AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಇಂದಿನ ರಾಶಿಭವಿಷ್ಯ, ಆರ್ಥಿಕ ಹಿಂಜರಿಕೆಯು ಈ ರಾಶಿಯವರಿಗೆ ಅರಗಿಸಿಕೊಳ್ಳಲಾಗದ ತುತ್ತಾಗಬಹುದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜೂನ್ 27) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nithya Bhavishya: ಇಂದಿನ ರಾಶಿಭವಿಷ್ಯ, ಆರ್ಥಿಕ ಹಿಂಜರಿಕೆಯು ಈ ರಾಶಿಯವರಿಗೆ ಅರಗಿಸಿಕೊಳ್ಳಲಾಗದ ತುತ್ತಾಗಬಹುದು
ಇಂದಿನ ರಾಶಿಭವಿಷ್ಯImage Credit source: Getty Images
Rakesh Nayak Manchi
|

Updated on: Jun 27, 2023 | 12:45 AM

Share

ಶುಭೋದಯ ಗೆಳೆಯರೇ, ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಕೆಲವರು ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವ ಹವ್ಯಾಸವನ್ನು ಇಟ್ಟುಕೊಂಡಿರುತ್ತಾರೆ. ಇಂದಿನ ರಾಶಿ ಭವಿಷ್ಯ ಏನು ಹೇಳುತ್ತದೆ ಅಥವಾ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಇದರ ಜೊತೆಗೆ ನಿತ್ಯಪಂಚಾಂಗ ಕೂಡ ಓದುತ್ತಾರೆ. ಹಾಗಾದರೆ ಇಂದಿನ (2023 ಜೂನ್​ 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ? ಯಾರಿಗೆ ಲಾಭ ಕಾದಿದೆ? ಯಾರಿಗೆ ನಷ್ಟ ಕಾದಿದೆ? ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ನವಮೀ, ನಿತ್ಯನಕ್ಷತ್ರ: ಚಿತ್ರಾ, ಯೋಗ: ಪರಿಘ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:49 ರಿಂದ 05:26ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:21 ರಿಂದ 10:58 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:35 ರಿಂದ 02:12ರ ವರೆಗೆ.

ಧನುಸ್ಸು: ನಿಮಗೆ ಪಾಲುದಾರಿಕೆಯಲ್ಲಿ ಹೆಚ್ಚಿನ ಶ್ರಮದಿಂದ‌ ಲಾಭವನ್ನು ಪಡೆಯುವಿರಿ. ಅಮೂಲ್ಯ ವಸ್ತುಗಳನ್ನು ಖರೀದಿಸುವಿರಿ. ನಿಮಗೆ ಕಷ್ಟವಾದ ವಿಚಾರಗಳನ್ನು ನೀವು ತಪ್ಪಿಸಿಕೊಳ್ಳಲು ಪ್ರಯತ್ನಿಸುವಿರಿ. ಮನಸ್ಸು ಭಾರವಾಗಿದ್ದು ಎಲ್ಲದರಿಂದ ದೂರವಿರಲು ಇಚ್ಛಿಸುವಿರಿ. ನಿಮ್ಮ ಮಾತುಗಳಿಗೆ ಅಪಾರ್ಥವು ಬಂದು ಅಪವಾದವೂ ಕೇಳಿ ಬರಬಲಿದೆ. ಅನಿರೀಕ್ಷಿತ ವಾರ್ತೆಯನ್ನು ನೀವು ಕೇಳುವಿರಿ. ನಿಮ್ಮ ಆತಂಕವನ್ನು ಇನ್ನೊಬ್ಬರ ಬಳಿ ಹೇಳಿಕೊಳ್ಳುವಿರಿ. ಸ್ಥಾನವನ್ನು ಬಯಸಿ ನೀವು ಇಂದು ಕೆಲಸವನ್ನು ಮಾಡುವಿರಿ. ಸಮಾರಂಭಗಳು ಇಂದು ನಿಮಗೆ ಸಪ್ಪೆ ಅನ್ನಿಸಬಹುದು.

