Horoscope 13 Nov: ದಿನಭವಿಷ್ಯ, ಬಹಳ ಪ್ರಯತ್ನದ ಫಲವಾಗಿ ಈ ರಾಶಿಯ ಅವಿವಾಹಿತರಿಗೆ ಯೋಗ್ಯವಾದ ಸಂಬಂಧವು ಬರಲಿದೆ
ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ನವೆಂಬರ್ 13) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್ 13) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಸೌಭಾಗ್ಯ, ಕರಣ: ಕಿಂಸ್ತುಘ್ನ, ಸೂರ್ಯೋದಯ ಬೆಳಗ್ಗೆ 06 ಗಂಟೆ 33 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ, ರಾಹು ಕಾಲ ಬೆಳಗ್ಗೆ 07:59 ರಿಂದ 09:25ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:51 ರಿಂದ ಮಧ್ಯಾಹ್ನ 12:17ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:43 ರಿಂದ 03:08ರ ವರೆಗೆ.
ಮೇಷ ರಾಶಿ: ಅನಿರೀಕ್ಷಿತ ಮಾತುಗಳಿಂದ ಬೇಸರವಾಗಬಹುದು. ಆರೋಗ್ಯವು ಹದತಪ್ಪುವುದು. ನಂಬಿಕೆಯನ್ನು ಗಳಿಸುವುದು ನಿಮಗೆ ಸವಾಲಾಗಬಹುದು. ನಿರೀಕ್ಷಿತ ಉಡುಗೊರೆಯಿಂದ ಸಂತೋಷವು ಸಿಗುವುದು. ಕಾರ್ಯದಲ್ಲಿ ಉಂಟಾದ ತೊಂದರೆಯನ್ನು ನೀವು ಲೆಕ್ಕಿಸದೇ ಮುನ್ನಡೆಯುವಿರಿ. ಆಭರಣ ಪ್ರಿಯರಿಗೆ ಸಂತೋಷವಾಗುವುದು. ಹಳೆಯ ವ್ಯವಹಾರವು ಪುನಃ ಮುನ್ನೆಲೆಗೆ ಬಂದು ಕಲಹದಲ್ಲಿ ಅಂತ್ಯವಾಗಬಹುದು. ಅಶಿಸ್ತಿನ ಕಾರ್ಯಕ್ಕೆ ಅಪಹಾಸ್ಯ ಮಾಡಬಹುದು. ಮಾತಿನಲ್ಲಿ ಮಿತಿ ಇರಲಿದ್ದು ಎಲ್ಲರಿಗೂ ಆಶ್ಚರ್ಯವಾದೀತು. ಆಲಸ್ಯದಿಂದ ದೂರವಿದ್ದರೂ ಸೋಮಾರಿ ಬಿರುದು ಬರಬಹುದು. ವಿವಾದಕ್ಕೆ ಹೋಗಿ ಮೂರ್ಖರಾಗುವುದು ಬೇಡ. ಆಲಸ್ಯವನ್ನು ಬಿಡುವುದು ಅನಿವಾರ್ಯವಾದೀತು.
ವೃಷಭ ರಾಶಿ: ನಿಮ್ಮ ಕೃತಕ ಸ್ವಭಾವವು ಇತರರಿಗೆ ಇಷ್ಟವಾಗದೇ ಹೋಗುವುದು. ಕೆಲವು ಸನ್ನಿವೇಶವನ್ನು ನೀವಾಗಿಯೇ ಸೃಷ್ಟಿಸಿಕೊಳ್ಳುವಿರಿ. ಆರ್ಥಿಕತೆಯು ದುರ್ಬಲವಾಗಿದ್ದು ಇದೇ ದೊಡ್ಡ ಚಿಂತೆಯಾಗಬಹುದು. ಏಕಕಾಲಕ್ಕೆ ಹತ್ತಾರು ಚಿಂತನೆಯನ್ನು ಮನಸ್ಸು ಮಾಡಲಿದೆ. ಯಾರ ಬೆಂಬಲವನ್ನು ಬಯಸದೇ ಸ್ವತಂತ್ರವಾಗಿ ಕೆಲಸವನ್ನು ಮಾಡುವಿರಿ. ಮನೆಯಲ್ಲಿ ನಿಮಗೆ ಪೂರಕವಾದ ವಾತಾವರಣವಿದ್ದರೂ ಸಂತೋಷವು ಇರದು. ಇಂದು ನಿಮ್ಮ ಬಗ್ಗೆಯೇ ನಿಮಗೆ ಅಸಮಾಧಾನವಿರಬಹುದು. ಬರಬೇಕಿದ್ದ ಹಣವು ಬಹಳ ದಿನವಾದರೂ ಬಾರದೇ ಇದ್ದುದು ಚಿಂತೆಯಾಗುವುದು. ಇಂದು ಎಲ್ಲರಿಂದ ದೂರವಿರುವುದು ನಿಮಗೆ ಇಷ್ಟವಾಗುವುದು. ಹೊಸ ಸ್ಥಳವು ನೀವು ಒಗ್ಗಿಕೊಳ್ಳುವುದು ಕಷ್ಟವಾದೀತು. ದೇವರಲ್ಲಿ ನಂಬಿಕೆ ಕಡಿಮೆಯಾಗುವುದು.
