AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರು ಎದುರಾಳಿಗೆ ಹಾಕಿದ ಸವಾಲನ್ನು ಗೆಲ್ಲಬೇಕಾಗಿಬರಬಹುದು…

ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ವರ್ಷ ಋತುವಿನ ಭಾದ್ರಪದ ಮಾಸದ ಕೃಷ್ಣ ಪಕ್ಷದ ಪ್ರತಿಪತ್ ತಿಥಿಯ ಭಾನುವಾರದಂದು ಧನಸಹಾಯ, ಸತ್ಯ ವಚನ, ವ್ಯಕ್ತಿತ್ವ ಬದಲು, ಭೋಗ್ಯಕ್ಕೆ ಮನೆ ನಿರ್ಮಾಣ, ಮೋಜಿಗಾಗಿ ಪ್ರಯಾಣ, ಸಂಗಾತಿಯ ಜೊತೆ ಅರಸಿಕತೆಯ ಕಾರಣಕ್ಕೆ ಕಲಹ, ಉದ್ಯಮದಲ್ಲಿ ಲಾಭ ಇವೆಲ್ಲ ಇಂದಿನ ವಿಶೇಷ.

ದಿನ ಭವಿಷ್ಯ: ಇಂದು ಈ ರಾಶಿಯವರು ಎದುರಾಳಿಗೆ ಹಾಕಿದ ಸವಾಲನ್ನು ಗೆಲ್ಲಬೇಕಾಗಿಬರಬಹುದು...
ದಿನ ಭವಿಷ್ಯ
TV9 Web
| Edited By: |

Updated on:Sep 27, 2026 | 12:58 AM

Share

ಮೇಷ ರಾಶಿ:

ನಿಮಗೆ ಸಾಧ್ಯವಿರುವ ಕಾರ್ಯಗಳನ್ನು ಮಾತ್ರ ಮಾಡಿ. ಪಾಲುದಾರಿಕೆಯಲ್ಲಿ ಉಂಟಾದ ಗೊದಲ್ಲವನ್ನು ಬಗೆಹರಿಸಿಕೊಂಡು ಮೈತ್ರಿ ಮಾಡಿಕೊಂಡರೆ ಇಬ್ಬರಿಗೂ ಅನುಕೂಲವಾಗುವುದು. ನಿಮ್ಮ ಸ್ಥಿರಾಸ್ತಿ ಪರಿಶೀಲನೆಯನ್ನು ಮಾಡಿಕೊಳ್ಳುವುದು ಉತ್ತಮ. ಬೋಧನೆಯ ಕೌಶಲಕ್ಕೆ ಪ್ರಶಂಸೆ. ಹಿರಿಯರ ಮಾರ್ಗದರ್ಶನವನ್ನು ಪಡೆಯುವ ಅವಶ್ಯಕತೆ ಇರಲಿದೆ. ಸೌಲಭ್ಯಗಳ ದುರ್ಬಳಕೆಯಾಗದಂತೆ ನೋಡಿಕೊಳ್ಳಿ. ನಿಮ್ಮ ಚರ ಸ್ವತ್ತನ್ನು ರಕ್ಷಣೆ ಮಾಡಿಕೊಳ್ಳುವ ಅನಿವಾರ್ಯತೆ ಬರಬಹುದು.

ವೃಷಭ ರಾಶಿ:

ನಿಮ್ಮ ಬಗ್ಗೆ ತಿಳಿಯದೇ ಸುಮ್ಮನೇ ಕುಖ್ಯಾತಿ ಬರುವುದು. ಆಸ್ತಿಯ ವಿಚಾರಕ್ಕೆ ಕುಟುಂಬದಲ್ಲಿ ಪರಸ್ಪರ ಜಗಳವಾಗುವ ಸಾಧ್ಯತೆ ಇದೆ. ಕಾನೂನಾತ್ಮಕ ವಿಷಯವನ್ನು ಚರ್ಚಿಸಿ ಮಾಡುವುದು ಉತ್ತಮ. ಕಡಿಮೆ ಖರ್ಚಿನಲ್ಲಿ ನಿಮ್ಮ ಕೆಲಸವು ಮುಗಿಯುವಂತೆ ನೋಡಿಕೊಳ್ಳುವಿರಿ. ಆರೋಗ್ಯದ ಸುಧಾರಣೆಗೆ ಶುದ್ಧ ವಾತಾವರಣಕ್ಕೆ ಹೋಗಬೇಕಾಗುವುದು. ಅಪರಿಚಿಯ ಸ್ಥಳಗಳ ಬಗ್ಗೆ ಮಾಹಿತಿಯನ್ನು ಪಡೆದು ಮುನ್ನಡೆಯುವುದು ಶ್ರೇಯಸ್ಕರ. ಹಣವಿದ್ದ ಮಾತ್ರಕ್ಕೆ ಎಲ್ಲವೂ ಸಾಧ್ಯವಾಗದು ಎಂಬ ಸತ್ಯವು ಗೊತ್ತಾಗುವುದು.

