ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಕೆಲವರು ಬೆಳಗ್ಗೆ ಎದ್ದ ಕೂಡಲೇ ರಾಶಿ ಭವಿಷ್ಯ (Daily horoscope) ತಪ್ಪದೇ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯದಿಂದ ತಿಳಿದುಕೊಳ್ಳುತ್ತಾರೆ. ಅದರ ಜೊತೆಗೆ ನಿತ್ಯಪಂಚಾಂಗ ಕೂಡ ಓದುತ್ತಾರೆ. ಹಾಗಾದರೆ ಇಂದಿನ (2023 ಜುಲೈ 5) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ?, ಯಾರಿಗೆ ಲಾಭ?, ಯಾರಿಗೆ ನಷ್ಟ?, ಯಾರಿಗೆ ಶುಭ, ಅಶುಭ? ಇಲ್ಲಿ ನೋಡಿ ನಿಮ್ಮ ಭವಿಷ್ಯ.
ನಿತ್ಯಭವಿಷ್ಯ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಆಷಾಢ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಶ್ರವಣಾ, ಯೋಗ: ವೈಧೃತಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 09 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:37 ರಿಂದ 02:14ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:46 ರಿಂದ 09:23ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:00 ರಿಂದ ಮಧ್ಯಾಹ್ನ 12:37ರ ವರೆಗೆ.
ತುಲಾ: ತಂದೆ ತಾಯಿಗಳನ್ನು ಬಹಳ ಸಂತೋಷದಿಂದ ನೋಡಿಕೊಳ್ಳುವಿರಿ. ಅವರು ಅಪೇಕ್ಷಿಸಿದ ಸ್ಥಳಕ್ಕೆ ಅವರನ್ನು ಕರೆದೊಯ್ಯುವಿರಿ. ನಿಮ್ಮ ಕೈಲಾದವರಿಗೆ ಸಹಾಯವನ್ನು ಮಾಡುವುದು ಒಳ್ಳೆಯದು. ವಿರೋಧಿಗಳಿಗೆ ನಿಮ್ಮ ಬಲ ಪ್ರದರ್ಶನವಾಗಲಿದೆ. ಒಂದೇ ಕಡೆಯಲ್ಲಿ ಉದ್ಯೋಗವನ್ನು ಮಾಡಲು ನೀವು ಇಚ್ಛಿಸುವುದಿಲ್ಲ. ಹೊಸ ಜನರ ಭೇಟಿಯು ನಿಮಗೆ ಹೊಸ ದಾರಿಯನ್ನು ಮಾಡಿಕೊಟ್ಟೀತು. ನಿಮ್ಮದಲ್ಲದ ಪರಿಸರಕ್ಕೆ ಹೊಂದಿಕೊಳ್ಳಲು ಕಷ್ಟವಾದೀತು. ಸ್ನೇಹಿತರಿಂದ ಉದ್ಯೋಗದ ಪ್ರಾಪ್ತಿಯನ್ನು ನೀವು ನಿರೀಕ್ಷಿಸುವಿರಿ. ನಿಮ್ಮ ಗಾಯವನ್ನು ನಿಷ್ಕಾಳಜಿ ಮಾಡಿದ್ದರ ಫಲವು ಇಂದು ಗೊತ್ತಾಗುವುದು.