ಮಿಥುನ ರಾಶಿ: ಕುಟುಂಬದಲ್ಲಿ ಕಿರಿಕಿರಿ ಇರುವ ಕಾರಣ ಕಛೇರಿಯಲ್ಲಿ ಹೆಚ್ಚಿನ ಸಮಯವನ್ನು ಕಳೆಯುವಿರಿ. ಚಿಂತೆಯು ನಿಮ್ಮ ದಿನವನ್ನು ಹಾಳು ಮಾಡೀತು. ಸರ್ಕಾರಿ ಉದ್ಯೋಗದ ಕಡೆ ನಿಮ್ಮ ಮನಸ್ಸು ಹೊರಳುವುದು. ನಿಶ್ಚಿತ ಕಾರ್ಯವು ನಿಮ್ಮಿಂದ ಆಗದೇ ಹೋಗಬಹುದು. ಪ್ರಯಾಣದ ಅನಿವಾರ್ಯತೆ ಇದ್ದರೆ ಸ್ವಂತ ವಾಹನದಲ್ಲಿ ಪ್ರಯಾಣ ಮಾಡಿ. ಗೊಂದಲವನ್ನು ನೀವು ಮೀರುವುದು ಕಷ್ಟವಾದೀತು. ಶತ್ರುಗಳನ್ನು ಹಿಮ್ಮೆಟ್ಟಿಸುವ ಕಾರ್ಯವು ನಿಮ್ಮ ಕಡೆಯಿಂದ ಆಗುವುದು. ಪುನಃ ಪುನಃ ನಿಮಗೆ ಆಗದ ವಿಚಾರಗಳೇ ನಿಮ್ಮ ಕಿವಿಗೆ ಬೀಳಬಹುದು. ಒತ್ತಡಗಳು ನಿಮ್ಮ ಕೆಲಸವನ್ನು ನಿಧಾನ ಮಾಡುವುದು. ಇಂದು ಹೊಂದಾಣಿಕೆಯ ಸ್ವಭಾವವನ್ನು ಬಿಡಬಹುದು. ಎಲ್ಲರಿಂದ ಗೌರವವನ್ನು ಪಡೆಯುವ ಬಯಕೆ ಇರಲಿದೆ. ಯಾರ ಹಂಗಿನಲ್ಲಿ ಇರಲು ಬಯಸುವುದಿಲ್ಲ.