ಮಿಥುನ ರಾಶಿ:

ನಿಮಗೆ ಇಂದು ತುರ್ತು ಆರ್ಥಿಕ ಸ್ಥಿತಿಯನ್ನು ಎದರಿಸಲು ಕಷ್ಟವಾಗುವುದು. ನಿಮಗೆ ನಿಮ್ಮವರ ಮಾತಿನಿಂದ ಇರುಸು ಮುರುಸಾದೀತು. ರಾಜಕೀಯ ವ್ಯಕ್ತಿಗಳಿಂದ ಕೆಲಸವಾಗಲು ಅವರಿಗೆ ಹಣವನ್ನು ಕೊಡುವಿರಿ. ಸ್ನೇಹಿತ ಸಹವಾಸದಿಂದ ದುರಭ್ಯಾಸವನ್ನು ಕಲಿಯುವ ಸಾಧ್ಯತೆ ಇದೆ. ಉದ್ಯಮವನ್ನು ನಡೆಸಲು ಇನ್ನೊಬ್ಬರ ಜೊತೆ ಸೇರಿಕೊಳ್ಳುವಿರಿ. ಆಪ್ತರ ಅಗಲಿಕೆಯಿಂದ ನೋವಾಗುವುದು. ದಾಂಪತ್ಯ ಜೀವನದಲ್ಲಿ ನಿಮ್ಮ ಸ್ಥಾನವು ಮುಖ್ಯವಾದಂತೆ ತೋರುವುದು.

ಕರ್ಕಾಟಕ ರಾಶಿ:

ಸಾಲಬಾಧೆಯು ನಿಮಗೆ ಅತಿಯಾದಂತೆ ಭಾಸವಾಗುವುದು. ದೂರದ ಬಂಧುಗಳ ಭೇಟಿಯಾಗಲಿದೆ. ಅವರ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ನಿಮ್ಮ ನಡವಳಿಕೆಯು ಅಹಂಕಾರದಂತೆ ತೋರೀತು. ವರ್ತನೆಯನ್ನು ಆದಷ್ಟು ಸಂದರ್ಭಕ್ಕೆ ತಕ್ಕಂತೆ ಇಟ್ಟುಕೊಳ್ಳುವುದು ಉತ್ತಮ. ದಿನಗೂಲಿಯವರಿಗೆ ಕಷ್ಟವು ಬರುವುದು. ಹಣಕಾಸಿನ‌ ವಿಚಾರದಲ್ಲಿ ಜಾಗರೂಕತೆ ಮುಖ್ಯವಾದೀತು. ಮಾಡುತ್ತಿರುವ ಉದ್ಯೋಗವು ನಿಮಗೆ ಸರಿಯೆನಿಸದು. ನಿಮ್ಮ‌ ಭವಿಷ್ಯದ ಕನಸನ್ನು ಮಿತ್ರರ ಜೊತೆ ಹಂಚಿಕೊಳ್ಳುವಿರಿ.

ಸಿಂಹ ರಾಶಿ:

ಇಂದು ಉದ್ಯೋಗವನ್ನು ಅರಸುತ್ತ ಇದ್ದರೆ ಇಂದು ಉತ್ತಮ ಉದ್ಯೋಗವು ಸುಳಿವು ಸಿಗಲಿದೆ. ಸ್ವಂತ ಆರೋಗ್ಯದ ಸುಧಾರಣೆಗೆ ಖರ್ಚು ಮಾಡುವಿರಿ. ಅಸಭ್ಯ ಮಾತುಗಳು ನಿಮಗೆ ಶೋಭೆಯನ್ನು ತರದು. ಎಲ್ಲರ ಜೊತೆ ಬೆರೆತು ಮಾತನಾಡುವುದನ್ನು ಇಷ್ಟಪಡುವಿರಿ. ಮಾನಸಿಕ ಒತ್ತಡದಿಂದ ಇಂದಿನ ಕೆಲಸವು ಬೇಗನೆ ಸಾಕೆನಿಸಬಹುದು. ನೀವು ಎಲ್ಲದರಲ್ಲಿಯೂ ಪ್ರತ್ಯೇಕತೆಯನ್ನು ಬಯಸುವಿರಿ. ಉದ್ಯೋಗದ ಸ್ಥಳವು ಇಂದು ನಿಮಗೆ ಖುಷಿಯ ಸ್ಥಳ.

