AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರ ಮೇಲೆ‌ ಕೆಟ್ಟ ಕಣ್ಣುಗಳು ಬೀಳಬಹುದು, ಹನುಮಾನ್ ಚಾಲೀಸ್ ಪಠಿಸಿ

ನೀವು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 20) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರ ಮೇಲೆ‌ ಕೆಟ್ಟ ಕಣ್ಣುಗಳು ಬೀಳಬಹುದು, ಹನುಮಾನ್ ಚಾಲೀಸ್ ಪಠಿಸಿ
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 20, 2023 | 12:30 AM

Share

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಕೆಲವರು ಬೆಳಗ್ಗೆ ಎದ್ದ ಕೂಡಲೇ ರಾಶಿ ಭವಿಷ್ಯ (Daily horoscope) ತಪ್ಪದೇ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯದಿಂದ ತಿಳಿದುಕೊಳ್ಳುತ್ತಾರೆ. ಅದರ ಜೊತೆಗೆ ನಿತ್ಯಪಂಚಾಂಗ ಕೂಡ ಓದುತ್ತಾರೆ. ಹಾಗಾದರೆ ಇಂದಿನ (2023 ಜುಲೈ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ?, ಯಾರಿಗೆ ಲಾಭ?, ಯಾರಿಗೆ ನಷ್ಟ?, ಯಾರಿಗೆ ಶುಭ, ಅಶುಭ? ಇಲ್ಲಿ ನೋಡಿ ನಿಮ್ಮ ಭವಿಷ್ಯ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುನರ್ವಸು, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ತೃತೀಯಾ, ನಿತ್ಯನಕ್ಷತ್ರ: ಮಘಾ, ಯೋಗ: ಸಿದ್ಧ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 13 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:15 ರಿಂದ 03:51ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:14 ರಿಂದ 07:50ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:26 ರಿಂದ 11:02ರ ವರೆಗೆ.

ತುಲಾ: ನೀವು ಅಂದುಕೊಂಡಿದ್ದು ಆಗುತ್ತಿದ್ದರೂ ಮಾನಸಿಕ ಕಿರಿಕಿರಿ ಅಧಿಕವಾಗುವುದು. ಮಕ್ಕಳ ಕಾರಣದಿಂದ‌ ನಿಮಗೆ ಕೆಟ್ಟ ಹೆಸರು ಬರಬಹುದು. ಯಾವ ಕೆಲಸದಲ್ಲಿಯೂ ಸಿಕ್ಕಿಹಾಕಿಕೊಳ್ಳದೇ ಇರುವಿರಿ. ಎಲ್ಲವನ್ನೂ ತಿಳಿದೂ ನೀವು ಸುಮ್ಮನಿರುವುದು ನಿಮಗೆ ಇಷ್ಟವಾಗುವುದು. ಅಧಿಕಾರಿಗಳ ವರ್ಗದಿಂದ ನಿಮಗೆ ಗೌರವ ಸಿಗಲಿದೆ. ನಿಮ್ಮವರಿಗೆ ನಿಮ್ಮ ಸರಿಯಾದ ಪರಿಚಯ ಆಗಿಲ್ಲವೆನಿಸುವುದು. ವ್ಯಾಪರವು ಒಂದೇ ಹದದಲ್ಲಿ ಹೋಗುವುದು. ಪತ್ನಿಯ ಆರೋಗ್ಯವು ಕೆಡುವ ಸಾಧ್ಯತೆ ಇದೆ. ಆಹಾರ ಸೇವೆಯನ್ನು ಮಿತವಾಗಿ ಮಾಡಿ. ದುರ್ಗಾಮಾತೆಯನ್ನು ವಿಧವಾಗಿ ಅರ್ಚಿಸಿ.

