AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitya Bhavishya: ಕಣ್ಣಿನ ತೊಂದರೆಗೆ ಸೂಕ್ತ ಚಿಕಿತ್ಸೆಗೆ ಪಡೆಯಿರಿ, ವಾಹನ ಚಾಲನೆ ವೇಳೆ ಎಚ್ಚರವಿರಲಿ

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಫೆಬ್ರವರಿ 10, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Nitya Bhavishya: ಕಣ್ಣಿನ ತೊಂದರೆಗೆ ಸೂಕ್ತ ಚಿಕಿತ್ಸೆಗೆ ಪಡೆಯಿರಿ, ವಾಹನ ಚಾಲನೆ ವೇಳೆ ಎಚ್ಚರವಿರಲಿ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Feb 10, 2024 | 12:10 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಶತಭಿಷಾ, ಯೋಗ: ವರೀಯಾ‌ನ್, ಕರಣ: ನಾಗವಾನ್, ಸೂರ್ಯೋದಯ ಬೆಳಗ್ಗೆ 07 ಗಂಟೆ 00 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 34 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:53 ರಿಂದ 11:20ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:14 ರಿಂದ 03:41 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:59 ರಿಂದ 08:27ರ ವರೆಗೆ.

ಮೇಷ ರಾಶಿ: ನೀವು ಆಸ್ತಿಗೆ ಸಂಬಂಧಿಸಿದ ವಿವಾದವು ಇನ್ನೊಂದು ತಿರುವನ್ನು ಪಡೆಯಬಹುದು. ಯಾವುದೋ ಅಗಾಧ ಯೋಚನೆಯಲ್ಲಿ ನೀವು ಇರುವಿರಿ. ವ್ಯಾಪಾರದಲ್ಲಿ ನಷ್ಟ ಸಂಭವಿಸಬಹುದು. ತೆರಿಗೆಯನ್ನು ನೀವು ಸರಿಯಾಗಿ ಕೊಡುವ ಬಗ್ಗೆ ಆಲೋಚನೆ ಇರುವುದು. ಆಹಾರದಲ್ಲಿ ಮಿತಿ ಇರಲಿ. ಮನಸ್ತಾಪದ ನಡೆವೆಯೂ ನೀವು ಕಾರ್ಯವನ್ನು ಬಹಳ ನಿಷ್ಠೆಯಿಂದ ಮಾಡುವಿರಿ. ಬಂದಿದ್ದರಲ್ಲಿ ಸುಖವಾಗಿರಲು ಪ್ರಯತ್ನಿಸುವಿರಿ. ಅಧ್ಯಾತ್ಮದಲ್ಲಿ ಮನಸ್ಸು ಇರಲಿದೆ. ಕೆಲವರಿಗೆ ಮಾತ್ರ ನಿಮ್ಮ ಬಗ್ಗೆ ಗೊತ್ತಾಗಲಿದ್ಸು ದ್ವೇಷಿಸುವವರನ್ನು ಇಷ್ಟಪಡುವಿರಿ. ಪಾಲುದಾರಿಕೆಗಾಗಿ ಇಂದು ದೂರ ಪ್ರಯಾಣ ಮಾಡಬೇಕಾಗುವುದು. ನಿಮ್ಮದಲ್ಲದ ವಿಚಾರಕ್ಕೆ ತಲೆಬಿಸಿ‌ಮಾಡಿಕೊಳ್ಳುವುದು ಬೇಡ. ವಿದ್ಯುತ್ ಉಪಕರಣಗಳ ಖರೀದಿಗೆ ಮುಂದಾಗುವಿರಿ.

ವೃಷಭ ರಾಶಿ: ಎಂತಹ ಸವಾಲನ್ನೂ ನೀವು ಎದುರಿಸುವ ಹುಂಬುತನದಲ್ಲಿ ಏನನ್ನಾದರೂ ಮಾಡಿಕೊಳ್ಳುಬಿರಿ. ಯಾವುದೇ ಪ್ರತಿಕೂಲ ಪರಿಸ್ಥಿತಿಯಲ್ಲಿ ನೀವು ಧೈರ್ಯವನ್ನು ಕಾಪಾಡಿಕೊಳ್ಳುವಿರಿ. ನಿಮ್ಮ ಪೋಷಕರು ನಿಮಗೆ ಯಾವುದೇ ಜವಾಬ್ದಾರಿಯನ್ನು ನೀಡಿದರೆ, ನೀವು ಅದನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲಾಗದು.‌ ನಿಮ್ಮ ಮಕ್ಕಳ ಜೊತೆ ನೀವು ಯಾವುದಕ್ಕಾದರೂ ಕೋಪಗೊಳ್ಳುವಿರಿ. ರಾಜಕೀಯದಲ್ಲಿ ಡೋಲಾಯಮಾನವಾಗಿ ಇರಲಿದ್ದು ಆತಂಕವೂ ಇರಲಿದೆ. ಯಾರಾದರೂ ನಿಮಗೆ ಮಾದರಿಯಾದಾರು. ನೀವು ಅಂದುಕೊಂಡಂತೆ ಎಲ್ಲವೂ ನಡೆಯುತ್ತದೆ ಎಂಬ ತೀರ್ಮಾನ ಬೇಡ. ಇಂದು ನೀವು ಮಾಡಲು ಹೊರಟ ಕಾರ್ಯವು ನಿರ್ವಿಘ್ನವಾಗಿ ಮುಗಿಯುವುದು. ನಿಮ್ಮ ಜಾಣ್ಮೆಯಿಂದ ಎಲ್ಲವನ್ನೂ ಉತ್ತಮವಾಗಿ ಮಾಡುವಿರಿ. ನಿಮ್ಮ ಸರಳವಾದ ಕಾರ್ಯವು ಸಂಕೀರ್ಣವಾಗಬಹುದು.