ವೃಶ್ಚಿಕ: ನಾನಾ ಮೂಲಗಳಿಂದ ವಿವಿಧ ಸಂಪತ್ತುಗಳು ಬರಲಿದೆ. ದಾಂಪತ್ಯದಲ್ಲಿ ವಿರಸವು ನಷ್ಟವಾಗುವುದು. ಅಧಿಕ ಆದಾಯಕ್ಕೆ ನಿಮ್ಮ ಉದ್ಯಮವನ್ನು ವಿಸ್ತರಿಸುವಿರಿ. ನಿಮ್ಮ ಬಳಿ ಇರುವ ವಸ್ತುಗಳನ್ನು ಬಳಸಿಕೊಂಡು ಆಗಬೇಕಾದುದನ್ನು ಮಾಡಿ. ಅನಗತ್ಯ ಓಡಾಟದಿಂದ ಶರೀರವು ದಣಿಯಬಹುದು. ಇದು ನಿಮ್ಮ ಔದಾಸೀನ್ಯಕ್ಕೆ ಕಾರಣವಾಗಲಿದೆ. ಮನಸ್ಸಿಗೆ ಶಾಂತಿಯು ಇರಲಿದ್ದು ಉದ್ವೇಗದ ಸಂದರ್ಭವನ್ನು ಆರಾಮಾಗಿ ದಾಟುವಿರಿ. ಇಂದು ಕೆಲವರ ವರ್ತನೆಯು ಬೇಸರ ತರಿಸಬಹುದು. ಇಂದು ನಿಮ್ಮಪೂರ್ವಜರ ಜ್ಞಾನವು ಸಿಗಲಿದೆ. ಸತ್ಸಂಗ ಮೂಲಕ ಸಮಯವನ್ನು ಕಳೆಯುವಿರಿ. ನಿಮ್ಮ ಉತ್ತರಕ್ಕೆ ಸಮಜಾಯಿಷಿಯ ಅಗತ್ಯವಿಲ್ಲ.
ಧನು: ಕಛೇರಿಯಲ್ಲಿ ಉದ್ಯೋಗದ ಕಾರಣ ನಿಮ್ಮನ್ನು ದೂರದ ಊರಿಗೆ ಕಳುಹಿಸಬಹುದು. ಪರಿಚಯವಿಲ್ಲದವರ ಜೊತೆ ವೈಯಕ್ತಿಕವಿಚಾರಗಳನ್ನು ಹಂಚಿಕೊಳ್ಳುವುದು ಬೇಡ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸಲು ಇಚ್ಛಿಸುವಿರಿ. ನಿಮ್ಮ ಗುರಿಯನ್ನು ತಪ್ಪಿಸಲು ಬೇಕಾದ ಪಿತೂರಿಯು ನಡೆಯಬಹುದು. ನಿಮ್ಮ ಮಾತಿನ ವೇಗವನ್ನು ಅರ್ಥಮಾಡಿಕೊಳ್ಳಲು ಕಷ್ಟವಾದೀತು. ಕಛೇರಿಯಲ್ಲಿ ಸ್ತ್ರೀಯರಿಂದ ಸಹಕಾರವನ್ನು ಪಡೆಯುವಿರಿ. ಭಯದಲ್ಲಿ ನೀವು ಬಹಳ ಇಂದಿನ ದಿನವನ್ನು ಕಳೆಯಬೇಕಾದೀತು. ಖಾಸಗಿ ಉದ್ಯೋಗದಲ್ಲಿ ಇರುವವರಿಗೆ ಆತಂಕವಿರಲಿದೆ.
ಮಕರ: ಸ್ತ್ರೀಯರು ಮನೆಯಲ್ಲಿ ಆದ ಘಟನೆಯಿಂದ ತಾಳ್ಮೆಯನ್ನು ಕಳೆದುಕೊಳ್ಳಬಾರದು. ಸಾಹಸೊ ಪ್ರವೃತ್ತಿಯಿಂದ ನಿನಗೆ ಯಶಸ್ಸು ಸಿಗಬಹುದು. ನಿಮ್ಮವರ ಆರೋಗ್ಯವನ್ನು ನೀವು ನೋಡಿಕೊಳ್ಳುವಿರಿ. ಶುಭಸೂಚನೆಯನ್ನು ನೀವು ಗಮನಿಸುವುದು ಉತ್ತಮ. ಪೂರ್ವ ಆಲೋಚನೆಗಳು ದಿಕ್ಕು ತಪ್ಪಬಹುದು. ದ್ವೇಷವನ್ನು ಮುಂದುವರಿಸದೇ ಮುಕ್ತಾಯ ಮಾಡಿಕೊಳ್ಳಿ. ಬಂಧುಗಳ ಆಗಮನವು ನಿಮಗೆ ಕಿರಿಕಿರಿಯನ್ನು ತಂದೀತು. ದೂರಾದ ಪ್ರೇಮಿಯನ್ನು ನೆನಪುಮಾಡಿಕೊಂಡು ದುಃಖಿಸುವಿರಿ. ಮೋಜಿನ ಆಟಕ್ಕೆ ಬಲಿಯಾಗುವ ಸಾಧ್ಯತೆ ಇದೆ. ಆಟದಲ್ಲಿ ಎಚ್ಚರವಿರಲಿ.
