Horoscope: ಇಂದಿನ ರಾಶಿಭವಿಷ್ಯ, ಈ ರಾಶಿಯವರಿಗೆ ಮಾನಸಿಕ ಕಿರಿಕಿರಿಯು ಕಡಿಮೆ ಇದ್ದು ಸ್ವಲ್ಪ ಹಿತವೆನಿಸುವುದು

ನೀವು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 12) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಇಂದಿನ ರಾಶಿಭವಿಷ್ಯ, ಈ ರಾಶಿಯವರಿಗೆ ಮಾನಸಿಕ ಕಿರಿಕಿರಿಯು ಕಡಿಮೆ ಇದ್ದು ಸ್ವಲ್ಪ ಹಿತವೆನಿಸುವುದು
ಇಂದಿನ ರಾಶಿಭವಿಷ್ಯImage Credit source: Getty Images
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: Rakesh Nayak Manchi

Updated on: Jul 12, 2023 | 12:30 AM

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಕೆಲವರು ಬೆಳಗ್ಗೆ ಎದ್ದ ಕೂಡಲೇ ರಾಶಿ ಭವಿಷ್ಯ (Daily horoscope) ತಪ್ಪದೇ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯದಿಂದ ತಿಳಿದುಕೊಳ್ಳುತ್ತಾರೆ. ಅದರ ಜೊತೆಗೆ ನಿತ್ಯಪಂಚಾಂಗ ಕೂಡ ಓದುತ್ತಾರೆ. ಹಾಗಾದರೆ ಇಂದಿನ (2023 ಜುಲೈ 12) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ?, ಯಾರಿಗೆ ಲಾಭ?, ಯಾರಿಗೆ ನಷ್ಟ?, ಯಾರಿಗೆ ಶುಭ, ಅಶುಭ? ಇಲ್ಲಿ ನೋಡಿ ನಿಮ್ಮ ಭವಿಷ್ಯ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಪುನರ್ವಸು, ಮಾಸ: ಆಷಾಢ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ದಶಮೀ, ನಿತ್ಯನಕ್ಷತ್ರ: ಭರಣೀ, ಯೋಗ: ಸುಕರ್ಮ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 11 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:38 ರಿಂದ 02:15ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:48 ರಿಂದ 09:25 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:01 ರಿಂದ ಮಧ್ಯಾಹ್ನ 12:38ರ ವರೆಗೆ.

ತುಲಾ: ಹಣದ ಹರಿವು ಇಂದು ಸ್ವಲ್ಪ ಕಡಿಮೆಯಾಗಲಿದೆ. ಆಪ್ತರನ್ನು ಕಳೆದುಕೊಂಡು ದುಃಖಿಸುವಿರಿ. ಮಿತ್ರರ ನಡುವೆ ಬಾಂಧವ್ಯವು ಇರಲಿದೆ. ಕಲಾವಿದರು ದೂರಪ್ರಯಾಣವನ್ನು ಮಾಡುವಿರಿ. ನಿದ್ರೆಯು ಕಡಿಮೆಯಾಗಿ ಕೆಲಸದಲ್ಲಿ ಉತ್ಸಾಹ ಕಡಿಮೆ ಇರಲಿದೆ‌. ಪ್ರೇಮಿಯ ಜೊತೆ ಈ ದಿನವನ್ನು ಕಳೆಯುವಿರಿ. ಸ್ತ್ರೀಸಂಬಂಧದ ವಿಷಯದಲ್ಲಿ ನಿಮ್ಮನ್ನು ವಿಚಾರಿಸಬಹುದು. ಯಂತ್ರಗಳ ಮಾರಾಟವನ್ನು ನೀವು ಕಡಿಮೆ‌ಮಾಡುವಿರಿ. ನಟರಿಗೆ ಹೆಚ್ಚಿನ ಉತ್ತಮ ಅವಕಾಶಗಳು ಇರಲಿದೆ. ವ್ಯವಹಾರವನ್ನು ಸರಿಯಾಗಿ ಮಾಡಿಕೊಳ್ಳಿ.