ಮಿಥುನ ರಾಶಿ: ಇಂದು ನಿಮಗೆ ಬಿಡುವಿಲ್ಲದ ದಿನವಾಗಿದ್ಸರೂ ಕುಟುಂಬಕ್ಕೆ ಅಲ್ಪ ಸಮಯವನ್ನು ಕೊಡುವಿರಿ.‌ ನೀವು ಹೊಸ ವ್ಯವಹಾರವನ್ನು ಪ್ರಾರಂಭಿಸಲು ಬಯಸಿದರೆ, ನಿಮಗೆ ಉತ್ತಮವಾಗಿರುತ್ತದೆ. ನೂತನ ಮನೆಯ ನಿರೀಕ್ಷೆಯಲ್ಲಿ ನೀವು ಇರುವಿರಿ. ಮನೆಯ ಕೆಲಸಗಳನ್ನು ಪೂರ್ಣಗೊಳಿಸುವಲ್ಲಿ ನೀವು ನಿರತರಾಗಿರುವಿರಿ. ನಿಮ್ಮ ಹವ್ಯಾಸವು ಬದಲಾಗಬಹುದು. ಪ್ರವಾಸಕ್ಕೆ ಹೋಗಲು ಉತ್ಸಾಹವು ಇರಲಿದೆ. ಎಲ್ಲರೂ ನಿಮ್ಮ ಬಗ್ಗೆ ಹೇಳಿ ಸಾಕಾದೀತು. ಅಧಿಕಾರಿಗಳಿಂದ ನಿಮಗೆ ಬೇಕಾದುದನ್ನು ಜಾಣತನದಿಂದ ಮಾಡಿಸಿಕೊಳ್ಳುವಿರಿ. ಇಂದು ನಿಮಗೆ ಅದೃಷ್ಟವಿರುವ ಕಾರಣ ಉತ್ತಮ ಫಲವನ್ನು ಪಡೆಯುವಿರಿ. ನೀವು ಪ್ರಭಾವೀ ವ್ಯಕ್ತಿಗಳಂತೆ ತೋರುವಿರಿ. ಅಪರಿಚಿತರ ಸಹವಾಸವು ಸಾಕೆನಿಸಬಹುದು.

ಕರ್ಕ ರಾಶಿ: ಇಂದು ನಿಮ್ಮ ಸಂತೋಷವನ್ನು ಇತರರ ಜೊತೆ ಹಂಚಿಕೊಳ್ಳುವಿರಿ. ಕೈ ತಪ್ಪಿ ಹೋಗುವ ಕೆಲಸವನ್ನು ಹೇಗಾದರೂ ಉಳಿಸಿಕೊಳ್ಳುವಿರಿ. ಅನುಮಾನದ ನಿಮ್ಮ ಸ್ವಭಾವವು ಅಧಿಕವಾಗುದು. ಎಲ್ಲವನ್ನೂ ಸಮಾನವಾಗಿ ನೋಡಲು ಕಷ್ಟವಾಗಬಹುದು. ಕಲಹಕ್ಕೆ ಏನಾದರೂ ವಿಷಯವನ್ನು ಹುಡುಕಿಕೊಳ್ಳುವಿರಿ. ಅನಿರೀಕ್ಷಿತ ಧನಾಗಮನವು ಸಂತೋಷವನ್ನು ಕೊಡುವುದು. ತಾಯಿಯ ಅನಾರೋಗ್ಯದಿಂದ ನಿಮಗೆ ಚಿಂತೆ ಕಾಡಬಹುದು. ಇನ್ನೊಬ್ಬರ ವಸ್ತುಗಳನ್ನು ಬಳಸಿಕೊಳ್ಳುವಿರಿ. ಕಲಾವಿದರು ಹೆಚ್ಚಿನ ಶ್ರಮದಿಂದ ಆದಾಯವನ್ನು ಗಳಿಸುವರು. ವಾಹನ ಸಂಚಾರದಲ್ಲಿ ಮಂದಗತಿ ಇರಲಿ. ನಿಮ್ಮ ಮಾತು ಬಾಲಿಶದಂತೆ ತೋರುವುದು. ಆರೋಗ್ಯದ ವಿಚಾರದಲ್ಲಿ ನಿಮಗೆ ಸಮಸ್ಯೆ ಆಗುವುದು. ವೃತ್ತಿಯ ಸ್ಥಳದಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರುವುದು. ಅಶಿಸ್ತು ನಿಮಗೆ ಸಿಟ್ಟನ್ನು ತರಬಹುದು. ಕಣ್ಣಿನ ತೊಂದರೆಗೆ ಸೂಕ್ತ ಚಿಕಿತ್ಸೆಯನ್ನು ಪಡೆಯಿರಿ. ವಿವಾಹ ಸಂಬಂಧದಿಂದ ಕಿರಿಕಿರಿ ಆಗಬಹುದು. ಒತ್ತಡದಿಂದ ದಿಗ್ಭ್ರಾಂತಿಯಾಗಬಹುದು.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