Horoscope: ದಿನಭವಿಷ್ಯ, ಧನ ಸಂಪಾದನೆಯಲ್ಲಿ ಈ ರಾಶಿಯವರು ಹೆಚ್ಚು ಆಸಕ್ತಿ ತೋರಲಿದ್ದಾರೆ, ಮನೆಯ ಬಗ್ಗೆ ಪ್ರೀತಿ ಹೆಚ್ಚಾಗಬಹುದು

ನೀವು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 17) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ, ಧನ ಸಂಪಾದನೆಯಲ್ಲಿ ಈ ರಾಶಿಯವರು ಹೆಚ್ಚು ಆಸಕ್ತಿ ತೋರಲಿದ್ದಾರೆ, ಮನೆಯ ಬಗ್ಗೆ ಪ್ರೀತಿ ಹೆಚ್ಚಾಗಬಹುದು
ಇಂದಿನ ರಾಶಿಭವಿಷ್ಯImage Credit source: Getty Images
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: Rakesh Nayak Manchi

Updated on: Jul 17, 2023 | 12:30 AM

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಕೆಲವರು ಬೆಳಗ್ಗೆ ಎದ್ದ ಕೂಡಲೇ ರಾಶಿ ಭವಿಷ್ಯ (Daily horoscope) ತಪ್ಪದೇ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯದಿಂದ ತಿಳಿದುಕೊಳ್ಳುತ್ತಾರೆ. ಅದರ ಜೊತೆಗೆ ನಿತ್ಯಪಂಚಾಂಗ ಕೂಡ ಓದುತ್ತಾರೆ. ಹಾಗಾದರೆ ಇಂದಿನ (2023 ಜುಲೈ 17) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ?, ಯಾರಿಗೆ ಲಾಭ?, ಯಾರಿಗೆ ನಷ್ಟ?, ಯಾರಿಗೆ ಶುಭ, ಅಶುಭ? ಇಲ್ಲಿ ನೋಡಿ ನಿಮ್ಮ ಭವಿಷ್ಯ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ / ದಕ್ಷಿಣಾಯನ, ಗ್ರೀಷ್ಮ ಋತು, ಮಿಥುನ / ಕರ್ಕಾಟಕ ಮಾಸ, ಮಹಾನಕ್ಷತ್ರ: ಪುನರ್ವಸು, ಮಾಸ: ಆಷಾಢ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಪುನರ್ವಸು, ಯೋಗ: ಧ್ರುವ, ಕರಣ: ಚತುಷ್ಪಾತ್, ಸೂರ್ಯೋದಯ ಬೆಳಗ್ಗೆ 06 ಗಂಟೆ 12 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:49 ರಿಂದ 09:26ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 11:02 ರಿಂದ 12:38ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:15 ರಿಂದ 03:51ರ ವರೆಗೆ.

ತುಲಾ: ಬಂಧುಗಳು ನಿಮ್ಮ ಸಹಾಯವನ್ನು ಬಯಸುವರು. ಆಸ್ತಿಯ ವಿಚಾರವಾಗಿ ನೀವು ಕಾನೂನು ಹೋರಾಟವನ್ನು ಮಾಡಲಿದ್ದೀರಿ. ಕಲಾವಿದರು ತಮ್ಮ‌‌ ಸಾಮರ್ಥ್ಯವನ್ನು ಪ್ರದರ್ಶಿಸಲಿದ್ದಾರೆ. ಬೆನ್ನಿನ ನೋವು ಮತ್ತೆ ಕಾಣಿಕೊಳ್ಳುವುದು. ಇಂದಿನ ಕಾರ್ಯವು ಪೂರ್ಣವಾಗುವ ತನಕ ನೀವು ವಿಶ್ರಾಂತಿಯನ್ನು ಬಯಸುವುದಿಲ್ಲ. ವಿವಾದವಾಗುವ ಹೇಳಿಕೆಯನ್ನು ನೀಡಬೇಡಿ. ನಿತ್ಯ ಬಳಕೆಯ ವಸ್ತುವಿನ ವ್ಯಾಪಾರದಿಂದ ಲಾಭವಾದೀತು. ಸಂಗಾತಿಯ ಬಯಕೆಯನ್ನು ಈಡೇರಿಸಿ ಸಂತೋಷಪಡಿಸುವಿರಿ. ನಿಮ್ಮ ಬೆಳವಣಿಗೆಯನ್ನು ಬಂಧುಗಳು ಕಂಡು ಇಷ್ಟಪಡುವರು.

