Nitya Bhavishya: ಇಂದಿನ ರಾಶಿಭವಿಷ್ಯ, ಸಾಲಬಾಧೆಯು ಈ ರಾಶಿಯವರನ್ನು ಕೆಟ್ಟ ಕೆಲಸಕ್ಕೆ ಪ್ರೇರಿಸಬಹುದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜೂನ್ 4) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nitya Bhavishya: ಇಂದಿನ ರಾಶಿಭವಿಷ್ಯ, ಸಾಲಬಾಧೆಯು ಈ ರಾಶಿಯವರನ್ನು ಕೆಟ್ಟ ಕೆಲಸಕ್ಕೆ ಪ್ರೇರಿಸಬಹುದು
ಇಂದಿನ ರಾಶಿಭವಿಷ್ಯ
Follow us
Rakesh Nayak Manchi
|

Updated on: Jun 04, 2023 | 12:45 AM

ಶುಭೋದಯ ಓದುಗರೇ ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಜೂನ್ 4) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ಜ್ಯೇಷ್ಠ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಹುಣ್ಣಿಮೆ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಧೃತಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 57 ನಿಮಿಷಕ್ಕೆ, ರಾಹು ಕಾಲ ಸಂಜೆ 05:21 ರಿಂದ 06:58ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:31 ರಿಂದ 02:07ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:44 ರಿಂದ 05:21ರ ವರೆಗೆ.

ಧನುಸ್ಸು: ಯಾರ ಬಗ್ಗೆಯೂ ಗೊತ್ತಿಲ್ಲದೇ ಮಾತನಾಡುವುದು ಬೇಡ. ಸ್ವಾಭಿಮಾವನ್ನು ಬಿಟ್ಟು ವ್ಯವಹರಿಸಲು ಕಷ್ಟವಾದರೂ ಅನಿವಾರ್ಯವಾಗಿ ಬಿಡಬೇಕಾದೀತು.‌ ಮನೆಯ ಕೆಲಸದಲ್ಲಿ ನೀವು ನೀವಿಂದು ಮಗ್ನರಾಗಿರುವಿರಿ. ಉತ್ತಮ ಮತ್ತು ಗೊಂದಲಮಯವಾಗಿರುವ ಕೆಲವು ಘಟನೆಗಳು ಆಗಬಹುದು. ಏಕಾಗ್ರತೆಯನ್ನು ನೀವು ಭಂಗ ಮಾಡಿಕೊಳ್ಳುವುದು ಬೇಡ. ಮಕ್ಕಳ ಆರೋಗ್ಯದ ಮೇಲೆ ಗಮನವಿರುವುದು ಮುಖ್ಯ. ಅಸ್ಪಷ್ಟವಾದ ಯೋಚನೆಗಳು ನಿಮಗೆ ಕಿರಿಕಿರಿ ಉಂಟುಮಾಡಿಯಾವು. ಸಾಮಾಜಿಕ ಕಾರ್ಯದಲ್ಲಿ ಹಿನ್ನಡೆಯಾಗಬಹುದು.

ಮಕರ: ನಿಮ್ಮವರೇ ಆದರೂ ಅವರ ಜೊತೆ ಹೆಚ್ಚಿನ ವ್ಯವಹಾರವು ಬೇಡಿ. ಹಣದ ವಿಚಾರವು ಯಾರನ್ನೂ ಬಿಡದು. ನಿಮ್ಮ ಸಹೋದರನಿಂದ ಹೊಸ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳು ಸಿಗಲಿವೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಹಣ ಹೊಂದಿಸುವುದು ಕಷ್ಟವಾದೀತು. ಇಂದು ನಿಮ್ಮ ಸಾಮಾರ್ಥ್ಯವನ್ನು ವ್ಯಕ್ತಪಡಿಸಲು ಅವಕಾಶವನ್ನು ಹುಡುಕುತ್ತಿದ್ದರೆ ನಿಮಗೆ ಅದು ಒಳ್ಳೆಯ ಕಾಲ. ಹಠದ ಸ್ವಭಾವವನ್ನು ಕಡಿಮೆ‌ಮಾಡಿಕೊಳ್ಳಬೇಕಾಗಬಹುದು. ಇನ್ನೊಬ್ಬರ ರಹಸ್ಯ ವಿಚಾರಗಳನ್ನು ನೀವು ಕೇಳಲು ಆಸಕ್ತರಾಗುವಿರಿ.