ವೃಶ್ಚಿಕ: ಅಸಾಧ್ಯವನ್ನು ಸಾಧಿಸುವ ಛಲವಿರಲಿದೆ. ಉದ್ಯಮದಲ್ಲಿ ಹಿನ್ನಡೆಯಾಗುವ ಸಂಭವವು ನಿಮಗೆ ಮೊದಲೇ ಗೊತ್ತಾಗಲಿದೆ. ಇಂದು ನೀವು ಸಂಸ್ಥೆಯ ಪ್ರತಿನಿಧಿಯಾಗಿ ಭಾಗವಹಿಸುವಿರಿ. ನಿರಪೇಕ್ಷ ವಿಚಾರವನ್ನು ಪ್ರಸ್ತಾಪಿಸಿಕೊಂಡು ಕಾಲಹರಣ ಮಾಡುವಿರಿ. ತಾಯಿಯ ವಿಚಾರದಲ್ಲಿ ನೀವು ಇಂದು ಕೋಪಗೊಳ್ಳಬಹುದು. ಇಂದು ನೀವು ಹೊಸ ತಂಡವನ್ನು ಕಟ್ಟಿಕೊಳ್ಳುವಿರಿ. ಪಾಲುದಾರಿಕೆಯಲ್ಲಿ ನಿಮಗೆ ಅಸಮಾಧಾನ ಇರಲಿದೆ. ಮಾನಸಿಕ ಕಿರಿಕಿರಿಯು ಕಡಿಮೆ ಇದ್ದು ಸ್ವಲ್ಪ ಹಿತವೆನಿಸುವುದು. ಸಭ್ಯತೆಯನ್ನು ಇಟ್ಟುಕೊಂಡು ಇಂದಿನ ವ್ಯವಹಾರವನ್ನು ಮಾಡಿರಿ. ನೀವು ನಿಮ್ಮ ಸ್ಥಾನಕ್ಕಾಗಿ ಇನ್ನೊಬ್ಬರನ್ನು ದೂಷಿಸುವಿರಿ.

ಧನುಸ್ಸು: ಉತ್ತಮ ಭೂಮಿಯ ಲಾಭವಾಗಲಿದೆ. ಅಪಾಯದಿಂದ ಹೊರಬರಲಿದ್ದೀರಿ. ಧನವ್ಯಯವನ್ನು ನಿಮ್ಮ ಜಾಣತನದಿಂದ ತಪ್ಪಿಸಿಕೊಳ್ಳುವಿರಿ‌. ಅಪರಿಚಿತರಿಗೆ ಇಂದು ಸಹಾಯವನ್ನು ಮಾಡುವಿರಿ. ಕೋಪದ ನಿಯಂತ್ರಣವನ್ನು ಮಾಡಲು ಕಷ್ಟವಾದೀತು. ಸಂಸಾರದಲ್ಲಿ ನಿರಾಸಕ್ತಿಯು ಇರಲಿದೆ. ನಿಮ್ಮ ಸಣ್ಣ ತಪ್ಪುಗಳೂ ದೊಡ್ಡ ರೂಪವನ್ನು ಪಡೆಯಬಹುದು. ನಿಮ್ಮ ಇಷ್ಟದವರ ಭೇಟಿಯಾಗಲಿದೆ. ಕ್ಷಮೆಯನ್ನು ಕೇಳಿದರೆ ನಿರಾಕರಿಸುವುದು ಬೇಡ. ಸೌಲಭ್ಯಗಳಿಂದ ನೀವು ಆಲಸ್ಯವನ್ನು ಬೆಳೆಸಿಕೊಳ್ಳುವಿರಿ.‌ ಮಕ್ಕಳ ಪ್ರೀತಿಯನ್ನು ಸಂಪಾದಿಸುವಿರಿ. ಅನಗತ್ಯ ಖರೀದಿಯನ್ನು ಮಾಡುವಿರಿ.