ವೃಶ್ಚಿಕ: ಮಕ್ಕಳಿಂದ ಆಸ್ತಿಗೆ ಸಂಬಂಧಿಸಿದ ವಿಚಾರವನ್ನು ಪ್ರಸ್ತಾಪಿಸಿ ಒಪ್ಪಿಗೆಯನ್ನು ಪಡೆಯುವಿರಿ. ಸುಧಾರಿಸಿದ ಆರೋಗ್ಯವು ನಿಮಗೆ ಉತ್ಸಾಹವನ್ನು ಕೊಡಲಿದೆ. ಜೀವನದ ಆಕಸ್ಮಿಕ ತಿರುವುಗಳಿಗೆ ನೀವು ಚಿಂತೆಗೆ ಒಳಗಾಗುವುದಿಲ್ಲ. ಹಣದ ಉಳಿತಾಯಕ್ಕೆ ಮಾರ್ಗವನ್ನು ಹುಡುಕುವಿರಿ. ಉದ್ಯೋಗದ ಕೆಲವು ಗೌಪ್ಯ ವಿಚಾರಗಳು ನಿಮಗೆ ಗೊತ್ತಾಗಬಹುದು. ವಿಷಯಾಸಕ್ತಿಯು ಇಂದು ಅಧಿಕವಾಗಿ ಇರಲಿದೆ. ಸರ್ಕಾರದ ಕೆಲಸದಲ್ಲಿ ಹಿನ್ನಡೆಯಾಗಲಿದ್ದು ಬೇರೆಯವರ ಮೂಲಕ ಒತ್ತಡ ಹೇರಿ ಕೆಲಸವನ್ನು ಮಾಡಿಸಿಕೊಳ್ಳುವಿರಿ. ನ್ಯಾಯವಲ್ಲದ ಮಾರ್ಗದಲ್ಲಿ ನಿಮ್ಮ ಯೋಚನೆಯು ಸಾಗಬಹುದು.

ಧನುಸ್ಸು: ನಿಮ್ಮ ಮನೆಯ ಕೆಲಸವು ಹಲವು ದಿನಗಳಿಂದ ನಿಂತಿದ್ದು ಮತ್ತೆ ಆರಂಭವಾಗಲಿದೆ. ಇದು ನಿಮಗೆ ಅನಿರೀಕ್ಷಿತ ಆನಂದವನ್ನು ತರಬಹುದು. ಬಹಳ ದಿನಗಳ ಅನಂತರ ತಂದೆಯ ಜೊತೆ ಮಾತನಾಡಿ ಅವರ್ಣನೀಯ ನೆಮ್ಮದಿಯು ಪಡೆಯುವಿರಿ. ನಿಮ್ಮ ದೂರ ಪ್ರಯಾಣಕ್ಕೆ ಕುಟುಂಬದಿಂದ ಒಪ್ಪಿಗೆ ಸಿಗದೇಹೋದೀತು. ಇನ್ನೊಬ್ಬರ‌ ನೋವಿಗೆ ಸ್ಪಂದಿಸುವ ನಿಮ್ಮ ಗುಣವು ಹಲವವರಿಗೆ ಮೆಚ್ಚುಗೆಯಾಗಬಹುದು. ನಿಮಗೆ ಸಿಕ್ಕ ವ್ಯಕ್ತಿಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸುವಿರಿ. ನಿಮ್ಮ ಅಭಿಪ್ರಾಯವನ್ನು ಹೇಳುವಿರಿ. ಸಾಹಸದ ಪ್ರವೃತ್ತಿಯು ಸದ್ಯಕ್ಕೆ ಬೇಡ. ನಿಮಗೆ ತಾಳ್ಮೆಯು ಕಡಿಮೆ ಇರುವುದು ಗೊತ್ತಾಗುವುದು.

ಮಕರ: ಸಹೋದರನ ಸಹಾಕಾರವು ಸ್ವಲ್ಪಮಟ್ಟಿಗೆ ಅನುಕೂಲವಾಗುವುದು. ನೂತನ ವಾಹನದ‌ ಖರೀದಿಯನ್ನು ಮಾಡುವ ಬಯಕೆಯು ಇಂದು ಪೂರ್ಣಗೊಳ್ಳಬಹುದು. ಹಿತಶತ್ರು ನಿಮ್ಮ‌ ಪತನವನ್ನೇ ನಿರೀಕ್ಷಿಸುತ್ತ ಅದಕ್ಕೆ ಬೇಕಾದುದನ್ನು ಮಾಡುವರು.‌ಮಕ್ಕಳಿಗಾಗಿ ನೀವು ಹಣವನ್ನು ಖರ್ಚು ಮಾಡುವಿರಿ. ವೈವಾಹಿಕ ಜೀವನ ಆನಂದದಿಂದ ಇರಲಿದೆ. ಪರಸ್ಪರ ದುಃಖವನ್ನು ಹಂಚಿಕೊಂಡು ದಂಪತಿಗಳ ಮನಸ್ಸು ಹಗುರಾಗುವುದು. ಇಂದಿನ‌ ಕಾರ್ಯದ ಯಾದಿ ಮಾಡಿಕೊಂಡು ಕಾರ್ಯದಲ್ಲಿ ಮಗ್ನರಾಗಿ. ನಿಮ್ಮ ಸಂಪೂರ್ಣ ತಲ್ಲೀನತೆಯು ಕಾರ್ಯವನ್ನು ಮುಗಿಸಲು ಸಹಾಯಕವಾಗಲಿದೆ.