ವೃಶ್ಚಿಕ: ನೀವು ಇಂದು ಕಾರ್ಯದಲ್ಲಿ ಅನಿರೀಕ್ಷಿತ ಜಯವನ್ನು ಗಳಿಸುವಿರಿ. ಭೂಮಿಯ ದಾಖಲೆಗಳನ್ನು ಸರಿಯಾಗಿ‌ ಪಡೆದುಕೊಂಡು ವ್ಯವಹಾರವನ್ನು ಮುಂದುವಿರಿಸಿ. ಭವಿಷ್ಯದ ಕುರಿತು ಬಹಳ ಆಲೋಚನೆಯನ್ನು ಮಾಡುವಿರಿ. ಇಂದು ತೆಗೆದುಕೊಳ್ಳುವ ಸಾಲು ಬಹಳ ಕಾಲದವರೆಗೂ ಉಳಿಯಲಿದೆ. ಯುಕ್ತಿಯಿಂದ ಕೆಲಸವನ್ನು ಸಾಧಿಸಿ. ನಿಮ್ಮ ನಡವಳಿಕೆಯು ಕೆಲವರಿಗೆ ಇಷ್ಟವಾಗದೇ ಇರುವುದು. ಮಕ್ಕಳು ನಿಮ್ಮ‌ ಮಾತನ್ನೇ ನಿಮಗೆ ಹೇಳುವರು. ಯೋಗ ಹಾಗೂ ಧ್ಯಾನವನ್ನು ಮಾಡಿ ಮನಸ್ಸನ್ನು ನಿರ್ಮಲವಾಗಿಸಿಕೊಳ್ಳಿ. ನಿಮ್ಮವರ ಕೆಲವು ಸ್ವಭಾವವು ನಿಮಗೆ ಮೆಚ್ಚುಗೆಯಾಗದು.

ಧನು: ಅವಕಾಶಗಳು ಸಣ್ಣ ಅಂತರದಲ್ಲಿ ಕೈ ತಪ್ಪಿ ಹೋಗುವುದು. ನೀವೇ ಹಾಕಿಕೊಂಡ ಯೋಜನೆಯಲ್ಲಿ ತಪ್ಪುಗಳು ಕಾಣಲಿದ್ದು, ಅದನ್ನು ಬದಲಾಯಿಸಲೂ ಆಗದ ಸ್ಥಿತಿಯು ಬರಲಿದೆ. ಇಂದಿನ ನಿಮ್ಮ‌ ಉತ್ಸಾಹವು ಬಹಳ ಸಂತೋಷದಿಂದ ಭಾಗವಿಸುವಂತೆ ಮಾಡುವುದು. ಹೊಸ ವೃತ್ತಿಯನ್ನು ಹುಡುಕುತ್ತಿದ್ದರೆ ಉತ್ತಮ ವೃತ್ತಿಯು ಸಿಗಬಹುದು. ಸ್ವಂತ ವ್ಯವಹಾರವನ್ನು ಲಾಭದಾಯಕವಾಗಿ ಪರಿವರ್ತಿಸುವಿರಿ. ಕಛೇರಿಯ ವಾತಾವರಣವು ನಿಮಗೆ ಮುಜುಗರವನ್ನು ತಂದೀತು. ಧನ ಸಂಪಾದನೆಯಲ್ಲಿ ಹೆಚ್ಚು ಆಸಕ್ತಿಯನ್ನು ತೋರಿಸುವಿರಿ. ಮನೆಯ ಬಗ್ಗೆ ಪ್ರೀತಿ ಹೆಚ್ಚಾಗಬಹುದು.