ಮಕರ: ಸ್ನೇಹಿತರ ಹಾಗೂ ಬಂಧುಗಳ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ. ನಿಮ್ಮ ಯೋಜನೆಗಳು ವಾಸ್ತವಕ್ಕೆ ಹತ್ತಿರವಿರಲಿ. ಹೆಚ್ಚಿನ ವಿವರಗಳನ್ನು ಅನುಭವಿಗಳ, ತಿಲಕಿದವರಿಂದ ಪಡೆಯಿರಿ. ವಿವಾಹ ಸಮಾರಂಭಕ್ಕೆ ಹೋಗುವಿರಿ. ಪ್ರಭಾವೀ ವ್ಯಕ್ತಿಗಳ ಭೇಟಿಯು ನಿಮ್ಮ ಉತ್ಸಾಹವನ್ನು ಹೆಚ್ಚಿಸಬಹುದು. ಮಾತನಾಡುವ ವೇಗದಲ್ಲಿ ಏನನ್ನಾದರೂ ಹೇಳಬಹುದು. ನೀವು ಇಂದು ವಿಜಯದ ಸಂಭ್ರಮದಲ್ಲಿ ಇರುವಿರಿ. ನಿಮಗೆ ಇಂದು ಸಮ್ಮಾನವು ಸಿಗಬಹುದು. ಕೆಲಸವನ್ನು ಏಕಾಗ್ರತೆಯಿಂದ ಮಾಡುವಿರಿ. ನಿಮ್ಮದೇ ಆದ ಮಿತ್ರರ ವೃಂದವನ್ನು ಕಟ್ಟಿಕೊಳ್ಳುವಿರಿ.

ಕುಂಭ: ನೀವು ಕೆಲಸವನ್ನು ಕಳೆದುಕೊಂಡಿರುವುದು ದಾಯಾದಿಗಳಿಗೆ ಸಂತೋಷದ ಸಮಾಚಾರವಾಗಲಿದೆ. ಸಕಾರಾತ್ಮಕ ಆಲೋಚನೆಗಳನ್ನು ನೀವು ಹೆಚ್ಚಿಸಿಕೊಳ್ಳಲು ಪ್ರಯತ್ನಿಸಿ. ನಿಮಗೆ ಬೆಂಬಲದ ಕೊರತೆ ಎದ್ದು ಕಾಣಬಹುದು. ಅಧಿಕ ಖರ್ಚಿನ್ನು ಇಂದು ಮಾಡಬೇಕಾಗಿಬರಬಹುದು. ನಿಮ್ಮ ದುರಭ್ಯಾಸವು ಇತರರಿಗೂ ತಿಳಿಯಬಹುದು. ಭವಿಷ್ಯದಲ್ಲಿ ಬರಬಹುದಾದ ತೊಂದರೆಗಳನ್ನು ನೀವು ಊಹಿಸಿಕೊಂಡು ಚಿಂತೆಪಡುವಿರಿ. ಸಿಕ್ಕಿದ್ದನ್ನು ಜೋಪಾನ ಮಾಡಿಕೊಳ್ಳಿ. ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳಲೂಬಹುದು. ಸುಮ್ಮನೇ ಇರುವುದು ನಿಮಗೆ ಇಂದು ಪ್ರಿಯವಸದೀತು.

ಮೀನ: ವಿದ್ಯಾರ್ಥಿಗಳಿಗೆ ಆಭ್ಯಾಸಕ್ಕೆ ಸಮಯವನ್ನು ಹೊಂದಿಸುವುದು ಕಷ್ಟವಾದೀತು. ಪೂರಕ ವಾತಾವರಣ ಕೊರತೆ ಕಾಣುವುದು. ಹೂಡಿಕೆಯನ್ನು ಇನ್ನೊಬ್ಬರ ಒತ್ತಾಯಕ್ಕೆ ಮಾಡುವಿರಿ. ಸಮಾಧಾನವಿಲ್ಲಸಿದ್ದರೂ ಸಮಾಧಾನದಂತೆ ತೋರುವುದು. ಪುಣ್ಯದ ಫಲವನ್ನು ನೀವು ಪಡೆಯುವಿರಿ. ಸಹೋದ್ಯೋಗಿಗಳ ವರ್ತನೆಯು ನಿಮಗೆ ಆಶ್ಚರ್ಯವನ್ನು ಉಂಟುಮಾಡೀತು. ಕೆಲಸವನ್ನು ಬಿಡಬೇಕಾದ ಸಂದರ್ಭವು ಬರಬಹುದು. ನಿಮ್ಮ ಆತ್ಮವಿಶ್ವಾಸಕ್ಕೆ ತೊಂದರೆ ಬರಬಹುದು. ಪೂರ್ಣಮಾಹಿತಿಯ ಕೊರತೆಯನ್ನು ಇಟ್ಟುಕೊಂಡು ನೀವು ಕೆಲಸವನ್ನು ಮಾಡಬೇಕಾದೀತು. ಗ್ರಾಮದೇವರಿಗೆ ವರ್ಷದ ಪೂಜೆಯನ್ನು ಸಲ್ಲಿಸಿ.

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