ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಸಾಲಗಾರರಿಂದ ಹಿಂಸೆ ಹೆಚ್ಚಾಗುವುದು

ರಾಶಿ ಭವಿಷ್ಯವು ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಹೀಗಿರುವಾ ನಮ್ಮ ರಾಶಿಯ ಬಗ್ಗೆ ಕುತೂಹಲ ಇದ್ದೆ ಇರುತ್ತದೆ. ಹಾಗಿದ್ದರೆ ಭಾನುವಾರ (ಜುಲೈ.07) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಸಾಲಗಾರರಿಂದ ಹಿಂಸೆ ಹೆಚ್ಚಾಗುವುದು
ದಿನಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 07, 2024 | 12:30 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಭಾನುವಾರ (ಜುಲೈ 07) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಪುನರ್ವಸು, ಯೋಗ: ಧ್ರುವ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 10 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 05:00ರಿಂದ 07:05ರ ವರೆಗೆ, ಯಮಘಂಡ ಕಾಲ 12:38 ರಿಂದ 02:15ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:51 ರಿಂದ 05:28ರ ವರೆಗೆ.

ಸಿಂಹ ರಾಶಿ: ಇಂದು ನಿಮ್ಮ ಹಿತಶತ್ರುಗಳಿಂದ ತೊಂದರೆ‌ ಕೊಡಬಹುದು. ಹೊಸ ಉದ್ಯೋಗವನ್ನು ಆರಂಭಿಸುವುದಿದ್ದರೆ ಒಳ್ಳೆಯದು. ಹೆಚ್ಚು ಮಾತನಾಡಿ ನಿಮ್ಮನ್ನು ನೀವೇ ಸಣ್ಣವರನ್ನಾಗಿ ಮಾಡಿಕೊಳ್ಳಬೇಡಿ. ನಾನಾ ಮೂಲಗಳಿಂದ ವಿವಿಧ ಸಂಪತ್ತುಗಳು ಬರಲಿದೆ. ದಾಂಪತ್ಯದಲ್ಲಿ ವಿರಸವು ನಷ್ಟವಾಗುವುದು. ಅಧಿಕ ಆದಾಯಕ್ಕೆ ನಿಮ್ಮ ಉದ್ಯಮವನ್ನು ವಿಸ್ತರಿಸುವಿರಿ. ನಿಮ್ಮ ಕರ್ಮವೇ ನಿಮ್ಮನ್ನು ಸುತ್ತಿಕೊಳ್ಳುವುದು. ಮನಸ್ಸಿಗೆ ಶಾಂತಿಯು ಇರಲಿದ್ದು ಉದ್ವೇಗದ ಸಂದರ್ಭವನ್ನು ಆರಾಮಾಗಿ ದಾಟುವಿರಿ. ಇಂದು ಕೆಲವರ ವರ್ತನೆಯು ಬೇಸರ ತರಿಸಬಹುದು. ಇಂದು ನಿಮ್ಮ‌ಪೂರ್ವಜರ ಜ್ಞಾನವು ಸಿಗಲಿದೆ. ಸತ್ಸಂಗ ಮೂಲಕ ಸಮಯವನ್ನು ಕಳೆಯುವಿರಿ. ತಣ್ಣೀರಾದರೂ ತಣಿಸಿ ಕುಡಿಯುವದೇ ಉತ್ತಮ. ನಿಮ್ಮ ಸಮಜಾಯಿಷಿಯ ಅಗತ್ಯವಿಲ್ಲ. ಖರೀದಿಯನ್ನು ನೀವು ಬಹಳ ಉತ್ಸಾಹದಿಂದ ಮಾಡುವಿರಿ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿ. ನಿಮ್ಮದಾದ ಜೀವನಕ್ರಮವು ನಿಮಗೆ ಹಿಡಿಸದೇ ಇರಬಹುದು.

