Daily Horoscope: ಒಬ್ಬರನ್ನೇ ನಂಬಿ ಕುಳಿತರೆ ನಿಮಗೆ ಆಗಬೇಕಾದುದು ಸಕಾಲಕ್ಕೆ ಆಗದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಸೆಪ್ಟೆಂಬರ್​ 5: ಅಧಿಕಾರದ ಬಲಾಬಲವನ್ನು ತಿಳಿದುಕೊಳ್ಳ ವಾಗ್ವಾದವು ಅಧಿಕಾರಿಗಳ ನಡುವೆ ನಡೆಯಬಹುದು. ಕುಂಟುತ್ತಿರುವ ಉದ್ಯಮಕ್ಕೆ ವೇಗವನ್ನು ನೀವೇ ಕೊಡಬೇಕು. ಒಬ್ಬರಿಂದ ಆಗದ್ದನ್ನು ಮಾಡಲು ಹೋಗಬೇಡಿ. ಹಾಗಾದರೆ ಸೆಪ್ಟೆಂಬರ್​ 5ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಒಬ್ಬರನ್ನೇ ನಂಬಿ ಕುಳಿತರೆ ನಿಮಗೆ ಆಗಬೇಕಾದುದು ಸಕಾಲಕ್ಕೆ ಆಗದು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Sep 05, 2024 | 12:05 AM

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2024 ಸೆಪ್ಟೆಂಬರ್​ 5) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಪೂರ್ವಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಹಸ್ತಾ, ಯೋಗ: ಶುಭ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:40 ಗಂಟೆ, ರಾಹು ಕಾಲ ಮಧ್ಯಾಹ್ನ 02:03 ರಿಂದ ಸಂಜೆ 03:36, ಯಮಘಂಡ ಕಾಲ ಬೆಳಿಗ್ಗೆ 06:22 ರಿಂದ 07:54ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:27 ರಿಂದ 10:59ರ ವರೆಗೆ.

ಸಿಂಹ ರಾಶಿ: ಒಳ್ಳೆಯ ವಿಚಾರಗಳನ್ನು ಪ್ರಚಾರ ಮಾಡುವ ಬಗ್ಗೆ ಚಿಂತಿಸಿ. ಇಂದು ನಿಮ್ಮ ಕೆಲಸ ಕಾರ್ಯಗಳಲ್ಲಿ ಕೊಂಚ ಬದಲಾವಣೆಯನ್ನು ಮಾಡಲಿದ್ದೀರಿ. ಅಧಿಕಾರದ ಬಲಾಬಲವನ್ನು ತಿಳಿದುಕೊಳ್ಳ ವಾಗ್ವಾದವು ಅಧಿಕಾರಿಗಳ ನಡುವೆ ನಡೆಯಬಹುದು. ಕುಂಟುತ್ತಿರುವ ಉದ್ಯಮಕ್ಕೆ ವೇಗವನ್ನು ನೀವೇ ಕೊಡಬೇಕು. ಒಬ್ಬರಿಂದ ಆಗದ್ದನ್ನು ಮಾಡಲು ಹೋಗಬೇಡಿ. ನಿಮ್ಮ ಅಹಂಕಾರವೇ ನಿಮ್ಮನ್ನು ಜನರಿಂದ ದೂರವಿರುವಂತೆ ಮಾಡಬಹುದು. ಸಾಲವನ್ನು ವೇಗವಾಗಿ ತೀರಿಸಲು ನೀವು ಇಂದು ಶ್ರಮ ಪಡುವಿರಿ. ಯಾರದೋ ಮಾತು ನಿಮ್ಮ ಬುದ್ಧಿಯನ್ನು ಹಾಳುಮಾಡೀತು. ನಿಮ್ಮ ಜೊತೆಗೆ ನಿಮ್ಮನ್ನು ದ್ವೇಷಿಸುವವರು ಇರುವರು. ಜಾಗರೂಕರಾಗಿರುವುದು ಉಚಿತ. ಎಲ್ಲವನ್ನೂ ನಂಬಿಕೆಯ ಆಧಾರದ ಮೇಲೆ ಸ್ವೀಕರಿಸಬೇಕಿಲ್ಲ. ಪ್ರೇಮವು ಬುದ್ಧಿಯ ನೇತೃತ್ವದಲ್ಲಿ ನಡೆಯಲಿ. ಸರ್ಕಾರಿ ಉದ್ಯೋಗಿಗಳಿಗೆ ನಿಮ್ಮ ಚಾತುರ್ಯದ ಕಾರಣದಿಂದ ಹೆಚ್ಚಿನ ಅಧಿಕಾರವು ಪ್ರಾಪ್ತವಾಗುವುದು. ತುರ್ತಾಗಿ ಆಗಬೇಕಾದುದನ್ನು ಮೊದಲು ಪಟ್ಟಿ ಮಾಡಿ ಅರಂಭಿಸಿ.