ಕುಂಭ: ನಿಮ್ಮ ಮನಸ್ಸಿಗೆ ಬಂದ ಘಟನೆಗಳು ಹಾಗೆಯೇ ನಡೆಯುತ್ತದೆ. ಇದು ನಿಮಗೆ ಆಶ್ಚರ್ಯವನ್ನು ನೀಡುವುದು. ಆತುರದ ತೀರ್ಮಾನ ಹಾಗೂ ಒತ್ತಡಕ್ಕೆ ಸಿಲುಕದೇ ಜಾಗರೂಕರಾಗಿರಿ. ಇಂದು ನಿಮ್ಮ ಸಾಲವು ಮರಳಿಬರಹುದು. ಸ್ನೇಹಿತರು ತಮ್ಮ ಜೊತೆ ಕರೆದುಕೊಂಡು ಹೋಗಬಹುದು. ಹಣವು ವ್ಯರ್ಥವಾಗುವದು ನಿಮ್ಮದಾಗಿರುತ್ತದೆ. ಆಯಾಸವಾಗಿ ವಿಶ್ರಾಂತಿಯನ್ನು ಪಡೆಯಬೇಕಾಗಬಹುದು. ನಿಮ್ಮ ವಿರುದ್ಧ ಸಲ್ಲದ ಮಾತುಗಳನ್ನು ಕೇಳಬೇಕಾಗಬಹುದು. ಎಲ್ಲವನ್ನೂ ನೀವು ಸಮರ್ಥಿಸಿಕೊಳ್ಳುವಿರಿ. ದೈನಂದಿನ ಕೆಲಸಗಳು ನಿಮಗೆ ಭಾರವೆನಿಸಬಹುದು.‌ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವ ರೀತಿ ಬೇರೆಯಾದೀತು.

ಮೀನ: ಇಷ್ಟು ದಿನ ನಿಮ್ಮದೂ ಎಂದ ಕೊಂಡ ವಸ್ತುವು ಇನ್ನೊಬ್ಬರ ಸ್ವತ್ತಾಗುವ ಸಾಧ್ಯತೆ ಇದೆ. ನೀವು ಮಾಡಬೇಕೆಂದುಕೊಂಡ ಕೆಲಸವು ವಿಪರೀತ ಪರಿಣಾಮವನ್ನು ಬೀರೀತು. ಸಾಲಬಾಧೆಯು ನಿಮ್ಮನ್ನು ಕೆಟ್ಟ ಕೆಲಸಕ್ಕೆ ಪ್ರೇರಿಸಬಹುದು. ಸ್ನೇಹಿತರು ನಿಮ್ಮ ಜೊತೆಗೇ ಇದ್ದು ನಿಮ್ಮ ಎಲ್ಲ ವಿಚಾರದಲ್ಲಿ ಜೊತೆಯಾಗಬಹುದು. ಉದ್ವಿಗ್ನಕ್ಕೆ ಸಿಲುಕದೇ ಸಮಾಧಾನದಿಂದ ಇರಬೇಕಾದ ಅವಶ್ಯಕತೆ ಇರುವುದು. ವ್ಯಸನಕ್ಕೆ ತುತ್ತಾಗಿ ಆರೋಗ್ಯವನ್ನು ಕಳೆದುಕೊಳ್ಳುವಿರಿ. ತೈಲ‌ ಮುಂತಾದ ವ್ಯಾಪರದಲ್ಲಿ ಲಾಭವಾಗಲಿದೆ. ವಿದ್ಯಾರ್ಥಿಗಳ ಹೆಚ್ಚಿನ ಪರಿಶ್ರಮವು ಗುರಿಯನ್ನು ಸಾಧಿಸಲು ಸಾಧ್ಯ.

-ಲೋಹಿತಶರ್ಮಾ ಇಡುವಾಣಿ

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