AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಇಂದಿನ ರಾಶಿಭವಿಷ್ಯ, ಈ ರಾಶಿಯವರ ಪ್ರೇಮಪ್ರಕರಣವು ಗೊಂದಲದಲ್ಲಿ ಇರಬಹುದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜೂನ್ 19) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nithya Bhavishya: ಇಂದಿನ ರಾಶಿಭವಿಷ್ಯ, ಈ ರಾಶಿಯವರ ಪ್ರೇಮಪ್ರಕರಣವು ಗೊಂದಲದಲ್ಲಿ ಇರಬಹುದು
ಪ್ರಾತಿನಿಧಿಕ ಚಿತ್ರImage Credit source: freepik
Rakesh Nayak Manchi
Rakesh Nayak Manchi|

Updated on: Jun 19, 2023 | 12:45 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜೂನ್ 19 ಸೋಮವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮಿಥುನ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ಗಂಡ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:42 ರಿಂದ 09:20 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:57 ರಿಂದ ಮಧ್ಯಾಹ್ನ 12:34ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:11 ರಿಂದ 03:48ರ ವರೆಗೆ.

ಧನುಸ್ಸು: ನಿಮ್ಮ ಪ್ರೇಮಪ್ರಕರಣವು ಗೊಂದಲದಲ್ಲಿ ಇರಬಹುದು. ಅನ್ಯರ ಮಾತು‌ ಕೇಳಿ ಯಾವ ತೀರ್ಮಾನಕ್ಕೂ ಬರುವುದು ಬೇಡ. ನಿಮ್ಮ ಇಚ್ಛೆಗೆ ವಿರುದ್ಧವಾಗಿ ನಡೆದರೆ ನೀವು ಕೋಪಗೊಳ್ಳಬಹುದು. ನಿಮ್ಮ ಉತ್ಸಾಹವು ಸಂಜೆಯ ಸಮಯಕ್ಕೆ ಅತಿಯಾಗಿ ಇರುವುದು. ಉದ್ಯೋಗದ ನಿಮಿತ್ತ ನೀವು ದೂರದ ಊರಿಗೆ ಪ್ರಯಾಣಮಾಡಬೇಕಾಗಿ ಬರಬಹುದು. ಅಲ್ಲಿನ ವಾತಾವರಣ ನಿಮಗೆ ಅನುಕೂಲವಾಗದೆ ಇರಬಹುದು. ನಿಮಗೆ ಆಸಕ್ತಿಯ ವಿಚಾರವು ಒಂದಿದ್ದರೂ ಮನೆಯವರ ಒತ್ತಾಯಕ್ಕೆ ನೀವು ಒಪ್ಪಿಕೊಳ್ಳಬೇಕಾಗುತ್ತದೆ. ಸಮಯವನ್ನು ವ್ಯರ್ಥಮಾಡದೇ ಸದ್ವಿನಿಯೋಗ ಮಾಡಿಕೊಳ್ಳುವುದು ಉತ್ತಮ.

ಮಕರ: ಒಂದು ಗುಣದಿಂದ ಅವರ ಸ್ವಭಾವವನ್ನು ಅಳೆಯುವುದು ಸರಿಯಲ್ಲ. ಸ್ವಲ್ಪ ದಿನ‌ ಕಾದುನೋಡುವುದು ಒಳ್ಳೆಯದು. ‌ಆತುರದಿಂದ ನಿಮ್ಮವರನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಪರೋಪಕಾರಕ್ಕೆ ಒಂದು ಮಿತಿ ಇರಲಿ. ನಿಮ್ಮ ಅಪಮಾನವನ್ನು ಯಾರ ಬಳಿಯೂ ಪ್ರಸ್ತಾಪಿಸುವುದು ಬೇಡ. ಕೆಲವರ ಬೆಂಬಲವನ್ನು ಇಟ್ಟುಕೊಂಡ ದೊಡ್ಡ ಕೆಲಸವನ್ನೂ ಮಾಡುವುದು ಅಸಾಧ್ಯ. ಆಪ್ತರನ್ನು ದೂರ ಮಾಡಿಕೊಳ್ಳಬೇಕಾದ ಸಂದರ್ಭವು ಬರಬಹುದು. ಮುಖಕ್ಕೆ ಸಂಬಂಧಿಸಿದ ರೋಗವು ಬರಬಹುದು. ಉತ್ತಮ‌ ಚಿಕಿತ್ಸೆ ಪಡೆದು ಸರಿ ಮಾಡಿಕೊಳ್ಳಿ.

