Rashi Bhavishya: ಇಂದಿನ ರಾಶಿ ಭವಿಷ್ಯ, ಅಲ್ಪ ಜ್ಞಾನಿಗಳ ಸಹವಾಸದಿಂದ ಈ ರಾಶಿಯವರ ಮಾರ್ಯಾದೆ ಹೋಗಲಿದೆ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 10) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Rashi Bhavishya: ಇಂದಿನ ರಾಶಿ ಭವಿಷ್ಯ, ಅಲ್ಪ ಜ್ಞಾನಿಗಳ ಸಹವಾಸದಿಂದ ಈ ರಾಶಿಯವರ ಮಾರ್ಯಾದೆ ಹೋಗಲಿದೆ
ಇಂದಿನ ರಾಶಿ ಭವಿಷ್ಯImage Credit source: freepik
Follow us
Rakesh Nayak Manchi
|

Updated on: May 10, 2023 | 6:00 AM

ಶುಭೋದಯ ಓದುಗರೇ, ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಮೇ​ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ : ಭರಣೀ, ಮಾಸ : ವೈಶಾಖ, ಪಕ್ಷ : ಕೃಷ್ಣ, ವಾರ : ಬುಧ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಪೂರ್ವಾಷಾಢ, ಯೋಗ : ಸಾಧ್ಯ, ಕರಣ : ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷ, ಸೂರ್ಯಾಸ್ತ ಸಂಜೆ 06 ಗಂಟೆ 49 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:29 ಗಂಟೆ 02:04ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:43 ಗಂಟೆ 09:18ರ ವರೆಗೆ, ಗುಳಿಕ ಕಾಲ ಬೆಳಗ್ಗೆ 10:54 ಗಂಟೆ ಮಧ್ಯಾಹ್ನ 12:29ರ ವರೆಗೆ.

ಸಿಂಹ: ಆಸ್ತಿಯ ವಿಚಾರಕ್ಕೆ ಸಹೋದರರ ನಡುವೆ ವೈಮನಸ್ಯ ಉಂಟಾಗಬಹುದು. ದೂರ ಪ್ರಯಾಣದಿಂದ ಆಯಾಸವಾಗಲಿದೆ. ಆಹಾರ ಸೇವೆಯನ್ನು ಮಿತವಾಗಿ ಮಾಡುವುದು ಒಳ್ಳೆಯದು. ಸೊಂಟದ ನೋವು ನಿಮ್ಮನ್ನು ಕಾಡೀತು. ಅಲ್ಪ ಜ್ಞಾನಿಗಳ ಸಹವಾಸದಿಂದ ನಿಮ್ಮ ಮಾರ್ಯಾದೆಯೂ ಹೋಗಬಹುದು. ಸಮ್ಮಾನಗಳು ಸಂತೋಷವನ್ನು ತರುವುದು. ವಿದೇಶದಲ್ಲಿ ಇದ್ದವರಿಗೆ ಸ್ವದೇಶಕ್ಕೆ ಹೋಗಲು ಅವಕಾಶ ಸಿಗಲಿದೆ. ತಪ್ಪು ನಿರ್ಧಾರಗಳನ್ನು ಮಾಡಿ ಕಷ್ಟಪಡಬೇಕಾದೀತು. ಅಧಿಕ ಖರ್ಚಿಗೆ ಮೊದಲೇ ಕಡಿವಾಣ ಹಾಕಿಕೊಳ್ಳುವುದು ಉತ್ತಮ.