ಕರ್ಕ ರಾಶಿ: ನಕಾರಾತ್ಮಕ ವಿಚಾರಗಳು ನಿಮ್ಮ ಮನಸ್ಸನ್ನು ಕದಡಬಹುದು. ಎಲ್ಲರ ಮಾತಿಗೂ ಪ್ರತಿಕ್ರಿಯೆಯನ್ನು ಕೊಡಬೇಕೆಂದಿಲ್ಲ. ಮೌನವೂ ಉತ್ತರವಾದೀತು. ಕುಟುಂಬದ ಜವಾಬ್ದಾರಿಯು ನಿಮ್ಮ ಮೇಲೇ ಬರಬಹುದು. ಇಂದು ನಿಮ್ಮ ಮಾರ್ಗಗಳು ಎಲ್ಲವೂ ಮುಚ್ಚಿದಂತೆ ಅನ್ನಿಸಬಹುದು. ವೇಗದ ನಡಿಗೆಯಿಂದ ಬೀಳುವಿರಿ. ಆರ್ಥಿಕ ನೆರವನ್ನು ನೀಡಿದವರಿಗೆ ಕೃತಜ್ಞತೆಯನ್ನು ಸಲ್ಲಿಸಿ. ಸ್ತ್ರೀಯರಿಂದ ನಿಮಗೆ ಬೈಗುಳವು ಸಿಗಬಹುದು. ಅವಿವಾಹಿತರು ವಿವಾಹದ ಬಗ್ಗೆ ಚಿಂತೆಯಾದೀತು. ಉದ್ಯೋಗದಲ್ಲಿ ಪ್ರಾಮಾಣಿಕರಾಗಿದ್ದರೂ ಅಪವಾದವು ಬರಬಹುದು. ಸಾಮಾಜಿಕ ಕಾರ್ಯಕ್ಕೆ ಜನಬೆಂಬಲವು ಸಿಗಬಹುದು. ಸಂಗಾತಿಯಿಂದ ಸಿಗಬೇಕಾದ ಪ್ರೀತಿಯು ಕಡಿಮೆ ಆಗಲಿದೆ. ಇಂದಿನ ನಿಮ್ಮ ವರ್ತನೆಯು ಬೇರೆ ರೀತಿಯಲ್ಲಿ ತೋರುವುದು. ಸರಳವಾಗಿ ಇರುವುದು ಇಷ್ಟವಾದೀತು.
ಸಿಂಹ ರಾಶಿ: ಆಭರಣಗಳನ್ನು ಖರೀದಿಸಲು ಮುಂದಾಗುವಿರಿ. ಜಾಣ್ಮೆಯಿಂದ ನಿಮ್ಮವರನ್ನು ವಶ ಮಾಡಿಕೊಳ್ಳುವಿರಿ. ಯಾವುದೋ ಆಲೋಚನೆಯಲ್ಲಿ ಮುಖ್ಯ ಕೆಲಸವನ್ನು ಮರೆಯಬಹುದು. ನಿಮ್ಮ ಉತ್ಪಾದನೆಯು ಆದಾಯಕ್ಕಿಂತ ನೆಮ್ಮದಿಯನ್ನು ಹೆಚ್ಚು ಕೊಡುವುದು. ಪ್ರಭಾವಿ ಜನರ ಸಂಸರ್ಗದಿಂದ ಹೊಸ ಆಯಾಮವು ತೆರೆದುಕೊಳ್ಳುವುದು. ಎಲ್ಲರಿಂದ ಪ್ರತ್ಯೇಕವಾಗಿ ಗುರುತಿಸಿಕೊಳ್ಳಲು ಇಷ್ಟಪಡುವಿರಿ. ನಿಮ್ಮದು ಉದ್ದೇಶಪೂರ್ವಕ ಆಡಿದ ಮಾತಾಗಿದ್ದು ಸಮಸ್ಯೆಗಳನ್ನು ಎದುರಿಸಬೇಕಾದೀತು. ರಕ್ಷಣಾ ವ್ಯವಸ್ಥೆಯಲ್ಲಿ ಇರುವವರಿಗೆ ಕಾರ್ಯದ ಒತ್ತಡ ಹೆಚ್ಚಿರುವುದು. ಕಾರ್ಯವನ್ನೇ ಸರಿಯಾಗಿ ಮಾಡಿ ಆದಾಯವು ಹೆಚ್ಚಾಗುವಂತೆ ಮಾಡಿಕೊಳ್ಳಿ. ಇಂದು ಕೋಪವು ಬಂದರೂ ವ್ಯಕ್ತಪಡಿಸದೇ ಸುಮ್ಮನಿದ್ದು ನುಂಗಿಕೊಳ್ಳುವಿರಿ. ನಾಲಿಗೆಯ ಚಾಪಲ್ಯಕ್ಕೆ ಆಹಾರವನ್ನು ತಿಂದು ಆರೋಗ್ಯವನ್ನು ಹಾಳುಮಾಡಿಕೊಳ್ಳುವಿರಿ.
