Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ ಭವಿಷ್ಯ
ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜೂನ್ 17) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.
ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜೂನ್ 17 ಶನಿವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಧೃತಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:19 ರಿಂದ 10:56ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:10 ರಿಂದ 03: 47ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:05 ರಿಂದ 07:42ರ ವರೆಗೆ.
ಧನುಸ್ಸು: ನೀವು ಸ್ನೇಹಿತರ ಜೊತೆ ಹೊಸ ಉದ್ಯಮವನ್ನು ನಡೆಸಲು ಚಿಂತನೆ ನಡೆಸುವಿರಿ. ಅಧ್ಯಾತ್ಮದಲ್ಲಿ ಒಲವು ಇರಲಿದೆ. ಮಕ್ಕಳ ವರ್ತನೆಯನ್ನು ಕಂಡು ಆಶ್ಚರ್ಯಪಡುವಿರಿ. ನಿಮ್ಮ ವ್ಯಾಪಾರವು ಸಂಜೆಯ ಅನಂತರ ಚೆನ್ನಾಗಿ ನಡೆಯಲಿದೆ. ನಿಮ್ಮದು ಪ್ರೇಮವಿವಾಹವಾದರೂ ಸಣ್ಣ ವಿಚಾರಗಳಿಗೂ ಕಲಹವು ಆಗಬಹುದು. ಅನಗತ್ಯ ಸುತ್ತಾಟದಿಂದ ನೀವು ಬೇಸತ್ತುಹೋಗಬಹುದು. ನಿಮ್ಮ ಉತ್ಸಾಹವೂ ಕುಗ್ಗಬಹುದು. ಭೂಮಿಯ ವ್ಯವಹಾರವನ್ನು ಬಹಳ ಜೋಪಾನದಿಂದ ಮಾಡಬೇಕಿದೆ. ಸಂಬಂಧಗಳನ್ನು ನೀವು ಆದಷ್ಟು ದೂರ ಇರಿಸುವಿರಿ. ನವಮಾಧಿಪತಿಯು ಸಪ್ತಮಕ್ಕೆ ಪ್ರವೇಶವನ್ನು ಪಡೆಯುವನು.
ಮಕರ: ತಾಯಿಯ ಕಡೆಯಿಂದ ನಿಮಗೆ ಆರ್ಥಿಕ ಸಹಾಯವು ದೊರೆಯಬಹುದು. ನಿಮ್ಮ ತೀರ್ಮಾನಗಳು ನಿಮಗೆ ಸಂತೃಪ್ತಿಯನ್ನು ಕೊಡಬಹುದು. ಆರೋಗ್ಯವನ್ನು ನಿರ್ಲಕ್ಷಿಸುವುದು ಬೇಡ. ಭವಿಷ್ಯವು ನಿಮ್ಮನ್ನು ಅತಿಯಾಗಿ ಕಾಡಬಹುದು. ಹೊಸ ಸಂಬಂಧವನ್ನು ಬೆಳೆಸಲು ನೀವು ಸಜ್ಜಾಗಿರುವಿರಿ. ನಿಮ್ಮ ನಿರ್ಧಾರವನ್ನು ಬದಲಿಸಿದ್ದಕ್ಕೆ ನಿಮಗೆ ಕೋಪ ಉಂಟಾಗಬಹುದು. ನಿಮ್ಮ ಸಂತೋಷವನ್ನು ಕಿತ್ತುಕೊಳ್ಳಲು ನಿಮ್ಮ ಹಿತಶತ್ರುಗಳು ಪ್ರಯತ್ನಿಸಬಹುದು. ಸ್ತ್ರೀಯ ಸೌಂದರ್ಯಕ್ಕೆ ಮನಸೋಲುವ ಸಾಧ್ಯತೆ ಇದೆ. ನಿಮ್ಮ ಆರೋಪಗಳನ್ನು ನೀವು ತಳ್ಳಿಹಾಕುವಿರಿ. ಅಷ್ಟಮಾಧಿಪತಿಯಾದ ಸೂರ್ಯನು ಷಷ್ಠಕ್ಕೆ ಬರಲಿದ್ದಾನೆ.
ಕುಂಭ: ಮನೆಯವರ ಮಾತುಗಳು ನಿಮಗೆ ಅತ್ಯಂತ ಆಘಾತವನ್ನು ಉಂಟುಮಾಡಬಹುದು. ಹೊಸವಸ್ತುಗಳೇ ಆಗಿದ್ದರೂ ಅವುಗಳಿಂದ ನಷ್ಟವನ್ನು ಪಡೆಯುವಿರಿ. ತಂದೆ ತಾಯಿಗಳ ಆಶೀರ್ವಾದವು ನಿಮ್ಮ ಮೇಲಿರಲಿದೆ. ಹಣದ ಆಮಿಷಕ್ಕೆ ಬಲಿಯಾಗುವ ಸಾಧ್ಯತೆ ಇದೆ. ನಿಮ್ಮ ಪತ್ನಿಯ ಮನಃಸ್ಥಿತಿಯನ್ನು ಅರಿತುಕೊಳ್ಳುವುದು ಕಷ್ಡವಾದೀತು. ನಿಮ್ಮ ಸಲಹೆಗಳನ್ನು ಸ್ವೀಕರಿಸದೇ ಇರುವುದು ನಿಮಗೆ ಬೇಸರವಾದೀತು. ಗಲಭೆಯಲ್ಲಿ ನೀವು ಇಂದು ಭಾಗವಹಿಸುವವರಿದ್ದೀರಿ. ಸಂಗಾತಿಗಳು ಮನಸ್ತಾಪಗಳನ್ನು ಸರಿ ಮಾಡಿಕೊಳ್ಳುವರು.
ಮೀನ: ಇಂದು ನೀವು ಗೃಹನಿರ್ಮಾಣದ ಕಾರ್ಯವನ್ನು ಆರಂಭಿಸುವ ಯೋಚನೆ ಇದ್ದರೆ ಅದನ್ನು ಕೈಬಿಡುವುದು ಒಳ್ಳೆಯದು. ನಿನ್ನ ಕೋರಿಕೆಗಳು ಕೆಲವು ಈಡೇರಬಹುದು. ಉದ್ಯೋಗವು ಅನ್ಯರ ಪಿತೂರಿಯಿಂದ ನಾಶವಾಗಬಹುದು. ಪಿತ್ರಾರ್ಜಿತ ಆಸ್ತಿಯಲ್ಲಿ ಪಡೆಯಲು ನೀವು ಇಂದು ಸಫಲರಾಗುವಿರಿ. ಅಧಿಕಾರಿಗಳನ್ನು ಮೆಚ್ಚಿಸಲು ಹೋಗಿ ನಿಮ್ಮ ಸಮಯವು ವ್ಯರ್ಥವಾಗಬಹುದು. ಕಳೆದು ಹೋದ ವಿಚಾರವು ಮತ್ತೆ ನಿಮ್ಮ ನೆನಪಿನ ಅಂಗಳಕ್ಕೆ ಬರಬಹುದು. ನಿಮ್ಮ ಕೆಲಸಗಳನ್ನು ನೀವೇ ಹೊಗಳುತ್ತ ಆತ್ಮಪ್ರಶಂಸೆ ಮಾಡುಕೊಳ್ಳುವಿರಿ. ಷಷ್ಠದ ಸೂರ್ಯನು ಚತುರ್ಥಕ್ಕೆ ಪ್ರವೇಶದ ಮಾಡಲಿದ್ದಾನೆ.