ಕನ್ಯಾ ರಾಶಿ:

ಇಂದು ಹಲವಾರು ದಿನಗಳ ವಾಹನ ಖರೀದಿಯ ಆಸೆಯು ಪೂರ್ಣಗೊಳ್ಳುವುದು. ಹೊರಗಿನಿಂದ ಆಮದು ಮಾಡಿಕೊಳ್ಳುವ ವ್ಯವಹಾರದವರಿಗೆ ಸಂಕಷ್ಟ ಬರಬಹುದು. ಭೂಮಿಯನ್ನು ವಿಸ್ತರಿಸುವ ಯೋಜನೆ ಮಾಡುವಿರಿ. ಹಿರಿಯರಿಂದ ಬೈಗುಳವು ಸಿಗುವುದು.‌ ತಪ್ಪನ್ನು ತಿದ್ದಿಕೊಂಡು ಮುಂದೆ ಸರಿಯಾಗಲು ಬಯಸುವಿರಿ. ನೆಮ್ಮದಿಯನ್ನು ಬಹಳ ಶ್ರಮದಿಂದ‌ ಪಡೆಯಬೇಕಾಗುವುದು. ವಾಹನದಲ್ಲಿ ಓಡಾಟವನ್ನು ಕಡಿಮೆಗೊಳಿಸಿ. ತೆಗೆದುಕೊಂಡ ನಿರ್ಧಾರಗಳು ಕಾರ್ಯಗತಗೊಳ್ಳುವ ಸಾಧ್ಯತೆ ಇದೆ.

ತುಲಾ ರಾಶಿ :

ವಿದ್ಯಾರ್ಥಿಗಳಿಗೆ ಅಭ್ಯಾಸದ ಬಗ್ಗೆ ಆತಂಕ ಇರಲಿದೆ. ಪರೀಕ್ಷೆಯ ಭಯವು ನಿಮ್ಮ ಅಧ್ಯಯನ ದಿಕ್ಕನ್ನೇ ತಪ್ಪಿಸಬಹುದು. ಭೂಮಿಯ ವ್ಯವಹಾರದಲ್ಲಿ ಲಾಭವಿರದೇ ಕೇಲವ ಓಡಾಟ, ಮಾತು ಕತೆಗಳಲ್ಲಿಯೇ ಮುಕ್ತಾಯವಾಗಲಿದೆ. ಜವಾಬ್ದಾರಿ ಇಲ್ಲದ ಕಡೆ ನೀವು ಹೋಗುವುದು ಬೇಡ. ಕೆಲವು ಅಂಶವಾದರೂ ಸಹಾಯ ಮಾಡುವ ಗುಣವಿದ್ದರೆ ಒಳ್ಳೆಯದು. ನಿರುಪಯುಕ್ತ ವಸ್ತುಗಳನ್ನು ಮಾತ್ರ ನೀವು ದಾನ ಮಾಡುವಿರಿ. ನಿಮಗೆ ಬೇಕಾದುದು ಇದ್ದಲ್ಲಿಗೆ ಬರುವುದು.

ವೃಶ್ಚಿಕ ರಾಶಿ:

ಉದ್ಯೋಗದ ಸ್ಥಳವು ನಿಮಗೆ ಖುಷಿಯ ಸ್ಥಾನವಾಗಲಿದೆ. ಹಳೆಯ ವಸ್ತುಗಳನ್ನು ನೀವು ಮಾರಾಟ ಮಾಡಲಿದ್ದೀರಿ. ಆರ್ಥಿಕತೆಯ ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಸಂಗಾತಿಯನ್ನು ನೀವು ಇಷ್ಟಪಡಲಾರಿರಿ. ಅಸಮಯದಲ್ಲಿ ಭೂಮಿಯ ಮಾರಾಟದಿಂದ ನೆಲೆ ಸಿಗುವುದು ಕಷ್ಟ. ಹೊರಗಿನ ವಸ್ತುವನ್ನು ಹೆಚ್ಚು ಸೇವಿಸುವಿರಿ. ನೂತನ ಉದ್ಯೋಗವನ್ನು ಆರಂಭಿಸಲು ಭಯವಿರುವುದು. ಇನ್ನೊಬ್ಬರನ್ನು ದೂರುವುದರಿಂದ ನೀವು ಸಜ್ಜನರಾಗಲಾರಿರಿ.