ಕನ್ಯಾ ರಾಶಿ: ಬುದ್ಧಿಯ ಸ್ತಿಮಿತದಿಂದ ನೀವು ಎಲ್ಲವನ್ನೂ ಎಲ್ಲವನ್ನೂ ನಾಜೂಕಾಗಿ ಮುಗಿಸುವಿರಿ. ಜವಾಬ್ದಾರಿಯ ಮಾತುಗಳಿಂದ ಅಚ್ಚರಿಯಾದೀತು. ಕೃಷಿಗೆ ಸಂಬಂಧಿಸಿದ ನೂತನ ಅನ್ವೇಷಣೆಯನ್ನು ಮಾಡುವ ಹೊಸ ಆಲೋಚನೆಯನ್ನು ಮಾಡುವಿರಿ. ಸಾಮಾಜಿಕ ಕಾರ್ಯದಿಂದ ಪ್ರೇರಣೆ ಪಡೆದು ಸಂಸ್ಥೆಯನ್ನು ಆರಂಭಿಸುವಿರಿ. ಗೊತ್ತಿದ್ದರೂ ಗೊತ್ತಿಲ್ಲದಂತೆ ಇರುವಿರಿ. ನಿಮ್ಮ ದುರಾಲೋಚನೆಗೆ ಸ್ನೇಹಿತರು ಅಡ್ಡಿ ಮಾಡುವರು. ಶತ್ರುವಿನ ಬಲವನ್ನು ನಿಯಂತ್ರಿಸಲು ಸಿದ್ಧತೆ ನಡೆಸುವಿರಿ. ನಿಮ್ಮ ದುಃಖಕ್ಕೆ ಬಂಧುಗಳಿಂದ ಸಾಂತ್ವನವು ಸಿಗುವುದು. ಸಿಕ್ಕಿದ್ದರಲ್ಲಿ ಸುಖ ಪಡುವುದನ್ನು ಬೆಳೆಸಿಕೊಳ್ಳುವಿರಿ. ಮಕ್ಕಳನ್ನು ಸ್ವತಂತ್ರವಾಗಿ ಬಿಡುವುದು ಬೇಡ. ಇಷ್ಟವಿಲ್ಲದಿದ್ದರೂ ಕೆಲವನ್ನು ಮಾಡಬೇಕಾಗುವುದು.
ತುಲಾ ರಾಶಿ: ಆಹಾರದ ಉದ್ಯಮದವರಿಗೆ ಅಧಿಕ ಒತ್ತಡವಿರುವುದು. ನಿಮ್ಮ ತಪ್ಪಿಗೆ ಯಾರನ್ನೋ ದೂರುವುದು ಬೇಡ. ಬಾಲಿಶವಾಗಿ ವರ್ತಿಸುವುದರಿಂದ ನಿಮ್ಮ ಬಗ್ಗೆ ತಪ್ಪು ಕಲ್ಪನೆ ಬರಬಹುದು. ಚರಾಸ್ತಿಯು ಅನ್ಯರ ಪಾಲಾಗಬಹುದು. ಅವಶ್ಯಕ ವಸ್ತುಗಳನ್ನು ನೀವು ಕಳೆದುಕೊಳ್ಳುವಿರಿ. ಸಾಲ ಪಡೆದರವರ ಹುಡುಕಾಟವನ್ನು ಮಾಡುವಿರಿ. ಶ್ರಮವಹಿಸಿದಷ್ಟು ಫಲವು ಸಿಗಲಿಲ್ಲ ಎಂಬ ಬೇಸರವಿದ್ದರೂ ತಕ್ಕಮಟ್ಟಿನ ಖುಷಿಯು ಇರಲಿದೆ. ಪುರುಷ ಪ್ರಯತ್ನವು ಹೆಚ್ಚಿರಬೇಕಾಗುವುದು. ಹೇಳಬೇಕಾದ್ದನ್ನು ಹೇಳದೇ ಮನಸ್ಸಿನಲ್ಲಿಯೇ ಮಂಡಿಗೆ ತಿನ್ನುವಿರಿ. ಪ್ರೇಮಿಯನ್ನು ನೀವು ಬಹಳ ಜೋಪಾನವಾಗಿ ನೋಡಿಕೊಳ್ಳಬೇಕಾಗುವುದು. ಆಪ್ತರಿಂದ ಸಣ್ಣ ನಿರ್ಲಕ್ಷ್ಯವನ್ನೂ ಸಹಿಸಲಾರಿರಿ.
