Horoscope: ದಿನಭವಿಷ್ಯ, ಈ ರಾಶಿಯವರು ಅಶುಭಕರ ವಾರ್ತೆಯನ್ನು ಕೇಳಬೇಕಾಗುವುದು

ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಜನವರಿ 03) ಭವಿಷ್ಯಹೇಗಿದೆ ಎಂಬುದು ಇಲ್ಲಿದೆ.

Horoscope: ದಿನಭವಿಷ್ಯ, ಈ ರಾಶಿಯವರು ಅಶುಭಕರ ವಾರ್ತೆಯನ್ನು ಕೇಳಬೇಕಾಗುವುದು
ರಾಶಿ ಭವಿಷ್ಯ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jan 03, 2024 | 12:34 AM

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 03) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಮಾರ್ಗಶೀರ್ಷ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಹಸ್ತಾ, ಯೋಗ: ಶೋಭನ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 59 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 14 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:37 ರಿಂದ 02:01ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:24 ರಿಂದ 09:48ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:13 ರಿಂದ ಮಧ್ಯಾಹ್ನ 12:37ರ ವರೆಗೆ.

ಸಿಂಹ ರಾಶಿ : ಪಾಲುದಾರಿಕೆಯ ವಿಚಾರದಲ್ಲಿ ಕೆಲವರ ಸಲಹೆಯನ್ನು ಪಡೆಯುವುದು ಸೂಕ್ತ. ಎಲ್ಲದಕ್ಕೂ ನಿಮ್ಮನ್ನೇ ಬೊಟ್ಟುಮಾಡಿ ತೋರಿಸಬಹುದು. ಮೇಲಧಿಕಾರಿಗಳನ್ನು ನಿಮ್ಮತ್ತ ಸೆಳೆಯುವ ತಂತ್ರವು ಫಲಿಸೀತು. ಉನ್ನತ ವಿದ್ಯಾಭ್ಯಾಸಕ್ಕೆ ಮಕ್ಕಳಿಗೆ ಹಣವನ್ನು ಹೊಂದಿಸಬೇಲಾಗವುದು. ನಿಮ್ಮ ಬಗ್ಗೆ ಮಾತನಾಡುವವರಿಗೆ ಈಗಲೇ ಉತ್ತರ ಕೊಡುವುದು ಬೇಡ. ನಿಮಗೆ ಕರಗತವಾದ ವಿದ್ಯೆಯನ್ನು ಪ್ರದರ್ಶಿಸುವಿರಿ. ನಿಮ್ಮ ಒರಟು ಸ್ವಭಾವವು ಇಷ್ಟವಾಗದೇ ಹೋಗಬಹುದು. ಸುಮ್ಮನೇ ಒಂಟಿಯಾಗಿ ಇದ್ದು ಹತ್ತಾರು ಯೋಚನೆಗಳು ಬರಬಹುದು. ಬಂಧುಗಳಿಂದ‌ ಉಡುಗೊರೆ ಸಿಗಲಿದೆ. ಲೆಕ್ಕಶೋಧಕರಿಗೆ ಒತ್ತಡವು ಅಧಿಕವಾಗಿರುವುದು. ನಿಮ್ಮ ಮಾತಿನ‌ ಮೇಲೆ ನಂಬಿಕೆಯು ಕಷ್ಟವಾದೀತು. ಅಪಘಾತ ಭೀತಿಯು ಕಾಡಬಹುದು.

