Horoscope: ದಿನಭವಿಷ್ಯ, ಈ ರಾಶಿಯವರು ಮಂದಗತಿಯಲ್ಲಿ ಸಾಗುವ ಕೆಲಸಗಳಿಗೆ ವೇಗವನ್ನು ಕೊಡುವಿರಿ
ನೀವು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 16) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.
ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಕೆಲವರು ಬೆಳಗ್ಗೆ ಎದ್ದ ಕೂಡಲೇ ರಾಶಿ ಭವಿಷ್ಯ (Daily horoscope) ತಪ್ಪದೇ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯದಿಂದ ತಿಳಿದುಕೊಳ್ಳುತ್ತಾರೆ. ಅದರ ಜೊತೆಗೆ ನಿತ್ಯಪಂಚಾಂಗ ಕೂಡ ಓದುತ್ತಾರೆ. ಹಾಗಾದರೆ ಇಂದಿನ (2023 ಜುಲೈ 16) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ?, ಯಾರಿಗೆ ಲಾಭ?, ಯಾರಿಗೆ ನಷ್ಟ?, ಯಾರಿಗೆ ಶುಭ, ಅಶುಭ? ಇಲ್ಲಿ ನೋಡಿ ನಿಮ್ಮ ಭವಿಷ್ಯ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಪುನರ್ವಸು, ಮಾಸ: ಆಷಾಢ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಚತುರ್ದಶಿ, ನಿತ್ಯನಕ್ಷತ್ರ: ಆದ್ರಾ, ಯೋಗ: ವೃದ್ಧಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 12 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಸಾಯಂಕಾಲ 05:28 ರಿಂದ 07:04ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:38 ರಿಂದ 02:15ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:51 ರಿಂದ 05:28ರ ವರೆಗೆ.
ತುಲಾ: ಸ್ಥಿರಾಸ್ತಿಯಲ್ಲಿ ಹೆಚ್ಚು ಲಾಭವನ್ನು ಪಡೆಯಲು ನೀವು ಯೋಚಿಸುವಿರಿ. ಮಕ್ಕಳ ವಿಚಾರದಲ್ಲಿ ನೀವು ಬಹಳ ಮೃದುವಾಗುವಿರಿ. ನಿಮ್ಮ ಮನಃಸ್ಥಿತಿಯನ್ನು ದುರುಪಯೋಗ ಮಾಡಿಕೊಳ್ಳಬಹುದು. ಸಹವಾಸದ ಅಪವಾದವು ನಿಮ್ಮ ಮೇಲೆ ಬರಲಿದೆ. ಹಣಕಾಸಿನ ವಿಚಾರದಲ್ಲಿ ಗಮನಾರ್ಹ ಬೆಳವಣಿಗೆ ಉಂಟಾಗಲಿದೆ ನಿಮ್ಮ ವೃತ್ತಿಜೀವನವು ಉತ್ತಮವಾದ ಆರಂಭಿಸಲು ನಿರ್ಧರಿಸುವಿರಿ. ಇಂದು ನೀವು ಲವಲವಿಕೆಯಿಂದ ಇದ್ದು ಇನ್ನೊಬ್ಬರನ್ನೂ ಹಾಗೆ ನೋಡಿಕೊಳ್ಳುವಿರಿ. ಶೈಕ್ಷಣಿಕ ಪ್ರಗತಿಯಿಂದ ನಿಮಗೆ ಉತ್ತಮ ಅವಕಾಶಗಳು ಲಭ್ಯವಾಗುವುವು.