ವೃಶ್ಚಿಕ ರಾಶಿ: ಬುದ್ಧಿವಂತಿಕೆಯಿಂದ ಬರುವ ಸಂಕಷ್ಟವನ್ನು ತಪ್ಪಿಸಿಕೊಳ್ಳುವಿರಿ. ಕಲಾವಿದರು ಉತ್ಸಾಹದಿಂದ ಇರುವರು. ಪ್ರತಿಫಲದ ನಿರೀಕ್ಷೆ ಇಲ್ಲದೇ ನೀವು ಸ್ನೇಹಿತನಿಗೆ ಸಹಾಯವನ್ನು ಮಾಡುವಿರಿ. ಆರೋಗ್ಯದ ಸಮಸ್ಯೆಯಿರುವ ಕಾರಣ ಸಹೋದ್ಯೋಗಿಗಳ ಸಹಕಾರವು ನಿಮಗೆ ಸಿಗಲಿದೆ. ಮಾತಿನಿಂದ ಇನ್ನೊಬ್ಬರು ನಿಮ್ಮನ್ನು ದ್ವೇಷಿಸುವರು. ಸಾಧಿಸುವ ವಿಧಾನವವನ್ನು ಹೇಳಿಕೊಳ್ಳುವುದು ಬೇಡ. ವಾಹನ ಚಾಲನೆಗೆ ಅತ್ಯುತ್ಸಾಹವಿದ್ದರೂ ಎಚ್ಚರಿಕೆಯನ್ನು ಹೆಚ್ಚು ಇಟ್ಟುಕೊಳ್ಳುವುದು ಮುಖ್ಯ. ಖಾಸಗಿ ಸಂಸ್ಥೆಯು ನಿಮ್ಮನ್ನು ಉನ್ನತಸ್ಥಾನಕ್ಕೆ ಏರಿಸಬಹುದು. ಬಹಳ ಪ್ರಯತ್ನದ ಫಲವಾಗಿ ಅವಿವಾಹಿತರಿಗೆ ಯೋಗ್ಯವಾದ ಸಂಬಂಧವು ಬರಲಿದೆ. ಅತಿಯಾದ ಉದ್ಯೋಗದ ಬದಲಾವಣೆಯನ್ನು ಮಾಡುವುದು ಬೇಡ. ಮಾತ್ಸರ್ಯದಿಂದ ಸುಖವನ್ನು ನಾಶಮಾಡಿಕೊಳ್ಳುವಿರಿ.
ಧನು ರಾಶಿ: ನಿಮ್ಮ ಸ್ವಂತ ಕೆಲಸಗಳಿಗೆ ಸಮಯವನ್ನು ಕೊಡುವಿರಿ. ಆದಾಯ ಮಾರ್ಗವನ್ನು ಬದಲಿಸಿಕೊಳ್ಳಬಹುದು. ಭೂಮಿಯ ವಿಚಾರದಲ್ಲಿ ಶಾಂತವಾದ ಕಲಹವು ಮತ್ತೆ ಆರಂಭವಾಗುವುದು. ಕಬ್ಬಿಣ ಮುಂತಾದ ವ್ಯಾಪಾರವನ್ನು ಮಾಡುವವರಿಗೆ ಆದಾಯವು ಹೆಚ್ಚಾಗುವುದು. ಮಕ್ಕಳ ಶ್ರಮದಿಂದ ಪಾಲಕರಿಗೆ ನೆಮ್ಮದಿ ಇರಲಿದೆ. ವಿದ್ಯಾರ್ಥಿಗಳಿಗೆ ಬೆಂಬಲದ ಕೊರತೆ ಇರುವುದು. ಹಿರಿಯರ ಆರೋಗ್ಯದಲ್ಲಿ ವ್ಯತ್ಯಸಾವಾಗಿದ್ದು ತುರ್ತು ಚಿಕಿತ್ಸೆಯ ಅವಶ್ಯಕತೆ ಇರಲಿದೆ. ಹಲವು ದಿನಗಳ ನಿಮ್ಮ ಋಣವು ಮುಕ್ತಾಯವಾಗಿದ್ದು ಸಂತಸದ ವಿಚಾರವಾಗಿದೆ. ಸಣ್ಣ ವ್ಯಾಪರಿಗಳಿಗೆ ಉತ್ತಮ ಲಾಭವಿರಲುದೆ. ಉನ್ನತ ಹುದ್ದೆಗೆ ಆಯ್ಕೆಯಾದವರ ಪಟ್ಟಿಯಲ್ಲಿ ನಿಮ್ಮ ಹೆಸರೂ ಇರಲಿದೆ. ಮಕ್ಕಳ ಭವಿಷ್ಯಕ್ಕೆ ಹಣವನ್ನು ಉಳಿತಾಯ ಮಾಡವಿರಿ. ಇಂದಿನ ಸಮಯ ಮಿತಿಯನ್ನು ಅರಿತು ಕಾರ್ಯವನ್ನು ಮಾಡುವಿರಿ. ಕಳೆದುಕೊಳ್ಳದೇ ಪಡೆಯುವ ಕ್ರಮವನ್ನು ಅನುಸರಿಸಿ.