ಕುಂಭ: ನಿಮ್ಮ ಇಂದಿನ ಸುತ್ತಾಟ ವ್ಯರ್ಥವಾಗುವುದು. ಅಶುಭ ಸೂಚನೆಗಳನ್ನು ಗಮನಿಸಿಯೂ ಉದ್ಧಟತನದಿಂದ ಮುನ್ನುಗ್ಗುವಿರಿ. ಆಪ್ತಬಂಧುವನ್ನೊಬ್ಬರನ್ನು ಕಳೆದುಕೊಳ್ಳಲೂಬಹುದು. ಎಲ್ಲರೆದುರು ಮುಖಭಂಗವಾಗಬಹುದು. ವೈವಾಹಿಕ ಜೀವನದ ಕನಸನ್ನು ನೀವು ಕಾಣುವಿರಿ. ನಿಮ್ಮ‌ ದೂರಾಲೋಚನೆಯು ವಾಸ್ತವಕ್ಕಿಂತ ದೂರವಿರುವುದು. ಏನನ್ನಾದರೂ ಸಾಧಿಸಬೇಕು ಎನ್ನುವ ಛಲವಿದ್ದರೂ ಅದು ಕೆಲ ಕಾಲವಷ್ಟೇ ಇದ್ದು ಮರೆಯಾಗಬಹುದು. ಸದಭಿರುಚಿಯು ನಿಮಗೆ ವರವಾಗಬಹುದು. ನಿಮ್ಮ‌ ಭಾವವನ್ನು ಪ್ರಕಟಗೊಳಿಸಿ.

ಮೀನ: ಕುಟುಂಬವು ನಿಮ್ಮ ಶ್ರೇಯಸ್ಸನ್ನು ಹಾರೈಸಲಿದೆ. ಪಾಲುದಾರಿಕೆಯಲ್ಲಿ ಹಣಕಾಸಿನ ವಿಚಾರವು ವಿವಾದಕ್ಕೆ ಕಾರಣವಾಗಲಿದೆ. ಕಾರ್ಯಗಳಲ್ಲಿ ಉಂಟಾದ ವಿಘ್ನವನ್ನು ಪುರುಷ ಪ್ರಯತ್ನದಿಂದ ಸಾಧಿಸುವಿರಿ. ಸಂಗಾತಿಯನ್ನು ಬೇಸರದಲ್ಲಿದ್ದು ನೀವು ಸಮಾಧಾನ ಮಾಡುವಿರಿ. ನಿಮಗೆ ಸಾಕಷ್ಟು ಸಮಯವುವ ಇಂದು ಇರಲಿದ್ದು ಏನನ್ನೂ ಮಾಡದೇ ಕಾಲವನ್ನು ಕಳೆಯುವಿರಿ. ಉತ್ತಮ ಹವ್ಯಾಸವನ್ನು ಬೆಳೆಸಿಕೊಳ್ಳುವ ಹಂಬಲವಿರುವುದು. ನೀವು ಸಿದ್ಧತಗೆ ಹೆಚ್ಚು ಸಮಯವನ್ನು ತೆಗೆದುಕೊಳ್ಳುವಿರಿ. ನಿಮ್ಮ‌ ಮೇಲೆ‌ ಕೆಟ್ಟ ಕಣ್ಣುಗಳು ಬೀಳಬಹುದು. ಹನುಮಾನ್ ಚಾಲೀಸ್ ಪಠಿಸಿ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