Astrology: ದಿನಭವಿಷ್ಯ: ಈ ರಾಶಿಯವರಿಗೆ ತಮ್ಮ ಅಹಂಕಾರವೇ ಮುಳ್ಳಾಗಬಹುದು ಎಚ್ಚರ!

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಜೂನ್​​ 2024ರ​​ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Astrology: ದಿನಭವಿಷ್ಯ: ಈ ರಾಶಿಯವರಿಗೆ ತಮ್ಮ ಅಹಂಕಾರವೇ ಮುಳ್ಳಾಗಬಹುದು ಎಚ್ಚರ!
ದಿನಭವಿಷ್ಯ: ಈ ರಾಶಿಯವರಿಗೆ ತಮ್ಮ ಅಹಂಕಾರವೇ ಮುಳ್ಳಾಗಬಹುದು ಎಚ್ಚರ!
Follow us
|

Updated on: Jun 09, 2024 | 12:02 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಭಾನುವಾರ (ಜೂನ್ 09) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ಗಂಡ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಸಂಜೆ 05:23 ರಿಂದ 06:59ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:32 ರಿಂದ 02:09ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:46 ರಿಂದ 05:23ರ ವರೆಗೆ.

ಮೇಷ ರಾಶಿ: ಇಂದು ನೀವು ಮಾಡಿದ ಹೂಡಿಕೆಯಿಂದ ಲಾಭವಿದೆ. ದುರಭ್ಯಾಸದಿಂದ ಹಣವನ್ನು ಕಳೆದುಕೊಳ್ಳುವಿರಿ. ವ್ಯಾಪರದಲ್ಲಿ ಲಾಭವಾಗಲಿದೆ. ಇಂದು ನೀವು ವಾಹನಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಎದುರಿಸಬೇಕಾಗಬಹುದು. ಧಾರ್ಮಿಕ ಕಾರ್ಯಗಳನ್ನು ನಡೆಸುವ ಉದ್ದೇಶವಿದ್ದರೆ ಇಂದೇ ಮಾಡಿಕೊಳ್ಳಿ. ನಿಮ್ಮ ಬಗ್ಗೆ ಮನೆಯಲ್ಲಿ ಮಾತನಾಡುವರು. ಇಂದು ನೀವು ಕಾರ್ಯದ ಒತ್ತಡದಲ್ಲಿ ಇದ್ದರೂ ನೀವು ಕುಟುಂಬಕ್ಕಾಗಿ ಸಮಯವನ್ನು ಕೊಡುವಿರಿ. ಸಂಗಾತಿಯು ನಿಮಗೆ ಸಂಪೂರ್ಣ ಬೆಂಬಲ ನೀಡುವರು. ತಾಯಿಯ ಕಡೆಯ ಬಂಧುಗಳು ನಿಮ್ಮನ್ನು ಭೇಟಿಯಾಗಲಿದ್ದಾರೆ. ಹೇಳಿದ ಸಮಯಕ್ಕೆ ಕೆಲಸವನ್ನು ಮಾಡಿಕೊಡಲಾಗುವುದು. ಹಿರಿಯರ ಸೇವೆಯಲ್ಲಿ ನೀವು ಇರುವಿರಿ. ನಕಾರಾತ್ಮಕ ಆಲೋಚನೆಗಳನ್ನು ತಲೆಯಿಂದ ತೆಗೆಯಿರಿ. ಕೋಪವನ್ನು ಯಾರೆದುರೂ ಪ್ರಕಟಿಸುವುದು ಬೇಡ. ಬೇಕಾದುದನ್ನು ಆಪ್ತರಿಂದ ಕೇಳಿಪಡೆಯುವಿರಿ.

ವೃಷಭ ರಾಶಿ: ಇಂದು ನೀವು ಒತ್ತಡಗಳಿಗೆ ಸಿಲಿಕದೇ ಎಚ್ಚರಿಕೆಯಿಂದ ಕಾರ್ಯವನ್ನು ನಿಭಾಯಿಸಲು ಕಲಿಯುವಿರಿ. ಹಣಕಾಸಿನ ಹರಿವು ಹೆಚ್ಚಾಗಲಿದೆ. ಕೊಟ್ಟ ಸಾಲ ಮರಳಿಬರಹುದು. ನಿಮ್ಮ ಮೇಲೆ ಸಹಾನುಭೂತಿಯು ಉಂಟಾಗುವ ಸಾಧ್ಯತೆ ಇದೆ. ಇಂದು ನೀವು ಕುಟುಂಬದ ಅಗತ್ಯತೆಗಳನ್ನು ಪೂರೈಸಲು ಓಡಾಟ ನಡೆಸಲಿದ್ದೀರಿ. ನಿಮ್ಮ ತಾಯಿಯು ಕಿರಿಯ ಮಗನಾದ ನಿಮಗೆ ಬೆಂಬಲವನ್ನು ಕೊಡುವರು. ಹಳೆಯ ವಸ್ತುಗಳ ದುರಸ್ತಿಯಾಗಲಿದೆ. ಯಂತ್ರೋದ್ಯಮಿಗಳು ಇಂದು ಉತ್ತಮ ಲಾಭವನ್ನು ಪಡೆಯುವರು. ಹಿರಿಯರ ಆಸೆಗಳನ್ನು ಪೂರ್ಣಗೊಳಿಸುವ ಒಮ್ಮನಸ್ಸು ಇರಲಿದೆ. ಇಂದು ಆಸ್ತಿಯ ವಿವಾದವು ಬಗೆಹರಿಯಲಿದೆ. ಯಾರಾದರೂ ನಿಮ್ಮನ್ನು ಕಂಡು ಅವಮಾನಿಸುವರು. ಉತ್ತರಿಸಿ ಇನ್ನಷ್ಟು ಹತಾಶರಾಗಬೇಡಿ. ಪ್ರಭಾವಿಗಳ ಭೇಟಿಯಿಂದ ಸಂತೋಷವಾಗಲಿದೆ. ಬೇರೆ ಸ್ಥಳದಲ್ಲಿ ನಿಮ್ಮ ವಾಸವು ಇರಬಹುದು.

ಮಿಥುನ ರಾಶಿ: ಇಂದು ನಿಮ್ಮ ವಾಹನದಲ್ಲಿ ದೀರ್ಘಪ್ರಯಾಣವು ಮಾಡುವುದು ಬೇಡ. ಅನಿವಾರ್ಯ ಕಾರಣಗಳಿಂದ ಖರ್ಚಿಗೆ ನಾನಾ ಮಾರ್ಗಗಳು ತೆರದುಕೊಳ್ಳಬಹುದು. ಇಂದು ನಿಮ್ಮ ಸಾಮಾರ್ಥ್ಯವನ್ನು ವ್ಯಕ್ತಪಡಿಸಲು ಸಕಾಲ. ನಿಮಗೆ ಮಕ್ಕಳ ಕಡೆಯಿಂದ ಸಮಸ್ಯೆಗಳು ಬರಬಹುದು. ಹೊರಗೆ ತಿನ್ನುವುದು ಮತ್ತು ಕುಡಿಯುವುದನ್ನು ತಪ್ಪಿಸಿ, ಇಲ್ಲದಿದ್ದರೆ ನಿಮ್ಮ ಆರೋಗ್ಯವು ಹದಗೆಡಬಹುದು. ಹಿರಿಯರ ಜೊತೆ ನೀವು ಅನುಭವವನ್ನು ಪಡೆಯುವಿರಿ. ನಿಮ್ಮವರಿಂದ ನಿಮಗೆ ಕಷ್ಟಗಳು ಬರಬಹುದು ಎಂಬ ನಿರೀಕ್ಷೆಯಲ್ಲಿ ಇರುವಿರಿ. ಆಸ್ತಿ ಖರೀದಿಯ ಬಗ್ಗೆ ಚಿಂತನೆ ಇರುವುದು. ಲಾಭಕ್ಕೋಸ್ಕರ ಕೆಲಸವನ್ನು ಮಾಡದೇ ಖುಷಿಗೆ ಉದ್ಯೋಗವನ್ನು ಪ್ರಾರಂಭಿಸುವ ಮನಸ್ಸು ಮಾಡುವಿರಿ. ಸಾಮೂಹಿಕ ಕಾರ್ಯದಲ್ಲಿ ನಿಮಗೆ ಯಶಸ್ಸು ಸಿಗಬಹುದು. ಮಹಿಳೆಯರು ಉನ್ನತ ಅಧಿಕಾರವನ್ನು ಪಡೆದು ಅಹಂಕಾರ ಮಡುವುದು ಬೇಡ. ಹಿರಿಯರೆದುರು ವಿನಯವಿರಲಿ.

ಕರ್ಕಾಟಕ ರಾಶಿ: ಅಹಂಕಾರದಿಂದ ಕೆಲವರನ್ನು ಕಳೆದುಕೊಳ್ಳುವಿರಿ. ಬಾಕಿಯಿರುವ ಗೃಹಕೃತ್ಯಗಳನ್ನು ಪೂರೈಸಲು ಒಂದು ಅನುಕೂಲಕರ ದಿನ. ಎಲ್ಲ ಹತಾಶೆ, ನೋವು, ಸಂಕಟ, ತುಮುಲಗಳನ್ನು ನಿವಾರಿಸಿಕೊಳ್ಳಲು ಒಳ್ಳೆಯ ಸಮಯ ಮತ್ತಾವುದೂ ಇಲ್ಲ. ದಾಂಪತ್ಯವು ಇನ್ನೊಬ್ಬರು ಚಾಡಿಯಿಂದ ಹಾಳಾಗಬಹುದು. ಸಂತಾನದ ಉತ್ಸಾಹದಲ್ಲಿ ಇರುವಿರಿ. ಇಂದು ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳುವಿರಿ. ಅದು ನಿಮ್ಮ ಮನಸ್ಸನ್ನು ಸಂತೋಷಪಡಿಸುತ್ತದೆ. ದುಂದು ವೆಚ್ಚಗಳನ್ನು ತಪ್ಪಿಸಿ. ಅವಶ್ಯಕತೆಯಿದ್ದಷ್ಟು ಮಾತ್ರ ಹಣವನ್ನು ಬಳಸಿ. ಸಂದರ್ಭದ ವರ್ತನೆಯನ್ನು ಕಂಡು ಯಾರ ಬಗ್ಗೆಯೂ ತೀರ್ಮಾನಕ್ಕೆ ಬರಬೇಡಿ. ಮನೆಯ ಸ್ಥಳವನ್ನು ಬದಲಾಯಿಸುವ ಅನಿವಾರ್ಯತೆ ಬಂದೀತು. ಅನ್ಯಾನ್ಯ ಮಾರ್ಗಗಳಿಂದ ಹಣವು ಬರಬಹುದು. ‌ಕಳೆದಕೊಂಡ ವಸ್ತುವಿಗೆ ತೀವ್ರ ಹುಡುಕಾಟ ಇರುವುದು.‌ ಉತ್ಸಾಹಕ್ಕೆ ತೊಂದರೆ ಬರುವ ಕಡೆ ನೀವು ಇರಲಾರಿರಿ.