ಮಕರ: ಉದ್ಯಮಿಗಳಿಗೆ ರಪ್ತು ವ್ಯವಹಾರವು ಬಹಳ ಕಷ್ಟವೆನಿಸಲಿದೆ. ಪಾಲುದಾರಿಕೆಯನ್ನು ಕೈಬಿಡುವುದು ಒಳ್ಳೆಯದು. ಆರೋಗ್ಯವೂ ಅತಿಯಾದ ಒತ್ತಡದಿಂದ ಹಾಳಾಗುವುದು.‌ ಸಲ್ಲದ ಮಾತುಗಳ ಮೇಲೆ ನಿಯಂತ್ರಣದ ಅವಶ್ಯಕತೆ ಇರಲಿದೆ. ನೇರ ಮಾತು ಎಲ್ಲರಿಗೂ ಹಿಡಿಸದು. ಮಕ್ಕಳ ವಿಚಾರದಲ್ಲಿ ಕಾಳಜಿಯ ಅವಶ್ಯಕತೆ ಇರಲಿದೆ. ಅಸ್ಥಿರವಾದ ಮನಃಸ್ಥಿತಿಯು ಕಾರ್ಯವನ್ನು ಹಾಳುಮಾಡುವುದು. ಪ್ರಯಾಣ ಮಾಡುವ ಅನಿವಾರ್ಯತೆ ಸೃಷ್ಟಿಯಾಗಬಹುದು. ನಿಮ್ಮ ಆಸೆ ನೆರವೇರುತ್ತಿಲ್ಲ ಎಂಬ ಆತಂಕವೂ ಇರಲಿದೆ. ಯಾವ ವಸ್ತುವನ್ನು ಖರೀದಿಸುವ ಯೋಚನೆಯನ್ನು ಮಾಡಬೇಡಿ.

ಕುಂಭ: ಕೋಪದಲ್ಲಿ ಏನನ್ನಾದರೂ ಹೇಳಿ ಮನಸ್ಸನ್ನು ವಿಕಾರಗೊಳಿಸಿಕೊಳ್ಳುವಿರಿ. ಸಂಗಾತಿಯ ಮಾರ್ಗದರ್ಶನದಲ್ಲಿ ನೀವು ಕೆಲವು ಬದಲಾವಣೆಯನ್ನು ಮಾಡಿಕೊಳ್ಳುವಿರಿ. ಧಾರ್ಮಿಕ ಅಲ್ಪ ಆಸಕ್ತಿಯು ಇರಲಿದೆ. ಇಂದಿನ ಘಟನೆಯು ನಿಸ್ಪೃಹತೆಯನ್ನು ಹೆಚ್ಚಿಸುವುದು. ಅಭಾವವೈರಾಗ್ಯವು ನಿಮ್ಮಲ್ಲಿ ಉಂಟಾಗಬಹುದು. ಇಂದಿನ ನಿಮ್ಮ ಕೆಲಸವನ್ನು ಹಂಚಿಕೊಂಡು ಮಾಡಿ. ಇದು ಕಾರ್ಯಕ್ಕೆ ವೇಗವನ್ನು ತಂದುಕೊಡುವುದು. ಆಪ್ತರಿಂದ ನೀವು ಟೀಕೆಗೆ ಗುರಿಯಾಗುವಿರಿ. ಇದು ನಿಮ್ಮ ನಡುವಿನ ಸಂಬಂಧವನ್ನು ಸಡಿಲಿಸೀತು. ಯಾರನ್ನೂ ಅವಲಂಬಿಸದೇ ಸ್ವಂತ ಶ್ರಮದಿಂದ ನೀವು ಆಗುವಷ್ಟು ಕೆಲಸವನ್ನು ಮಾಡಿ.

ಮೀನ: ಕಾನೂನಿಗೆ ವಿರುದ್ಧವಾಗಿ ಯಾವುದಾದರೂ ಕಾರ್ಯವನ್ನು ಮಾಡುವ ಆಲೋಚನೆ ಇದ್ದರೆ, ಅಂತಹ ಸಾಹಸದಲ್ಲಿ ತೊಡಗಿಕೊಳ್ಳುವುದು ಬೇಡ. ಅಪಾಯವನ್ನು ತಂದುಕೊಳ್ಳುವ ಸಾಧ್ಯತೆ ಇದೆ. ಮಕ್ಕಳಿಂದ ಕೆಲಸಕ್ಕೆ ಅಡ್ಡಿಯಾಗಲಿದೆ. ಬಂಧುಗಳ ಜೊತೆ ಇಂದು ವಿನಾಕಾರಣ ವಿವಾದವನ್ನು ಮಾಡಿ ಬೇಸರ ತರಿಸುವಿರಿ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಫಲಿತಾಂಶವು ಸಂತೋಷವನ್ನು ತರುವುದು. ಅಪರಿಚಿತರನ್ನು ನಂಬಿ ಹಣವನ್ನು ಕಳೆದುಕೊಳ್ಳುವಿರಿ. ನಿಮ್ಮ ಸಮಯವು ಇಂದು ವ್ಯರ್ಥವಾದಂತೆ ತೋರುವುದು. ಆಪ್ತರ ನೋವಿಗೆ ಸ್ಪಂದಿಸುವಿರಿ.

ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು