Horoscope ದಿನ ಭವಿಷ್ಯ | ತುಲಾ ರಾಶಿಯವರಿಗೆ ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ

ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ದ್ವಾದಶಿ, ಶುಕ್ರವಾರ, ಮಾರ್ಚ್ 26, 2021. ಮಖೆ ನಕ್ಷತ್ರ ದಿನ ಭವಿಷ್ಯ.

Horoscope ದಿನ ಭವಿಷ್ಯ | ತುಲಾ ರಾಶಿಯವರಿಗೆ ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ
ರಾಶಿ ಭವಿಷ್ಯ
Edited By: ಆಯೇಷಾ ಬಾನು

Updated on: Mar 26, 2021 | 6:36 AM

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ದ್ವಾದಶಿ, ಶುಕ್ರವಾರ, ಮಾರ್ಚ್ 26, 2021. ಮಖೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10: 49 ಇಂದ ಮಧ್ಯಾಹ್ನ 12 : 20 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.15. ಸೂರ್ಯಾಸ್ತ: ಸಂಜೆ 6.27.

ತಾ.26-03-2021 ರ ಶುಕ್ರವಾರದ ರಾಶಿಭವಿಷ್ಯ

ಮೇಷ: ಮಾತಿನಂತೆಯೇ ಎಲ್ಲವೂ ನಡೆಯುವದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವದು.ಲಾಭದಾಯಕ ಹುದ್ದೆ ದೊರೆಯುವದು. ಶುಭ ಸಂಖ್ಯೆ:6

ವೃಷಭ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ.ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವದು. ಶುಭ ಸಂಖ್ಯೆ: 1

ಮಿಥುನ:ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 3

ಕರ್ಕ: ವ್ಯವಹಾರಿಕ ಸಂಪರ್ಕಗಳು ಹೆಚ್ಚುವವು ಅದರಂತೆ ಧನದ ಮೂಲಗಳೂ ಹೆಚ್ಚುವವು. ಸಾಲ ಮರುಪಾವತಿಯಾಗುವದು. ಮನೆಯಲ್ಲಿ ನೆಮ್ಮದಿ ಇರುವದು. ಅವಿವಾಹಿತರಿಗೆ ಕಂಕಣಬಲ ಕೂಡಿಬರುವದು. ಶುಭ ಸಂಖ್ಯೆ: 4

ಸಿಂಹ: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವದು. ಬಂಧುಮಿತ್ರರ ಸಹಕಾರ ದೊರೆಯುವದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವದು. ಮನೆಯಲ್ಲಿ ಸಂತಸ ಮೂಡುವದು. ಶುಭಕಾರ್ಯಗಳು ಜರುಗುವವು. ಶುಭ ಸಂಖ್ಯೆ: 9

ಕನ್ಯಾ: ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವದು. ಅಡೆತಡೆಗಳ ನಿವಾರಣೆ ಯಾಗುವದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವದಿಲ್ಲ. ಹಿರಿಯರ ಸಲಹೆ ದೊರೆಯುವದು. ಶುಭ ಸಂಖ್ಯೆ: 5

ತುಲಾ: ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವದು. ಕೈಗೊಂಡ ಕಾರ್ಯ ಯಶ ಕಾಣುವದು. ಶುಭ ಸಂಖ್ಯೆ: 2

ವೃಶ್ಚಿಕ: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 1

ಧನು: ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅಪೂರ್ಣ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಮೋಸಮಾಡುವ ಸಂಭವವಿದೆ. ದೂರ ಪ್ರಯಾಣ ಅಥವಾ ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 8

ಮಕರ: ವ್ಯಾಪಾರದಲ್ಲಿ ಪ್ರಗತಿ ಇರುವದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವದು. ಶುಭ ಸಂಖ್ಯೆ: 3

ಕುಂಭ: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವದು. ವಾದ-ವಿವಾದ, ಹಠಸಾಧನೆ ಬೇಡ. ಶುಭ ಸಂಖ್ಯೆ: 7

ಮೀನ: ಹೊಸ ಯೋಜನೆಗಳು ಬೇಡ.ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವದು. ಕೊಟ್ಟ ಸಾಲ ಮರುಪಾವತಿ ಆಗಲಾರದು,ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಧ್ಯತೆ ಇದೆ. ಶುಭ ಸಂಖ್ಯೆ: 2


ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us