ತಾಜಾ ಸುದ್ದಿ
ಮೇಕೆದಾಟು ಬಗ್ಗೆ ಕೇಂದ್ರ ಜಲಶಕ್ತಿ ಮಂತ್ರಿ ವಿ ಸೋಮಣ್ಣ ಹೇಳಿದ್ದೇನು?
ಮೇಕೆದಾಟು ಬಗ್ಗೆ ಕೇಂದ್ರ ಜಲಶಕ್ತಿ ಮಂತ್ರಿ ವಿ ಸೋಮಣ್ಣ ಹೇಳಿದ್ದೇನು?
ಕೊಲೆಗಡುಕರಿಗೆ ಶಿಕ್ಷೆ ಆಗಲಿ; MLA ಮುಂದೆ ಮೃತ ರೇಣುಕಾ ಸ್ವಾಮಿ ತಾಯಿ ಗೋಳಾಟ
ಕೊಲೆಗಡುಕರಿಗೆ ಶಿಕ್ಷೆ ಆಗಲಿ; MLA ಮುಂದೆ ಮೃತ ರೇಣುಕಾ ಸ್ವಾಮಿ ತಾಯಿ ಗೋಳಾಟ
ಲಕ್ಷ ವೃಕ್ಷ ಯೋಜನೆಗೆ ಸಿದ್ದರಾಮಯ್ಯ ಚಾಲನೆ: 5ಕೋಟಿ ಗಿಡ ಬೆಳೆಸುವ ಗುರಿ
ಲಕ್ಷ ವೃಕ್ಷ ಯೋಜನೆಗೆ ಸಿದ್ದರಾಮಯ್ಯ ಚಾಲನೆ: 5ಕೋಟಿ ಗಿಡ ಬೆಳೆಸುವ ಗುರಿ
ದರ್ಶನ್-ಪವಿತ್ರಾ ಗೌಡ ಸಂಬಂಧದ ಬಗ್ಗೆ ವಕೀಲರ ಸ್ಪಷ್ಟನೆ
ದರ್ಶನ್-ಪವಿತ್ರಾ ಗೌಡ ಸಂಬಂಧದ ಬಗ್ಗೆ ವಕೀಲರ ಸ್ಪಷ್ಟನೆ
ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೆಚ್​ಡಿ ಕುಮಾರಸ್ವಾಮಿ
ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೆಚ್​ಡಿ ಕುಮಾರಸ್ವಾಮಿ
ಲೋಫರ್ ಫ್ರೆಂಡ್ಸ್​ನಿಂದ ದರ್ಶನ್ ಹಾಳಾದ, ಶಿಕ್ಷಣದ ಕೊರತೆ ಇದೆ; ಅಡ್ಡಂಡ
ಲೋಫರ್ ಫ್ರೆಂಡ್ಸ್​ನಿಂದ ದರ್ಶನ್ ಹಾಳಾದ, ಶಿಕ್ಷಣದ ಕೊರತೆ ಇದೆ; ಅಡ್ಡಂಡ
‘ನಟ ದರ್ಶನ್​​​ ಗ್ರಹಗತಿ ಸರಿಯಾಗಿಲ್ಲ, ಅಪಾಯಗಳು ಬರುತ್ತಿವೆ’ ಅರ್ಚಕರ ಹೇಳಿಕ
‘ನಟ ದರ್ಶನ್​​​ ಗ್ರಹಗತಿ ಸರಿಯಾಗಿಲ್ಲ, ಅಪಾಯಗಳು ಬರುತ್ತಿವೆ’ ಅರ್ಚಕರ ಹೇಳಿಕ
ಇಟಲಿ ಶೃಂಗಸಭೆಯಲ್ಲಿ ಭಾರತದ ದೃಷ್ಟಿಕೋನ ಪ್ರಸ್ತುತಪಡಿಸಿದ ಮೋದಿ
ಇಟಲಿ ಶೃಂಗಸಭೆಯಲ್ಲಿ ಭಾರತದ ದೃಷ್ಟಿಕೋನ ಪ್ರಸ್ತುತಪಡಿಸಿದ ಮೋದಿ
‘ದರ್ಶನ್ ಶಾಂತವಾಗಿದ್ರೂ ಕಿರಿಕಿರಿ ಮಾಡ್ತಾರೆ’; ಪೂಜೆ ಸಲ್ಲಿಸಿ ಬಾವನ ಮಾತು
‘ದರ್ಶನ್ ಶಾಂತವಾಗಿದ್ರೂ ಕಿರಿಕಿರಿ ಮಾಡ್ತಾರೆ’; ಪೂಜೆ ಸಲ್ಲಿಸಿ ಬಾವನ ಮಾತು
ಮತ್ತೊಂದು ಸಾವಿಗೆ ಕಾರಣವಾದ ದರ್ಶನ್; ಕುಟುಂಬದವರ ಆಕ್ರೋಶ
ಮತ್ತೊಂದು ಸಾವಿಗೆ ಕಾರಣವಾದ ದರ್ಶನ್; ಕುಟುಂಬದವರ ಆಕ್ರೋಶ