ಮಕರ ರಾಶಿ: ಆಸಮಯದಲ್ಲಿ ಭೋಜನವನ್ನು ಮಾಡಬೇಕಾಗುವುದು. ಕಾರ್ಯದ ಕಾರಣ ಸಂಭ್ರಮವನ್ನು ಕಳೆದುಕೊಳ್ಳಬೇಕಾಗುವುದು. ಶಿಕ್ಷಕವೃತ್ತಿಯವರು ಉನ್ನತ ಸ್ಥಾನದ ನಿರೀಕ್ಷೆಯಲ್ಲಿ ಇರುವರು. ಖಾಸಗಿ ಸಂಸ್ಥೆಯ ಹುದ್ದೆಯನ್ನು ನೀವು ಪಡೆಯಲಿದ್ದೀರಿ. ಧಾರ್ಮಿಕಚಿಂತನೆಗಳು ನಿಮ್ಮ ಮನಸ್ಸಿನಲ್ಲಿ ಓಡಬಹುದು. ನೀವು ಇಂದು ಹಳೆಯ ಸ್ನೇಹಿತನ ಜೊತೆ ಸೇರಿ ಹೊಸ ಉದ್ಯೋಗವನ್ನು ಆರಂಭಿಸುವ ಯೋಚನೆ ಮಾಡುವಿರಿ. ಆದಾಯವು ಕುಗ್ಗಬಹುದು. ತಂದೆ ಹಾಗೂ ತಾಯಿಯರ ಜೊತೆ ಬಹಳ ದಿನಗಳ ಅನಂತರ ಹರಟೆ ಹೊಡೆಯುವಿರಿ. ತೀರ್ಥಕ್ಷೇತ್ರಗಳ ದರ್ಶನವನ್ನು ಮಕ್ಕಳ ಜೊತೆ ಮಾಡುವಿರಿ. ಚಂಚಲವಾದ ಮನಸ್ಸನ್ನು ಏಕಾಗ್ರವಾಗಿ ಇಡಲು ಪ್ರಯತ್ನಿಸುವಿರಿ. ತಿಳಿದವರ ಜೊತೆ ಸಂದೇಹವನ್ನು ಪರಿಹರಿಸಿಕೊಳ್ಳುವಿರಿ.
