AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಇಂದಿನ ಶುಭವಾರ್ತೆಯು ಈ ರಾಶಿಯವರ ಕಾರ್ಯಕ್ಕೆ ಉತ್ಸಾಹವನ್ನು ಕೊಡುವುದು

ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಜನವರಿ 08) ಭವಿಷ್ಯಹೇಗಿದೆ ಎಂಬುದು ಇಲ್ಲಿದೆ.

Horoscope: ದಿನಭವಿಷ್ಯ, ಇಂದಿನ ಶುಭವಾರ್ತೆಯು ಈ ರಾಶಿಯವರ ಕಾರ್ಯಕ್ಕೆ ಉತ್ಸಾಹವನ್ನು ಕೊಡುವುದು
ಇಂದಿನ ರಾಶಿಭವಿಷ್ಯImage Credit source: iStock Photo
Follow us
TV9 Web
| Updated By: Rakesh Nayak Manchi

Updated on: Jan 08, 2024 | 12:30 AM

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 08) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಮಾರ್ಗಶೀರ್ಷ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಗಂಡ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 07-00 ಗಂಟೆಗೆ, ಸೂರ್ಯಾಸ್ತ ಸಂಜೆ 06-17 ಕ್ಕೆ, ರಾಹು ಕಾಲ ಬೆಳಗ್ಗೆ 08:26 ರಿಂದ 09:50ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 11:15 ರಿಂದ ಮಧ್ಯಾಹ್ನ 12:39ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:04 ರಿಂದ 03:28ರ ವರೆಗೆ.

ಸಿಂಹ ರಾಶಿ : ನಿಮ್ಮ ಮೃದುಸ್ವಭಾವವು ಕೆಲವು ಕಡೆಗಳಲ್ಲಿ ಪ್ರಯೋಜನಕ್ಕೆ ಬಾರದು. ಪ್ರತ್ಯಕ್ಷವಾದ ವಿಚಾರವಾದರೂ ಪೂರ್ಣವಾಗಿ ನಂಬಬೇಕಿಲ್ಲ. ಉದ್ಯೋಗದಲ್ಲಿ ಪ್ರಗತಿ ಇಲ್ಲ ಎಂದು ಬೇಸರಗೊಂಡಿದ್ದರೆ ನಿಮಗೆ ಅಲ್ಪ ನೆಮ್ಮದಿಯ ಸಂಗತಿಯು ಇರಲಿದೆ. ನೌಕರರ ಕಾರ್ಯವು ನಿಮಗೆ ಸಂತೋಷವನ್ನು ತರದು. ಪಾಲುದಾರಿಕೆಯಲ್ಲಿ ಅಸಹಜ ಮಾತುಕತೆಗಳು ಬರಬಹುದು. ಸಂಪೂರ್ಣವಾದ ಮನಸ್ಸಿನಿಂದ ಕಾರ್ಯವನ್ನು ಮಾಡಲಾಗದು‌. ಪ್ರತಿಷ್ಠಿತ ಸಂಸ್ಥೆಯ ಉನ್ನತ ಅಧಿಕಾರದ ಪ್ರಾಪ್ತಿಯ ಅವಕಾಶವು ಬರಬಹುದು. ಲಾಭವಿಲ್ಲದ ಕಾರ್ಯದಲ್ಲಿ ಆಸಕ್ತಿಯು ಇರದು. ಕೆಲವು ವಿಚಾರದಲ್ಲಿ ನಿಮ್ಮ ಊಹೆಯು ತಪ್ಪಾದೀತು. ಕಣ್ಣಿನ ತೊಂದರೆಯು ಹೆಚ್ಚಾಗಬಹುದು. ನಿಮ್ಮ ಮೇಲಧಿಕಾರಿಗಳು ನಿಮ್ಮ ಕೆಲಸಕ್ಕೆ ಅಸಮಾಧಾನಗೊಳ್ಳಬಹುದು.