ವೃಶ್ಚಿಕ: ಸಾಲವನ್ನು ನೆನೆಸಿಕೊಂಡು ನೀವು ಬಹಳ ಸಂಕಟಪಡುವಿರಿ. ಸ್ತ್ರೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ಸಿಗಲಿದೆ. ಇನ್ನೊಬ್ಬರ ನೋವಿಗಿ ಸ್ಪಂದಿಸುವುದು ನಿಮ್ಮ ಕರ್ತವ್ಯವಾಗಲಿದೆ. ದಾಂಪತ್ಯದಲ್ಲಿ ಸಾಮರಸ್ಯದ ಅನಗತ್ಯವು ಬಹಳ ಇರಲಿದೆ. ನಿಮ್ಮ ಉದ್ಯೋಗವನ್ನು ಪಡೆಯಲು ಮಾಡಿದ ಪ್ರಯತ್ನಗಳು ನಿಮ್ಮ ಆತ್ಮವಿಶ್ವಾಸವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತವೆ. ಕುಟುಂಬದಲ್ಲಿ ನೀವು ಗಂಭೀರವಾದ ವಿವಾದಗಳನ್ನು ಮಾಡುವಿರಿ. ನೀವು ಮತ್ತು ಸಂಗಾತಿ ನಡುವೆ ಹಣದ ಬಗ್ಗೆ ಬಿಸಿ ಬಿಸಿ ಚರ್ಚೆ ಆಗಲಿದೆ. ಒತ್ತಡವಿಲ್ಲದೆ ಇಂದು ನಿಮ್ಮ ದಿನವನ್ನು ಆನಂದಿಸಲು ಪ್ರಯತ್ನಿಸಿ. ನಿಮ್ಮ ಆರೋಗ್ಯವು ಚೆನ್ನಾಗಿ ಇರಲಿದೆ.
ಧನುಸ್ಸು: ಮಕ್ಕಳು ನಿಮ್ಮ ವರ್ತನೆಯನ್ನು ವಿರೋಧಿಸುವರು. ನಿಮ್ಮ ಅಸಮರ್ಪಕ ಉತ್ತರವು ನಿಮ್ಮ ಬಗ್ಗೆ ನಂಬಿಕೆಯು ಇರದಂತೆ ಮಾಡುವುದು. ವ್ಯವಹಾರವನ್ನು ಮಾಡುವಾಗ ಯಾವ ರೀತಿಯಿಂದಲೂ ತಪ್ಪುಗಳು ಆಗದಂತೆ ನೋಡಿಕೊಳ್ಳಿ. ವ್ಯಾಪಾರದ ಉದ್ದೇಶಕ್ಕೆ ನಿಮ್ಮ ವಿದೇಶ ಪ್ರವಾಸವು ಶುಭವನ್ನು ತರಲಿದೆ. ನಿಮ್ಮ ಸಂಗಾತಿಯಿಂದ ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾದೀತು. ಪಾಲುದಾರಿಕೆಯಲ್ಲಿ ನಿಮ್ಮ ಗಮನ ಅಗತ್ಯವಾಗಿ ಇರಲಿ. ಕಠಿಣ ವ್ಯಾಯಾಮವನ್ನು ಮಾಡುವ ಮುಂಚೆ ದೇಹದ ಸಾಮರ್ಥ್ಯವನ್ನು ತಿಳಿಯಲು ವೈದ್ಯರನ್ನು ಸಂಪರ್ಕಿಸಿ. ನಿಮ್ಮ ವೃತ್ತಿ, ಹಣಕಾಸಿನ ವಿಚಾರಕ್ಕೆ ಬಂದಾಗ ನೀವು ಬಹಳ ದುರ್ಬಲರಾಗುವಿರಿ.
ಮಕರ: ದಾಂಪತ್ಯದಲ್ಲಿ ಸಲುಗೆಯು ಅತಿಯಾಗಲಿದೆ. ತಂದೆಯಿಂದ ಧನಾಗಮನವಾಗಬಹುದು. ಬೇಸರವನ್ನು ಕಳೆಯಲು ಒಂಟಿಯಾಗಿ ದೂರ ಹೋಗುವಿರಿ. ಪ್ರೇಯಸಿಯನ್ನು ದೂರಮಾಡಿಕೊಂಡು ಸಂಕಟಪಡುವ ಸಾಧ್ಯತೆ ಇದೆ. ನಿಮ್ಮ ಸಾಮರ್ಥ್ಯವನ್ನು ಸುಧಾರಿಸಲು ಇಂದು ಒಂದು ಅವಕಾಶ ಸಿಗಲಿದೆ. ಯಾರಾದರೂ ನಿಮಗೆ ಉತ್ತಮ ಮಾರ್ಗದರ್ಶನವನ್ನು ಮಾಡಬಹುದು. ಹೂಡಿಕೆಯನ್ನು ತಪ್ಪಾಗಿ ಮಾಡುವಿರಿ. ನಿಮ್ಮ ಅನುಭವದ ಆಧಾರದ ಮೇಲೆ ಕೆಲಸವು ಇರಲಿದೆ. ಯಂತ್ರೋಪಕರಣಗಳ ವಿಚಾರದಲ್ಲಿ ನೀವು ಜಾಗರೂಕರಾಗಿರುವುದು ಮುಖ್ಯ.