ಮಕರ: ನಿಮ್ಮ ಪ್ರಯಾಣದಲ್ಲಿ ಕೆಲವು ತೊಂದರೆಗಳು ಆಗಬಹುದು. ನಿಮ್ಮವರ ಅನಾರೋಗ್ಯವನ್ನು ಸರಿಮಾಡಿಕೊಳ್ಳಲು ಓಡಾಟ ಮಾಡಬೇಕಾದೀತು. ಸಾಲ ಮಾಡುವ ಸ್ಥಿತಿಯೂ ಬರಬಹುದು. ಏಕಾಂಗಿಯಾಗಿ ಸುತ್ತಾಡುವ ಆಸೆ ನಿಮಗೆ ಇರಲಿದೆ. ಶಿಸ್ತಿನ ಕೆಲಸಕ್ಕೆ ನಿಮ್ಮನ್ನು ಪ್ರಶಂಸಿಸಬಹುದು. ಅಧಿಕವೇತನವು ಸಿಗುವ ಕೆಲಸವನ್ನು ಅನ್ವೇಷಿಸುವಿರಿ. ಹಣದ ಹಿಂದೆ ಬಿದ್ದು, ನೀವು ಮಾಡಬಾರದ ಕೆಲಸಕ್ಕೆ ಕೈ ಹಾಕಬೇಕಾದೀತು. ನಿಮ್ಮವರು ನಿಮ್ಮನ್ನು ನಿರ್ಲಕ್ಷಿಸಬಹುದು. ಯಾವುದೋ ಯೋಚನೆಯಲ್ಲಿ ನೀವು ಮಗ್ನರಾಗಿ ಚಿಂತೆಪಡುವ ಸಾಧ್ಯತೆ ಇದೆ.

ಕುಂಭ: ಆಕಸ್ಮಿಕ‌ ಪ್ರಯಾಣವು ಬಂದಿದ್ದು, ಇದರಿಂದ ನಿಮಗೆ ಉದ್ಯೋಗದಲ್ಲಿ ತೊಂದರೆಯಾಗಬಹುದು. ನೂಲೆಳೆತ ಅಂತರದಲ್ಲಿ ನೀವು ಪ್ರಾಣಾಪಾಯದಿಂದ ಬದುಕಿ ಉಳಿಯುವ ಸಾಧ್ಯತೆ ಇದೆ. ತಂದೆಯ ಸಹಕಾರದಿಂದ ಹೊಸ ಉದ್ಯೋಗವನ್ನು ನೀವು ಪಡೆಯುವಿರಿ. ವಿದ್ಯಾರ್ಥಿಗಳು ಅಧ್ಯಯನಕ್ಕೆ ಪರಿಸರವನ್ನು ಬದಲಿಸುವ ಸಾಧ್ಯತೆ ಇದೆ. ಸಹೋದ್ಯೋಗಿಗಳ ಸಹಕಾರವಿಲ್ಲದೇ ಇಂದು ನಿಮ್ಮ ಕೆಲಸವು ಆಗಲಿದೆ. ಸ್ನೇಹಿತರ ಜೊತೆ ಮನೋರಂಜನೆಯಲ್ಲಿ‌ ಕಾಲವನ್ನು ಕಳೆಯುವಿರಿ. ನಿಮ್ಮ‌ ಮಾನಸಿಕತೆಯನ್ನು ತಿಳಿಯಲು ಕಷ್ಟಪಡುವರು. ನಿಮ್ಮದಲ್ಲದ್ದನ್ನು ಇಷ್ಟಪಡುವುದು ಬೇಡ.

ಮೀನ: ನಿಮ್ಮ‌ ದಿನಚರಿಯನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳುವುದು ಉತ್ತಮ. ಹಗುರಾದ ಮನಸ್ಸಿನಿಂದ ಉತ್ಸಾಹವು ಅಧಿಕವಾಗುವುದು. ಇಂದು ನೀವು ನಿಯಮಗಳನ್ನು ಪಾಲಿಸಲು ಕಷ್ಟಪಡಬೇಕಾದಿಕತು. ಆರ್ಥಿಕ ಹಿಂಜರಿಕೆಯು ನಿಮಗೆ ಅರಗಿಸಿಕೊಳ್ಳದ ತುತ್ತಾಗಬಹುದು. ವ್ಯಕ್ತಿಗಳ ಮೇಲೆ‌ನಂಬಿಕೆಯನ್ನು ನೀವು ಕಳೆದುಕೊಳ್ಳುವಿರಿ. ಕೆಲಸಗಳು ಮಂದಗತಿಯಲ್ಲಿ ಸಾಗಲಿದೆ. ಸಹೋದರನಿಂದ ನಿಮಗೆ ಸಲಹೆಗಳು ಸಿಗಬಹುದು. ಕಛೇರಿಯಲ್ಲಿ ಇಂದು ಕೆಲಸ ಮಾಡಲು ಆಸಕ್ತಿ ಕಡಿಮೆ ಇರಲಿದೆ. ಪಿತ್ರಾರ್ಜಿತ ಆಸ್ತಿಯನ್ನು ನೀವು‌ ಪಡೆದುಕೊಳ್ಳಬಹುದು.

-ಲೋಹಿತಶರ್ಮಾ ಇಡುವಾಣಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