – 15:11, ಗುಳಿಕ ಕಾಲ 06:10 – 07:41

– ಲೋಹಿತ್ ಹೆಬ್ಬಾರ್ – 8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲೋಹಿತ ಹೆಬ್ಬಾರ್​, ಇಡುವಾಣಿ

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
Loading...
Unable to load recommendations.
Follow Us