ಕುಂಭ: ತಾಯಿಯ ಕಡೆಯಿಂದ ನಿಮಗೆ ಆರ್ಥಿಕ ಸಹಾಯವು ಸಿಗಲಿದೆ. ಕುಟುಂಬದಲ್ಲಿ ನಿಮ್ಮ ಬಗ್ಗೆ ಆತಂಕ ಉಂಟಾಗಬಹುದು. ಪ್ರಯತ್ನಪಟ್ಟು ಮಾಡುವ ಕೆಲಸವು ನಿಮಗೆ ಅನುಕೂಲವನ್ನು ಮಾಡುವುದು. ನಿಮ್ಮ ಕಾರ್ಯದ ಬಗ್ಗೆ ಸಕಾರಾತ್ಮಕ ಭಾವನೆಯು ಕಡಿಮೆ ಆಗಬಹುದು. ಉದ್ವಿಗ್ನತೆಯು ಉಂಟಾಗ ಏನನ್ನಾದರೂ ಮಾಡಿಕೊಳ್ಳುವಿರಿ. ಅವಿವಾಹಿತರು ಯೋಗ್ಯವಾದ ಸಂಗಾತಿಯನ್ನು ಪಡೆಯುವರು. ನವವಿವಾಹಿತರಿಗೆ ಸಂತಸದ ಸುದ್ದಿಯು ಇರಲಿದೆ. ಇಂದು ನಿಮ್ಮ ಪ್ರಯಾಣವನ್ನು ಸಣ್ಣ ಮಾಡುವುದು ಉತ್ತಮ. ನೀವು ಇಂದು ಕೆಲಸದಲ್ಲಿ ಬದಲಾವಣೆಯನ್ನು ಇಚ್ಛಿಸುವಿರಿ.
ಮೀನ: ಮಂದಗತಿಯಲ್ಲಿ ಸಾಗುವ ಕೆಲಸಗಳಿಗೆ ವೇಗವನ್ನು ಕೊಡುವಿರಿ. ವಾಹನದಿಂದ ನಿಮಗೆ ತೊಂದರೆಯಾಗಲಿದೆ. ವಾಹನ ಚಲಾಯಿಸುವಾಗ ಎಚ್ಚರ ಇರಲಿ. ಇಂದೇ ರೀತಿಯ ಜೀವನವು ನಿಮಗೆ ಬೇಸರವನ್ನು ಕೊಟ್ಟಿದ್ದು, ಹೊಸತನ್ನು ನೀವು ಬಯಸುವಿರಿ. ಇಂದು ನೀವು ಹೊಸ ಪಾಲುದಾರಿಗೆ ಮನಸ್ಸು ಮಾಡುವಿರಿ. ಅತಿಯಾದ ಆಸೆಯಿಂದ ನಿಮಗೆ ಕೆಲವು ತೊಂದರೆಗಳು ಬರಬಹುದು. ಆರ್ಥಿಕವಾಗಿ ಸಬಲತೆಗೆ ಕ್ರಮವನ್ನು ಕೈಗೊಳ್ಳುವುದು ಉತ್ತಮ. ನಿಮ್ಮ ಭಾವನೆಯನ್ನು ಕುಟುಂಬವು ಗೌರವಿಸುವುದು. ಇಂದಿನ ಹೆಚ್ಚಿನ ಸಮಯವನ್ನು ಧಾರ್ಮಿಕ ಕೆಲಸಕ್ಕೆ ಮೀಸಲಿಡಿ.