ಕನ್ಯಾ ರಾಶಿ : ನಿಮ್ಮ ಹದಗೆಟ್ಟ ಆರೋಗ್ಯವು ಉತ್ತಮವಾಗುವ ನಿರೀಕ್ಷೆಯಿದೆ. ಕುಟುಂಬದ ಜೊತೆ ಮಾತುಕತೆಗಳನ್ನು ನಡೆಸುವಿರಿ. ಬಹಳ ದಿನದ ಬೇಸರವು ಕಡಿಮೆಯಾಗುವುದು. ಇಂದಿನ ಲಾಭವನ್ನು ಯಾರ ಬಳಿಯೂ ಹೇಳಿಕೊಳ್ಳುವುದು ಬೇಡ. ಸುಮ್ಮನೇ ನಿಮ್ಮಷ್ಟಕ್ಕೆ ಇರಿ. ವಾಹನದ ಕಾರಣ ಕಲಹವಾಗುವುದು. ಆರೋಗ್ಯದಲ್ಲಿ ಸುಧಾರಣೆ ಇರಲಿದ್ದು ಕಾರ್ಯಕ್ಕೆ ತಯಾರಾಗುವಿರಿ. ಬೇಕಾದಷ್ಟು ಅನುಕೂಲತೆಗಳಿದ್ದರೂ ಬೇಕೆಂಬ ಆಸೆಯು ನಿಮ್ಮನ್ನು ಬಿಡದು. ಸಂಗಾತಿಯ ಮೇಲಿನ ಪ್ರೀತಿಯು ಕಡಿಮೆಯಾದಂತೆ ತೋರುವುದು. ಕಛೇರಿಯ ಕಾರ್ಯದ ನಿಮಿತ್ತ ಓಡಾಟವನ್ನು ಮಾಡಬೇಕಾಗಿದ್ದು ನಿಮಗೆ ಕಷ್ಟವಾದೀತು. ವಿತಂಡ ವಾದವನ್ನು ಮಾಡಿ ಎಲ್ಲರಿಂದ ದೂರಾಗುವಿರಿ. ಶತ್ರುಗಳು ಮಾನಸಿಕ ಕಿರುಕುಳವನ್ನು ಯಾವ ರೀತಿಯಿಂದಲೂ ಕೊಡಬಹುದು. ನಿಮ್ಮ ಕೆಲಸಕ್ಕೆ ಸಮಯದ ಮಿತಿಯನ್ನು ಇಟ್ಟುಕೊಳ್ಳುವುದು ಉತ್ತಮ. ಹಿರಿಯರ ತಿಳಿವಳಿಕೆಯು ಅಪಮಾನದಂತೆ ಕಾಣಬಹುದು.

ತುಲಾ ರಾಶಿ : ಲೆಕ್ಕ ಪರಿಶೋಧನೆಗೆ ಪ್ರಶಂಸೆಯನ್ನು ಪಡೆಯುವಿರಿ. ಯಾರನ್ನೋ ನಂಬಿ ಜವಾಬ್ದಾರಿಯನ್ನು ಕೊಡುವುದು ಬೇಡ. ಇನ್ನೊಬ್ಬರ ನೋವಿಗೆ ಸ್ಪಂದಿಸುವುದು ನಿಮಗೆ ಇಷ್ಟವಾಗಬಹುದು. ಮಾನಸಿಕ ಆಘಾತವು ಇಂದು ಅನಿರೀಕ್ಷಿತ ಆಗಬಹುದು. ಬಾಂಧವರ ನಡುವೆ ವ್ಯವಹಾರದ ಕಾರಣ ಭಿನ್ನಾಭಿಪ್ರಾಯ ಬರಬಹುದು. ದಾಯಾದಿಗಳು ನಿಮ್ಮ ಮೇಲೆ ಅಪವಾದವನ್ನು ಮಾಡಬಹುದು. ಕಾರ್ಯದಲ್ಲಿ ಜಯವಿದ್ದರೂ ಆರ್ಥಿಕ ನಷ್ಟವು ಆಗಬಹುದು. ಹಿತಶತ್ರುಗಳ ಕಾರಣದಿಂದ ಇಂದಿನ ವ್ಯವಹಾರವು ಹಿಂದೆ ಸಾಗಲಿದೆ. ಮೇಲಧಿಕಾರಿಗಳ ಜೊತೆ ಕಲಹವಾಡುವಿರಿ. ವಿವಾಹದ ವಿಳಂಬದಿಂದ ನಿಮಗೆ ಬೇಸರವಾದೀತು. ನಿಮ್ಮ ತಪ್ಪಿನಿಂದ ಹಿರಿಯರ ಕೆಂಗಣ್ಣಿಗೆ ಗುರಿಯಾಗುವಿರಿ. ತಂದೆಯ ಜೊತೆ ನಿಮ್ಮ ಭವಿಷ್ಯದ ಚಿಂತನೆಯನ್ನು ಮಾಡಲಿದ್ದೀರಿ. ಇಂದಿನ ಶುಭವಾರ್ತೆಯು ನಿಮ್ಮ ಕಾರ್ಯಕ್ಕೆ ಉತ್ಸಾಹವನ್ನು ಕೊಡುವುದು. ಇಂದು ಮೌಲ್ಯಯುತವಾದ ವಸ್ತುಗಳನ್ನು ಖರೀದಿಸುವಿರಿ.