ಕನ್ಯಾ ರಾಶಿ: ಸ್ನೇಹಿತರಿಂದ ಇಂದು ಮನೆ ತುಂಬಲಿದೆ. ಮನೆಯ ಹಿರಿಯರ ವಿರುದ್ಧ ಮಾತನಾಡುವಿರಿ. ಕುಟುಂಬದಲ್ಲಿ ಸಣ್ಣ ಮಟ್ಟಿನ ಕಲಹವೂ ಆದೀತು. ತಂದೆ ತಾಯಿಗಳನ್ನು ಬಹಳ ಸಂತೋಷದಿಂದ‌ ನೋಡಿಕೊಳ್ಳುವಿರಿ. ಅವರು ಅಪೇಕ್ಷಿಸಿದ ಸ್ಥಳಕ್ಕೆ ಅವರನ್ನು ಕರೆದೊಯ್ಯುವಿರಿ. ನಿಮ್ಮ ಕೈಲಾದವರಿಗೆ ಸಹಾಯವನ್ನು ಮಾಡುವುದು ಒಳ್ಳೆಯದು. ರಾಜಕಾರಣಿಗಳು ತಮ್ಮ ಪ್ರಭಾವವನ್ನು ತೋರಿಸಬಹುದು. ವಿರೋಧಿಗಳಿಗೆ ನಿಮ್ಮ ಬಲ ಪ್ರದರ್ಶನವಾಗಲಿದೆ. ಒಂದೇ ಕಡೆಯಲ್ಲಿ ಉದ್ಯೋಗವನ್ನು ಮಾಡಲು ನೀವು ಇಚ್ಛಿಸುವುದಿಲ್ಲ. ಹೊಸ ಜನರ ಭೇಟಿಯು ನಿಮಗೆ ಹೊಸ ದಾರಿಯನ್ನು ಮಾಡಿಕೊಟ್ಟೀತು. ನಿಮ್ಮ ಮಾತು ಇತರಿಗೆ ಹಗುರವಾಗಿ‌ ಅನ್ನಿಸುವುದು. ನಿಮ್ಮ ಗಾಯವನ್ನು ನಿಷ್ಕಾಳಜಿ ಮಾಡಿದ್ದರ ಫಲವು ಇಂದು ಗೊತ್ತಾಗುವುದು. ಖಾಸಗಿತನದ ಸಂಸ್ಥೆಯ ಮಾಲಿಕರಾಗುವ ಆಹ್ವಾನ ಬರಲಿದೆ. ಕರ್ತವ್ಯಗಳನ್ನು ದೃಢ ಮನಸ್ಸಿನಿಂದ ಮಾಡುವಿರಿ. ಒಡ ಹುಟ್ಟಿದವರ ಬಗ್ಗೆ ಅಸೂಯೆ ತೋರಿಸುವಿರಿ. ಇಂದು ನಿಮ್ಮ ಮನೋಬಲವು ದುರ್ಬಲವಾಗಬಹುದು.

ತುಲಾ ರಾಶಿ: ಇಂದು ನಿಮ್ಮೊಳಗೆ ಅತಿಯಾದ ಗೊಂದಲ ಇರುವುದು ಇತರರಿಗೂ ಗೊತ್ತಾಗುವುದು. ಕಾರ್ಯದ ನಿಮಿತ್ತ ವ್ಯರ್ಥ ಓಡಾಟವನ್ನು ಮಾಡುವಿರಿ. ನಿಮ್ಮ ಬಗ್ಗೆ ಸದ್ಭಾವನೆ ಇರುವವರು ನಿಮಗೆ ಶ್ರೇಯಸ್ಸನ್ನು ಹರಸುವರು. ಹಣಕಾಸಿನ ವಿಚಾರಕ್ಕೆ ಸಲ್ಲದ ಅಪವಾದ ಬಂದೀತು. ನಿಮ್ಮ ಸಮಸ್ಯೆಗಳನ್ನು ಆಪ್ತರ ಜೊತೆ ಹಂಚಿಕೊಳ್ಳುವುದು ಉತ್ತಮ. ಇಂದು ಕುಟುಂಬದ ಮಂಗಲ ಕಾರ್ಯದಲ್ಲಿ ಭಾಗಿಯಾಗುವಿರಿ. ಇಷ್ಟವಿಲ್ಲದಿದ್ದರೂ ಸಂಗಾತಿಯ ಮಾತನ್ನು ಅನುಸರಿಸಿ. ಮಕ್ಕಳನ್ನು ವಿದ್ಯಾಭಾಸಕ್ಕೆ ನೀವು ಪ್ರೇರೇಪಿಸುವಿರಿ. ಹಳೆಯ ವಸ್ತುಗಳನ್ನು ಕೊಟ್ಟು ಖಾಲಿ ಮಾಡುವಿರಿ. ನಿಮ್ಮ ಲಾಭಾಂಶವನ್ನು ದಾನ ಮಾಡುವಿರಿ. ನಿಮ್ಮ ಒಳಗುಟ್ಟನ್ನು ಬಿಟ್ಟುಕೊಡಬೇಡಿ. ನಿಮ್ಮನ್ನು ಹಗುರಾಗಿ ಕಾಣಬಹುದು. ನಿಮ್ಮ ಸಣ್ಣ ವಿಷಯಗಳೂ ಬೇಕಾದಷ್ಟು ಪ್ರಯೋಜನಕಾರಿಯಾಗಲಿವೆ. ನಿಮ್ಮ ಇಂದಿನ ಸ್ಥಿತಿಯು ಅಭಿವೃದ್ದಿಗೆ ಹಲವಾರು ದಾರಿಗಳನ್ನು ಹುಡುಕುವಿರಿ. ತಪ್ಪಿದ ಯೋಚನೆಯಿಂದ ನೀವು ಸರಿಯಾಗಬೆರಕಾಗುವುದು. ನಿಮಗಿರುವ ಚಂಚಲ ಮನಸ್ಸಿನಿಂದ ನಕಾರಾತ್ಮಕ ಯೋಚನೇಗಳೇ ಕಾಣಿಸಬಹುದು.