ಕನ್ಯಾ ರಾಶಿ: ಒಬ್ಬರನ್ನೇ ನಂಬಿ ಕುಳಿತರೆ ನಿಮಗೆ ಆಗಬೇಕಾದುದು ಸಕಾಲಕ್ಕೆ ಆಗದು. ನೀವು ಅಧಿಕಾರವನ್ನು ಪಡೆಯಲು ಮಾರ್ಗವನ್ನು ಬದಲಿಸುವಿರಿ. ಖರ್ಚನ್ನು ನೀವು ನಿಯಂತ್ರಣ ಮಾಡುವ ಅವಶ್ಯಕತೆ ಇಂದು ಬರಬಹುದು. ಮಹಿಳೆಯರು ನಿಮ್ಮಿಂದ ಸಹಾಯವನ್ನು ಪಡೆಯುವರು. ನೀವೇ ನಿರ್ಮಿಸಿಕೊಂಡ ಹಳೆಯ ಮನೆಗೆ ಹೋಗಿ ವಾಸಮಾಡಬೇಕಾದೀತು. ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಹುದು. ಹವಾಮಾನ ಬದಲಾವಣೆಯಿಂದ ನಿಮ್ಮ ದೇಹದ ಮೇಲೆ ವಿರುದ್ಧ ಪರಿಣಾಮವನ್ನು ಉಂಟುಮಾಡಬಹುದು. ನಿಮ್ಮ ಪ್ರಯಾಣವು ಸರಿಯಾದ ಯೋಜನೆಯಿಂದ ಇದ್ದಿರಲಿ. ಬಹಳ ದಿಮಗಳಿಂದ ಮಾಡದೇ ಉಳಿದ ಕಾರ್ಯವನ್ನು ಪೂರ್ಣಮಾಡುವಿರಿ. ಕಲಹವು ಇಂದು ದ್ವೇಷವಾಗಿ ಪರಿವರ್ತನೆ ಆಗಬಹುದು. ಯಾರನ್ನೂ ಅವಲಂಬಿಸಲು ಹೋಗಬೇಡಿ. ನ್ಯಾಯಾಲಯದ ವಿಚಾರದಲ್ಲಿ ನಿಮಗೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಸ್ತ್ರೀಯರ ಮಾತಿನ ಮೇಲೆ ನಿಮಗೆ ನಂಬಿಕರ ಹೋಗಬಹುದು. ಮನೆಯಲ್ಲಿಯೂ ನಿಮ್ಮ ಮಾತಿಗೆ ಸರಿಯಾದ ಬೆಲೆ ಸಿಗುವುದು.

