Horoscope: ಇಂದಿನ ರಾಶಿಭವಿಷ್ಯ, ಮನಸ್ಸು ಉದ್ವಿಗ್ನದಿಂದ ಹೊರಬರಲು ಈ ರಾಶಿಯವರು ಹೊಸ ಮಾರ್ಗವನ್ನು ಹುಡುಕಲಿದ್ದಾರೆ
ನೀವು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 11) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.
ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಕೆಲವರು ಬೆಳಗ್ಗೆ ಎದ್ದ ಕೂಡಲೇ ರಾಶಿ ಭವಿಷ್ಯ (Daily horoscope) ತಪ್ಪದೇ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯದಿಂದ ತಿಳಿದುಕೊಳ್ಳುತ್ತಾರೆ. ಅದರ ಜೊತೆಗೆ ನಿತ್ಯಪಂಚಾಂಗ ಕೂಡ ಓದುತ್ತಾರೆ. ಹಾಗಾದರೆ ಇಂದಿನ (2023 ಜುಲೈ 11) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ?, ಯಾರಿಗೆ ಲಾಭ?, ಯಾರಿಗೆ ನಷ್ಟ?, ಯಾರಿಗೆ ಶುಭ, ಅಶುಭ? ಇಲ್ಲಿ ನೋಡಿ ನಿಮ್ಮ ಭವಿಷ್ಯ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಪುನರ್ವಸು, ಮಾಸ: ಆಷಾಢ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ನವಮೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ಅತಿಗಂಡ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ರಿಂದ 11 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:51 ರಿಂದ 05:28ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:24 ರಿಂದ 11:01ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:38 ರಿಂದ 02:14ರ ವರೆಗೆ.
ತುಲಾ: ದಾಂಪತ್ಯದಲ್ಲಿ ಸುಖವನ್ನು ಕಾಣುವಿರಿ. ಮನಸ್ಸು ಉದ್ವಿಗ್ನದಿಂದ ಹೊರಬರಲು ಮಾರ್ಗವನ್ನು ಹುಡುಕುವಿರಿ. ಕಿರಿಕಿರಿಯಿಂದ ದೂರವಿರಲು ಪ್ರಯತ್ನಿಸುವಿರಿ. ಬಹಳ ದಿನಗಳಿಂದ ನಡೆಯುತ್ತಿದ್ದ ಕೆಲಸವನ್ನೂ ಇಂದು ಮುಗಿಸಬೇಕೆಂಬ ನಿರ್ಧಾರವನ್ನು ಮಾಡುವಿರಿ. ಅನಿರೀಕ್ಷಿತ ಲಾಭದಿಂದ ಸಂತೋಷವಾದರೂ ನಿಮಗೆ ಸಂದೇಹಗಳು ಇರಬಹುದು. ತಂದೆಯ ಬಳಿ ವಿವಾಹದ ಪ್ರಸ್ತಾಪವನ್ನು ಮಾಡುವಿರಿ. ನಿಮ್ಮ ವರ್ತನೆಯು ತೋರಿಕೆಯಂತೆ ಕಾಣಬಹುದು. ತಾಯಿಯ ಜೊತೆ ಕಲಹ ಮಾಡಿ ನಿಮಗೆ ಬೇಸರವಾಗಬಹುದು. ಉದ್ಯಮಿಗಳ ಭೇಟಿಯಾಗುವ ಸಾಧ್ಯತೆ ಇದೆ.