ಕನ್ಯಾ ರಾಶಿ : ಎಂದೂ ಬಾರದ ಅನುಮಾನವು ನಿಮ್ಮ ಮೇಲೆ ಬರಬಹುದು. ಹೊಸ ಗೆಳೆತನವು ಖುಷಿಕೊಟ್ಟರೂ ಪೂರ್ಣವಾಗಿ ನಂಬಲು ಆಗದು. ಆಕಸ್ಮಿಕವಾಗಿ ಸಮ್ಮಾನವು ಸಿಗಬಹುದು. ಅತಿಥಿಗಳಿಗೆ ಸತ್ಕಾರವನ್ನು ಮಾಡಿ ಖುಷಿ‌ಪಡಿಸುವಿರಿ. ಕುಟುಂಬದಲ್ಲಿ ಧಾರ್ಮಿಕ ಕಾರ್ಯವನ್ನು ಮಾಡುವ ಮನಸ್ಸಿದ್ದರೂ ಉಳಿದವರ ಒಪ್ಪಿಗೆ ಸಿಗದೇ ಇರಬಹುದು. ಉದ್ಯಮಕ್ಕೆ ಬೇಕಾದ ಕಾನೂನಿನ ಭದ್ರತೆಯನ್ನು ಪಡೆದುಕೊಳ್ಳಿ. ಕೆಲವು ಘಟನೆಗಳು ನಿಮ್ಮ ಮನಸ್ಸನ್ನು ಚಂಚಲಗೊಳಿಸಬಹುದು. ಸ್ಪರ್ಧೆಯಲ್ಲಿ ಸೋಲಾಗುವ ಸಾಧ್ಯತೆ ಇದೆ. ಆರ್ಥಿಕತೆಯ ಬಗ್ಗೆ ಎಷ್ಟೇ ಜಾಗರೂಕತೆ ಇದ್ದರೂ ಸಾಲದು. ಮಹಿಳೆಯರು ಸ್ವ ಉದ್ಯಮದಿಂದ ಲಾಭವನ್ನು ಮಾಡಿಕೊಳ್ಳುವರು. ಪ್ರೀತಿಯು ಅಪನಂಬಿಕೆಯಿಂದ ನಾಶವಾಗಬಹುದು. ಆಪ್ತರ ಸಹಾಯದಿಂದ ನಿಮಗೆ ಉದ್ಯೋಗವು ಸಿಗಲಿದೆ. ಭೂಮಿಯನ್ನು ವ್ಯಾಪಾರವನ್ನು ಸದ್ಯಕ್ಕೆ ಸ್ಥಗಿತಗೊಳಿಸಿ, ಕಾಲಾನಂತರ ಮುಂದುವರಿಸಲು ಅವಕಾಶವಿರುವುದು.

ತುಲಾ ರಾಶಿ : ಆರ್ಥಿಕತೆಯು ನಿಮಗೆ ನೆಮ್ಮದಿಯನ್ನು ಕೊಟ್ಟೀತು. ಅಶುಭಕರ ವಾರ್ತೆಯನ್ನು ಕೇಳಬೇಕಾಗುವುದು. ವಿಶ್ವಾಸವನ್ನು ಗಳಿಸಲು ವಿವಿಧ ಪ್ರಯೋಗಗಳನ್ನು ಮಾಡುವಿರಿ. ಆದಾಯ ಬರುವ ಕೆಲಸವನ್ನು ಎಷ್ಟೇ ಕಷ್ಟವಾದರೂ ಮಾಡುವಿರಿ. ಉದ್ಯೋಗದ ವಿಚಾರವನ್ನು ಬಹಳ ಗೌಪ್ಯವಾಗಿ ಇಡುವಿರಿ. ಚರಾಸ್ತಿಯನ್ನು ಉಳಿಸಿಕೊಳ್ಳುವುದು ಇಷ್ಟವಾದರೂ ಕಷ್ಟವಾಗುವುದು. ಸಲ್ಲದ ಮಾತನ್ನು ಹಿರಿಯರಿಗೆ ಹೇಳುವಿರಿ. ಅಹಂಕಾರವು ನಿಮ್ಮನ್ನು ಕೆಳಗೆ ದೂಡಬಹುದು. ಸರಳತೆಯನ್ನು ರೂಢಿಸಿಕೊಳ್ಳುವ ಬಗ್ಗೆ ಆಲೋಚನೆ ಇರಲಿ. ಅನಗತ್ಯಗಳ ಅಪೇಕ್ಷೆಯಿಂದ ಸಂಗಾತಿಯ ಸಂಪತ್ತನ್ನು ಖಾಲಿ‌ಮಾಡುವಿರಿ. ನಿಮ್ಮ ಮನಸ್ಸು ಕಾರ್ಯದಲ್ಲಿ ಮಗ್ನವಾಗಿ ಇರದು. ಆರಂಭಿಸಿದ ಉದ್ಯೋಗದಲ್ಲಿ ಯಾವ ವಿಘ್ನವೂ ಬಾರದಂತೆ ಪ್ರಾರ್ಥಿಸಿ. ನೌಕರರ ಬಗೆಗೆ ನಂಬಿಕೆ ಕಡಿಮೆಯಾಗುವುದು. ತಂದೆಯ ಮಾತು ನಿಮಗೆ ಕಿರಿಕಿರಿ ಎನಿಸಬಹುದು. ನಿಮ್ಮ ಆದಾಯದ ಮೂಲವಾದ ವ್ಯಾಪಾರದಲ್ಲಿ ಲಾಭವಿರುವುದು.