ವೃಶ್ಚಿಕ ರಾಶಿ : ಇಂದು ನೀವು ಒತ್ತಡವನ್ನು ಕಡಿಮೆ ಮಾಡಿಕೊಂಡು ಕಾರ್ಯವನ್ನು ಮಾಡಬೇಕೆಂದು ಅಂದುಕೊಳ್ಳುವಾಗಲೇ ಹಲವಾರು ಕಾರ್ಯಗಳು ಬಂದು ಸೇರಬಹುದು. ನಿಮ್ಮನ್ನು ಆಡಿಕೊಳ್ಳುವುದು ಹೊಸದಲ್ಲದಿದ್ದರೂ ಇಂದು ಮಾತ್ರ ನಿಮಗೇ ಬೇರೆ ಭಾವವು ಬರಬಹುದು. ಅನಿರೀಕ್ಷಿತ ಗೆಲುವಿನಿಂದ ಹಿಗ್ಗುವ ಅವಶ್ಯಕತೆ ಇಲ್ಲ. ಇಂದು ನಿಮ್ಮ ಪ್ರೀತಿಪಾತ್ರರ ಭೇಟಿಯಾಗಲಿದೆ. ಶುಭ ಕಾರ್ಯದಲ್ಲಿ ನಿಮಗೆ ಹೆಚ್ಚು ಆಸಕ್ತಿಯು ಇರಲಿದೆ. ಮಕ್ಕಳ ನಿರೀಕ್ಷೆಯಲ್ಲಿ ಇರುವವರಿಗೆ ಶುಭಸುದ್ದಿಯು ಸಿಗಬಹುದು. ಆಸ್ತಿಯ ಮಾರಾಟದಿಂದ ನಿಮಗೆ ಹೆಚ್ಚಿನ ಲಾಭವು ಸಿಗಲಿದೆ. ಸಾರ್ವಜನಿಕ ಕ್ಷೇತ್ರದಲ್ಲಿ ನಿಮ್ಮ ಅಸ್ತಿತ್ವವು ಹೆಚ್ಚಾಗಿ ತೋರುವುಸು. ಭೂಸ್ವಾದೀನವನ್ನು ಮಾಡಿಕೊಳ್ಳುವ ಸಂದರ್ಭವು ಬರಬಹುದು. ಹಣವನ್ನು ಸಾಮಾಜಿಕ ಕಾರ್ಯಗಳಿಗೆ ಬಳಸಲು ಸಿದ್ಧರಿರುವಿರಿ. ತಪ್ಪನ್ನು ನೀವು ಒಪ್ಪಿಕೊಳ್ಳಲಾರಿರಿ. ಸಹೋದರರ ನಡುವೆ ವಾಗ್ವಾದವು ಆಗಬಹುದು. ಇಂದಿನ ವ್ಯವಹಾರವು ಎಚ್ಚರಿಕೆಯಿಂದ ಇರಲಿ. ಕೆಲವೊಮ್ಮೆ ನಿಮ್ಮ ಮಾತುಗಳೇ ನಿಮಗೆ ಮುಳುವಾಗಬಹುದು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