ಕುಂಭ: ನಿಮ್ಮ ಪ್ರಾಮಾಣಿಕ ಕೆಲಸಕ್ಕೆ ಅಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ಬಹಳ ದಿನಗಳಿಂದ ಇದ್ದ ಕೋರ್ಟ್ ವ್ಯವಹಾರವು ಮುಕ್ತಾಯಗೊಳ್ಳಬಹುದು. ಮಿತ್ರರೆಂದು ಬಂದವರ ವಿಚಾರದಲ್ಲಿ ಜಾಗರೂಕತೆ ಇರಲಿ. ಮಾನಸಿಕವಾಗಿ ನಿಮಗೆ ಇಂದು ಅವರು ತೊಂದರೆ ಕೊಡಬಹುದು. ಕುಟುಂಬ ಆಸ್ತಿಯನ್ನು ನಯವಾಗಿ ಪಡೆಯಲು ಯತ್ನಿಸುವಿರಿ. ಬರಬೇಕಾದ ಹಣವು ಬಾರದೇ ಸಾಲವನ್ನು ಮಾಡಬೇಕಾಗಬಹುದು. ಕುಟುಂಬ ನಿರ್ವಹಣೆಯ ವಿಚಾರದಲ್ಲಿ ದಂಪತಿಗಳ ನಡುವೆ ಭಿನ್ನಾಭಿಪ್ರಾಯ ಬರಬಹುದು. ಕಛೇರಿಗೆ ಒಲ್ಲದ ಮನಸ್ಸಿನಿಂದ ಹೋಗುವಿರಿ.
ಮೀನ: ಪರಿಶ್ರಮವು ಎಂದಿಗಿಂತ ಅಧಿಕವಾಗಿದ್ದು, ಅದಕ್ಕೆ ಯೋಗ್ಯವಾದ ಫಲವು ಸಿಗುವುದು. ನಿಮ್ಮ ಸರ್ಕಾರಿ ಕೆಲಸಗಳಿಗೆ ಹೆಚ್ಚು ಓಡಾಟ ಆಗಬಹುದು. ಕುಲದೇವರ ಕಾರ್ಯದಲ್ಲಿ ನೀವು ಭಾಗವಹಿಸುವಿರಿ. ನಿಮಗೆ ಅನೇಕ ಗೊಂದಲಗಳು ಹುಟ್ಟಿಕೊಳ್ಳಬಹುದು. ಹಳೆಯ ಸಿಹಿ ನೆನಪು ನಿಮ್ಮನ್ನು ಕಾಡಬಹುದು. ಸಂಗಾತಿಯ ಜೊತೆ ಉದ್ಯಮದ ಬಗ್ಗೆ ಚರ್ಚಿಸುವಿರಿ. ತಂದೆಯ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಭೂಮಿಯ ವ್ಯವಹಾರದಲ್ಲಿ ಹಿನ್ನಡೆಯಾಗಬಹುದು. ಮಕ್ಕಳ ಸಂತೋಷಕ್ಕಾಗಿ ಹಣವನ್ನು ಖಾಲಿ ಮಾಡುವಿರಿ. ಅದೃಷ್ಟವನ್ನು ನಂಬಿ ಕೆಲಸವನ್ನು ಮಾಡುವಿರಿ.