ಧನು ರಾಶಿ:

ವಿದ್ಯಾರ್ಥಿಗಳಿಗೆ ತಾಯಿಯಿಂದ ತಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವರು. ಗಂಡಾಂತರದಿಂದ ಪಾರಾಗಿ ನೆಮ್ಮದಿಯ ನಿಟ್ಟುಸಿರು ಬಿಡುವಿರಿ. ಮನೆಗೆ ಬೇಕಾದ ಉಪಕರಣಗಳನ್ನು ಖರೀದಿಸುವಿರಿ. ಆಗಬೇಕಾದ ಕೆಲಸಗಳ ಬಗ್ಗೆ ನಿಮಗೆ ಹೆಚ್ಚಿನ ಆತಂಕ ಇರಲಿದೆ. ಒಂದಕ್ಕಿಂತ ಹೆಚ್ಚು ಕೆಲಸವನ್ನು ಒಟ್ಟಿಗೇ ಮಾಡಲು ಹೋಗುವಿರಿ. ದಾನ ಮಾಡಲು ಮನಸ್ಸು ಹಿಂಜರಿಯಲಿದೆ. ಮಾನಸಿಕ ಅಸಮತೋಲನವು ನಿಮ್ಮನ್ನು ಭ್ರಾಂತಗೊಳಿಸುವುದು.

ಮಕರ ರಾಶಿ:

ನೀವು ಸಲ್ಲದ ಯೋಚನೆಗಳಿಂದ ಮನಸ್ಸು ಹಾಳಾಗುವುದು. ಹೊಸ ಉದ್ಯಮವನ್ನು ಆರಂಭಿಸಲು ಧೈರ್ಯವು ಸಾಲದು. ಇನ್ನೊಬ್ಬರ ಜೊತೆ ಸೇರಿ ಮುಂದುವರಿಸುವುದು ನಿಮ್ಮ ಉತ್ತಮ ಆಯ್ಕೆ ಆಗಬಹುದು. ಮಕ್ಕಳಿಂದ ನಿಮ್ಮ ಉದ್ಯಮಕ್ಕೆ ಸಹಾಯವು ಸಿಗಬಹುದು. ನಿಮ್ಮ ಮೌನವು ಭಯ ತರಿಸುವುದು. ಹಣವನ್ನು ಉಳಿಸಿಕೊಳ್ಳಲು ನಾನಾ ಪ್ರಯತ್ನಗಳನ್ನು ಮಾಡುವಿರಿ. ಇಂದಿನ ನಿಮ್ಮ ವರ್ತನೆಯು ಗಾಂಭೀರ್ಯದಿಂದ ಇರಲಿದೆ.

ಕುಂಭ ರಾಶಿ:

ಮನೆಯಿಂದ ದೂರವಿರುವ ನಿಮಗೆ ಕುಟುಂಬದವರ ನೆನಪಾಗುವುದು. ನೋವನ್ನು ನುಂಗಿ ಬದುಕುವ ಕಲೆಯನ್ನು ನೀವು ಅರ್ಥಮಾಡಿಕೊಂಡಿರುವಿರಿ. ಸ್ವಂತ ಉದ್ಯಮವನ್ನು ನಡೆಸುವವರು ಪ್ರಸಾರದ ಕಡೆಗೆ ಗಮನ ಕೊಡುವಿರಿ.‌ ಯಾರನ್ನೂ ನೋಯಿಸುವುದು ನಿಮಗೆ ಇಷ್ಟವಾಗದು. ನೂತನ ವಸ್ತುಗಳನ್ನು ಪಡೆಯಲಿದ್ದೀರಿ. ಬಲವಂತದಿಂದ ನೀವು ಯಾರಬಳಿಯೂ ಕೆಲಸವನ್ನು ಮಾಡಿಸಲು ಹೋಗಬೇಡಿ, ಅದು ಆಗದು.

ಮೀನ ರಾಶಿ:

ನಿಮಗೆ ಎಲ್ಲ ಕಾರ್ಯದಲ್ಲಿಯೂ ಉತ್ಸಾಹವು ಕಡಿಮೆ ಇರುವುದು. ನಿಮ್ಮ ಚರ ಸಂಪತ್ತನ್ನು ಜೋಪಾನ ಮಾಡಿಕೊಳ್ಳಿ. ಸ್ನೇಹಿತರಿಂದ ಲಾಭವು ನಿಮಗೆ ಸಿಗಲಿದೆ. ನಿಮ್ಮ ಕೆಲಸಕ್ಕೆ ಮೆಚ್ಚುಗೆ ಸಿಗಬಹುದು. ವಿದ್ಯಾಭ್ಯಾಸ ಕ್ಷೇತ್ರವನ್ನು ಬದಲಿಸಿಕೊಳ್ಳಬಹುದು. ಆರಾಮಾಗಿ ಇರಲು ಹೆಚ್ಚು ಇಷ್ಟಪಡುವಿರಿ. ಆರ್ಥಿಕತೆಯ ವಿಚಾರವು ನಿಮಗೆ ಪೂರ್ಣವಾಗಿ ತಿಳಿಯದು. ನಿಮ್ಮ ಅಜ್ಞಾನವನ್ನು ಪ್ರದರ್ಶಿಸುವುದು ಬೇಡ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ವರ್ಷ, ಚಾಂದ್ರಮಾಸ : ಭಾದ್ರಪದ, ಸೌರ ಮಾಸ : ಕನ್ಯಾ, ಮಹಾನಕ್ಷತ್ರ : ಉತ್ತರಾಫಲ್ಗುಣೀ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ರೇವತಿ, ಯೋಗ : ವೃದ್ಧಿ, ಕರಣ : ಕೌಲವ, ಸೂರ್ಯೋದಯ – 06 – 09 am, ಸೂರ್ಯಾಸ್ತ – 06 – 11 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 16:41 – 18:11, ಯಮಗಂಡ ಕಾಲ 12:11 – 13:41, ಗುಳಿಕ ಕಾಲ 15:11 – 16:41

– ಲೋಹಿತ್ ಹೆಬ್ಬಾರ್ – 8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:57 am, Sun, 27 September 26

Follow Us
TV9 Web
TV9 Web

TV9 Kannada

Read More
ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಗುತ್ತಿಗೆದಾರರಿಗೆ 13 ಲಕ್ಷ ರೂ ದಂಡ
ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಗುತ್ತಿಗೆದಾರರಿಗೆ 13 ಲಕ್ಷ ರೂ ದಂಡ
ಬಾಲ್ಕನಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದ ವಿದ್ಯಾರ್ಥಿಗಳು
ಬಾಲ್ಕನಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದ ವಿದ್ಯಾರ್ಥಿಗಳು
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ
ಕಳ್ಳಾಟ ಆಡಿ ಸಿಕ್ಕಿಬಿದ್ದ ಕಿರಣ್​​ಗೆ ಕಿಚ್ಚನ ಕ್ಲಾಸ್: ವಿಡಿಯೋ ನೋಡಿ
ಕಳ್ಳಾಟ ಆಡಿ ಸಿಕ್ಕಿಬಿದ್ದ ಕಿರಣ್​​ಗೆ ಕಿಚ್ಚನ ಕ್ಲಾಸ್: ವಿಡಿಯೋ ನೋಡಿ
ಬಂಗಾಳದಲ್ಲಿ ಟಿಎಂಸಿ ಶಾಸಕ ಕುನಾಲ್ ಘೋಷ್ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ
ಬಂಗಾಳದಲ್ಲಿ ಟಿಎಂಸಿ ಶಾಸಕ ಕುನಾಲ್ ಘೋಷ್ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ
ಮೆಚ್ಚಿನ ಶಿಕ್ಷಕನಿಗೆ ಮಕ್ಕಳ ಕಣ್ಣೀರಿನ ವಿದಾಯ
ಮೆಚ್ಚಿನ ಶಿಕ್ಷಕನಿಗೆ ಮಕ್ಕಳ ಕಣ್ಣೀರಿನ ವಿದಾಯ
ಹಾಲಿನ ದರ ಏರಿಕೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಪಿತೃಪಕ್ಷದ ಮಹತ್ವವೇನು? ಈ 15 ದಿನಗಳಲ್ಲಿ ಪಿತೃಕಾರ್ಯ ಏಕೆ ಮಾಡಬೇಕು?
ಪಿತೃಪಕ್ಷದ ಮಹತ್ವವೇನು? ಈ 15 ದಿನಗಳಲ್ಲಿ ಪಿತೃಕಾರ್ಯ ಏಕೆ ಮಾಡಬೇಕು?
ವಿಷ್ಣುವರ್ಧನ್ ಅಮೃತ ಮಹೋತ್ಸವ; ಕಾರ್ಯಕ್ರಮದ ವಿವರ ಹೀಗಿದೆ
ವಿಷ್ಣುವರ್ಧನ್ ಅಮೃತ ಮಹೋತ್ಸವ; ಕಾರ್ಯಕ್ರಮದ ವಿವರ ಹೀಗಿದೆ