ಕುಂಭ ರಾಶಿ: ಆದಾಯದ ಮೂಲದಲ್ಲಿ ಸಮಸ್ಯೆಯು ಕಾಣಿಸಿಕೊಂಡೀತು. ಆರೋಗ್ಯದಲ್ಲಿ ಹೆಚ್ಚಿನ ವ್ಯತ್ಯಾಸವು ಆಗಲಿದೆ. ಅನಗತ್ಯ ಖರ್ಚುಗಳ ಬಗ್ಗೆ ಗಮನವಿರಲಿ. ಅಧಿಕ ಆದಾಯ ಕೆಲಸವನ್ನು ಇಂದು ಹುಡುಕುವಿರಿ. ನಿಮ್ಮ ವ್ಯಾಪಾರಕ್ಕೆ ವಿದೇಶದ ಸಂಪರ್ಕವು ಬರಬಹುದು. ಮನೆಯಲ್ಲಿ ನಡೆದು ಶುಭಕಾರ್ಯದ ತಯಾರಿಯಲ್ಲಿ ನೀವು ಇರುವಿರಿ. ಆಸ್ತಿಯ ವಿಚಾರದಲ್ಲಿ ನಿಮ್ಮ ನಿಲುವಿಗೆ ಅಪಜಯವಾಗಬಹುದು. ಇಂದು ನೀವು ಸಂಗಾತಿಯ ಮಾತನ್ನೇ ಹೆಚ್ಚು ಕೇಳಬೇಕಾದೀತು. ಬಂಧುಗಳ ಒಡನಾಟವು ಹಿತವೆನಿಸುವುದು. ಸ್ನೇಹಿತರಿಗೋಸ್ಕರ ನೀವು ಹಣವನ್ನು ಖರ್ಚು ಮಾಡಬೇಕಾದೀತು. ನಿಮ್ಮ ವಸ್ತುಗಳನ್ನು ದುರುಪಯೋಗ ಮಾಡಿಕೊಳ್ಳುವಿರಿ. ನೀವು ಇನ್ನೊಬ್ಬರಿಗೆ ನಿಮ್ಮನ್ನು ಹೋಲಿಸಿಕೊಂಡು ನಿಮ್ಮೊಳಗೇ ಸಂಕಟಪಡುವಿರಿ. ಉಪಕಾರ ಸ್ಮರಣೆಯನ್ನು ಇಟ್ಟುಕೊಳ್ಳಿ.
ಮೀನ ರಾಶಿ: ಪ್ರಯತ್ನಕ್ಕೆ ಫಲವು ಕಡಿಮೆ ಸಿಗುವುದೆಂಬ ಭಾವವು ನಿಮ್ಮಲ್ಲಿ ಜಾಗರೂಕವಾಗಿದ್ದು ಉತ್ಸಾಹವು ಆ ಕಾರಣಕ್ಕೆ ಕಡಿಮೆ ಇರುವುದು. ಕಾರ್ಯದ ಒತ್ತಡದಿಂದ ನೀವು ವಿಶ್ರಾಂತಿಯನ್ನು ಪಡೆಯುವುದು ಉತ್ತಮ. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹಿನ್ನಡೆಯಾಗುವುದು. ಆಭರಣ ಮಾರಾಟಗಾರು ಲಾಭವನ್ನು ಗಳಿಸಬಹುದು. ಶತ್ರುಗಳು ಅನ್ಯ ಕಾರ್ಯದಲ್ಲಿ ತೊಡಗಿರುವ ಕಾರಣ ನಿಮಗೆ ಬಾಧೆ ಇರದು. ಕಲಾವಿದರಿಗೆ ಅವಕಾಶದ ದೊಡ್ಡ ಬಾಗಿಲು ತೆರೆದುಕೊಳ್ಳಬಹುದು. ಎದುರಿಸಬಹುದಾದ ಸಮಸ್ಯೆಯನ್ನು ಧೈರ್ಯದಿಂದ ಮುನ್ನುಗ್ಗಿ. ಇಂದು ನಿಮಗೆ ಕೆಲಸವು ಆಗಬೇಕಾಗಿದ್ದು ಪ್ರಯಾಣವು ಅನಿವಾರ್ಯವಾಗುವುದು. ಒಂದೇ ಸಾರಿ ಖರ್ಚಿನ ಎಲ್ಲ ಅವಕಾಶಗಳನ್ನು ಇಟ್ಟುಕೊಳ್ಳಬೇಡಿ. ನಿಮ್ಮ ಮಾತು ಇನ್ನೊಬ್ಬರಿಗೆ ಸಿಟ್ಟು ಬರುವಂತೆ ಇರವುದು. ಮಕ್ಕಳ ವಿದ್ಯಾಭ್ಯಾಸದ ಖರ್ಚು ಸ್ವಲ್ಪ ಕಡಿಮೆ ಆಗಿದ್ದು ಸಂತಸದ ಸಮಾಚಾರವಾಗಲಿದೆ. ದೈವಾನುಕೂಲವನ್ನು ಪ್ರಾರ್ಥಿಸುವಿರಿ.
ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