ವೃಶ್ಚಿಕ ರಾಶಿ : ನಿಮ್ಮ ಮೆಲುದನಿಯಿಂದ ಯಾವ ಕೆಲಸವೂ ಆಗದು. ಹಳೆಯ ನೋವಿನಿಂದ ಬಳಲುತ್ತಿದ್ದರೂ ಏನೂ ಆಗದವರಂತೆ ಕೆಲಸದಲ್ಲಿ ತೊಡಗಿಕೊಳ್ಳುವಿರಿ. ಮನೆಗೆ ಯಾರೂ ಬಾರದಿರುವುದು ಅಜ್ಞಾತವಾಸದಂತೆ ಅನ್ನಿಸೀತು. ಭಾವನಾತ್ಮಕ ಬಂಧವನ್ನು ಬೆಳೆಯುವಲ್ಲಿ ನೀವು ಸೋಲುವಿರಿ. ಪ್ರೀತಿಯಲ್ಲಿ ನಂಬಿಕೆ ಕಡಿಮೆ ಆಗಬಹುದು. ನಿರುಪಯುಕ್ತ ವಸ್ತುಗಳನ್ನು ದಾನರೂಪವಾಗಿ ಕೊಡುವಿರಿ. ನಿಮ್ಮ ಎಲ್ಲ ಕಾರ್ಯಗಳೂ ವಿಳಂಬವಾಗಿ ಅಧಿಕಾರಿಗಳಿಂದ ಹೇಳಿಸಿಕೊಳ್ಳುವಿರಿ. ಇಂದು ಸ್ತ್ರೀಯರು ಅಲಂಕಾರಲ್ಲಿ ಹೆಚ್ಚು ತೊಡಗಿಕೊಳ್ಳುವರು. ಮಾಡಿದ ತಪ್ಪಿನಿಂದ ಪಶ್ಚಾತ್ತಾಪ ಪಡುವಿರಿ. ಎಷ್ಟೇ ಪ್ರಯತ್ನಿಸಿದರೂ ಕೊಟ್ಟ ಹಣವು ನಿಮಗೆ ಸಿಗದು. ಅದರ ಆಸೆಯನ್ನು ಬಿಡುವಿರಿ. ನಿಮ್ಮವರ ಮೇಲೆ ನೀವು ಇಟ್ಟ ನಂಬಿಕೆಯು ಹುಸಿಯಾಗುವುದು. ಕ್ರೀಡೆಯಲ್ಲಿ ಅಸಕ್ತಿಯು ಹೆಚ್ಚಾಗಬಹುದು. ಮಕ್ಕಳಿಗೆ ನಿಮ್ಮಿಂದ ಬೇಸರವಾಗಬಹುದು.

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