ತುಲಾ ರಾಶಿ; ನಿಮ್ಮ ತಪ್ಪಿಗೆ ಯಾವುದೋ ಒಂದು ರೀತಿಯಲ್ಲಿ ಪ್ರಾಯಶ್ಚಿತ್ತವಾಗಲಿದೆ. ನಿಮ್ಮ ಪೂರ್ವಯೋಜಿತ ವಿಷಯಗಳಿಂದ ಸಫಲತೆಯನ್ನು ಕಾಣಲಿದ್ದೀರಿ. ದೀರ್ಘಕಾಲದ ನೋವನ್ನು ಕಡಿಮೆ ಮಾಡಿಕೊಳ್ಳಲು ಇಂದು ಪ್ರಯತ್ನಿಸುವಿರಿ. ಪುಣ್ಯಸ್ಥಳದ ಕಡೆಗೆ ನಿಮ್ಮ ಗಮನವಿರುವುದು. ಉದ್ಯಮದಲ್ಲಿ ಹೊಸರೀತಿಯ ಲಾಭಾವನ್ನು ಪಡೆಯಲು ಆಲೋಚಿಸುವಿರಿ. ಮಾನಸಿಕ ಒತ್ತಡವು ನಿಮ್ಮ ಕೆಲಸಗಳನ್ನು ಹಾಳು ಮಾಡೀತು. ದಾಂಪತ್ಯದಲ್ಲಿ ಸಣ್ಣ ವಿರಸವು ಉಂಟಾಗಬಹುದು. ಮಕ್ಕಳ ವಿಚಾರದಲ್ಲಿ ನಿಮ್ಮ ವರ್ತನೆಯು ಬಾಲಿಶ ಎನಿಸಬಹುದು. ಯಾರನ್ನೋ ಮೆಚ್ಚಿಸಲು ನೀವು ಸಮಯವನ್ನು ಕಳೆಯಬೇಕಿಲ್ಲ. ದೀರ್ಘಕಾಲ ಸ್ನೇಹಿತರು ವಿವಾಹಕ್ಕೆ ಹಿರಿಯರ ಅನುಮತಿಯನ್ನು ಪಡೆಕೊಳ್ಳಿ. ಅನಿರೀಕ್ಷಿತ ಅತಿಥಿಸತ್ಕಾರವು ನಿಮಗೆ ಸಿಗಲಿದೆ. ದಿನದ ಕೆಲವು ಸಮಯದಲ್ಲಿ ನಿಮಗೆ ಉತ್ತಮ ಜೀವನದ ಸೂಚನೆ ಸಿಗಲಿದೆ. ಮಾನಸಿಕ ಗಟ್ಟಿತನವು ನಿಮಗೆ ಅವಶ್ಯವಾಗಿ ಬೇಕಾದೀತು.

ವೃಶ್ಚಿಕ ರಾಶಿ; ವ್ಯವಸ್ಥೆಯನ್ನು ಸರಿ ಮಾಡುವ ಉದ್ದೇಶವೇ ನಿಮ್ಮಲ್ಲಿ ಇರುವುದು. ನಿಮಗೆ ಮಕ್ಕಳ ವಿಚಾರದಲ್ಲಿ ಸಂತೋಷವಿರಲಿದೆ. ಸ್ತ್ರೀ ಪುರುಷರ ನಡವೆ ಪರಸ್ಪರ ದ್ವೇಷಬರಬಹುದು. ಖಾಸಗಿ ಉದ್ಯೋಗಿಗಳಿಗೆ ಒಳ್ಳೆಯ ಸುದ್ದಿ ಸಿಗಬಹುದು. ನಿಮ್ಮ ಗುರಿಗಳು ಬದಲಾದಷ್ಟೂ ನಿಮ್ಮ‌ ಶ್ರಮವೂ ವ್ಯರ್ಥವಾಗಬಹುದು. ಸಂಗಾತಿಯ ಜೊತೆ ಹೆಚ್ಚು ಕಾಲ ಕಳೆಯುವ ಮನಸ್ಸಿದ್ದರೂ ಸಮಯದ ಅಭಾವದಿಂದ ಅದು ಸಾಧ್ಯವಾಗದು. ಇದೇ ನಿಮ್ಮ ನಡುವಿನ ಒಡಕು ಉಂಟಾಗಲು ಕಾರಣವಾಗಬಹುದು. ನಿಮ್ಮ ಕೊರತೆಯನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳುವಿರಿ. ಇಟ್ಟುಕೊಳ್ಳಲು ಕೊಟ್ಟ ಹಣವು ಪುನಃ ಬಾರದೇ ಇದ್ದೀತು. ಹಿರಿಯರ ಎದುರು ಮಾತನಾಡಲು ನೀವು ಹೆದರುವಿರಿ. ನಿಮ್ಮ ಅಧ್ಯಯನದಿಂದ ನಿಮ್ಮನ್ನು ವಿಚಲಿತಗೊಳಿಸುವ ಅನಗತ್ಯ ವಾದಗಳನ್ನು ತಪ್ಪಿಸಿ. ಅಂದುಕೊಂಡಂತೆ ಕಾರ್ಯವು ಸಾಗದು ಎಂಬ ಕೊರಗು ಇರುವುದು. ಬೇಡವೆಂದ ಕಾರ್ಯವನ್ನು ಹಠದಿಂದ ಮಾಡುವಿರಿ. ನಿಮ್ಮ ಬಲದ ಮೇಲೇ ಕೆಲಸವನ್ನು ಪ್ರಾರಂಭಿಸಿ. ಎಲ್ಲವನ್ನೂ ಒಂದೇ ದೃಷ್ಟಿಯಿಂದ ನೋಡಲು ಸಾಧ್ಯವಾಗದು.

ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