Horoscope: ಅತಿ ಬುದ್ಧಿವಂತಿಕೆಯೂ ಮುಳುವಾಗಬಹುದು-ಎಚ್ಚರ
ಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 19 ಜೂನ್ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಬುಧವಾರ (ಜೂನ್. 19) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಸಿದ್ಧಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 02 ನಿಮಿಷಕ್ಕೆ, ರಾಹು ಕಾಲ 12:34 ರಿಂದ 02:11ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:43 ರಿಂದ ಬೆಳಿಗ್ಗೆ 09:20ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 10:57 ರಿಂದ 12:34ರ ವರೆಗೆ.
ಮೇಷ ರಾಶಿ : ನೀವು ಕೊಟ್ಟ ಮಾತನ್ನು ಇಂದು ಉಳಿಸಿಕೊಳ್ಳುವುದು ಕಷ್ಟವಾದೀತು. ಇದಕ್ಕಾಗಿ ಅಪಮಾನೂ ಆಗಬಹುದು. ಆರ್ಥಿಕವಾಗಿ ನಿಮ್ಮನ್ನು ಯಾರಾದರೂ ಕೇಳಬಹುದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಕಾಣಬಹುದು. ದೀರ್ಘಕಾಲದ ಬಂಧಗಳು ಮುಕ್ತಾಯವಾಗುವುದು. ಸ್ತ್ರೀಯರಿಗೆ ಶುಭವಾರ್ತೆಯೊಂದು ಬರಲಿದೆ. ಅಂಜಿಕೆಯಿಲ್ಲದೇ ನೀವು ಮಾಡುವ ಕಾರ್ಯದಲ್ಲಿ ಮುನ್ನುಗ್ಗಿ. ಇನ್ನೊಬ್ಬರ ಕಲಹದಿಂದ ನೆಮ್ಮದಿಯನ್ನು ಕಾಣುವುದು ಬೇಡ. ಸಾಮಾಜಿಕವಾಗಿ ಮನ್ನಣೆ ಸಿಗುವ ಸಾಧ್ಯತೆ ಇದೆ. ಯಾರಾದರೂ ಹೊಗಳಿದರೆ ಹಿಗ್ಗಬೇಡಿ. ಕೊಡುಕೊಳ್ಳುವ ವ್ಯವಹಾರದಲ್ಲಿ ಬೇಸರವಾಗಬಹುದು. ವಿವಾಹದ ಮಾತುಕತೆ ನಡೆಯಬಹುದು. ನಿಮ್ಮ ದೌರ್ಬಲ್ಯವನ್ನು ನೀವು ಸಹಾಕರಾತ್ಮಕವಾಗಿ ಪಡೆದುಕೊಂಡು ಮುನ್ನಡೆಯಬಹುದು. ಮನಸ್ಸಿದ್ದರೆ ಗೌರವಿಸಿ, ಇಲ್ಲವೇ ಸುಮ್ಮನಿರಿ.
ವೃಷಭ ರಾಶಿ : ನಿಮ್ಮ ಭೂಮಿಯ ಮಾರಾಟಕ್ಕೆ ಯಾರಾದರೂ ಬರಬಹುದು. ಹಣಕಾಸನ್ನು ಹೊಂದಿಸುವುದು ಇಂದು ಕಷ್ಟವಾಗುವುದು. ಸಾಲಗಾರರ ಕಾಟದಿಂದ ನೀವು ಮುಕ್ತರಾಗುವಿರಿ. ಅನಿರೀಕ್ಷಿತ ಧನಲಾಭವು ನಿಮ್ಮ ನಿಶ್ಚಿಂತೆಗೆ ಕಾರಣವಾಗಲಿದೆ. ಯಾರದ್ದೋ ಮಾತನ್ನು ಕೇಳಿ ಕೆಲಸಗಳನ್ನು ಮಾಡಬೇಡಿ. ಯಾವುದರಲ್ಲಿಯೂ ಸಂತೃಪ್ತಿ ಇರದು. ಹಿರಿಯರಿಂದ ಸಂಪತ್ತು ಸಿಗಬಹುದು ಅಥವಾ ಉತ್ತಮಮಾರ್ಗದಿಂದ ಬರುವ ಸಂಪತ್ತು ನಿಮ್ಮನ್ನು ಖುಷಿಯಾಗಿಡಲಿದೆ. ಸಾಲಬಾಧೆಯಿಂದ ಮುಕ್ತರಾಗಲು ಯೋಜನೆ ರೂಪಿಸುವಿರಿ. ಅತಿ ಬುದ್ಧಿವಂತಿಕೆಯು ಮುಳುವಾಗಬಹುದು. ಸ್ವಾಭಿಮಾನಕ್ಕೆ ಧಕ್ಕೆಯಾಗಬಹುದು. ನಿಮ್ಮ ಮನಸ್ಸು ಹೊಸ ಪರಿವರ್ತನೆಯ ಕಡೆ ಹೊರಳುವುದು. ಅಶುಭವಾರ್ತೆಗೆ ನೀವು ಕಿವಿಯಾಗಬೇಕಾದೀತು. ನಿಮ್ಮ ಬಗ್ಗೆ ಹೇಳಿಕೊಳ್ಳುವುದು ಅಹಂಕಾರವಾದೀತು.
ಮಿಥುನ ರಾಶಿ : ಸಹೋದರನ ನಡತೆ ನಿಮಗೆ ಸಂಶಯ ತರಿಸಬಹುದು. ಏನೇ ಆದರೂ ನಿಮ್ಮ ತಪ್ಪನ್ನು ನೀವು ಒಪ್ಪಿಕೊಳ್ಳಲಾರಿರಿ. ನಿಮ್ಮ ನಷ್ಟವನ್ನು ಮರೆಮಾಚಲು ತಂತ್ರವನ್ನು ಹೂಡುಕುವಿರಿ. ಸಂಕಟ ಬಂದಾಗ ವೆಂಕಟರಮಣ ಎನ್ನುವಂತೆ ಇಂದು ನೀವು ದೇವರ ಮೊರೆ ಹೊಗುವಿರಿ. ಪಿತ್ರಾರ್ಜಿತ ಚರಾಸ್ತಿಯನ್ನು ಸುತ್ತಿ ಬಳಸಿ ಕೇಳುವಿರಿ. ಭೂಮಿಯ ವ್ಯವಹಾರವನ್ನು ನೋಡಿಕೊಳ್ಳುವವರಿಗೆ ಅಧಿಕ ಲಾಭವಿದೆ. ಸಾಲ ಕೊಟ್ಟವರು ಕಟುವಾಗಿ ಮಾತನಾಡಬಹುದು. ಸಮಾಧಾನದಿಂದ ಅವರಿಗೆ ಉತ್ತರಕೊಟ್ಟು ಕೆಲವು ದಿನಗಳ ಅನಂತರ ಪಾವತಿಸುವೆನು ಎಂದು ಹೇಳಿ. ಅಳುಕುವ ಅವಶ್ಯಕತೆ ಇಲ್ಲ. ಎಲ್ಲವೂ ನಿಮಗೆ ತಿಳಿದೇ ಆಗಬೇಕು ಎನ್ನುವ ಹಠವಿರುವುದು. ಸಹೋದರನಿಂದ ಯಾವ ಸಹಕಾರವನ್ನು ನಿರೀಕ್ಷಿಸದೇ ಕಾರ್ಯಪ್ರವೃತ್ತರಾಗುವಿರಿ. ಇರುವುದನ್ನು ಇದ್ದಂತೆ ಹೇಳುವುದು ಇನ್ನೊಬರಿಗೆ ಆಗಿಬಾರದು.
ಕರ್ಕ ರಾಶಿ : ನಿಮ್ಮ ಪ್ರಭಾವದಿಂದಾಗಿ ಇನ್ನೊಬ್ಬರಿಗೆ ಸಹಾಯ ಮಾಡುವಿರಿ. ಮನೆಯ ಕೆಲಸದಲ್ಲಿ ಆಸಕ್ತಿ ಹೆಚ್ಚಿರುವುದು. ಇದರಿಂದ ತುರ್ತು ಕೆಲಸಗಳನ್ನು ಮರೆಯಬಹುದು ಸಿಟ್ಟಿನಿಂದ ಎಲ್ಲವನ್ನೂ ಸರಿ ಮಾಡುತ್ತೇನೆ ಎಂಬುದನ್ನು ಬಿಡಿ. ಪ್ರೀತಿಯಿಂ ಸರಿ ಮಾಡುವ ವಿಧಾನವನ್ನು ಕಂಡುಕೊಳ್ಳಿ. ನಿಮ್ಮಮೆಲೆಯೂ ಪ್ರೀತಿ ಬರಬಹುದು. ಎದುರಾಳಿಯ ಬಲವನ್ನು ಕಂಡು ಯುದ್ಧಸಾರಬೇಕು. ನಮ್ಮ ಬಳಿ ಇರುವ ವಸ್ತು, ವ್ಯಕ್ತಿಗಳ ಮೇಲಲ್ಲ. ಮಕ್ಕಳು ನಿಮ್ಮನ್ನು ಬಹಳ ಹಚ್ಚಿಕೊಳ್ಳುತ್ತಾರೆ. ಯಾವುದರಿಂದಲೂ ಬಿಡುಗಡೆ ಸಿಗದೇ ನೀವು ಸ್ವತಂತ್ರರಾಗಲಾರಿರಿ. ಆತುರದ ನಿರ್ಧಾರಕ್ಕೆ ಹೋಗಬೇಡಿ. ಸಮಯಕ್ಕಾಗಿ ಕಾಯಿರಿ. ಎಲ್ಲವನ್ನೂ ಕಾಲವೇ ತಿಳಿಸುತ್ತದೆ. ಅದಕ್ಕೋಸ್ಕರ ನಿಮ್ಮ ಶ್ರಮವನ್ನು ವ್ಯರ್ಥಮಾಡಿಕೊಳ್ಳಬೇಡಿ. ಅದನ್ನು ಯೋಜನೆ ಗೊಳಿಸಿ. ಸಭ್ಯತೆಯ ಮಾತಿನಿಂದ ನೀವು ಕೆಲಸಗಳನ್ನು ಮಾಡಿಸಿಕೊಳ್ಳುವಿರಿ. ಕಾರ್ಯಕ್ಷೇತ್ರದಲ್ಲಿ ಹೆಚ್ಚು ಸಮಯ ಕೆಲಸವನ್ನು ಮಾಡಬೇಕಾಗುವುದು.