ವೃಶ್ಚಿಕ: ನಿಮ್ಮ ಯೋಜನೆಯನ್ನು ಸರಳೀಕರಿಸಿ ಕಡಿಮೆ ಖರ್ಚನ್ನು ಮಾಡಿಕೊಳ್ಳಿ. ಈ ದಿನವು ದುರಂತದಲ್ಲಿ ಕೊನೆಯಾಗುವ ಸಾಧ್ಯತೆ ಇದೆ. ನಿಮ್ಮ ಉಪಯೋಗವನ್ನು ಪಡೆದುಕೊಳ್ಳಲು ಇಚ್ಛಿಸಬಹುದು. ಸ್ನೇಹಿತರ ಮಾತುಗಳು ನಿಮಗೆ ಉಪಯೋಗಬಹುದು. ಉದ್ಯಮವನ್ನು ನೀವು ಹೆಚ್ಚಿಸುವ ಯೋಚನೆ ಇರಲಿದೆ. ನಿಮ್ಮ ಒತ್ತಡವನ್ನು ಕಡಿಮೆಮಾಡಿಕೊಳ್ಳಲು ಕೆಲಸವನ್ನು ಹಂಚುವಿರಿ. ನೀವು ಇಂದು ಹೋರಾಟದ ಮನೋಭಾವವನ್ನು ಇಟ್ಟಕೊಳ್ಳುವಿರಿ. ಸೌಂದರ್ಯ ವರ್ಧನೆಯನ್ನು ಹೆಚ್ಚು ಮಾಡಿಕೊಳ್ಳುವಿರಿ. ಇನ್ನೊಬ್ಬರ ಮೇಲೆ ಆಕರ್ಷಣೆ ಉಂಟಾಗಬಹುದು. ಧಾರ್ಮಿಕ ಆಚರಣೆಗಳನ್ನು ಮಾಡಲೂ ಚಿಂತಿಸುವಿರಿ.
ಧನುಸ್ಸು: ಕಛೇರಿಯಲ್ಲಿ ನಿಮ್ಮ ಕೆಲಸವು ಅಡೆರಡೆಯ ಕಾರಣ ಬಹಳ ನಿಧಾನವಾಗುವುದು. ಸ್ವಂತ ಉದ್ಯಮವು ಕುಂಟುತ್ತ ಸಾಗುವುದು. ತಂದೆಗೆ ನಿಮ್ಮಿಂದ ಧನಸಹಾಯವು ಆಗಲಿದೆ. ಸಹೋದ್ಯೋಗಿಗಳ ಹಾದಿಯನ್ನು ಸೇರಿ ಮೇಲಧಿಕಾರಿಗಳಿಂದ ಬೈಗುಳ ತಿನ್ನುವಿರಿ. ಭಯವು ಅವಕಾಶಗಳಿಂದ ವಂಚಿನೆಯಾಗುವಂತೆ ಮಾಡುವುದು. ಇಂದು ದುಸ್ಸಾಹಸಕ್ಕೆ ತೊಡಗುವುದುಬೇಡ. ಪ್ರಯಾಣವನ್ನು ನಿಷೇಧಿಸಿದ್ದು ಉತ್ತಮವಾಗಿದೆ. ಒಳ್ಳೆಯದರ ಬಗ್ಗೆ ನಿಮ್ಮ ಗಮನವಿರಲಿ. ಖುಷಿಯ ವಿಚಾರವನ್ನು ಸಂಗಾತಿಯ ಜೊತೆ ಹಂಚಿಕೊಳ್ಳುವಿರಿ. ಏಕಾಂತವನ್ನು ಇಷ್ಟಪಟ್ಟರು ಇರಲಾಗದು.
ಮಕರ: ನೀವು ಇಂದು ಯಾರ ಸಹಾಯವನ್ನೂ ಪಡೆಯಲು ಇಚ್ಛಿಸುವುದಿಲ್ಲ. ಆಲಸ್ಯದಿಂದ ಕಛೇರಿಯ ಕೆಲಸವನ್ನು ಮಾಡಲು ಆಸಕ್ತಿ ತೋರಿಸುವುದಿಲ್ಲ. ನಿಮ್ಮ ಸ್ವಭಾವವು ಬದಲಾಗಿದ್ದು ನಿಮ್ಮನ್ನು ಇಷ್ಟಪಡುವವರಿಗೆ ಇದು ಕಷ್ಟವಾದೀತು. ಹಿತಶತ್ರುಗಳನ್ನು ದೂರವಿಟ್ಟು ನಿಮ್ಮ ಕೆಲಸವನ್ನು ಸಾಧಿಸಿಕೊಳ್ಳುವಿರಿ. ಜೀವನ ಸಂಗಾತಿಯ ಜೊತೆ ಹೆಚ್ಚು ಮಾತನಾಡುವಿರಿ. ಸಾಮಾಜಿಕ ಕೆಲಸಗಳಿಂದ ಗೌರವಪ್ರಾಪ್ತಿಯಾಗಲಿದೆ. ಪ್ರಯೋಜನವಿಲ್ಲ ಎಂದು ತೆಗೆದಿಟ್ಟ ವಸ್ತುವಿನ ಅಥವಾ ವ್ಯಕ್ತಿಯ ಮರುಬಳಕೆ ಇಂದಾಗಲಿದೆ. ಭೂಮಿಯ ವಿಚಾರವು ನ್ಯಾಯಾಲಯದಲ್ಲಿ ತೀರ್ಮಾನವಾಗುವುದು.