ಕುಂಭ: ನಿಮಗೆ ಬೇಕಾದುದನ್ನು ನೀವು ಪಡೆಯುವಿರಿ. ಅನ್ಯರು ನಿಮ್ಮನ್ನು ಗೇಲಿ ಮಾಡಿಯಾರು. ಕಛೇರಿಯ ಕಾರ್ಯಗಳು ಕೆಲವು ನಿಧಾನವಾಗಿ ಸಾಗುವುದು. ಬೇಗ ಮುಗಿಸಬೇಕಾದುದನ್ನು ಬಹಳ ವಿಳಂಬ‌ಮಾಡುವಿರಿ. ನಿಮಗೆ ಇಷ್ಟವಾಗದೆ ಕಡೆ ಹೋಗುವುದು ಬೇಡ. ಆತ್ಮೀಯರು ನಿಮ್ಮನ್ನು ಭೇಟಿ ಮಾಡುವರು. ಬಂದಿರುವ ಅವಕಾಶವನ್ನು ಬಿಟ್ಟು ದುಃಖಪಡುವ ಅವಶ್ಯಕತೆ ಇಲ್ಲ. ಹೆಚ್ಚಿನ ವೆಚ್ಚಕ್ಕೆ ಕಡಿವಾಣ ಹಾಕುವಿರಿ. ನಿಮ್ಮನ್ನು ನೀವು ಪರಿಚಯಿಸಿಕೊಳ್ಳುವುದು ನಿಮಗೇ ಸರಿ ಎನಿಸದು. ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳುವುದು ನಿಮಗೆ ಕಷ್ಟವಾದೀತು. ಅವ್ಯವಹಾರದ ಬಗ್ಗೆ ಗಮನ ಬೇಡ.

ಮೀನ: ನಿಮ್ಮ ಕೆಲಸಗಳು ನಿಮ್ಮನ್ನು ಯಾರೆಂದು ಹೇಳುವುದು. ಪರಿಶ್ರಮದ ವಿದ್ಯಾಭ್ಯಾಸಕ್ಕೆ ನಿಮ್ಮ ಮನಸ್ಸು ತೆರೆದುಕೊಳ್ಳಬಹುದು. ದಾನದಲ್ಲಿ ಇಂದು ಹೆಚ್ಚಿನ ಖುಷಿಯನ್ನು ಕಾಣುವಿರಿ. ನಿಮ್ಮ ಅನುಕೂಲಕ್ಕೆ ತಕ್ಕಂತೆ ನಿಯಮಗಳನ್ನು ಬೇರೆಯವರ ಮೇಲೆ ಒತ್ತಡ ತರುವುದು ಬೇಡ. ನಿಮಗೆ ಸಹೋದರನು ಸಹಾಕಾರ ನೀಡುವನು.‌ ಧೈರ್ಯದಿಂದ‌ ನೀವು ಮಾಡಬೇಕಾದ ಕೆಲಸವನ್ನು ಮಾಡಿ. ಅಧಿಕಾರಿಗಳ ವಿಚಾರದಲ್ಲಿ ನೀವು ಭಯ ಪಡುವುದು ಬೇಡ. ದಾಖಲೆಗಳನ್ನು ಸರಿಯಾಗಿ ಇಟ್ಟುಕೊಂಡಿರಿ. ಮನೆಗೆ ಬಂದ ಬಂಧುಗಳನ್ನು ಸರಿಯಾಗಿ ಮಾತನಾಡಿಸಿ. ನಿಮ್ಮ ಲಘುವಾದ ಮಾತುಗಳು ಬೇಸರ ತರಿಸೀತು.

-ಲೋಹಿತಶರ್ಮಾ ಇಡುವಾಣಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