ವೃಶ್ಚಿಕ ರಾಶಿ: ನೀವು ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಇಂದು ನಿಮ್ಮ ಪ್ರತಿಭೆಯ ಪ್ರದರ್ಶನವಾಗಲಿದೆ‌. ಸ್ನೇಹಿತರ ಜೊತೆ ಹೆಚ್ಚು ಕಾಲವನ್ನು ಕಳೆದು ನೋವನ್ನು ಹಂಚಿಕೊಳ್ಳುವರು. ವಿದ್ಯುತ್ ಉಪಕರಣಗಳ ಮಾರಾಟವನ್ನು ನೀವು ಮಾಡುತ್ತಿದ್ದರೆ ಲಾಭವನ್ನು ಪಡೆಯಬಹುದಾಗಿದೆ. ಸಾರ್ವಜನಿಕವಾಗಿ ನೀವು ಹೆಚ್ಚು ಪ್ರಭಾವ ಉಳ್ಳವರಾಗಿದ್ದು ನಿಮಗೆ ಗೌರವವೂ ಸಿಗಲಿದೆ. ಸಹೋದ್ಯೋಗಿಗಳು ನಿಮ್ಮ ಮೇಲೆ ಒತ್ತಡ ಕೊಡುವ ಪ್ರಯತ್ನ ಮಾಡಬಹುದು. ಹೊಸ ಕೆಲಸಕ್ಕೆ ಹೋಗುವ ಸಾಧ್ಯತೆ ಇದೆ. ನಿಮ್ಮಿಂದ ಆಗುವ ಕೆಲಸಕ್ಕೆ ಹೆಚ್ಚು ಒತ್ತು ಕೊಡಿ. ತೊಂದರೆಗೆ ಸಿಕ್ಕಿಕೊಳ್ಳಲು ನೀವೇ ಕಾರಣ. ಇದೇ ನಿಮಗೆ ಮುಳುವಾಗಬಹುದು. ಇನ್ನೊಬ್ಬರಿಗೆ ನಿಮ್ಮನ್ನು ಹೋಲಿಸಿಕೊಂಡು ಬೇಸರಿಸುವಿರಿ. ಕುಟುಂಬದ ಬಗ್ಗೆ ನಿಮಗೆ ಅಭಿಮಾನದ ಕೊರತೆ ಕಾಣುವುದು. ಸಾಲಗಾರರಿಂದ ಹಿಂಸೆ ಹೆಚ್ಚಾಗುವುದು. ನಿಮಗೆ ಸಿಕ್ಕ ಪ್ರಶಂಸೆಯಿಂದ ಸಹೋದ್ಯೋಗಿಗಳು ತೊಂದರೆಯನ್ನು ಕೊಡಬಹುದು.

ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