ಕುಂಭ: ಬಂಧುಗಳ ಭೇಟಿಯಿಂದ ಚಿತ್ತವು ಉತ್ಸಾಹದಿಂದ ಇರವುದು. ಮಾಡಬೇಕಾದ ಕೆಲಸಗಳನ್ನು ವೇಗವಾಗಿ, ಎಚ್ಚರಿಕೆಯಿಂದ ಮಾಡಿ. ಸಹೋದರನ ಅನಿರೀಕ್ಷಿತ ಸಹಾಯವು ಸಂತಸವನ್ನು ತರುವುದು. ದಾಂಪತ್ಯದ ಕಲಹವನ್ನು ನೀವೇ ಶಾಂತಗೊಳಿಸಿ. ಮಾತಿಗೆ ಮಾತನ್ನು ಬೆಳೆಸುವುದು ಬೇಡ. ಮಾನಸಿಕ ಸ್ಥೈರ್ಯವನ್ನು ಬೆಳೆಸಿಕೊಳ್ಳಿ. ನೀವು ಇಂದು ಚಿಂತೆಯಲ್ಲಿ ಇರುವ ಕಾರಣ ಎಲ್ಲರ ಮೇಲೂ ಸಿಟ್ಟುಮಡಿಕೊಳ್ಳುವಿರಿ. ನಿಮ್ಮ ಬಗ್ಗೆ ಹೇಳಿಕೊಳ್ಳುವುದನ್ನು ಕಡಿಮೆ ಮಾಡಿ. ನಿಮ್ಮ ವಸ್ತುವನ್ನು ಇನ್ನೊಬ್ಬರು ಬಳಸಿಕೊಳ್ಳುವರು. ಕೆಟ್ಟ ಆಹಾರವನ್ನು ತಿನ್ನಬೇಕಾಗಬಹುದು.
ಮೀನ: ಅಸ್ತಿಯ ಹಂಚಿಕೆಯ ವಿಚಾರದಲ್ಲಿ ಚರ್ಚೆಗಳು ಆಗಲಿದೆ. ನಿಮ್ಮ ಕೆಲಸಗಳಿಗೆ ವಿಘ್ನಗಳು ಬರಬಹುದು. ವ್ಯಾಪಾರವು ಅಭಿವೃದ್ಧಿಯಾಗಿ ಒಂದೊಂದೇ ಹಂತವನ್ನು ಏರುವಿರಿ. ಕುಟುಂಬವೂ ನಿರಾತಂಕವಾಗಿ ಜೀವನ ನಡೆಸುವುದು. ಉನ್ನತ ಸ್ಥಾನಮಾನಗಳು ಪ್ರಭಾವೀ ವ್ಯಕ್ತಿಯ ಸಹಾಯದಿಂದ ಸಿಗುವುದು. ನಿಮ್ಮ ಮತವನ್ನು ನೀವು ಬದಲಿಸಿವುದು ಬೇಡ. ನಿಮ್ಮ ನಿರೀಕ್ಷೆಯ ಮಟ್ಟ ಕಡಿಮೆಯಾಗಲಿದೆ. ನಂಬಿಕೆಯ ಜೊತೆ ಪ್ರೀತಿಯನ್ನೂ ಕಳೆದುಕೊಳ್ಳಬಹುದು. ನಿಮ್ಮ ಬಗ್ಗೆ ಆಡಿಕೊಳ್ಳಲು ಏನಾದರೂ ಸಿಗಲಿದೆ. ಇದು ನಿಮಗೆ ಬೇಸರವನ್ನು ತರಿಸುವುದು.