ಕನ್ಯಾ: ಕಳ್ಳತನದ ಅಪವಾದಗಳು ನಿಮಗೆ ಚಿಂತನೆಯನ್ನು ಕೊಡಬಹುದು. ವ್ಯಾಪಾರದಲ್ಲಿ ಮೋಸದಿಂದ ನಷ್ಟವಾಗಬಹುದು. ಹೆಚ್ಚು ಪರಿಶ್ರಮದಿಂದ ಕೆಲಸ ಮಾಡಬೇಕಾದೀತು. ವಿದ್ಯಾರ್ಥಿಗಳಿಗೆ ಓದುವಂತೆ ಒತ್ತಾಯ ಮಾಡಬೇಕಾದೀತು. ಹಣಕಾಸಿನ ತೊಂದರೆಯಿಂದ ನಿಮ್ಮ ಉತ್ಸಾಹ ಕಡಿಮೆಯಾಗಬಹುದು. ಕಛೇರಿ ಮತ್ತು ಕುಟುಂಬವನ್ನು ಮುನ್ನಡೆಸಲು ಕಷ್ಟ ಪಡುವಿರಿ.‌ ಹೂಡಿಕೆ ಹಣವನ್ನು ತೆಗೆಯು ನಿರ್ಧಾರವನ್ನು ಮಾಡಬೇಕಾದೀತು. ಕಲ್ಪನಾಲೋಕದಿಂದ ವಾಸ್ತವಕ್ಕೆ ಬಂದು ಯೋಚನೆ ಮಾಡಿ.‌ ಊಹೆಯಿಂದ ಎಲ್ಲವೂ ಸರಿಯಾಗದು.

ತುಲಾ: ನಿಮ್ಮ ಸಲಹೆಗಳನ್ನು ನಿಮ್ಮವರು ತೆಗೆದುಕೊಳ್ಳದೇ ಇರುವುದು ನಿಮಗೆ ಸಿಟ್ಟೂ ಬೇಸರವನ್ನೂ ಉಂಟುಮಾಡಬಹುದು. ಸತ್ಯವನ್ನು ಹೇಳುವ ಮನಸ್ಸಿದ್ದರೂ ನಿಮಗೆ ಕೆಲವು ತೊಂದರೆ ಎದುರಾಗುವುದರಿಂದ ಅದನ್ನು ಗೌಪ್ಯವಾಗಿ ಇಡುವಿರಿ. ಧಾರ್ಮಿಕ ಆಚರಣೆಗಳನ್ನು ಮಾಡಲು ಹೆಚ್ಚು ಆಸಕ್ತಿ ತೋರಿಸುವಿರಿ. ಆಪ್ತರ ಜೊತೆ ಮಾತುಕತೆಯಿಂದ ಮನಸ್ಸು ಹಗುರಾಗಬಹುದು. ಗೊಂದಲಗಳು ನಿಮ್ಮ ಕೆಲಸದ ವೇಗವನ್ನು ಕಡಿಮೆ ಮಾಡೀತು. ಬಂಧುಗಳ ಸಹವಾಸದಿಂದ ಬದಲಾಗುವ ಸಾಧ್ಯತೆ ಇದೆ.

ವೃಶ್ಚಿಕ: ಪ್ರಸಿದ್ಧ ವ್ಯಕ್ತಿಗಳ ಭೇಟಿಯಾಗಿದ್ದರಿಂದ ಜೀವನಕ್ಕೆ ಬೇಕಾದ ಒಂದಿಷ್ಟು ಅಂಶಗಳು ಗೊತ್ತಾಗಬಹುದು. ವಿದ್ಯಾರ್ಥಿಗಳು ಮುಂದಿನ ಯೋಜನೆಯನ್ನು ಹಾಕಿಕೊಳ್ಳುವುದು ಉತ್ತಮ. ಯಾರ ಮೇಲಾದರೂ ಅನುಮಾನವಿದ್ದರೆ ಅದನ್ನು ಕೂಡಲೇ ಹೇಳುವುದು ಬೇಡ. ಪರೀಕ್ಷಿಸಿ ಮತ್ತೆ ಮಾತನಾಡಿ. ಹೊಸ ಮನೆಯನ್ನು ಕಟ್ಟುವ ಯೋಚನೆಯು ಶುರುವಾಗಲಿದೆ. ಏಕಾಂತವನ್ನು ಹೆಚ್ಚು ಬಯಸಿ ದೂರ ಎಲ್ಲಿಯಾದರೂ ಹೋಗುವಿರಿ. ನಿಮ್ಮನ್ನು ಅರ್ಥಮಾಡಿಕೊಳ್ಳಲು ನಿಮ್ಮವರು ಶ್ರಮ ಪಡಬೇಕಾದೀತು.

-ಲೋಹಿತಶರ್ಮಾ ಇಡುವಾಣಿ

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್